ಇದೇ ತಿಂಗಳು 17ಕ್ಕೆ ಬಿಡುಗಡೆಯಾಗಲಿದೆ ಸ್ಕೋಡಾ ರ‍್ಯಾಪಿಡ್ ಆಟೋಮ್ಯಾಟಿಕ್
ಸ್ಕೋಡಾ ಕಂಪನಿಯು ಇದೇ ತಿಂಗಳು 17ಕ್ಕೆ ತನ್ನ ಜನಪ್ರಿಯ ಸೆಡಾನ್ ಮಾದರಿಯಾದ ರ‍್ಯಾಪಿಡ್ ಬಿಎಸ್-6 ಮಾದರಿಯ1.0-ಲೀಟರ್ ಪೆಟ್ರೋಲ್ ಆವೃತ್ತಿಯಲ್ಲಿ ಆಟೋಮ್ಯಾಟಿಕ್ ಆವೃತ್ತಿಯನ್ನು ಬಿಡುಗಡೆಗೊಳಿಸುತ್ತಿದ್ದು, ಹೊಸ ಕಾರು ಎಎಂಟಿ ಆಯ್ಕೆಯೊಂದಿಗೆ ವಿವಿಧ ಪ್ರೀಮಿಯಂ ಫೀಚರ್ಸ್ ಪಡೆದುಕೊಳ್ಳಲಿದೆ.

ಹೊಸ ರ‍್ಯಾಪಿಡ್ ಕಾರು ಮಾದರಿಯು ಸದ್ಯ ಬಿಎಸ್-6 ಪೆಟ್ರೋಲ್ ಮ್ಯಾನುವಲ್ ಎಂಜಿನ್‌ನೊಂದಿಗೆ ಭಾರೀ ಬದಲಾವಣೆ ಪಡೆದುಕೊಂಡಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 7.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.11.79 ಲಕ್ಷ ಬೆಲೆಯೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ. ಇದೀಗ ಬಿಡುಗಡೆಯಾಗಲಿರುವ ಪೆಟ್ರೋಲ್ ಆಟೋಮ್ಯಾಟಿಕ್ ಆವೃತ್ತಿಯು ಪ್ರೀಮಿಯಂ ಸೆಡಾನ್ ಪ್ರಿಯರನ್ನು ಸೆಳೆಯಲಿದ್ದು, ಹೋಂಡಾ ಸಿಟಿ ಮತ್ತು ಹ್ಯುಂಡೆ ವೆರ್ನಾ ಕಾರುಗಳಿಗೆ ಪೈಪೋಟಿ ನೀಡಲಿದೆ.

ಆಟೋಮ್ಯಾಟಿಕ್ ಆವೃತ್ತಿಯ ಮ್ಯಾನುವಲ್ ಮಾದರಿಗಿಂತಲೂ ಹೆಚ್ಚುವರಿಯಾಗಿ ರೂ. 20 ಸಾವಿರ ರೂ.40 ಸಾವಿರದಷ್ಟು ಹೆಚ್ಚಳವಾಗಿರಲಿದ್ದು, ಹೊಸ ಕಾರು ರೈಡರ್, ರೈಡರ್ ಪ್ಲಸ್, ಆ್ಯಂಬಿಯೆಷನ್, ಆನೆಕ್ಸ್, ಸ್ಟೈಲ್ ಮತ್ತು ಮಾಂಟೆ ಕಾರ್ಲೋ ಆವೃತ್ತಿಗಳೊಂದಿಗೆ ಮಾರಾಟವಾಗಲಿದೆ.

ಸೆಡಾನ್ ಮಾದರಿಯಲ್ಲೇ ಸದ್ಯ ಅತಿ ಕಡಿಮೆ ಬೆಲೆಯೊಂದಿಗೆ ಅತ್ಯುತ್ತಮ ಫೀಚರ್ಸ್ ಹೊಂದಿರುವ ರ‍್ಯಾಪಿಡ್ ಕಾರಿನ ರೈಡರ್ ಪ್ಲಸ್ ಆವೃತ್ತಿಯು ಪ್ರತಿಸ್ಪರ್ಧಿ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದ್ದು, ಹೊಸ ಕಾರಿನಲ್ಲಿ ಆಟೋಮ್ಯಾಟಿಕ್ ಮಾದರಿಯ ಬಿಡುಗಡೆಯ ನಂತರ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಿದೆ.

ಸದ್ಯ ಮಾರುಕಟ್ಟೆಯ್ಲಿರುವ ರ‍್ಯಾಪಿಡ್ ಹೊಸ ಕಾರಿನಲ್ಲಿ ಜೋಡಣೆ ಮಾಡಿರುವ 999-ಸಿಸಿ ಟಿಎಸ್ಐ ಟರ್ಬೋ ಚಾರ್ಜ್ಡ್ ತ್ರಿ ಸಿಲಿಂಡರ್ ಪೆಟ್ರೋಲ್ ಮಾದರಿಯು 108-ಬಿಎಚ್‌ಪಿ ಮತ್ತು 175-ಎನ್ಎಂ ಟಾರ್ಕ್ ಉತ್ಪಾದನೆ ಉತ್ಪಾದನಾ ಗುಣಹೊಂದಿದ್ದು, ಆಟೋ ಮ್ಯಾಟಿಕ್ ಆವೃತ್ತಿಯು ಇನ್ನು ಹೆಚ್ಚಿನ ಮಟ್ಟದ ಪರ್ಫಾಮೆನ್ಸ್ ಮಾದರಿಯಾಗಿರಲಿದೆ.

ಹೊಸ ಎಂಜಿನ್ ಮಾದರಿಯನ್ನು ಫೋಕ್ಸ್‌ವ್ಯಾಗನ್ ವೆಂಟೊ ಕಾರಿನಿಂದ ಎರವಲು ಪಡೆದುಕೊಳ್ಳಲಾಗಿದ್ದು, ಬಿಎಸ್-6 ನಿಯಮದಿಂದಾಗಿ ರ‍್ಯಾಪಿಡ್ ಕಾರಿನಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಎಂಪಿಐ ಪೆಟ್ರೋಲ್ ಮಾದರಿಯನ್ನು ಸ್ಥಗಿತಗೊಳಿಸಲಾಗಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

999-ಸಿಸಿ ಟಿಎಸ್ಐ ಟರ್ಬೋ ಪೆಟ್ರೋಲ್ ಮಾದರಿಯು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಆಕರ್ಷಕ ಇಂಧನ ದಕ್ಷತೆ ಹೊಂದಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 18.97ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.

ಹೊಸ ರ‍್ಯಾಪಿಡ್ ಕಾರಿನಲ್ಲಿ ಎಂಜಿನ್ ಬದಲಾವಣೆ ಹೊರತುಪಡಿಸಿ ತಾಂತ್ರಿಕ ಅಂಶಗಳನ್ನು ಈ ಹಿಂದಿನ ಮಾದರಿಯೆಂತೆ ಮುಂದುವರಿಸಲಾಗಿದ್ದು, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಕಫ್ ಪ್ಲೇಟ್, ಫ್ಲ್ಯಾಟ್ ಬಾಟಮ್ ಸ್ಟ್ರೀರಿಂಗ್ ವೀಲ್ಹ್, ಎಲ್‌ಇಡಿ ಲೈಟ್‌ಗಳು, ಲೆದರ್ ಸೀಟ್‌ಗಳು ಪ್ರಮುಖ ಆಕರ್ಷಣೆಯಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹಾಗೆಯೇ ಪ್ರಯಾಣಿಕ ಸುರಕ್ಷತೆಗಾಗಿ ಕ್ರೂಸ್ ಕಂಟ್ರೋಲ್, 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿಯರ್ ವ್ಯೂ ಕ್ಯಾಮೆರಾ ಮತ್ತು ಸೆನ್ಸಾರ್, ಬ್ರೇಕ್ ಅಸಿಸ್ಟ್ ಮತ್ತು 16-ಇಂಚಿನ ಅಲಾಯ್ ವೀಲ್ಹ್‌ನೊಂದಿಗೆ ಪ್ರಮುಖ ಆರು ಬಣ್ಣಗಳ ಆಯ್ಕೆ ಹೊಂದಿದೆ.


Click it and Unblock the Notifications