ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಕಾರು ಮಾರಾಟದಲ್ಲಿ ಹೊಸ ಬದಲಾವಣೆ ತರುತ್ತಿರುವ ಸ್ಕೋಡಾ ಕಂಪನಿಯು ಸದ್ಯ ಫೋಕ್ಸ್‌ವ್ಯಾಗನ್ ಜೊತೆಗೂಡಿ ಹಲವು ಹೊಸ ಯೋಜನೆಗಳಿಗೆ ಚಾಲನೆ ನೀಡಿದ್ದು, ಶೀಘ್ರದಲ್ಲೇ ವಿವಿಧ ಮಾದರಿಯ ಸಾಮಾನ್ಯ ಕಾರುಗಳ ಜೊತೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಫೋಕ್ಸ್‌ವ್ಯಾಗನ್ ಜೊತೆಗೂಡಿ ಇಂಡಿಯಾ 2.0 ಪ್ರೋಜೆಕ್ಟ್ ಯೋಜನೆಗೆ ಚಾಲನೆ ನೀಡಿರುವ ಸ್ಕೋಡಾ ಕಂಪನಿಯು ಹೊಸ ಕಾರುಗಳ ನಿರ್ಮಾಣದ ಹೆಚ್ಚು ಹೂಡಿಕೆ ಮಾಡುತ್ತಿದ್ದು, ಸಾಮಾನ್ಯ ಕಾರುಗಳನ್ನು ಮಾತ್ರವಲ್ಲದೇ ಎಲೆಕ್ಟ್ರಿಕ್ ಕಾರು ಆವೃತ್ತಿಗಳ ಮೇಲೂ ಗಮನಹರಿಸಿದೆ. ಈ ಸಂಬಂಧ ಗ್ರಾಹಕರ ಅಭಿರುಚಿಗಳನ್ನು ತಿಳಿಯಲು ಮಾರುಕಟ್ಟೆ ಅಧ್ಯಯನಕ್ಕೂ ಚಾಲನೆ ನೀಡಿರುವ ಸ್ಕೋಡಾ ಕಂಪನಿಯು ಬಜೆಟ್ ಇವಿ ಕಾರುಗಳನ್ನು ಮಾತ್ರವಲ್ಲದೇ ಲೈಫ್‌ಸ್ಪೈಲ್ ಮಾದರಿಗಳನ್ನು ಸಹ ಬಿಡುಗಡೆ ಮಾಡಲಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಯುರೋಪ್ ಮಾರುಕಟ್ಟೆಗಾಗಿ ಈಗಾಗಲೇ ಹೊಸ ಎಲೆಕ್ಟ್ರಿಕ್ ಎಸ್‌ಯುವಿ ಮಾದರಿಯ ಬಿಡುಗಡೆಯ ಕುರಿತಂತೆ ನೆಮ್ ಪ್ಲೇಟ್ ಟೀಸರ್ ಒಂದನ್ನು ಬಿಡುಗಡೆ ಮಾಡಿದ್ದು, ಸೆಡಾನ್ ಮತ್ತು ಎಸ್‌ಯುವಿ ಮಾದರಿಯೊಂದನ್ನು ಎಲೆಕ್ಟ್ರಿಕ್ ಮಾದರಿಯಾಗಿ ಬಿಡುಗಡೆ ಮಾಡುತ್ತಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಹೊಸ ಕಾರು ಎನ್‌ಯಾಕ್(ENYAQ) ಎನ್ನುವ ಹೆಸರಿನೊಂದಿಗೆ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಲಾಂಗ್ ವೀಲ್ಹ್ ಬೆಸ್‌ನೊಂದಿಗೆ ಎಸ್‌ಯುವಿ ಮಾದರಿಯಾಗಿ ಬಿಡುಗಡೆಗೊಳ್ಳಲಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಎಸ್‌ಯುವಿ ಕಾರುಗಳಲ್ಲೇ ಹೊಸ ಮಾದರಿಯ ವಿನ್ಯಾಸ ಹೊಂದಿರುವ ಎನ್‌ಯಾಕ್ ಕಾರು 4,648-ಎಂಎಂ ಉದ್ದ, 1,877-ಎಂಎಂ ಅಗಲ, 1,618-ಎಂಎಂ ಎತ್ತರದೊಂದಿಗೆ ಉತ್ತಮ ಒಳಾಂಗಣ ವಿನ್ಯಾಸ ಹೊಂದಿದೆ.

MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಮಾಹಿತಿಗಳ ಪ್ರಕಾರ, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಮೂರು ವೆರಿಯೆಂಟ್‌ಗಳಲ್ಲಿ ಬಿಡುಗಡೆಯಾಗಲಿದ್ದು, ಪ್ರತಿ ಚಾರ್ಜ್‌ಗೆ ಆರಂಭಿಕ ಆವೃತ್ತಿಯು 340ಕಿ.ಮೀ, ಮಧ್ಯಮ ಕ್ರಮಾಂಕದ ಕಾರು 390 ಕಿ.ಮೀ ಮತ್ತು ಟಾಪ್ ಎಂಡ್ ಮಾದರಿಯು 500ಕಿ.ಮೀ ಮೈಲೇಜ್ ರೇಂಜ್ ಹೊಂದಿದೆ.

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ವೆರಿಯೆಂಟ್‌ಗಳಿಗೆ ಅನುಗುಣವಾಗಿ 55kWh, 62kWh ಮತ್ತು 82kWh ಬ್ಯಾಟರಿ ಒದಗಿಸಲಾಗಿದ್ದು, ಫೋಕ್ಸ್‌ವ್ಯಾಗನ್ ನಿರ್ಮಾಣ ಐ.ಡಿ ಕ್ರಾಝ್ ಎಲೆಕ್ಟ್ರಿಕ್ ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆಯಲಾಗಿದೆ.

MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಸಿದ್ದವಾದ ಸ್ಕೋಡಾ

ಹೊಸ ಎಲೆಕ್ಟ್ರಿಕ್ ಯುರೋಪ್ ಮಾರುಕಟ್ಟೆಗಳಲ್ಲಿ 2021ರ ಮಧ್ಯಂತರದಲ್ಲಿ ಬಿಡುಗಡೆಯಾಗಲಿದ್ದು, ಭಾರತದಲ್ಲೂ ಬಿಡುಗಡೆಯಾಗಲಿರುವ ಈ ಹೊಸ ಕಾರು 2022ರ ಆರಂಭದಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ. ಬ್ಯಾಟರಿ ಸಾಮರ್ಥ್ಯಕ್ಕೆ ಅನುಗುಣವಾಗಿ ರೂ.25 ಲಕ್ಷದಿಂದ ರೂ.30 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.

Most Read Articles

Kannada
Read more on ಸ್ಕೋಡಾ skoda
English summary
Skoda reveals its EV plans for India. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Drivespark sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Drivespark website. However, you can change your cookie settings at any time. Learn more