ಕರೋನಾ ವಿರುದ್ಧದ ಹೋರಾಟಕ್ಕಾಗಿ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿದ ಸ್ಕೋಡಾ

ಮಹಾಮಾರಿ ಕರೋನಾ ವೈರಸ್ ತಡೆಗಾಗಿ ಬಹುತೇಕ ಆಟೋ ಕಂಪನಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸುವ ಮೂಲಕ ಭಾರೀ ಪ್ರಮಾಣದ ಧನ ಸಹಾಯದ ಜೊತೆಗೆ ವೈದ್ಯಕೀಯ ಉಪಕರಣಗಳನ್ನು ಒದಗಿಸುವುದಾಗಿ ಭರವಸೆ ನೀಡಿವೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿದ ಸ್ಕೋಡಾ

ಫೋಕ್ಸ್‌ವ್ಯಾಗನ್ ಅಂಗಸಂಸ್ಥೆಯಾದ ಸ್ಕೋಡಾ ಸಹ ಭಾರತದಲ್ಲಿ ವೈರಸ್ ವಿರುದ್ಧ ಹೋರಾಟಕ್ಕಾಗಿ ರೂ.1 ಕೋಟಿ ದೇಣಿಗೆ ಘೋಷಣೆ ಮಾಡಿರುವುದಲ್ಲದೇ ದೇಣಿಗೆ ಹಣದಲ್ಲಿ ಸರ್ಕಾರಿ ಆಸ್ಪತ್ರೆಯೊಂದನ್ನು ಉನ್ನತೀಕರಿಸುವುದಾಗಿ ಹೇಳಿಕೊಂಡಿದೆ. ಪುಣೆ ಹೊರವಲಯದಲ್ಲಿರುವ ಸಸೂನ್ ಜನರಲ್ ಆಸ್ಪತ್ರೆಯಲ್ಲಿ ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇಲ್ಲಿಯೇ ಹೆಚ್ಚುವರಿಯಾಗಿ ಸುಸಜ್ಜಿತ ಮಾದರಿಯ 1,100 ಬೆಡ್‌ಗಳನ್ನು ನೀಡಲು ನಿರ್ಧರಿಸಲಿದೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿದ ಸ್ಕೋಡಾ

ಜೊತೆಗೆ ಮಾಸ್ಕ್ ಮತ್ತು ಫೇಸ್ ‌ಶಿಲ್ಡ್‌ಗಳನ್ನು ಈಗಾಗಲೇ ಪುಣೆಯಲ್ಲಿರುವ ಕಾರು ಘಟಕದಲ್ಲೇ ಉತ್ಪಾದನೆ ಮಾಡಲಾಗುತ್ತಿದ್ದು, ಶೀಘ್ರದಲ್ಲೇ ವೆಂಟಿಲೆಟರ್ಗಳು ಸೇರಿದಂತೆ ವಿವಿಧ ಮಾದರಿಯ ವೈದ್ಯಕೀಯ ಉಪಕರಣಗಳನ್ನು ಒದಗಿಸುವುದಾಗಿ ಭರವಸೆ ನೀಡಿದೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿದ ಸ್ಕೋಡಾ

ಇದಲ್ಲದೇ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಈಗಾಗಲೇ ಹಲವು ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹಣಕಾಸಿನ ನೆರವು ಘೋಷಣೆ ಮಾಡಿರುವುದಲ್ಲದೇ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಅಭಿವೃದ್ದಿಪಡಿಸುತ್ತಿವೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿದ ಸ್ಕೋಡಾ

ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ಕರೋನಾ ವಿರುದ್ಧ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಣಿಗೆ ಸಂಗ್ರಹ ಅಭಿಯಾನವನ್ನು ಕೈಗೊಂಡಿವೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿದ ಸ್ಕೋಡಾ

ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಗೆ ಮುಂದಾಗಿವೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿದ ಸ್ಕೋಡಾ

ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೆಟರ್ ಮತ್ತು ಐಸಿಯು ಯುನಿಟ್‌ಗೆ ಅಗತ್ಯವಿರುವ ಸೌಲಭ್ಯಗಳನ್ನು ನೀಡುವುದಾಗಿ ಘೋಷಣೆ ಮಾಡಿದ್ದು, ಆರೋಗ್ಯ ಇಲಾಖೆಯ ಬೇಡಿಕೆಗಳನ್ನು ಪೂರೈಸಲು ಸಿದ್ದವಾಗುತ್ತಿವೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿದ ಸ್ಕೋಡಾ

ಇದರ ಜೊತೆಗೆ ಗ್ರಾಮೀಣ ಭಾಗದಲ್ಲಿನ ಆರೋಗ್ಯ ಸೌಕರ್ಯ ಮತ್ತು ಮೂಲಭೂತ ಸೌಕರ್ಯಗಳ ನಿರ್ಮಾಣಕ್ಕಾಗಿ ವಿಶೇಷ ಆದ್ಯತೆ ನೀಡುವುದಾಗಿ ಹೇಳಿಕೊಂಡಿರುವ ಆಟೋ ಕಂಪನಿಗಳು ಪರಿಸರ ಮತ್ತು ಆರೋಗ್ಯ ಕಾಳಜಿಗೆ ವಿಶೇಷ ಆಸಕ್ತಿ ವಹಿಸಿದ್ದು, ಶೀಘ್ರದಲ್ಲೇ ವೈದ್ಯಕೀಯ ಉಪಕರಣಗಳನ್ನು ಸರಬರಾಜು ಮಾಡುವುದಾಗಿ ಘೋಷಣೆ ಮಾಡಿವೆ.

ಕರೋನಾ ವಿರುದ್ಧದ ಹೋರಾಟಕ್ಕಾಗಿ ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿದ ಸ್ಕೋಡಾ

ವೈರಸ್ ತಡೆಗಾಗಿ ಈಗಾಗಲೇ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಿನಿಂದ ಹೋರಾಟ ನಡೆಸುತ್ತಿದ್ದು, ಈ ವೇಳೆ ವೈದ್ಯಕೀಯ ಉಪಕರಣಗಳ ಕೊರತೆಯು ಎದ್ದುಕಾಣುತ್ತಿದೆ. ಈ ಹಿನ್ನಲೆಯಲ್ಲಿ ಸದ್ಯ ಉತ್ಪಾದನೆಯನ್ನು ಸ್ಥಗಿತಗೊಳಿಸಿರುವ ಆಟೋ ಉತ್ಪಾದನಾ ಘಟಕಗಳಲ್ಲೇ ಅಗತ್ಯ ವೈದಕೀಯ ಉಪಕರಣಗಳ ಉತ್ಪಾದನೆಗೆ ನಿರ್ಧರಿಸಲಾಗಿದ್ದು, ವೆಂಟಿಲೆಟರ್, ಮಾಸ್ಕ್‌, ಟೆಸ್ಟಿಂಗ್ ಕಿಟ್ ಉತ್ಪಾದನೆ ಪ್ರಮುಖ ಕಾರು ಕಂಪನಿಗಳು ಒಪ್ಪಿಗೆ ಸೂಚಿಸಿವೆ.

Article Published On: Friday, April 3, 2020, 20:58 [IST]
English summary
Skoda Auto Volkswagen Start Producing Face Shields At Chakan Plant. Read in Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+