Just In
Don't Miss!
- News
ರೈತರು 2024ರವರೆಗೂ ಪ್ರತಿಭಟನೆ ನಡೆಸಲು ಸಿದ್ಧರಿದ್ದಾರೆ:ಭಾರತೀಯ ಕಿಸಾನ್ ಯೂನಿಯನ್
- Finance
Gold, Silver Rate: ಪ್ರಮುಖ ನಗರಗಳಲ್ಲಿ ಜ. 17ರ ಚಿನ್ನ, ಬೆಳ್ಳಿ ದರ
- Sports
ಐಎಸ್ಎಲ್: ಜೆಮ್ಷೆಡ್ಪುರಕ್ಕೆ ಆಘಾತ ನೀಡಿದ ನಾರ್ಥ್ಈಸ್ಟ್
- Movies
ಹರ ಜಾತ್ರೆಯಲ್ಲಿ ಪುನೀತ್ ರಾಜ್ ಕುಮಾರ್; ಅಪ್ಪು ಹಾಡು ಕೇಳಿ ಸಂಭ್ರಮಿಸಿದ ಅಭಿಮಾನಿಗಳು
- Lifestyle
ಸಂಜೆ ಸ್ನ್ಯಾಕ್ಸ್ ಗೆ ಹೇಳಿಮಾಡಿಸಿದ್ದು ಈ ತಡ್ಕಾ ಮಸಾಲೆ ಮ್ಯಾಗಿ
- Education
BEL Recruitment 2021: 205 ಟೆಕ್ನೀಶಿಯನ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಆಗಸ್ಟ್ ತಿಂಗಳ ಮಾರಾಟದಲ್ಲಿ ಬೆಳವಣಿಗೆ ಸಾಧಿಸಿದ ಸ್ಕೋಡಾ ಕರೋಕ್
ಸ್ಕೋಡಾ ಆಟೋ ಇಂಡಿಯಾ ಕಂಪನಿಯು ತನ್ನ ಬಿಎಸ್-6 ಕರೋಕ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ 2020ರ ಮೇ ತಿಂಗಳಲ್ಲಿ ಬಿಡುಗಡೆಗೊಳಿಸಿತ್ತು. ಈ ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯ ಬೆಲೆಯು ಭಾರತದ ಎಕ್ಸ್ ಶೋರೂಂ ಪ್ರಕಾರ ರೂ.24.99 ಲಕ್ಷಗಳಾಗಿದೆ.

2020ರ ಆಗಸ್ಟ್ ತಿಂಗಳಲ್ಲಿ ಸ್ಕೋಡಾ ಕರೋಕ್ ಎಸ್‍ಯುವಿಯ 175 ಯುನಿಟ್‌ಗಳು ಮಾರಾಟವಾಗಿವೆ. ಸ್ಕೋಡಾ ಕರೋಕ್ ಎಸ್‍ಯುವಿಯನ್ನು ಭಾರತದಲ್ಲಿ ಸೀಮಿತ ಸಂಖ್ಯೆಯಲ್ಲಿ ಬಿಡುಗಡೆಗೊಳಿಸಿದ್ದಾರೆ. 2020ರ ಜುಲೈ ತಿಂಗಳಲ್ಲಿ ಸ್ಕೊಡಾ ಕರೋಕ್ ಮಾದರಿಯ 130 ಯುನಿಟ್‌ಗಳು ಮಾರಾಟವಾಗಿತ್ತು. 2020ರ ಜುಲೈ ತಿಂಗಳ ಮಾರಾಟವನ್ನು ಆಗಸ್ಟ್ ತಿಂಗಳಿಗೆ ಹೋಲಿಸಿದರೆ ಶೇ.34.61 ರಷ್ಟು ಬೆಳವಣಿಗೆಯನ್ನು ಸಾಧಿಸಿದೆ.

ಈ ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯು ಆಕರ್ಷಕ ವಿನ್ಯಾಸವನ್ನು ಹೊಂದಿದೆ. ಈ ಸ್ಕೋಡಾ ಕರೋಕ್ ಎಸ್‍ಯುವಿ ಕಂಪನಿಯ ಎಂಕ್ಯೂಬಿ ಪ್ಲಾಟ್‍ಫಾರ್ಮ್ ಅನ್ನು ಆಧರಿಸಿದೆ.
MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಈ ಎಸ್‍ಯುವಿಯ ಇಂಟಿರಿಯರ್‍ನಲ್ಲಿ ಆ್ಯಪಲ್ ಕಾರ್‍ಪ್ಲೇ ಮತ್ತು ಆಂಡ್ರಾಯ್ಡ್ ಆಟೋ ಜೊತೆಯಲ್ಲಿ ದೊಡ್ಡ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂಗಳಿವೆ. ಇದರೊಂದಿಗೆ ಡ್ಯುಯಲ್ ಜೋನ್ ಕ್ಲೈಮೇಟ್ ಕಂಟ್ರೋಲ್, ಸನ್‍ರೂಫ್ ಮತ್ತು ಲೆದರ್ ಅಪ್‍ಹೋಲೆಸ್ಟರಿ ಸೀಟುಗಳನ್ನು ಹೊಂದಿವೆ.

ಹೊಸ ಸ್ಕೋಡಾ ಕರೋಕ್ ಎಸ್‍ಯುವಿ ಹಲವಾರು ಆಧುನಿಕ ಫೀಚರ್ಸ್‍ಗಳನ್ನು ಹೊಂದಿರಲಿದೆ. ಈ ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯಲ್ಲಿ ಎಎಫ್ಎಸ್ (ಅಡಾಪ್ಟಿವ್ ಫ್ರಂಟ್ ಲೈಟಿಂಗ್), ಸಿಗ್ನೇಚರ್ ಬಟರ್ಫ್ಲೈ ಗ್ರಿಲ್, ಸ್ಕ್ವೇರ್ ವೀಲ್ ಆರ್ಚ್, ಆರ್ 17 ಅರೋನಿಯಾ ಡ್ಯುಯಲ್-ಟೋನ್ ಅಲಾಯ್ ವ್ಹೀಲ್ ಮತ್ತು ಸಿ-ಆಕಾರದ ಎಲ್ಇಡಿ ಟೈಲ್ ಲ್ಯಾಂಪ್‌ಗಳೊಂದಿಗೆ ಸ್ಲಿಕ್ ಎಲ್ಇಡಿ ಹೆಡ್‌ಲ್ಯಾಂಪ್ ಅನ್ನು ಹೊಂದಿದೆ.
MOST READ: ಅನಾವರಣವಾಯ್ತು ಬಿಎಂಡಬ್ಲ್ಯು ಎಕ್ಸ್7 ಡಾರ್ಕ್ ಶ್ಯಾಡೋ ಎಸ್‍ಯುವಿ

ಈ ಎಸ್‍ಯುವಿಯು 1.5 ಲೀಟರ್ ಟಿಎಸ್ಐ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 150 ಬಿಹೆಚ್‍ಪಿ ಪವರ್ ಮತ್ತು 250 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್‍ನೊಂದಿಗೆ 7 ಸ್ಪೀಡ್ ಡಿಎಸ್‍ಜಿ ಆಟೋಮ್ಯಾಟಿಕ್ ಗೇರ್‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಈ ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯನ್ನು ಡೀಸೆಲ್ ಎಂಜಿನ್ ಅಯ್ಕೆಯನ್ನು ಹೊಂದಿಲ್ಲ. ಆದರೆ ಮುಂದಿನ ದಿನಗಳಲ್ಲಿ ಡೀಸೆಲ್ ಆವೃತ್ತಿಗಳಿಗೆ ಬೇಡಿಕೆ ಹೆಚ್ಚಾದರೆ ಡೀಸೆಲ್ ಎಂಜಿನ್ ಆಯ್ಕೆಯಲ್ಲಿ ಬಿಡುಗಡೆಗೊಳಿಸಬಹುದು.
MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಇನ್ನು ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯಲ್ಲಿ ಸುರಕ್ಷತೆಗಾಗಿ 9 ಏರ್‌ಬ್ಯಾಗ್‌ಗಳು, ಎಬಿಎಸ್ ಜೊತೆ ಇಬಿಡಿ ಮತ್ತು ಬ್ರೇಕ್ ಅಸಿಸ್ಟ್, ಇಎಸ್‌ಸಿ, ಹಿಲ್-ಸ್ಟಾರ್ಟ್ ಅಸಿಸ್ಟ್ ಫ್ರಂಟ್, ರೇರ್ ಪಾರ್ಕಿಂಗ್ ಸೆನ್ಸರ್‌ಗಳು ಮತ್ತು ರೇರ್ ಪಾರ್ಕಿಂಗ್ ಕ್ಯಾಮೆರಾವನ್ನು ಹೊಂದಿದೆ.

ಇದರೊಂದಿಗೆ ಸ್ಕೋಡಾ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ 2020ರ ಆಕ್ಟೀವಿಯಾ ಆರ್‍ಎಸ್ 245 ಕಾರಿನ ಎಲ್ಲಾ ಯುನಿಟ್‍ಗಳನ್ನು ಮಾರಾಟ ಮಾಡಲಾಗಿದೆ ಎಂದು ಈ ಹಿಂದೆ ವರದಿಗಳು ಪ್ರಕಟವಾಗಿತ್ತು. ಆದರೆ ಇದರಲ್ಲಿ ಕೆಲವು ಗ್ರಾಹಕರು ಈ ಕಾರನ್ನು ಬುಕ್ಕಿಂಗ್ ಮಾಡಿ ನಂತರ ಅದನ್ನು ರದ್ದುಪಡಿಸಲಾಗಿದೆ.

ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಕಾರಿನ ಆನ್-ರೋಡ್ ಬೆಲೆಯನ್ನು ತಿಳಿದ ಬಳಿಕ ಹಲವು ಗ್ರಾಹಕರು ಹಿಂದೆ ಸರಿದಿದ್ದಾರೆ. ಬುಕ್ಕಿಂಗ್ ಮಾಡಿದ ಹಲವು ಗ್ರಾಹಕರು ಆನ್-ರೋಡ್ ಬೆಲೆ ತಿಳಿದು ರದ್ದುಗೊಳಿಸಲಾಗಿದೆ. ಇನ್ನು ಹಲವು ಜನರು ಸ್ಕೋಡಾ ಆಕ್ಟೀವಿಯಾ ಆರ್‍ಎಸ್ 245 ಕಾರನ್ನು ಬುಕ್ಕಿಂಗ್ ಮಾಡಿ ಹಲವರು ರದ್ದುಗೊಳಿಸಿರುವುದರಿಂದ ಇನ್ನು ಕೂಡ ಖರೀದಿಗೆ ಲಭ್ಯವಿದೆ.

ಈ ಹೊಸ ಸ್ಕೋಡಾ ಕರೋಕ್ ಎಸ್‍ಯುವಿಯು ಭಾರತೀಯ ಮಾರುಕಟ್ಟೆಯಲ್ಲಿ ಜನಪ್ರಿಯ ಎಂಜಿ ಹೆಕ್ಟರ್, ಜೀಪ್ ಕಂಪಾಸ್ ಮತ್ತು ಹ್ಯುಂಡೈ ಟ್ಯೂಸಾನ್ ಎಸ್‍ಯುವಿಗಳಿಗೆ ಪೈಪೋಟಿಯನ್ನು ನೀಡುತ್ತದೆ.