Just In
Don't Miss!
- News
ಆರೋಗ್ಯ ಸಹಾಯಕ ಕಾರ್ಯದರ್ಶಿಯಾಗಿ ತೃತೀಯಲಿಂಗಿ ನಾಮನಿರ್ದೇಶನ ಮಾಡಿದ ಬೈಡನ್
- Finance
1986ರಿಂದ 2021 ಸೆನ್ಸೆಕ್ಸ್ ಪ್ರಮುಖ ಮೈಲುಗಲ್ಲುಗಳು: 50,000 ಪಾಯಿಂಟ್ ದಾಖಲೆ ಹಾದಿ
- Sports
ತವರಿಗೆ ಮರಳಿದ ಟೀಮ್ ಇಂಡಿಯಾ: ಮುಂಬೈನಲ್ಲಿ ರಹಾನೆಗೆ ಅದ್ದೂರಿ ಸ್ವಾಗತ
- Movies
Breaking: ನಟಿ ರಾಗಿಣಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್
- Lifestyle
ನೀವು ರಾತ್ರಿ ಭಾರೀ ಭೋಜನ ಮಾಡೋರಾದ್ರೆ ಈ ಸ್ಟೋರಿ ಓದಲೇಬೇಕು...!
- Education
BMRCL Recruitment 2021: ಸೀನಿಯರ್ ಅರ್ಬನ್ ಮತ್ತು ಟ್ರಾನ್ಸ್ ಪೋರ್ಟ್ ಪ್ಲಾನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹೊಸ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ನ್ಯೂ ಜನರೇಷನ್ ರ‍್ಯಾಪಿಡ್
ಸ್ಕೋಡಾ ಕಂಪನಿಯು ಶೀಘ್ರದಲ್ಲೇ ತನ್ನ ಹೊಸ ತಲೆಮಾರಿನ ರ‍್ಯಾಪಿಡ್ ಸೆಡಾನ್ ಕಾರು ಮಾದರಿಯನ್ನು ಬಿಡುಗಡೆಗೊಳಿಸುವ ಸಿದ್ದತೆಯಲ್ಲಿದ್ದು, ಹೊಸ ಕಾರು ನ್ಯೂ ಜನರೇಷನ್ ಮಾದರಿಯೊಂದಿಗೆ ಬದಲಿ ಹೆಸರಿನಲ್ಲಿ ಮಾರುಕಟ್ಟೆ ಪ್ರವೇಶಿಸುವ ಸಾಧ್ಯತೆಗಳಿವೆ.

ಭಾರತದಲ್ಲಿ ಹೊಸ ಸೆಡಾನ್ ಮಾದರಿಯಾಗಿ ಕೇಂದ್ರ ಸಾರಿಗೆ ಇಲಾಖೆಯಲ್ಲಿ ಸ್ಕೋಡಾ ಕಂಪನಿಯು ಸ್ಲಾವಿಯಾ ಎನ್ನುವ ಹೆಸರನ್ನು ನೋಂದಣಿ ಮಾಡಲಾಗಿದ್ದು, ಸ್ಲಾವಿಯಾ ಹೆಸರನ್ನು ರ‍್ಯಾಪಿಡ್ ನೆಕ್ಸ್ಟ್ ಜನರೇಷನ್ ಮಾದರಿಗಾಗಿ ಬಳಕೆ ಮಾಡಬಹುದಾಗಿದೆ ಎನ್ನಲಾಗಿದೆ. ಆದರೆ ಈ ಕುರಿತು ಸ್ಕೋಡಾ ಕಂಪನಿಯು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲವಾದರೂ ಸದ್ಯ ಬಿಡುಗಡೆಯ ಸಿದ್ದತೆಯಲ್ಲಿರುವ ರ‍್ಯಾಪಿಡ್ ಹೊಸ ಕಾರಿಗೆ ಸ್ಲಾವಿಯಾ ಬಳಕೆ ಮಾಡಬಹುದಾಗಿದೆ ಎನ್ನಲಾಗಿದೆ.

ಸ್ಲಾವಿಯಾ ಹೆಸರನ್ನು ಕೇಂದ್ರ ಸಾರಿಗೆ ಇಲಾಖೆಯಲ್ಲಿ ದಾಖಲಿಸಿರುವ ಸ್ಕೋಡಾ ಕಂಪನಿಯು ಹೊಸ ಹೆಸರನ್ನು ಹೊಚ್ಚ ಹೊಸ ಕಾರು ಮಾದರಿಗಾಗಿ ಎಂಬುವುದನ್ನು ನಮೂದಿಸದೆ ಬಿಡಿಭಾಗಗಳ ಮಾದರಿಯಾಗಿ ನಮೂದಿಸಿದ್ದು, ಈ ಹಿನ್ನಲೆ ಸ್ಲಾವಿಯಾ ನೆಮ್‌ಪ್ಲೇಟ್ ರ‍್ಯಾಪಿಡ್ ಹೊಸ ಮಾದರಿಗಾಗಿ ಬಳಕೆ ಮಾಡಬಹುದಾಗಿದೆ.

ಭಾರತದಲ್ಲಿ ರ‍್ಯಾಪಿಡ್ ಸೆಡಾನ್ ಮಾದರಿಯನ್ನು ಈ ಹಿಂದೆ 2011ರಲ್ಲಿ ಮೊದಲ ಬಾರಿಗೆ ಬಿಡುಗಡೆ ಮಾಡಿದ್ದ ಸ್ಕೋಡಾ ಕಂಪನಿಯು ಇದುವರೆಗೂ ಹೊಸ ತಲೆಮಾರಿನ ಆವೃತ್ತಿಯನ್ನು ಬಿಡುಗಡೆ ಮಾಡಿಲ್ಲ. ಕಾಲ ಕಾಲಕ್ಕೆ ಕಾರಿನ ತಾಂತ್ರಿಕ ಅಂಶಗಳಲ್ಲಿ ಸಣ್ಣಪುಟ್ಟ ಬದಲಾವಣೆ ಮಾಡಲಾಗಿದ್ದು, ಕಳೆದ ಅಗಸ್ಟ್‌ನಲ್ಲಿ ಬಿಎಸ್-6 ಎಂಜಿನ್‌ನೊಂದಿಗೆ ಉನ್ನತೀಕರಿಸಲಾಗಿತ್ತು.

ಆದರೆ ಹೊಸ ತಲೆಮಾರಿನ ಆವೃತ್ತಿಯನ್ನು ಬಿಡುಗಡೆ ಮಾಡಬೇಕೆಂಬ ಯೋಜನೆಯನ್ನು ಮುಂದೂಡುತ್ತಲೇ ಬಂದಿರುವ ಸ್ಕೋಡಾ ಕಂಪನಿಯು 2021ಕ್ಕೆ ಬಿಡುಗಡೆ ಮಾಡಲು ನಿರ್ಧರಿಸಿದ್ದು, ಹೊಸ ಕಾರಿನ ವಿನ್ಯಾಸ ಮತ್ತು ಕಾರ್ಯಕ್ಷಮತೆ ಹೆಚ್ಚಿಸಲು ನೆರವಾಗುವಂತೆ ಎಂಕ್ಯೂಬಿ ಪ್ಲ್ಯಾಟ್‌ಫಾರ್ಮ್ ಅಡಿಯಲ್ಲಿ ಅಭಿವೃದ್ದಿಗೊಳಿಸಲಾಗುತ್ತಿದೆ.

ಜೊತೆಗೆ ಹೊಸ ಕಾರಿನ ಎಂಜಿನ್ ಆಯ್ಕೆಯಲ್ಲೂ ತುಸು ಬದಲಾವಣೆಗೊಳ್ಳುವ ಸಾಧ್ಯತೆಗಳಿದ್ದು, ಸದ್ಯ ಬಿಎಸ್-6 ರ‍್ಯಾಪಿಡ್ ಕಾರಿನಲ್ಲಿ 1.0-ಲೀಟರ್ ಟಿಎಸ್ಐ ಟರ್ಬೋ ಪೆಟ್ರೋಲ್ ಎಂಜಿನ್ ಮಾತ್ರ ಬಳಕೆ ಮಾಡಲಾಗುತ್ತಿದೆ. ಆದರೆ ಹೊಸ ತಲೆಮಾರಿನ ರ‍್ಯಾಪಿಡ್‍ನಲ್ಲಿ ಹೊಸದಾಗಿ ಮತ್ತೊಂದು ಪೆಟ್ರೋಲ್ ಎಂಜಿನ್ ಆಯ್ಕೆ ನೀಡುವ ಸಾಧ್ಯತೆಗಳಿವೆ.

ಬಿಎಸ್-6 ಜಾರಿ ನಂತರ ರ‍್ಯಾಪಿಡ್ ಸೆಡಾನ್‌ನಲ್ಲಿ ಈ ಹಿಂದೆ ನೀಡಲಾಗುತ್ತಿದ್ದ 1.6-ಲೀಟರ್ ಪೆಟ್ರೋಲ್ ಮತ್ತು 1.6-ಲೀಟರ್ ಡೀಸೆಲ್ ಎಂಜಿನ್ ಅನ್ನು ಸ್ಥಗಿತಗೊಳಿಸಿರುವ ಸ್ಕೋಡಾ ಕಂಪನಿಯು ತನ್ನ ಮಾತೃಸಂಸ್ಥೆಯಾದ ಫೋಕ್ಸ್‌ವ್ಯಾಗನ್‌ನಿಂದ ಎರವಲು ಪಡೆದುಕೊಳ್ಳಲಾದ 1.0-ಲೀಟರ್ ಟಿಎಸ್ಐ ಟರ್ಬೋ ಪೆಟ್ರೋಲ್ ಮಾದರಿಯನ್ನು ಮಾತ್ರ ಮಾರಾಟಮಾಡುತ್ತಿದೆ.

1.0-ಲೀಟರ್ ಟಿಎಸ್ಐ ಟರ್ಬೋ ಚಾರ್ಜ್ಡ್ ತ್ರಿ ಸಿಲಿಂಡರ್ ಪೆಟ್ರೋಲ್ ಮಾದರಿಯು 108-ಬಿಎಚ್‌ಪಿ ಮತ್ತು 175-ಎನ್ಎಂ ಟಾರ್ಕ್ ಉತ್ಪಾದನೆ ಉತ್ಪಾದನಾ ಗುಣಹೊಂದಿದ್ದು, ಉತ್ತಮ ಪರ್ಫಾಮೆನ್ಸ್‌ನೊಂದಿಗೆ ಆಕರ್ಷಕ ಇಂಧನ ದಕ್ಷತೆ ಹೊಂದಿರುವ ಹೊಸ ಎಂಜಿನ್ ಪ್ರತಿ ಲೀಟರ್ ಪೆಟ್ರೋಲ್‌ಗೆ ಗರಿಷ್ಠ 18.97ಕಿ.ಮೀ ಮೈಲೇಜ್ ಹಿಂದಿರುಗಿಸುತ್ತದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಇನ್ನು ಭಾರತದಲ್ಲಿ ಫೋಕ್ಸ್‌ವ್ಯಾಗನ್ ಜೊತೆಗೂಡಿ ಹಲವು ಹೊಸ ಯೋಜನೆಗಳಿಗೆ ಚಾಲನೆ ನೀಡಿರುವ ಸ್ಕೋಡಾ ಇಂಡಿಯಾ ಕಂಪನಿಯು ವಿವಿಧ ಮಾದರಿಯ ಹಲವು ಹೊಸ ಕಾರುಗಳನ್ನು ಪರಿಚಯಿಸುತ್ತಿದ್ದು, ಮುಂಬರುವ ಎರಡು ವರ್ಷಗಳ ಅವಧಿಯಲ್ಲಿ ಹಲವಾರು ಬಜೆಟ್ ಬೆಲೆಯ ಮಧ್ಯಮ ಕ್ರಮಾಂಕದ ಕಾರು ಮಾದರಿಗಳನ್ನು ಪರಿಚಯಿಸುವ ಯೋಜನೆಯಲ್ಲಿದೆ.

ಸ್ಕೋಡಾ ಕಾರುಗಳ ಉತ್ಪಾದನೆ ಮತ್ತು ಮಾರಾಟವನ್ನು ಹೆಚ್ಚಿಸುವ ಸಂಬಂಧ ಇಂಡಿಯಾ 2.0 ಪ್ರೋಜೆಕ್ಟ್‌ಗೆ ಚಾಲನೆ ನೀಡಿರುವ ಫೋಕ್ಸ್‌ವ್ಯಾಗನ್ ಕಂಪನಿಯು ಸುಮಾರು ರೂ.7,500 ಕೋಟಿ ಬಂಡವಾಳ ಹೂಡಿಕೆ ಮಾಡಿದ್ದು, ಯುರೋಪ್ ಮಾರುಕಟ್ಟೆಯಲ್ಲಿರುವ ಹಲವು ಕಾರುಗಳನ್ನು ಭಾರತದಲ್ಲೂ ಹೊಸ ವಿನ್ಯಾಸದೊಂದಿಗೆ ಬಿಡುಗಡೆ ಮಾಡುವ ಯೋಜನೆಯಲ್ಲಿವೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಇದಕ್ಕಾಗಿ ಸ್ಕೋಡಾ ಕಾರು ನಿರ್ಮಾಣ ಘಟಕಗಳನ್ನು ಉನ್ನತೀಕರಿಸುತ್ತಿರುವ ಸ್ಕೋಡಾ ಕಂಪನಿಯು 2025ರ ವೇಳೆಗೆ ಭಾರತದಲ್ಲಿ ವಾರ್ಷಿಕವಾಗಿ 1 ಲಕ್ಷ ಕಾರುಗಳ ಮಾರಾಟ ಮಾಡುವ ಗುರಿಹೊಂದಿದೆ.