ಸ್ಕೋಡಾ ವಿಷನ್ ಇನ್ ಕಾನ್ಸೆಪ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

ದೇಶಿಯ ಮಾರುಕಟ್ಟೆಯಲ್ಲಿನ ಹೊಸ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆ ನೀರಿಕ್ಷೆಯಲ್ಲಿರುವ ಸ್ಕೋಡಾ ಇಂಡಿಯಾ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಮಧ್ಯಮ ಕ್ರಮಾಂಕದ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದ್ದು, ಇದರಲ್ಲಿ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯು ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದೆ.

ಸ್ಕೋಡಾ ವಿಷನ್ ಇನ್ ಕಾನ್ಸೆಪ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

ಸ್ಕೋಡಾ ಇಂಡಿಯಾ ಕಂಪನಿಯು ಇದೇ ವರ್ಷಾಂತ್ಯಕ್ಕೆ ಬಿಡುಗಡೆ ಮಾಡಬೇಕಿದ್ದ ಹೊಸ ಮಾದರಿಯ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯನ್ನು ಬಿಡುಗಡೆಯನ್ನು ಕರೋನಾ ವೈರಸ್ ಪರಿಣಾಮ ಮುಂದಿನ ವರ್ಷಕ್ಕೆ ಮುಂದೂಡಿಕೆ ಮಾಡಿದ್ದು, ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ವಿಷನ್ ಇನ್ ಕಾನ್ಸೆಪ್ಟ್ ಮಾದರಿಯನ್ನೇ ಹೊಸ ಹೆಸರಿನೊಂದಿಗೆ 2021ರ ಆರಂಭದಲ್ಲಿ ರಸ್ತೆಗಳಿಸಲು ನಿರ್ಧರಿಸಿದೆ.

ಸ್ಕೋಡಾ ವಿಷನ್ ಇನ್ ಕಾನ್ಸೆಪ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

ಸ್ಕೋಡಾ ಹೊಸ ಕಾರು ಕ್ಲಿಕ್ ಹೆಸರು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೊಸ ಕಾರಿಗಾಗಿ ಅಧಿಕೃತ ಹೆಸರನ್ನು ಈಗಾಗಲೇ ಅಂತಿಮಗೊಳಿಸಿ ಪೇಟೆಂಟ್(ಹಕ್ಕುಸ್ವಾಮ್ಯ) ದಾಖಲಿಸಿದೆ. ಹಕ್ಕುಸ್ವಾಮ್ಯ ಪಡೆದಿರುವ ಪ್ರತಿಯಲ್ಲಿ ಕ್ಲಿಕ್(kliq) ಎಂದು ನಮೂದಿಸಲಾಗಿದ್ದು, ಕಂಪ್ಯಾಕ್ಟ್ ಎಸ್‌ಯುವಿ ವೈಶಿಷ್ಟ್ಯತೆಗಳೊಂದಿಗೆ ಬಿಡುಗಡೆಯಾಗಲಿದೆ.

ಸ್ಕೋಡಾ ವಿಷನ್ ಇನ್ ಕಾನ್ಸೆಪ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

ಮಾರುತಿ ಸುಜುಕಿ ಬ್ರೆಝಾ, ಹ್ಯುಂಡೈ ಕ್ರೆಟಾ ಮತ್ತು ಕಿಯಾ ಸೆಲ್ಟೊಸ್ ಕಾರುಗಳಿಗೆ ನೇರ ಪೈಪೋಟಿಯನ್ನು ನೀಡಲಿರುವ ಹೊಸ ಕ್ಲಿಕ್ ಕಾರು ವಿಡಬ್ಲ್ಯೂ ಎಂಕ್ಯೂಬಿ ಎಒ ಇನ್ ಪ್ಲಾಟ್‍‍ಫಾರ್ಮ್ ಅನ್ನು ಆಧರಿಸಿ ಅಭಿವೃದ್ದಿಗೊಂಡಿದ್ದು, ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳೊಂದಿಗೆ ಭಾರೀ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

ಸ್ಕೋಡಾ ವಿಷನ್ ಇನ್ ಕಾನ್ಸೆಪ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

ಕ್ಲಿಕ್ ಕಾರು ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಕಾಮಿಕ್ ಎಸ್‍‍ಯುವಿಯ ಮಾದರಿಯಲ್ಲಿದ್ದು, ಹೊಸ ಎಸ್‍‍ಯುವಿಯು ಮುಂಭಾಗದಲ್ಲಿ ದೊಡ್ಡ ಗ್ರಿಲ್ ಮತ್ತು ಹೆಚ್ಚು ವಿನ್ಯಾಸಗೊಳಿಸಲಾದ ಬಂಪರ್ ಅನ್ನು ಹೊಂದಿದೆ.

MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಸ್ಕೋಡಾ ವಿಷನ್ ಇನ್ ಕಾನ್ಸೆಪ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

ಹೊಸ ಕಾರಿನಲ್ಲಿ ಡ್ಯುಯಲ್ ಹೆಡ್‍‍ಲ್ಯಾಂಪ್‍, ಏರ್ ಇನ್‍‍ಟೆಕ್ ಮತ್ತು ಮುಂಭಾಗದ ಬಂಪರ್‌ನಲ್ಲಿ ಸ್ಕಫ್ ಪ್ಲೇಟ್‍ಗಳೊಂದಿಗೆ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಎಸ್‍‍ಯುವಿಯ ಎರಡು ಬದಿಗಳಲ್ಲೂ ಮತ್ತು ಹಿಂಭಾಗದ ಪೊಫೈಲ್‌ನಲ್ಲೂ ಸ್ಪೋರ್ಟಿ ಥೀಮ್ ಅನ್ನು ಹೊಂದಿವೆ.

ಸ್ಕೋಡಾ ವಿಷನ್ ಇನ್ ಕಾನ್ಸೆಪ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‍‍ಯುವಿಯ ಸೈಡ್ ಪ್ರೊಫೈಲ್‍‍ನಲ್ಲೂ ಶಾರ್ಪ್ ಲೈನ್‍‍ಗಳಿದ್ದು, ಇದರ ಹಿಂಭಾಗದಲ್ಲಿರುವ ಎಲ್ಇಡಿ ಟೈಲ್‍‍ಲೈಟ್‍ಗಳು ಮತ್ತು ರೂಫ್ ಮೌಂಟೆಡ್ ಸ್ಪಾಯ್ಲರ್ ಸೌಲಭ್ಯವು ಹೊಸ ಕಾರಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ಅನ್ನು ನೀಡುತ್ತವೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಸ್ಕೋಡಾ ವಿಷನ್ ಇನ್ ಕಾನ್ಸೆಪ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

ಹಾಗೆಯೇ ಹೊಸ ಎಸ್‍‍ಯುವಿಯ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಇಂಟಿರಿಯರ್‍‍‍ನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್‍‍‍ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್ ಮತ್ತು ಆರಾಮದಾಯಕ ಆಸನ ಸೌಲಭ್ಯ ಪಡೆದಿದೆ.

ಸ್ಕೋಡಾ ವಿಷನ್ ಇನ್ ಕಾನ್ಸೆಪ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

ಎಂಜಿನ್ ಸಾಮರ್ಥ್ಯ

ಹೊಸ ಕಾರಿನಲ್ಲಿ ಹೊಸದಾಗಿ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಅನ್ನು ಮಾತ್ರವೇ ಪರಿಚಯಿಸುವ ಸಾಧ್ಯತೆಗಳಿದ್ದು, ಸಾಮಾನ್ಯ ಆವೃತ್ತಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಹೊಂದಿದ್ದರೆ ಟರ್ಬೋ ಮಾದರಿಯು 7-ಸ್ಪೀಡ್ ಡ್ಯಯುಲ್ ಕ್ಲಚ್ ಗೇರ್‌ಬಾಕ್ಸ್ ಆಯ್ಕೆ ಪಡೆದುಕೊಳ್ಳಲಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಸ್ಕೋಡಾ ವಿಷನ್ ಇನ್ ಕಾನ್ಸೆಪ್ಟ್ ಕಾರು ಬಿಡುಗಡೆ ಮಾಹಿತಿ ಬಹಿರಂಗ

ಈ ಮೂಲಕ ಕಂಪ್ಯಾಕ್ಟ್ ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಕಿಕ್ಲ್ ಕಾರು ಮುಂಬರುವ 2021ರ ಆರಂಭದಲ್ಲಿ ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 11 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 14 ಲಕ್ಷ ಬೆಲೆಯೊಂದಿಗೆ ಮಾರಾಟಗೊಳ್ಳುವ ಸಾಧ್ಯತೆಗಳಿವೆ.

Article Published On: Friday, August 14, 2020, 13:34 [IST]
English summary
Skoda Vision IN Concept Launch Time Revealed. Read in Kannada.
Read more on ಸ್ಕೋಡಾ skoda
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+