Just In
- 8 min ago Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
- 1 hr ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 2 hrs ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 2 hrs ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
Don't Miss!
- News Nandi Hills: ನಂದಿಬೆಟ್ಟದ ಕಡೆ ಹೊರಡುವ ಪ್ರವಾಸಿಗರೇ ಇಲ್ಲಿ ಗಮನಿಸಿ
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Technology ಮೇ 1 ರಂದು ವಿವೋ T3x 5G ಮೊಬೈಲ್ ಮತ್ತೆ ಖರೀದಿಗೆ ಲಭ್ಯ!..ಅಗ್ಗದ ಬೆಲೆ ಇದೆ!
- Lifestyle ರುಚಿ ರುಚಿಯ ಸ್ಪೆಷಲ್ ಅಂಬೂರ್ ಬಿರಿಯಾನಿ ಮಾಡಿ ನೋಡಿ..! ಇಲ್ಲಿದೆ ರೆಸಿಪಿ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ ಎಲೆಕ್ಟ್ರಿಕ್ ಕಾರುಗಳ ಬಿಡುಗಡೆಗೆ ಸಿದ್ದವಾದ ಸ್ಕೋಡಾ
ಕಾರು ಮಾರಾಟದಲ್ಲಿ ಹೊಸ ಬದಲಾವಣೆ ತರುತ್ತಿರುವ ಸ್ಕೋಡಾ ಕಂಪನಿಯು ಸದ್ಯ ಫೋಕ್ಸ್ವ್ಯಾಗನ್ ಜೊತೆಗೂಡಿ ಹಲವು ಹೊಸ ಯೋಜನೆಗಳಿಗೆ ಚಾಲನೆ ನೀಡಿದ್ದು, ಶೀಘ್ರದಲ್ಲೇ ವಿವಿಧ ಮಾದರಿಯ ಸಾಮಾನ್ಯ ಕಾರುಗಳ ಜೊತೆ ಎಲೆಕ್ಟ್ರಿಕ್ ಕಾರುಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದೆ.
ಫೋಕ್ಸ್ವ್ಯಾಗನ್ ಜೊತೆಗೂಡಿ ಇಂಡಿಯಾ 2.0 ಪ್ರೋಜೆಕ್ಟ್ ಯೋಜನೆಗೆ ಚಾಲನೆ ನೀಡಿರುವ ಸ್ಕೋಡಾ ಕಂಪನಿಯು ಹೊಸ ಕಾರುಗಳ ನಿರ್ಮಾಣದ ಹೆಚ್ಚು ಹೂಡಿಕೆ ಮಾಡುತ್ತಿದ್ದು, ಸಾಮಾನ್ಯ ಕಾರುಗಳನ್ನು ಮಾತ್ರವಲ್ಲದೇ ಎಲೆಕ್ಟ್ರಿಕ್ ಕಾರು ಆವೃತ್ತಿಗಳ ಮೇಲೂ ಗಮನಹರಿಸಿದೆ. ಈ ಸಂಬಂಧ ಗ್ರಾಹಕರ ಅಭಿರುಚಿಗಳನ್ನು ತಿಳಿಯಲು ಮಾರುಕಟ್ಟೆ ಅಧ್ಯಯನಕ್ಕೂ ಚಾಲನೆ ನೀಡಿರುವ ಸ್ಕೋಡಾ ಕಂಪನಿಯು ಬಜೆಟ್ ಇವಿ ಕಾರುಗಳನ್ನು ಮಾತ್ರವಲ್ಲದೇ ಲೈಫ್ಸ್ಪೈಲ್ ಮಾದರಿಗಳನ್ನು ಸಹ ಬಿಡುಗಡೆ ಮಾಡಲಿದೆ.
ಯುರೋಪ್ ಮಾರುಕಟ್ಟೆಗಾಗಿ ಈಗಾಗಲೇ ಹೊಸ ಎಲೆಕ್ಟ್ರಿಕ್ ಎಸ್ಯುವಿ ಮಾದರಿಯ ಬಿಡುಗಡೆಯ ಕುರಿತಂತೆ ನೆಮ್ ಪ್ಲೇಟ್ ಟೀಸರ್ ಒಂದನ್ನು ಬಿಡುಗಡೆ ಮಾಡಿದ್ದು, ಸೆಡಾನ್ ಮತ್ತು ಎಸ್ಯುವಿ ಮಾದರಿಯೊಂದನ್ನು ಎಲೆಕ್ಟ್ರಿಕ್ ಮಾದರಿಯಾಗಿ ಬಿಡುಗಡೆ ಮಾಡುತ್ತಿದೆ.
ಹೊಸ ಕಾರು ಎನ್ಯಾಕ್(ENYAQ) ಎನ್ನುವ ಹೆಸರಿನೊಂದಿಗೆ ಬಿಡುಗಡೆಯಾಗುವುದು ಬಹುತೇಕ ಖಚಿತವಾಗಿದ್ದು, ಲಾಂಗ್ ವೀಲ್ಹ್ ಬೆಸ್ನೊಂದಿಗೆ ಎಸ್ಯುವಿ ಮಾದರಿಯಾಗಿ ಬಿಡುಗಡೆಗೊಳ್ಳಲಿದೆ.
ಎಸ್ಯುವಿ ಕಾರುಗಳಲ್ಲೇ ಹೊಸ ಮಾದರಿಯ ವಿನ್ಯಾಸ ಹೊಂದಿರುವ ಎನ್ಯಾಕ್ ಕಾರು 4,648-ಎಂಎಂ ಉದ್ದ, 1,877-ಎಂಎಂ ಅಗಲ, 1,618-ಎಂಎಂ ಎತ್ತರದೊಂದಿಗೆ ಉತ್ತಮ ಒಳಾಂಗಣ ವಿನ್ಯಾಸ ಹೊಂದಿದೆ.
MOST READ: ಲಾಕ್ಡೌನ್ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ
ಮಾಹಿತಿಗಳ ಪ್ರಕಾರ, ಹೊಸ ಕಾರು ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಮೂರು ವೆರಿಯೆಂಟ್ಗಳಲ್ಲಿ ಬಿಡುಗಡೆಯಾಗಲಿದ್ದು, ಪ್ರತಿ ಚಾರ್ಜ್ಗೆ ಆರಂಭಿಕ ಆವೃತ್ತಿಯು 340ಕಿ.ಮೀ, ಮಧ್ಯಮ ಕ್ರಮಾಂಕದ ಕಾರು 390 ಕಿ.ಮೀ ಮತ್ತು ಟಾಪ್ ಎಂಡ್ ಮಾದರಿಯು 500ಕಿ.ಮೀ ಮೈಲೇಜ್ ರೇಂಜ್ ಹೊಂದಿದೆ.
ವೆರಿಯೆಂಟ್ಗಳಿಗೆ ಅನುಗುಣವಾಗಿ 55kWh, 62kWh ಮತ್ತು 82kWh ಬ್ಯಾಟರಿ ಒದಗಿಸಲಾಗಿದ್ದು, ಫೋಕ್ಸ್ವ್ಯಾಗನ್ ನಿರ್ಮಾಣ ಐ.ಡಿ ಕ್ರಾಝ್ ಎಲೆಕ್ಟ್ರಿಕ್ ಮಾದರಿಯಿಂದಲೂ ಕೆಲವು ತಾಂತ್ರಿಕ ಅಂಶಗಳನ್ನು ಎರವಲು ಪಡೆಯಲಾಗಿದೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್ಗೆ ಭರ್ಜರಿ ಆಫರ್ ನೀಡಿದ ಟಾಟಾ
ಹೊಸ ಎಲೆಕ್ಟ್ರಿಕ್ ಯುರೋಪ್ ಮಾರುಕಟ್ಟೆಗಳಲ್ಲಿ 2021ರ ಮಧ್ಯಂತರದಲ್ಲಿ ಬಿಡುಗಡೆಯಾಗಲಿದ್ದು, ಭಾರತದಲ್ಲೂ ಬಿಡುಗಡೆಯಾಗಲಿರುವ ಈ ಹೊಸ ಕಾರು 2022ರ ಆರಂಭದಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ. ಬ್ಯಾಟರಿ ಸಾಮರ್ಥ್ಯಕ್ಕೆ ಅನುಗುಣವಾಗಿ ರೂ.25 ಲಕ್ಷದಿಂದ ರೂ.30 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಲಿದೆ.