ಹೊಸ ರ‍್ಯಾಪಿಡ್ ಕಾರಿಗೆ ಭರ್ಜರಿ ಬೇಡಿಕೆ- ತಾತ್ಕಾಲಿಕವಾಗಿ ಬುಕ್ಕಿಂಗ್ ಸ್ಥಗಿತಗೊಳಿಸಿದ ಸ್ಕೋಡಾ

ಸ್ಕೋಡಾ ಕಂಪನಿಯು ಕಳೆದ ತಿಂಗಳು ಬಿಡುಗಡೆಗೊಳಿಸಿರುವ ರ‍್ಯಾಪಿಡ್ ಸೆಡಾನ್ ಮಾದರಿಯ ಮೂಲಕ ಭರ್ಜರಿ ಬೇಡಿಕೆ ಪಡೆದುಕೊಂಡಿದ್ದು, ಉತ್ಪಾದನಾ ಸಾಮಾರ್ಥ್ಯದ ಆಧಾರದ ಮೇಲೆ ಹೊಸ ಕಾರಿನ ಬುಕ್ಕಿಂಗ್ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.

ಹೊಸ ಸ್ಕೋಡಾ ರ‍್ಯಾಪಿಡ್ ಸೆಡಾನ್ ಕಾರಿಗೆ ಭರ್ಜರಿ ಬೇಡಿಕೆ

ಉತ್ಪಾದನಾ ಪ್ರಮಾಣಕ್ಕಿಂತಲೂ ಹೆಚ್ಚಿನ ಮಟ್ಟದ ಬೇಡಿಕೆ ಸಲ್ಲಿಕೆಯಾಗಿರುವುದರಿಂದ ತಾತ್ಕಾಲಿಕವಾಗಿ ರೈಡರ್ ಆವೃತ್ತಿಯ ಬುಕ್ಕಿಂಗ್ ಸ್ಥಗಿತಗೊಳಿಸಲಾಗಿದ್ದು, ರೈಡರ್ ಹೊರತುಪಡಿಸಿ ಇನ್ನುಳಿದ ಮಾದರಿಗಳ ಖರೀದಿಗಾಗಿ ಬುಕ್ಕಿಂಗ್ ಸ್ವಿಕರಿಸಲಾಗುತ್ತಿದೆ. ಸೆಡಾನ್ ಮಾದರಿಯಲ್ಲೇ ಅತಿ ಬೆಲೆಯೊಂದಿಗೆ ಅತ್ಯುತ್ತಮ ಫೀಚರ್ಸ್ ಹೊಂದಿರುವ ರ‍್ಯಾಪಿಡ್ ಕಾರಿನ ರೈಡರ್ ಆವೃತ್ತಿಯು ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಹೊಸ ಕಾರು ಸದ್ಯಕ್ಕೆ ಮ್ಯಾನುವಲ್ ಆವೃತ್ತಿಯಲ್ಲಿ ಮಾತ್ರವೇ ಖರೀದಿಗೆ ಲಭ್ಯವಿದೆ.

ಹೊಸ ಸ್ಕೋಡಾ ರ‍್ಯಾಪಿಡ್ ಸೆಡಾನ್ ಕಾರಿಗೆ ಭರ್ಜರಿ ಬೇಡಿಕೆ

ಮುಂಬರುವ ಸೆಪ್ಟೆಂಬರ್ ಹೊತ್ತಿಗೆ ಬಿಡುಗಡೆಯಾಗಲಿರುವ ಆಟೋಮ್ಯಾಟಿಕ್ ಆವೃತ್ತಿಯು ಮತ್ತಷ್ಟು ಬೇಡಿಕೆ ಹೆಚ್ಚಿಸಲಿದ್ದು, ಬಿಎಸ್-6 ರ‍್ಯಾಪಿಡ್ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ರೈಡರ್, ಆ್ಯಂಬಿಯೆಷನ್, ಆನೆಕ್ಸ್, ಸ್ಟೈಲ್ ಮತ್ತು ಮಾಂಟೆ ಕಾರ್ಲೋ ಆವೃತ್ತಿಗಳೊಂದಿಗೆ ಮಾರಾಟವಾಗುತ್ತಿದೆ.

ಹೊಸ ಸ್ಕೋಡಾ ರ‍್ಯಾಪಿಡ್ ಸೆಡಾನ್ ಕಾರಿಗೆ ಭರ್ಜರಿ ಬೇಡಿಕೆ

ರ‍್ಯಾಪಿಡ್ 2020ರ ಮಾದರಿಯು ಸದ್ಯ ಬಿಎಸ್-6 ಎಂಜಿನ್‌ನೊಂದಿಗೆ ಬಿಡುಗಡೆಗೊಂಡಿದ್ದು, ಹೊಸ ಕಾರು ಈ ಬಾರಿ 1.0-ಲೀಟರ್ ಪೆಟ್ರೋಲ್ ಎಂಜಿನ್‌ನೊಂದಿಗೆ ಮಾತ್ರವೇ ಖರೀದಿಗೆ ಲಭ್ಯವಿರಲಿದೆ. ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 7.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.11.79 ಲಕ್ಷ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಿದೆ.

ಹೊಸ ಸ್ಕೋಡಾ ರ‍್ಯಾಪಿಡ್ ಸೆಡಾನ್ ಕಾರಿಗೆ ಭರ್ಜರಿ ಬೇಡಿಕೆ

ಇದರಲ್ಲಿ ರೈಡರ್ ಮಾದರಿಯು ಆರಂಭಿಕ ಆವೃತ್ತಿಯಾಗಿದ್ದರೆ ಮಾಂಟೆ ಕಾರ್ಲೋ ಆವೃತ್ತಿಯು ಹೈ ಎಂಡ್ ಮಾದರಿಯಾಗಿ ಮಾರಾಟಗೊಳ್ಳಲಿದ್ದು, ಹೊಸ ಕಾರಿನಲ್ಲಿ ಜೋಡಣೆ ಮಾಡಿರುವ 999-ಸಿಸಿ ಟರ್ಬೋ ಚಾರ್ಜ್ಡ್ ತ್ರಿ ಸಿಲಿಂಡರ್ ಪೆಟ್ರೋಲ್ ಮಾದರಿಯು 108-ಬಿಎಚ್‌ಪಿ ಮತ್ತು 175-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಹೊಸ ಸ್ಕೋಡಾ ರ‍್ಯಾಪಿಡ್ ಸೆಡಾನ್ ಕಾರಿಗೆ ಭರ್ಜರಿ ಬೇಡಿಕೆ

ಹೊಸ ಕಾರಿನಲ್ಲಿ ಸದ್ಯಕ್ಕೆ 6-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದ್ದು, ಹೊಸ ಎಂಜಿನ್ ಮಾದರಿಯನ್ನು ಫೋಕ್ಸ್‌ವ್ಯಾಗನ್ ವೆಂಟೊ ಕಾರಿನಿಂದ ಎರವಲು ಪಡೆದುಕೊಳ್ಳಲಾಗಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಹೊಸ ಸ್ಕೋಡಾ ರ‍್ಯಾಪಿಡ್ ಸೆಡಾನ್ ಕಾರಿಗೆ ಭರ್ಜರಿ ಬೇಡಿಕೆ

ಬಿಎಸ್-6 ನಿಯಮದಿಂದಾಗಿ ರ‍್ಯಾಪಿಡ್ ಕಾರಿನಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಎಂಪಿಐ ಪೆಟ್ರೋಲ್ ಮಾದರಿಯನ್ನು ಸ್ಥಗಿತಗೊಳಿಸಲಾಗಿದ್ದು, ಹೊಸ ಎಂಜಿನ್ ಮಾದರಿಯು ಪ್ರತಿ ಲೀಟರ್ ಪೆಟ್ರೋಲ್‌ಗೆ 18.97 ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಹೊಸ ಸ್ಕೋಡಾ ರ‍್ಯಾಪಿಡ್ ಸೆಡಾನ್ ಕಾರಿಗೆ ಭರ್ಜರಿ ಬೇಡಿಕೆ

ಹೊಸ ರ‍್ಯಾಪಿಡ್ ಕಾರಿನಲ್ಲಿ ಎಂಜಿನ್ ಬದಲಾವಣೆ ಹೊರತುಪಡಿಸಿ ತಾಂತ್ರಿಕ ಅಂಶಗಳನ್ನು ಈ ಹಿಂದಿನ ಮಾದರಿಯೆಂತೆ ಮುಂದುವರಿಸಲಾಗಿದ್ದು, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್‌ಪ್ಲೇ, ಆಂಡ್ರಾಯಿಡ್ ಆಟೋ, ಸ್ಕಫ್ ಪ್ಲೇಟ್, ಫ್ಲ್ಯಾಟ್ ಬಾಟಮ್ ಸ್ಟ್ರೀರಿಂಗ್ ವೀಲ್ಹ್, ಎಲ್‌ಇಡಿ ಲೈಟ್‌ಗಳು, ಲೆದರ್ ಸೀಟ್‌ಗಳು ಪ್ರಮುಖ ಆಕರ್ಷಣೆಯಾಗಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಹೊಸ ಸ್ಕೋಡಾ ರ‍್ಯಾಪಿಡ್ ಸೆಡಾನ್ ಕಾರಿಗೆ ಭರ್ಜರಿ ಬೇಡಿಕೆ

ಹಾಗೆಯೇ ಪ್ರಯಾಣಿಕ ಸುರಕ್ಷತೆಗಾಗಿ ಕ್ರೂಸ್ ಕಂಟ್ರೋಲ್, 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿಯರ್ ವ್ಯೂ ಕ್ಯಾಮೆರಾ ಮತ್ತು ಸೆನ್ಸಾರ್, ಬ್ರೇಕ್ ಅಸಿಸ್ಟ್ ಮತ್ತು 16-ಇಂಚಿನ ಅಲಾಯ್ ವೀಲ್ಹ್‌ನೊಂದಿಗೆ ಪ್ರಮುಖ ಆರು ಬಣ್ಣಗಳ ಆಯ್ಕೆ ಹೊಂದಿದೆ.

Article Published On: Friday, July 10, 2020, 21:15 [IST]
English summary
Skoda Rapid Rider Bookings Stopped. Read in Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+