ಕರೋನಾ ಸಂಕಷ್ಟ: ಪಿಎಂ ಪರಿಹಾರ ನಿಧಿಗೆ ರೂ.1.20 ಕೋಟಿ ದೇಣಿಗೆ ನೀಡಿದ ಸ್ಕೋಡಾ ಸಿಬ್ಬಂದಿ
ಮಹಾಮಾರಿ ಕರೋನಾ ವೈರಸ್ ತಡೆಗಾಗಿ ಬಹುತೇಕ ಆಟೋ ಕಂಪನಿಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸುವ ಮೂಲಕ ಭಾರೀ ಪ್ರಮಾಣದ ಧನ ಸಹಾಯದ ಜೊತೆಗೆ ವೈದ್ಯಕೀಯ ಉಪಕರಣಗಳನ್ನು ಉತ್ಪಾದನೆ ಮಾಡಿ ಒದಗಿಸುತ್ತಿವೆ.

ಫೋಕ್ಸ್‌ವ್ಯಾಗನ್ ಅಂಗಸಂಸ್ಥೆಯಾದ ಸ್ಕೋಡಾ ಕಂಪನಿಯು ಭಾರತದಲ್ಲಿ ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ರೂ.1 ಕೋಟಿ ದೇಣಿಗೆ ಘೋಷಣೆ ಮಾಡಿದ್ದು, ಸ್ಕೋಡಾ ಕಂಪನಿ ಮಾತ್ರವಲ್ಲದೆ ಸಿಬ್ಬಂದಿಯು ಸಹ ತಮ್ಮ ಆದಾಯದಲ್ಲಿ ದೇಣಿಗೆ ಸಂಗ್ರಹಿಸಿ ಕರೋನಾ ವಿರುದ್ಧ ಹೋರಾಡುತ್ತಿರುವ ಕೇಂದ್ರ ಸರ್ಕಾರಕ್ಕೆ ಸಹಾಯ ಹಸ್ತ ಚಾಚಿದ್ದಾರೆ. ಸ್ಕೋಡಾ ಕಂಪನಿಯು ನೀಡಿರುವ ರೂ.1 ಕೋಟಿ ದೇಣಿಗೆ ಹೊರತುಪಡಿಸಿ ಕೇವಲ ಸಿಬ್ಬಂದಿಯೇ ರೂ.1.20 ಕೋಟಿ ಸಹಾಯಧನ ಸಂಗ್ರಹಿಸಿ ಪಿಪಿಇ ಕಿಟ್ ಮತ್ತು ವೆಂಟಿಲೇಟರ್ ಖರೀದಿಸಿದ್ದಾರೆ.

ಇನ್ನು ಸ್ಕೋಡಾ ಕಂಪನಿಯು ದೇಣಿಗೆ ಹಣದಲ್ಲಿ ಪುಣೆಯಲ್ಲಿನ ಸರ್ಕಾರಿ ಆಸ್ಪತ್ರೆಯೊಂದನ್ನು ಉನ್ನತೀಕರಿಸುತ್ತಿದ್ದು, ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿರುವ ಸಸೂನ್ ಜನರಲ್ ಆಸ್ಪತ್ರೆಯಲ್ಲಿ ಸುಸಜ್ಜಿತ ಮಾದರಿಯ 1,100 ಬೆಡ್‌ಗಳನ್ನು ಜೋಡಣೆ ಮಾಡಿದೆ.

ಜೊತೆಗೆ ಫೇಸ್ ಮಾಸ್ಕ್ ಮತ್ತು ಫೇಸ್ ಶಿಲ್ಡ್‌ಗಳನ್ನು ಈಗಾಗಲೇ ಪುಣೆಯಲ್ಲಿರುವ ಕಾರು ಘಟಕದಲ್ಲೇ ಉತ್ಪಾದನೆ ಮಾಡಲಾಗುತ್ತಿದ್ದು, ಶೀಘ್ರದಲ್ಲೇ ವೆಂಟಿಲೇಟರ್ ಸೇರಿದಂತೆ ವಿವಿಧ ಮಾದರಿಯ ವೈದ್ಯಕೀಯ ಉಪಕರಣಗಳನ್ನು ಒದಗಿಸುವುದಾಗಿ ಭರವಸೆ ನೀಡಿದೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಇದಲ್ಲದೇ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಈಗಾಗಲೇ ಹಲವು ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಹಣಕಾಸಿನ ನೆರವು ಘೋಷಣೆ ಮಾಡಿರುವುದಲ್ಲದೇ ಅಗತ್ಯ ವೈದ್ಯಕೀಯ ಉಪಕರಣಗಳನ್ನು ಅಭಿವೃದ್ದಿಪಡಿಸುತ್ತಿವೆ.

ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿರುವ ಕೇಂದ್ರ ಸರ್ಕಾರವು ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಿತ್ತು. ಇದೀಗ ಲಾಕ್‌ಡೌನ್ ವಿನಾಯ್ತಿ ಇದ್ದರೂ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ಕರೋನಾ ವಿರುದ್ಧ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಣಿಗೆ ಸಂಗ್ರಹ ಅಭಿಯಾನವನ್ನು ಕೈಗೊಂಡಿವೆ.
MOST READ: ಲಾಕ್‌ಡೌನ್‌ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ

ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬಿದ್ದಾರೆ.

ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆ ಮಾಡುತ್ತಿವೆ.
MOST READ: ಕರೋನಾ ಸಂಕಷ್ಟ: ಟ್ಯಾಕ್ಸಿ ಮತ್ತು ಆಟೋ ಚಾಲಕರಿಗೆ ವಿಶೇಷ ಪ್ಯಾಕೇಜ್ ಘೋಷಣೆ

ಆರೋಗ್ಯ ಕೇಂದ್ರಗಳಿಗೆ ಅಗತ್ಯವಿರುವ ಟೆಸ್ಟಿಂಗ್ ಕಿಟ್, ವೆಂಟಿಲೇಟರ್ ಮತ್ತು ಐಸಿಯು ಯುನಿಟ್‌ಗೆ ಅಗತ್ಯವಿರುವ ಸೌಲಭ್ಯಗಳನ್ನು ಒದಗಿಸುತ್ತಿದ್ದು, ಆರೋಗ್ಯ ಇಲಾಖೆಯ ಬೇಡಿಕೆಗಳನ್ನು ಪೂರೈಸುವ ಮೂಲಕ ವೈರಸ್ ವಿರುದ್ಧದ ಹೋರಾಟದಲ್ಲಿ ಪ್ರಮುಖ ಪಾತ್ರವಹಿಸುತ್ತಿವೆ.


Click it and Unblock the Notifications








