ಜೂನ್ ತಿಂಗಳಲ್ಲಿ ಮಾರಾಟವಾದ ಸ್ಕೋಡಾ ಕರೋಕ್ ಎಸ್‍ಯುವಿಗಳೆಷ್ಟು ಗೊತ್ತಾ?

ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಬಿಎಸ್-6 ಕರೋಕ್ ಎಸ್‍‍‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಇತ್ತೀಚಿಗೆ ಬಿಡುಗಡೆಗೊಳಿಸಿತ್ತು. ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.24.99 ಲಕ್ಷಗಳಾಗಿದೆ.

ಜೂನ್ ತಿಂಗಳಲ್ಲಿ ಮಾರಾಟವಾದ ಸ್ಕೋಡಾ ಕರೋಕ್ ಎಸ್‍ಯುವಿಗಳೆಷ್ಟು ಗೊತ್ತಾ?

ಕಳೆದ ಜೂನ್ ತಿಂಗಳಲ್ಲಿ ಸ್ಕೋಡಾ ಕರೋಕ್ ಎಸ್‍ಯುವಿಯ 151 ಯುನಿಟ್‌ಗಳನ್ನು ಮಾರಾಟ ಮಾಡಲಾಗಿದೆ. ಸ್ಕೋಡಾ ಕರೋಕ್ ಎಸ್‍ಯುವಿಯನ್ನು ಭಾರತದಲ್ಲಿ ಸೀಮಿತ ಸಂಖ್ಯೆಯಲ್ಲಿ ಬಿಡುಗಡೆಗೊಳಿಸಿದ್ದಾರೆ. ಇನ್ನು ಸ್ಕೋಡಾ ಕಂಪನಿಯು ಕಳೆದ ಜೂನ್ ತಿಂಗಳಲ್ಲಿ ಒಟ್ಟು 790 ಯುನಿಟ್‌ಗಳನ್ನು ಮಾರಾಟ ಮಾಡಿದೆ. ಕರೋನಾ ಭೀತಿಯಿಂದ ಸ್ಕೋಡಾ ಕಾರುಗಳ ಮಾರಾಟದಲ್ಲಿ ಕುಸಿತ ಕಂಡಿದೆ. ಮುಂದಿನ ತಿಂಗಳುಗಳಲ್ಲಿ ಸ್ಕೋಡಾ ಕಾರುಗಳ ಮಾರಾಟ ಹೆಚ್ಚಾಗಬಹುದು ಎಂದು ನಿರೀಕ್ಷಿಸುತ್ತೇವೆ.

ಜೂನ್ ತಿಂಗಳಲ್ಲಿ ಮಾರಾಟವಾದ ಸ್ಕೋಡಾ ಕರೋಕ್ ಎಸ್‍ಯುವಿಗಳೆಷ್ಟು ಗೊತ್ತಾ?

ಹೊಸ ಸ್ಕೋಡಾ ಕರೋಕ್ ಎಸ್‍‍ಯುವಿಯು ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಈ ಸ್ಕೋಡಾ ಕರೋಕ್ ಎಸ್‍‍ಯುವಿ ಕಂಪನಿಯ ಎಂಕ್ಯೂಬಿ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿದೆ.

MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್‍ಯುವಿ

ಜೂನ್ ತಿಂಗಳಲ್ಲಿ ಮಾರಾಟವಾದ ಸ್ಕೋಡಾ ಕರೋಕ್ ಎಸ್‍ಯುವಿಗಳೆಷ್ಟು ಗೊತ್ತಾ?

ಈ ಎಸ್‍ಯುವಿಯ ಇಂಟಿರಿಯರ್‍‍ನಲ್ಲಿ ಆ್ಯಪಲ್ ಕಾರ್‍‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಜೊತೆಯಲ್ಲಿ ದೊಡ್ಡ ಟಚ್‍‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂಗಳಿವೆ. ಇದರೊಂದಿಗೆ ಡ್ಯುಯಲ್ ಜೋನ್ ಕ್ಲೈಮೇಟ್ ಕಂಟ್ರೋಲ್, ಸನ್‍ರೂಫ್ ಮತ್ತು ಲೆದರ್ ಅಪ್‍‍ಹೋಲೆಸ್ಟರಿ ಸೀಟುಗಳನ್ನು ಹೊಂದಿವೆ.

ಜೂನ್ ತಿಂಗಳಲ್ಲಿ ಮಾರಾಟವಾದ ಸ್ಕೋಡಾ ಕರೋಕ್ ಎಸ್‍ಯುವಿಗಳೆಷ್ಟು ಗೊತ್ತಾ?

ಹೊಸ ಸ್ಕೋಡಾ ಕರೋಕ್ ಎಸ್‍‍ಯುವಿ ಹಲವಾರು ಆಧುನಿಕ ಫೀಚರ್ಸ್‍‍ಗಳನ್ನು ಹೊಂದಿರಲಿದೆ. ಈ ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯಲ್ಲಿ ಎಎಫ್ಎಸ್ (ಅಡಾಪ್ಟಿವ್ ಫ್ರಂಟ್ ಲೈಟಿಂಗ್), ಸಿಗ್ನೇಚರ್ ಬಟರ್ಫ್ಲೈ ಗ್ರಿಲ್, ಸ್ಕ್ವೇರ್ ವೀಲ್ ಆರ್ಚ್, ಆರ್ 17 ಅರೋನಿಯಾ ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಮತ್ತು ಸಿ-ಆಕಾರದ ಎಲ್ಇಡಿ ಟೈಲ್ ಲ್ಯಾಂಪ್‌ಗಳೊಂದಿಗೆ ಸ್ಲಿಕ್ ಎಲ್ಇಡಿ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಜೂನ್ ತಿಂಗಳಲ್ಲಿ ಮಾರಾಟವಾದ ಸ್ಕೋಡಾ ಕರೋಕ್ ಎಸ್‍ಯುವಿಗಳೆಷ್ಟು ಗೊತ್ತಾ?

ಈ ಎಸ್‍ಯುವಿಯು 1.5 ಲೀಟರ್ ಟಿ‍ಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 150 ಬಿ‍‍ಹೆಚ್‍‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 7 ಸ್ಪೀಡ್ ಡಿಎಸ್‍‍ಜಿ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಜೂನ್ ತಿಂಗಳಲ್ಲಿ ಮಾರಾಟವಾದ ಸ್ಕೋಡಾ ಕರೋಕ್ ಎಸ್‍ಯುವಿಗಳೆಷ್ಟು ಗೊತ್ತಾ?

ಈ ಹೊಸ ಕರೋಕ್ ಎಸ್‍‍ಯುವಿಯನ್ನು ಡೀಸೆಲ್ ಎಂಜಿನ್‍‍ ಅಯ್ಕೆಯನ್ನು ಹೊಂದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಡೀಸೆಲ್ ಆವೃತ್ತಿಗಳಿಗೆ ಬೇಡಿಕೆ ಹೆಚ್ಚಾದರೆ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಗೊಳಿಸಬಹುದು.

MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಜೂನ್ ತಿಂಗಳಲ್ಲಿ ಮಾರಾಟವಾದ ಸ್ಕೋಡಾ ಕರೋಕ್ ಎಸ್‍ಯುವಿಗಳೆಷ್ಟು ಗೊತ್ತಾ?

ಇನ್ನು ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ 9 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಇಎಸ್‌ಸಿ, ಹಿಲ್-ಸ್ಟಾರ್ಟ್ ಅಸಿಸ್ಟ್ ಫ್ರಂಟ್ ಮತ್ತು ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

ಜೂನ್ ತಿಂಗಳಲ್ಲಿ ಮಾರಾಟವಾದ ಸ್ಕೋಡಾ ಕರೋಕ್ ಎಸ್‍ಯುವಿಗಳೆಷ್ಟು ಗೊತ್ತಾ?

ಈ ಹೊಸ ಸ್ಕೋಡಾ ಕರೋಕ್ ಎಸ್‍‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಂಜಿ ಹೆಕ್ಟರ್, ಜೀಪ್ ಕಂಪಾಸ್ ಮತ್ತು ಹ್ಯುಂಡೈ ಟಕ್ಸನ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.

Article Published On: Monday, July 6, 2020, 10:25 [IST]
English summary
Skoda India Sold 151 Units Of New Karoq SUV In June 2020. Read In Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+