Just In
- 2 hrs ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 3 hrs ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 3 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 3 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- News ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪ್ರಮುಖ ಆರೋಪಿಯನ್ನು ಬಂಧಿಸಿದ ಎನ್ಐಎ
- Lifestyle ಗಾಯ ಗುಣವಾಗಲು, ದೃಷ್ಟಿ ಸುಧಾರಣೆ ಸೇರಿ ಕೀವಿ ಹಣ್ಣಿನ ಲಾಭ ಎಷ್ಟಿದೆ ಗೊತ್ತಾ?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Movies Puttakkana Makkalu:ಈ ಬಾರಿ ಸಹನಾ ಹೊಗಳಿದ ಅಭಿಮಾನಿಗಳು: ಪುಟ್ಟಕ್ಕನ ನಡವಳಿಕೆಗೆ ಫ್ಯಾನ್ಸ್ ಬೇಸರ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭಾರತದಲ್ಲಿ ಬಿಡುಗಡೆಗೆ ಸಿದ್ದವಾದ ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್ಯುವಿ
ದೇಶಿಯ ಮಾರುಕಟ್ಟೆಯಲ್ಲಿನ ಹೊಸ ಕಾರುಗಳ ಮಾರಾಟದಲ್ಲಿ ಭಾರೀ ಬದಲಾವಣೆ ಪರಿಚಯಿಸುತ್ತಿರುವ ಸ್ಕೋಡಾ ಇಂಡಿಯಾ ಕಂಪನಿಯು ಶೀಘ್ರದಲ್ಲೇ ಮತ್ತಷ್ಟು ಹೊಸ ಮಧ್ಯಮ ಕ್ರಮಾಂಕದ ಕಾರು ಮಾದರಿಗಳನ್ನು ಬಿಡುಗಡೆ ಮಾಡುವ ಯೋಜನೆಯಲ್ಲಿದ್ದು, ಹೊಸ ಕಂಪ್ಯಾಕ್ಟ್ ಎಸ್ಯುವಿ ಮಾದರಿಯು ಹೊಸ ಸಂಚಲನ ಸೃಷ್ಠಿಸುವ ತವಕದಲ್ಲಿದೆ.
ಸ್ಕೋಡಾ ಇಂಡಿಯಾ ಕಂಪನಿಯು ಇದೇ ವರ್ಷಾಂತ್ಯಕ್ಕೆ ಬಿಡುಗಡೆ ಮಾಡಬೇಕಿದ್ದ ಹೊಸ ಮಾದರಿಯ ಕಂಪ್ಯಾಕ್ಟ್ ಎಸ್ಯುವಿ ಮಾದರಿಯ ಬಿಡುಗಡೆಯನ್ನು ಕರೋನಾ ವೈರಸ್ ಪರಿಣಾಮ ಮುಂದಿನ ವರ್ಷಕ್ಕೆ ಮುಂದೂಡಿಕೆ ಮಾಡಿದ್ದು, ದೆಹಲಿ ಆಟೋ ಎಕ್ಸ್ಪೋದಲ್ಲಿ ಅನಾವರಣಗೊಂಡಿದ್ದ ವಿಷನ್ ಇನ್ ಕಾನ್ಸೆಪ್ಟ್ ಮಾದರಿಯನ್ನೇ ಹೊಸ ಹೆಸರಿನೊಂದಿಗೆ 2021ರ ಎರಡನೇ ತ್ರೈಮಾಸಿಕ ವೇಳೆಗೆ ಅಧಿಕೃತವಾಗಿ ರಸ್ತೆಗಳಿಸಲು ನಿರ್ಧರಿಸಿದೆ.
ಕಾರು ಬಿಡುಗಡೆಗೂ ಮುನ್ನ ಕಾರಿನ ಎಂಜಿನ್ ಕಾರ್ಯಕ್ಷಮತೆ ಕುರಿತಂತೆ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳಿಗೆ ಚಾಲನೆ ನೀಡಿರುವ ಸ್ಕೋಡಾ ಕಂಪನಿಯು ಹೊಸ ಕಾರಿನ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದ್ದು, ಹೊಸ ಕಾರು ಅತ್ಯುತ್ತಮ ಎಂಜಿನ್ ಜೋಡಣೆಯೊಂದಿಗೆ ಖರೀದಿಗೆ ಲಭ್ಯವಾಗಲಿದೆ.
ಸ್ಕೋಡಾ ಹೊಸ ಕಾರು ಕ್ಲಿಕ್ ಹೆಸರು ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಹೊಸ ಕಾರಿಗಾಗಿ ಅಧಿಕೃತ ಹೆಸರನ್ನು ಈಗಾಗಲೇ ಅಂತಿಮಗೊಳಿಸಿ ಪೇಟೆಂಟ್(ಹಕ್ಕುಸ್ವಾಮ್ಯ) ದಾಖಲಿಸಿದೆ. ಹಕ್ಕುಸ್ವಾಮ್ಯ ಪಡೆದಿರುವ ಪ್ರತಿಯಲ್ಲಿ ಕ್ಲಿಕ್(kliq) ಎಂದು ನಮೂದಿಸಲಾಗಿದ್ದು, ಕಂಪ್ಯಾಕ್ಟ್ ಎಸ್ಯುವಿ ಕಾರು ಮಾದರಿಗಳಲ್ಲೇ ವಿಶೇಷ ವಿನ್ಯಾಸ ಪಡೆದುಕೊಳ್ಳಲಿದೆ
ಕ್ಲಿಕ್ ಕಾರು ಸ್ಕೋಡಾ ಕಂಪನಿಯ ಸರಣಿಯಲ್ಲಿರುವ ಕಾಮಿಕ್ ಎಸ್ಯುವಿಯ ಮಾದರಿಯನ್ನು ಆಧರಿಸಿದ್ದು, ಹೊಸ ಎಸ್ಯುವಿಯು ಮುಂಭಾಗದಲ್ಲಿ ದೊಡ್ಡ ಗ್ರಿಲ್ ಮತ್ತು ಬಲಿಷ್ಠ ವಿನ್ಯಾಸದ ಬಂಪರ್ ಅನ್ನು ಹೊಂದಿದೆ. ಹೊಸ ಕಾರಿನಲ್ಲಿ ಡ್ಯುಯಲ್ ಹೆಡ್ಲ್ಯಾಂಪ್, ಏರ್ ಇನ್ಟೆಕ್ ಮತ್ತು ಮುಂಭಾಗದ ಬಂಪರ್ನಲ್ಲಿ ಸ್ಕಫ್ ಪ್ಲೇಟ್ಗಳೊಂದಿಗೆ ದೊಡ್ಡ ಗ್ರಿಲ್ ಅನ್ನು ಹೊಂದಿದೆ. ಎಸ್ಯುವಿಯ ಎರಡು ಬದಿಗಳಲ್ಲೂ ಮತ್ತು ಹಿಂಭಾಗದ ಪೊಫೈಲ್ನಲ್ಲೂ ಸ್ಪೋರ್ಟಿ ಥೀಮ್ ಅನ್ನು ಹೊಂದಿವೆ.
ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್ಯುವಿಯ ಸೈಡ್ ಪ್ರೊಫೈಲ್ನಲ್ಲೂ ಶಾರ್ಪ್ ಲೈನ್ಗಳಿದ್ದು, ಇದರ ಹಿಂಭಾಗದಲ್ಲಿರುವ ಎಲ್ಇಡಿ ಟೈಲ್ಲೈಟ್ಗಳು ಮತ್ತು ರೂಫ್ ಮೌಂಟೆಡ್ ಸ್ಪಾಯ್ಲರ್ ಸೌಲಭ್ಯವು ಹೊಸ ಕಾರಿಗೆ ಮತ್ತಷ್ಟು ಸ್ಪೋರ್ಟಿ ಲುಕ್ ಅನ್ನು ನೀಡುತ್ತವೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!
ಹಾಗೆಯೇ ಹೊಸ ಎಸ್ಯುವಿಯ ಇಂಟಿರಿಯರ್ ಕೂಡಾ ಆಕರ್ಷಕವಾಗಿದ್ದು, ಇಂಟಿರಿಯರ್ನಲ್ಲಿ ಮಲ್ಟಿ ಲೆಯರ್ಡ್ ಡ್ಯಾಶ್ಬೋರ್ಡ್ ಮತ್ತು ವಿವಿಧ ಬಣ್ಣಗಳನ್ನು ಹೊಂದಿರುವ ಆ್ಯಂಬಿಯೆಂಟ್ ಲೈಟಿಂಗ್ಸ್ ಮತ್ತು ಆರಾಮದಾಯಕ ಆಸನ ಸೌಲಭ್ಯ ಪಡೆದಿದೆ.
ಎಂಜಿನ್ ಸಾಮರ್ಥ್ಯ ಹೊಸ ಕಾರಿನಲ್ಲಿ ಸಾಮಾನ್ಯ ಮಾದರಿಯ 1.5-ಲೀಟರ್ ಪೆಟ್ರೋಲ್ ಎಂಜಿನ್ ಜೊತೆಗೆ 1.-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪರಿಚಯಿಸುವ ಸಾಧ್ಯತೆಗಳಿದ್ದು, ಸಾಮಾನ್ಯ ಆವೃತ್ತಿಯಲ್ಲಿ 6-ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ ಆಯ್ಕೆ ಹೊಂದಿದ್ದರೆ ಟರ್ಬೋ ಮಾದರಿಯು 7-ಸ್ಪೀಡ್ ಡ್ಯಯುಲ್ ಕ್ಲಚ್ ಗೇರ್ಬಾಕ್ಸ್ ಆಯ್ಕೆ ಪಡೆದುಕೊಳ್ಳಲಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ
ಈ ಮೂಲಕ ಕಂಪ್ಯಾಕ್ಟ್ ಎಸ್ಯುವಿ ಕಾರುಗಳ ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿರುವ ಕಿಕ್ಲ್ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 12 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 16 ಲಕ್ಷ ಬೆಲೆಯೊಂದಿಗೆ ಮಾರಾಟಗೊಳ್ಳುವ ಸಾಧ್ಯೆತೆಗಳಿದ್ದು, ಮಾರುಕಟ್ಟೆಯಲ್ಲಿರುವ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್, ಮಾರುತಿ ಸುಜುಕಿ ಎಸ್-ಕ್ರಾಸ್ ಮತ್ತು ರೆನಾಲ್ಟ್ ಡಸ್ಟರ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.