Just In
- 4 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 4 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 5 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 5 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies ತಿಂಗಳುಗಳ ಒಳಗೆ ಬಾಡಿದ ಪ್ರೀತಿ: ಹನ್ಸಿಕಾಗಾಗಿ ಸಿಂಬು ಖರ್ಚು ಮಾಡಿದ್ದು ಒಂದೆರಡು ಕೋಟಿ ಅಲ್ಲ!
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Sports IPL 2024: ಆರ್ಸಿಬಿಗೆ ವಿರಾಟ್, ಪಾಟಿದಾರ್ ಆಸರೆ: ಹೈದರಾಬಾದ್ಗೆ ಸವಾಲಿನ ಟಾರ್ಗೆಟ್
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉತ್ಪಾದನಾ ಮಾದರಿಯೊಂದಿಗೆ ರೋಡ್ ಟೆಸ್ಟಿಂಗ್ ನಡೆಸುತ್ತಿದೆ ಸ್ಕೋಡಾ ವಿಷನ್ ಇನ್ ಕಾರು
ಸ್ಕೋಡಾ ಇಂಡಿಯಾ ಕಂಪನಿಯು ಭಾರತದಲ್ಲಿ ತನ್ನ ಬಹುನೀರಿಕ್ಷಿತ ಕಾರು ಮಾದರಿಯಾದ ವಿಷನ್-ಇನ್ ಕಾನ್ಸೆಪ್ಟ್ ಮಾದರಿಯ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಹೊಸ ಕಾರನ್ನು ಮೊದಲ ಬಾರಿಗೆ ಉತ್ಪಾದನಾ ಆವೃತ್ತಿಯೊಂದಿಗೆ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲಾಗುತ್ತಿದೆ.
ಕಾನ್ಸೆಪ್ಟ್ ಮಾದರಿಯಾಗಿರುವ ವಿಷನ್-ಇನ್ ಕಾರನ್ನು ಉತ್ಪಾದನಾ ಆವೃತ್ತಿಯೊಂದಿಗೆ 2021ರ ಜನವರಿಯಲ್ಲಿ ಅನಾವರಣಗೊಳಿಸಲಿರುವ ಮೂಲಕ ಮುಂದಿನ ಕೆಲವೇ ದಿನಗಳಲ್ಲಿ ಹೊಸ ಕಾರನ್ನು ಬಿಡುಗಡೆ ಮಾಡಲಿರುವ ಸ್ಕೋಡಾ ಕಂಪನಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ಸಿದ್ದತೆಯಲ್ಲಿದ್ದು, ಹೊಸ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ಅಂತಿಮ ಹಂತದ ರೋಡ್ ಟೆಸ್ಟಿಂಗ್ ನಡೆಸುತ್ತಿದೆ.
ದೆಹಲಿ ಆಟೋ ಎಕ್ಸ್ಪೋದಲ್ಲಿ ಮೊದಲ ಬಾರಿಗೆ ಅನಾವರಣಗೊಂಡಿದ್ದ ವಿಷನ್ ಇನ್ ಕಾನ್ಸೆಪ್ಟ್ ಮಾದರಿಯನ್ನು ಹೊಸ ಹೆಸರಿನೊಂದಿಗೆ ಬಿಡುಗಡೆ ಮಾಡಲಿರುವ ಸ್ಕೋಡಾ ಕಂಪನಿಯು ಹೊಸ ಕಾರನ್ನು ಕಂಪ್ಯಾಕ್ಟ್ ಎಸ್ಯುವಿ ವೈಶಿಷ್ಟ್ಯತೆಯೊಂದಿಗೆ ಬಿಡುಗಡೆ ಮಾಡಲಿದೆ.
ಹೊಸ ಕಂಪ್ಯಾಕ್ಟ್ ಎಸ್ಯವಿ ಕಾರು ಕ್ಲಿಕ್ ಹೆಸರು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೊಸ ಕಾರಿಗಾಗಿ ಅಧಿಕೃತ ಹೆಸರನ್ನು ಈಗಾಗಲೇ ಸ್ಕೋಡಾ ಕಂಪನಿಯು ಅಂತಿಮಗೊಳಿಸಿ ಪೇಟೆಂಟ್(ಹಕ್ಕುಸ್ವಾಮ್ಯ) ದಾಖಲಿಸಿದೆ.
ಹಕ್ಕುಸ್ವಾಮ್ಯ ಪಡೆದಿರುವ ಪ್ರತಿಯಲ್ಲಿ ಕ್ಲಿಕ್(kliq) ಎಂದು ನಮೂದಿಸಲಾಗಿದ್ದು, ಹೊಸ ಕಂಪ್ಯಾಕ್ಟ್ ಎಸ್ಯುವಿ ಮಾದರಿಗಾಗಿ ಕ್ಲಿಕ್ ಹೆಸರು ಬಳಕೆ ಮಾಡಲಿದೆ ಎನ್ನುವ ಖಚಿತತೆ ಇನ್ನು ಕೂಡಾ ಲಭ್ಯವಾಗಿಲ್ಲ. ಉತ್ಪಾದನಾ ಆವೃತ್ತಿಯ ಅನಾವರಣ ಸಂದರ್ಭದಲ್ಲೇ ಹೊಸ ಕಾರಿನ ಅಧಿಕೃತ ಹೆಸರು ಮತ್ತು ಎಂಜಿನ್ ಆಯ್ಕೆಯ ಮಾಹಿತಿ ಲಭ್ಯವಾಗಲಿದೆ. ವಿಷನ್-ಇನ್ ಕಾರು ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಕಾಮಿಕ್ ಎಸ್ಯುವಿಯ ಮಾದರಿಯನ್ನು ಆಧರಿಸಿದ್ದು, ಹೊಸ ಎಸ್ಯುವಿಯು ಮುಂಭಾಗದಲ್ಲಿ ದೊಡ್ಡ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್ ಅನ್ನು ಹೊಂದಿದೆ.
ಹಾಗೆಯೇ ಹೊಸ ಕಾರಿನಲ್ಲಿ ಡ್ಯುಯಲ್ ಹೆಡ್ಲ್ಯಾಂಪ್, ಏರ್ ಇನ್ಟೆಕ್ ಮತ್ತು ಮುಂಭಾಗದ ಬಂಪರ್ನಲ್ಲಿ ಸ್ಕಫ್ ಪ್ಲೇಟ್ಗಳೊಂದಿಗೆ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಎಸ್ಯುವಿಯ ಎರಡು ಬದಿಗಳಲ್ಲೂ ಮತ್ತು ಹಿಂಭಾಗದ ಪೊಫೈಲ್ನಲ್ಲೂ ಸ್ಪೋರ್ಟಿ ಥೀಮ್ ಅನ್ನು ಹೊಂದಿವೆ.
ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್ಯುವಿಯ ಸೈಡ್ ಪ್ರೊಫೈಲ್ನಲ್ಲೂ ಶಾರ್ಪ್ ಲೈನ್ಗಳಿದ್ದು, ಇದರ ಹಿಂಭಾಗದಲ್ಲಿರುವ ಎಲ್ಇಡಿ ಟೈಲ್ಲೈಟ್ಗಳು ಮತ್ತು ರೂಫ್ ಮೌಂಟೆಡ್ ಸ್ಪಾಯ್ಲರ್ ಸೌಲಭ್ಯವು ಹೊಸ ಕಾರಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ಅನ್ನು ನೀಡುತ್ತವೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಹೊಸ ಎಸ್ಯುವಿಯ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಇಂಟಿರಿಯರ್ನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್ ಮತ್ತು ಆರಾಮದಾಯಕ ಆಸನ ಸೌಲಭ್ಯ ಪಡೆದಿದೆ.
ಎಂಜಿನ್ ಸಾಮರ್ಥ್ಯ
ಹೊಸ ಕಾರಿನಲ್ಲಿ ಸಾಮಾನ್ಯ ಮಾದರಿಯ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪರಿಚಯಿಸುವ ಸಾಧ್ಯತೆಗಳಿದ್ದು, ಸಾಮಾನ್ಯ ಆವೃತ್ತಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಹೊಂದಿದ್ದರೆ ಟರ್ಬೋ ಮಾದರಿಯು 7-ಸ್ಪೀಡ್ ಡ್ಯಯುಲ್ ಕ್ಲಚ್ ಗೇರ್ಬಾಕ್ಸ್ ಆಯ್ಕೆ ಪಡೆದುಕೊಳ್ಳಲಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!
ಈ ಮೂಲಕ ಕಂಪ್ಯಾಕ್ಟ್ ಎಸ್ಯುವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ವಿಷನ್-ಇನ್ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆಯೊಂದಿಗೆ ಮಾರಾಟಗೊಳ್ಳುವ ಸಾಧ್ಯೆತೆಗಳಿದ್ದು, ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಎಸ್-ಕ್ರಾಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.