Just In
- 30 min ago
ಪೊಲೊ ಹ್ಯಾಚ್ಬ್ಯಾಕ್ ಮತ್ತು ವೆಂಟೊ ಸೆಡಾನ್ ಕಾರುಗಳ ಖರೀದಿ ಮೇಲೆ ಹೊಸ ವರ್ಷದ ಆಫರ್
- 1 hr ago
ದಿಢೀರನೆ ಕೈಕೊಟ್ಟ ಬ್ರೇಕ್, 3 ಕಿ.ಮೀ ರಿವರ್ಸ್ ಗೇರಿನಲ್ಲಿ ಸಾಗಿದ ಟ್ರಕ್ ಚಾಲಕ
- 1 hr ago
ಕೈಗೆಟುಕುವ ದರದಲ್ಲಿ ಟಿವಿಎಸ್ ಎಕ್ಸ್ಎಲ್100 ವಿನ್ನರ್ ಎಡಿಷನ್ ಬಿಡುಗಡೆ
- 2 hrs ago
ಭಾರತದಲ್ಲಿ ಅತಿದೊಡ್ಡ ಮಲ್ಟಿ ಬ್ರಾಂಡ್ ಕಾರ್ ಸರ್ವಿಸ್ ಸೆಂಟರ್ ತೆರೆದ ಬಾಷ್
Don't Miss!
- Finance
34,000 ರುಪಾಯಿ ತನಕ ಕಾರುಗಳ ಬೆಲೆ ಏರಿಕೆ ಮಾಡಿದ ಮಾರುತಿ ಸುಜುಕಿ
- News
ಚುನಾವಣೆಗೂ ಮುನ್ನ ಅಮಿತ್ ಶಾ ಜೊತೆ ಇಪಿಎಸ್ ಮಹತ್ವದ ಚರ್ಚೆ
- Sports
ಭಾರತ vs ಆಸ್ಟ್ರೇಲಿಯಾ: ಧೋನಿ ದಾಖಲೆ ಮುರಿದು 1000 ಟೆಸ್ಟ್ ರನ್ ಗಳಿಸಿದ ರಿಷಭ್ ಪಂತ್
- Lifestyle
ಕೂದಲು ಬೇಗನೆ ಬೆಳ್ಳಗಾಗುವುದು: ಇದು ನಿಮ್ಮ ದೇಹದ ಕುರಿತು ಏನು ಸೂಚಿಸುತ್ತದೆ?
- Education
Indian Forest Service Recruitment 2021: 70 ಡಿಐಜಿಎಫ್/ಎಐಜಿಎಫ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ಚಿತ್ರೀಕರಣ ವೇಳೆ ಅಸ್ವಸ್ಥ: ನಟಿ ಅಲಿಯಾ ಭಟ್ ಆಸ್ಪತ್ರೆಗೆ ದಾಖಲು
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಸೆಡಾನ್ ಕಾರು ಮಾರಾಟದಲ್ಲಿ ಭರ್ಜರಿ ಬೇಡಿಕೆ ಪಡೆದುಕೊಂಡ ಸ್ಕೋಡಾ ರ‍್ಯಾಪಿಡ್
ಸ್ಕೋಡಾ ನಿರ್ಮಾಣದ ಜನಪ್ರಿಯ ರ‍್ಯಾಪಿಡ್ ಸೆಡಾನ್ ಮಾದರಿಯು ದಸರಾ ನಂತರ ದೀಪಾವಳಿ ಸಂಭ್ರಮದಲ್ಲಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಂಡಿದ್ದು, ಹೊಸ ಕಾರು ಈ ವರ್ಷಾಂತ್ಯದವರೆಗೂ ಸಂಪೂರ್ಣ ಬುಕ್ಕಿಂಗ್ ಪಡೆದುಕೊಂಡಿದೆ.

ರ‍್ಯಾಪಿಡ್ ಸೆಡಾನ್ ಮಾದರಿಯ ಖರೀದಿಗಾಗಿ ಕಾಯುತ್ತಿರುವ ಗ್ರಾಹಕರಿಗೆ ಮಾಹಿತಿ ನೀಡಿರುವ ಸ್ಕೋಡಾ ಕಂಪನಿಯು ಹೊಸದಾಗಿ ಬುಕ್ಕಿಂಗ್ ಮಾಡಿರುವ ಗ್ರಾಹಕರಿಗೆ 2021ರಿಂದ ವಿತರಣೆ ಆರಂಭವಾಗಲಿದ್ದು, ಸದ್ಯಕ್ಕೆ ಉತ್ಪಾದನಾ ಸೌಲಭ್ಯಕ್ಕೆ ಅನುಗುಣವಾಗಿ ಹೊಸ ಕಾರಿನ ವಿತರಣೆಯು ಈ ವರ್ಷಾಂತ್ಯವರೆಗೂ ಭರ್ತಿಯಾಗಿದೆ ಎಂಬ ಮಾಹಿತಿ ನೀಡಿದೆ. ಹೀಗಾಗಿ ಹೊಸ ರ‍್ಯಾಪಿಡ್ ಕಾರು ಖರೀದಿಸುವ ಗ್ರಾಹಕರು 2021ರ ವರೆಗೆ ಕಾಯಲೇಬೇಕಿದ್ದು, ಸೆಡಾನ್ ಮಾದರಿಗಳಲ್ಲೇ ವಿಶೇಷ ಸೌಲಭ್ಯಗಳೊಂದಿಗೆ ಗ್ರಾಹಕರ ಪ್ರಮುಖ ಆಕರ್ಷಣೆಯಾಗಿದೆ.

ಬಿಎಸ್-6 ಎಮಿಷನ್ ನಂತರ ಕೇವಲ ಟರ್ಬೋ ಪೆಟ್ರೋಲ್ ಮಾದರಿಯೊಂದಿಗೆ ಮಾತ್ರವೇ ಮಾರಾಟಗೊಳ್ಳುತ್ತಿರುವ ಸ್ಕೋಡಾ ರ‍್ಯಾಪಿಡ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಿಂತಲೂ ಹೆಚ್ಚು ಬೇಡಿಕೆ ಪಡೆದುಕೊಂಡಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ.ರೂ.9.49 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 13.29 ಲಕ್ಷ ಬೆಲೆ ಹೊಂದಿದೆ.

ರ‍್ಯಾಪಿಡ್ ರೈಡರ್ ಬೆಸಿಕ್ ವೆರಿಯೆಂಟ್ ಹೊರತುಪಡಿಸಿ ಇನ್ನುಳಿದ ರೈಡರ್ ಪ್ಲಸ್, ಆ್ಯಂಬಿಯೆಷನ್, ಆನೆಕ್ಸ್, ಸ್ಟೈಲ್ ಮತ್ತು ಮಾಂಟೆ ಕಾರ್ಲೋ ಆವೃತ್ತಿಗಳಲ್ಲಿ ಐದು ವೆರಿಯೆಂಟ್‌ಗಳಲ್ಲೂ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಆಯ್ಕೆ ಲಭ್ಯವಿದ್ದು, ಹೊಸ ಕಾರು 1.0-ಲೀಟರ್ ಟಿಎಸ್ಐ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ಪಡೆದುಕೊಂಡಿದೆ.

ಹೊಸ ಕಾರಿನಲ್ಲಿ ಬಿಎಸ್-6 ವೈಶಿಷ್ಟ್ಯತೆಯ 999-ಸಿಸಿ ಟಿಎಸ್ಐ ಟರ್ಬೋ ಚಾರ್ಜ್ಡ್ ತ್ರಿ ಸಿಲಿಂಡರ್ ಪೆಟ್ರೋಲ್ ಮಾದರಿಯನ್ನು ಜೋಡಿಸಲಾಗಿದ್ದು, 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಮಾದರಿಯು 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 108-ಬಿಎಚ್‌ಪಿ ಮತ್ತು 175-ಎನ್ಎಂ ಟಾರ್ಕ್ ಉತ್ಪಾದನೆ ಉತ್ಪಾದನಾ ಗುಣಹೊಂದಿದೆ.

ಆಟೋಮ್ಯಾಟಿಕ್ ಆವೃತ್ತಿಯು ಸೆಡಾನ್ ಪ್ರಿಯರ ಪ್ರಮುಖ ಆಕರ್ಷಣೆಯಾಗಲಿದ್ದು, ಹೊಸ ಎಂಜಿನ್ ಮಾದರಿಯನ್ನು ಫೋಕ್ಸ್‌ವ್ಯಾಗನ್ ವೆಂಟೊ ಸೆಡಾನ್ ಕಾರಿನಿಂದ ಎರವಲು ಪಡೆದುಕೊಳ್ಳಲಾಗಿದೆ.

ಬಿಎಸ್-6 ನಿಯಮದಿಂದಾಗಿ ರ‍್ಯಾಪಿಡ್ ಕಾರಿನಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಎಂಪಿಐ ಪೆಟ್ರೋಲ್ ಮತ್ತು 1.6-ಲೀಟರ್ ಡೀಸೆಲ್ ಎಂಜಿನ್ ಮಾದರಿಯನ್ನು ಸ್ಥಗಿತಗೊಳಿಸಲಾಗಿದ್ದು, ಟರ್ಬೋ ಪೆಟ್ರೋಲ್ ಮಾದರಿಯನ್ನು ಮಾತ್ರ ಮಾರಾಟ ಮಾಡಲಾಗುತ್ತಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

999-ಸಿಸಿ ಟಿಎಸ್ಐ ಟರ್ಬೋ ಪೆಟ್ರೋಲ್ ಮಾದರಿಯು ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಆಕರ್ಷಕ ಇಂಧನ ದಕ್ಷತೆ ಹೊಂದಿದ್ದು, ಪ್ರತಿ ಲೀಟರ್ ಪೆಟ್ರೋಲ್‌ಗೆ ಮ್ಯಾನುವಲ್ ಮಾದರಿಯು ಗರಿಷ್ಠ 18.97ಕಿ.ಮೀ ಮೈಲೇಜ್ ಹಿಂದಿರುಗಿಸಿದ್ದಲ್ಲಿ ಆಟೋಮ್ಯಾಟಿಕ್ ಮಾದರಿಯು 16.24 ಕಿ.ಮೀ ಮೈಲೇಜ್ ಹಿಂದಿರುಗಿಸಲಿದೆ.

ಹೊಸ ರ‍್ಯಾಪಿಡ್ ಕಾರಿನಲ್ಲಿ ಎಂಜಿನ್ ಬದಲಾವಣೆ ಹೊರತುಪಡಿಸಿ ತಾಂತ್ರಿಕ ಅಂಶಗಳನ್ನು ಈ ಹಿಂದಿನ ಮಾದರಿಯೆಂತೆ ಮುಂದುವರಿಸಲಾಗಿದ್ದು, ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್, 8-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಸ್ಕಫ್ ಪ್ಲೇಟ್, ಫ್ಲ್ಯಾಟ್ ಬಾಟಮ್ ಸ್ಟ್ರೀರಿಂಗ್ ವೀಲ್ಹ್, ಎಲ್‌ಇಡಿ ಲೈಟ್‌ಗಳು, ಲೆದರ್ ಸೀಟ್‌ಗಳು ಪ್ರಮುಖ ಆಕರ್ಷಣೆಯಾಗಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಹಾಗೆಯೇ ಪ್ರಯಾಣಿಕ ಸುರಕ್ಷತೆಗಾಗಿ ಕ್ರೂಸ್ ಕಂಟ್ರೋಲ್, 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ರಿಯರ್ ವ್ಯೂ ಕ್ಯಾಮೆರಾ ಮತ್ತು ಸೆನ್ಸಾರ್, ಬ್ರೇಕ್ ಅಸಿಸ್ಟ್ ಮತ್ತು 16-ಇಂಚಿನ ಅಲಾಯ್ ವೀಲ್ಹ್‌ನೊಂದಿಗೆ ಪ್ರಮುಖ ಆರು ಬಣ್ಣಗಳ ಆಯ್ಕೆ ಹೊಂದಿದೆ.