ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್

ಸ್ಕೋಡಾ ಇಂಡಿಯಾ ಕಂಪನಿಯು ತನ್ನ ಸೂಪರ್ಬ್ ಫೇಸ್‌ಲಿಫ್ಟ್ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗಿದೆ. ಹೊಸ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರು ಇದೇ ತಿಂಗಳ 28ರಂದು ಬಿಡುಗಡೆಯಾಗಲಿದೆ ಎಂದು ನಿರೀಕ್ಷಿಸುತ್ತೇವೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್

ಸ್ಕೋಡಾ ಕಂಪನಿಯು ಸೂಪರ್ಬ್ ಕಾರನ್ನು ನವೀಕರಿಸಿ ಅಂತರರಾಷ್ಟ್ರೀಯ ಮಾರುಕಟ್ಟೆಯಲಿ ಬಿಡುಗಡೆಗೊಳಿಸಿದೆ. ಸ್ಕೋಡಾ ನವೀಕರಿಸಿದ ಸೂಪರ್ಬ್ ಕಾರನ್ನು ಇತ್ತೀಚೆಗೆ ನಡೆದ 2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶಿಸಲಾಗಿತ್ತು. ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನಲ್ಲಿ ಫ್ರಂಟ್ ಗ್ರಿಲ್ ಮತ್ತು ಫ್ರಂಟ್ ಬಂಪರ್‍ನೊಂದಿಗೆ ಕ್ರೋಮ್ ಎಕ್ಸಟ್ ಒಳಗೂಂಡಿದೆ. ಈ ಐಷಾರಾಮಿ ಸೆಡಾನ್‍ನಲ್ಲಿ ಮ್ಯಾಟ್ರಿಕ್ಸ್ ತಂತ್ರಜ್ಞಾನ, ಎಲ್ಇಡಿ ಫಾಗ್ ಲ್ಯಾಂಪ್ ಮತ್ತು ಹೊಸ ಅಲಾಯ್ ವೀಲ್ ವಿನ್ಯಾಸದೊಂದಿಗೆ ಫುಲ್-ಎಲ್ಇಡಿ ಹೆಡ್‌ಲ್ಯಾಂಪ್‌ಗಳನ್ನು ಸಹ ಒಳಗೊಂಡಿದೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್

ಈ ಕಾರಿನ ಹಿಂಭಾಗದ ವಿನ್ಯಾಸದಲ್ಲಿ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ. ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಇಂಟಿರಿಯರ್ ನಲ್ಲಿ ಟಚ್‍ಸ್ಕ್ರೀನ್ ಇನ್ಫೋಟೇನ್‍ಮೆಂಟ್ ಸಿಸ್ಟಂ, ವರ್ಚುವಲ್ ಕಾಕ್‌ಪಿಟ್ ಇನ್ಸ್ಟ್ರುಮೆಂಟ್ ಕ್ಲಸ್ಟರ್, ವೈರ್‌ಲೆಸ್ ಚಾರ್ಜರ್ ಮತ್ತು ಇನ್ನಿತರ ಫೀಚರ್‍ಗಳನ್ನು ಹೊಂದಿದೆ.

MOST READ: ಇತಿಹಾಸದ ಪುಟ ಸೇರಿದ ಫೋಕ್ಸ್‌ವ್ಯಾಗನ್ ಎಮಿಯೊ ಕಾರು

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್

ಇದರೊಂದಿಗೆ ಲೆದರ್ ಸೀಟ್, ಸನ್‌ರೂಫ್, ಸ್ಟೀಯರಿಂಗ್ ಮೌಂಟಡ್ ಕಂಟ್ರೋಲ್ ಮತ್ತು 360 ಡಿಗ್ರಿ ಕ್ಯಾಮೆರಾವನ್ನು ಕೂಡ ಅಳವಡಿಸಲಾಗಿದೆ. ಇಂಟಿರಿಯರ್ ನಲ್ಲಿ ಕೆಲವು ಹೊಸ ಫೀಚರ್ಸ್‍ಗಳನ್ನು ಹೊರತುಪಡಿಸಿ ಇನ್ನಿತರ ಯಾವುದೇ ಬದಲಾವಣೆಗಳನ್ನು ಮಾಡಲಾಗಿಲ್ಲ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್

ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನಲ್ಲಿ 2.0-ಲೀಟರ್ ಟಿಎಸ್‌ಐ ಟರ್ಬೋಚಾರ್ಜ್ಡ್ ಪೆಟ್ರೋಲ್ ಎಂಜಿನ್‌ ಅನ್ನು ಅಳವಡಿಸಲಾಗಿದೆ. ಈ ಎಂಜಿನ್ 190 ಬಿ‍‍ಹೆಚ್‍‍ಪಿ ಪವರ್ ಮತ್ತು 320 ಎನ್‍ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ. ಈ ಎಂಜಿನ್ ನೊಂದಿಗೆ 7 ಸ್ಪೀಡ್ ಆಟೋಮ್ಯಾಟಿಕ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ.

MOST READ: ಬೆಂಗಳೂರಿನಲ್ಲಿ ತುರ್ತು ಸೇವೆ ಆರಂಭಿಸಿದ ಓಲಾ, ಉಬರ್

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್

ಹಿಂದಿನ ಸ್ಕೋಡಾ ಸೂಪರ್ಬ್ ಮಾದರಿಯಲ್ಲಿ 1.8-ಲೀಟರ್ ಟಿಎಸ್ಐ ಪೆಟ್ರೋಲ್ ಮತ್ತು 2.0-ಲೀಟರ್ ಟಿಡಿಐ ಡೀಸೆಲ್ ಎಂಜಿನ್ ಅನ್ನು ಹೊಂದಿದೆ. ಆದರೆ ಈ ಎರಡು ಎಂಜಿನ್ ಗಳನ್ನು ಬಿಎಸ್-6 ಮಾಲಿನ್ಯ ನಿಯಮಕ್ಕೆ ಅನುಗುಣವಾಗಿ ನವೀಕರಿಸಲಾಗುವುದಿಲ್ಲ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್

ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾದ ಬಳಿಕ ಟೊಯೊಟಾ ಕ್ಯಾಮ್ರಿ ಕಾರಿಗೆ ಪೈಪೋಟಿಯನ್ನು ನೀಡುತ್ತದೆ. ಈ ಹಿಂದೆ ಸ್ಕೋಡಾ ಸೂಪರ್ಬ್ ಕಾರಿಗೆ ಪ್ರತಿಸ್ಪರ್ಧಿಯಾಗಿದ್ದ ಹೋಂಡಾ ಅಕಾರ್ಡ್ ಮತ್ತು ಫೋಕ್ಸ್ ವ್ಯಾಗನ್ ಕಾರುಗಳ ಉತ್ಪಾದನೆಯು ಸ್ಥಗಿತವಾಗಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್

ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಬೆಲೆಯು ಹಿಂದಿನ ಮಾದರಿಗಿಂತ ಹೆಚ್ಚಾಗಿರಲಿದೆ. ಹೊಸ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್ ಕಾರಿನ ಬೆಲೆಯು ಭಾರತದ ಎಕ್ಸ್ ಶೋಂ ಪ್ರಕಾರ ರೂ.27 ಲಕ್ಷಗಳಾಗಿರಬಹುದು ಎಂದು ನಿರೀಕ್ಷಿಸುತ್ತೇವೆ.

ಹೊಸ ವಿನ್ಯಾಸದೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಸೂಪರ್ಬ್ ಫೇಸ್‌ಲಿಫ್ಟ್

ದೇಶಿಯ ಮಾರುಕಟ್ಟೆಯಲ್ಲಿ ಒಂದು ಕಾಲದಲ್ಲಿ ಪ್ರಾಬಲ್ಯ ಮೆರೆಯುತ್ತಿದ್ದ ಸ್ಕೋಡಾ ನಿಧಾನವಾಗಿ ತನ್ನ ಬೇಡಿಕೆಯನ್ನು ಕಳೆದುಕೊಂಡಿದೆ. ಇದರಿಂದ ಮತ್ತೆ ಭಾರತದ ಮಾರುಕಟ್ಟೆಯಲ್ಲಿ ಪ್ರಾಬಲ್ಯ ಸಾಧಿಸಲು ಸಜ್ಜಾಗುತ್ತಿದೆ. ಸ್ಕೋಡಾ ಮುಂದಿನ ಎರಡು ವರ್ಷಗಳಲ್ಲಿ 2.0 ಯೋಜನೆಯಡಿಯಲ್ಲಿ ಹಲವು ಹೊಸ ಕಾರುಗಳನ್ನು ಬಿಡುಗಡೆಗೊಳಿಸಲಿವೆ.

More from DriveSpark

Article Published On: Friday, April 10, 2020, 17:56 [IST]
English summary
Skoda Superb Facelift Expected India Launch On April 28. Read in Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+