ಹೊಸ ಲೋಗೋ ಪಡೆದುಕೊಳ್ಳಲಿದೆ ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ದಕ್ಷಿಣ ಕೊರಿಯಾದ ಕಿಯಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ತನ್ನ ಲೋಗೋ ವಿನ್ಯಾಸವನ್ನು ಬದಲಾವಣೆಗೊಳಿಸುವ ಯೋಜನೆಯಲ್ಲಿದ್ದು, ಹೊಸದಾಗಿ ಬಿಡುಗಡೆಯಾಗುತ್ತಿರುವ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ ಕಾರಿನಲ್ಲಿ ಹೊಸ ಮಾದರಿಯ ಲೋಗೋ ಜೋಡಿಸುವ ಸಾಧ್ಯತೆಗಳಿವೆ.

ಹೊಸ ಲೋಗೋ ಪಡೆದುಕೊಳ್ಳಲಿದೆ ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಆಟೋ ಉದ್ಯಮದಲ್ಲಿ ಸುಮಾರು 75 ವರ್ಷಗಳ ಅನುಭವ ಹೊಂದಿರುವ ಕಿಯಾ ಮೋಟಾರ್ಸ್ ಕಂಪನಿಯು ಜಪಾನ್ ಮತ್ತು ಉತ್ತರ ಕೊರಿಯಾ ಹೊರತುಪಡಿಸಿ ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಕಾರು ಮಾರಾಟ ಜಾಲವನ್ನು ಹೊಂದಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ತನ್ನ ಕಾರು ಮಾರಾಟದಲ್ಲಿ ಇದುವರೆಗೆ ನೂರಾರು ಬದಲಾವಣೆಗಳನ್ನು ಪರಿಚಯಿಸಿದೆ. ಹಾಗೆಯೇ ಲೋಗೋ ಮಾದರಿಯನ್ನು ಕಾಲ ಕಾಲಕ್ಕೆ ಬದಲಾವಣೆ ಮಾಡಿರುವ ಕಿಯಾ ಕಂಪನಿಯು ಇದೀಗ ಮತ್ತೊಂದು ವಿನೂತನ ವಿನ್ಯಾಸದ ಲೋಗೋ ಸಿದ್ದಪಡಿಸಿದೆ.

ಹೊಸ ಲೋಗೋ ಪಡೆದುಕೊಳ್ಳಲಿದೆ ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಮಾಹಿತಿಗಳ ಪ್ರಕಾರ ಹೊಸ ಲೋಗೋ ಮಾದರಿಯು ಮುಂದಿನ ಕೆಲವೇ ದಿನಗಳಲ್ಲಿ ಪರಿಚಯಿಸಲಿರುವ ಕಿಯಾ ಕಂಪನಿಯು ಭಾರತದಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಸೊನೆಟ್ ಕಾರಿನಲ್ಲೂ ಅಳವಡಿಸುವ ಸಾಧ್ಯತೆಗಳಿವೆ.

MOST READ: ಕಾಸ್ಮಿಕ್ ಹೆಸರಿನೊಂದಿಗೆ ಬಿಡುಗಡೆಯಾಗಲಿದೆ ಸ್ಕೋಡಾ ಹೊಸ ಕಂಪ್ಯಾಕ್ಟ್ ಎಸ್‌ಯುವಿ

ಹೊಸ ಲೋಗೋ ಪಡೆದುಕೊಳ್ಳಲಿದೆ ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಇನ್ನು ಕಂಪ್ಯಾಕ್ಟ್ ಎಸ್‌ಯುವಿಯಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ವೆನ್ಯೂ ಮತ್ತು ಮಾರುತಿ ಬ್ರೆಝಾ ಕಾರಿಗೆ ಪೈಪೋಟಿಯಾಗಿ ಬಿಡುಗಡೆಯಾಗುತ್ತಿರುವ ಸೊನೆಟ್ ಕಾನ್ಸೆಪ್ಟ್ ಕಾರು ಭಾರೀ ನೀರಿಕ್ಷೆ ಮೂಡಿಸಿದ್ದು, ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಹೊಸ ಕಾರು ಬಿಎಸ್-6 ಎಂಜಿನ್‌ ಸೇರಿ ಹಲವು ಪ್ರೀಮಿಯಂ ಫೀಚರ್ಸ್‌ಗಳನ್ನು ಪಡೆದುಕೊಂಡಿದೆ.

ಹೊಸ ಲೋಗೋ ಪಡೆದುಕೊಳ್ಳಲಿದೆ ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಸ್ಪೋಟಿ ಲುಕ್ ಜೊತೆಗೆ ಹಲವು ಐಷಾರಾಮಿ ಫೀಚರ್ಸ್‌ಗಳನ್ನು ಹೊಂದಿರುವ ಸೊನೆಟ್ ಕಾರು ಕಂಪ್ಯಾಕ್ಟ್ ಎಸ್‌ಯುವಿ ಮಾರಾಟದಲ್ಲಿ ಹೊಸ ಬದಲಾವಣೆಯ ನೀರಿಕ್ಷೆಯಲ್ಲಿದ್ದು, ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿರುವ ಸ್ಟೊನಿಕ್ ಮಾದರಿಯಲ್ಲೇ ಅಭಿವೃದ್ದಿಗೊಂಡಿದೆ.

MOST READ: ದೀಪಾವಳಿ ಹೊತ್ತಿಗೆ ಬಿಡುಗಡೆಯಾಗಲಿದೆ ಎಂಜಿ ಗ್ಲೊಸ್ಟರ್ ಎಸ್‌ಯುವಿ

ಹೊಸ ಲೋಗೋ ಪಡೆದುಕೊಳ್ಳಲಿದೆ ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಸದ್ಯಕ್ಕೆ ಕ್ಯೂವೈಎ ಕೊಡ್ ನೆಮ್ ಆಧಾರದ ಮೇಲೆ ರೋಡ್ ಟೆಸ್ಟಿಂಗ್ ನಡೆಸುತ್ತಿರುವ ಸೊನೆಟ್ ಕಾರು ಮಾರುತಿ ಸುಜುಕಿ ವಿಟಾರಾ ಬ್ರೆಝಾ, ಟಾಟಾ ನೆಕ್ಸಾನ್, ಹ್ಯುಂಡೈ ವೆನ್ಯೂ, ಮಹೀಂದ್ರಾ ಎಕ್ಸ್‌ಯುವಿ300, ಫೋರ್ಡ್ ಇಕೋಸ್ಪೋರ್ಟ್ ಕಾರುಗಳಿಗೆ ಪ್ರಬಲ ಪೈಪೋಟಿಯಾಗಲಿದೆ.

ಹೊಸ ಲೋಗೋ ಪಡೆದುಕೊಳ್ಳಲಿದೆ ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಮಾಹಿತಿಗಳ ಪ್ರಕಾರ, ಹೊಸ ಕಾರಿನಲ್ಲಿ ಒಟ್ಟು 2 ಪೆಟ್ರೋಲ್ ಮಾದರಿಗಳು ಮತ್ತು ಒಂದು ಡೀಸೆಲ್ ಎಂಜಿನ್ ಆಯ್ಕೆ ಹೊಂದುವ ಸಾಧ್ಯತೆಗಳಿದ್ದು, 1.2-ಲೀಟರ್ ಪೆಟ್ರೋಲ್ ಮತ್ತು1.5-ಲೀಟರ್ ಟರ್ಬೋ ಡೀಸೆಲ್ ಮತ್ತು ಪರ್ಫಾಮೆನ್ಸ್ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆ ನೀಡಲಿದೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಹೊಸ ಲೋಗೋ ಪಡೆದುಕೊಳ್ಳಲಿದೆ ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಸಾಮಾನ್ಯ ಮಾದರಿಯ ಪೆಟ್ರೋಲ್ ಮತ್ತು ಡೀಸೆಲ್ ಆವೃತ್ತಿಯಲ್ಲಿ 5-ಸ್ಪೀಡ್ ಮ್ಯಾನುವಲ್ ಮತ್ತು 5-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಹೊಂದುವ ಸಾಧ್ಯತೆಗಳಿದ್ದು, ಟರ್ಬೋ ಎಂಜಿನ್‌ನಲ್ಲಿ 7-ಸ್ಪೀಡ್ ಡ್ಯುಯಲ್ ಕ್ಲಚ್ ಟ್ರಾಮಿಷನ್ ಹೊಂದಲಿದೆ.

ಹೊಸ ಲೋಗೋ ಪಡೆದುಕೊಳ್ಳಲಿದೆ ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಹಾಗೆಯೇ ಕಾರಿನ ಒಳಭಾಗದಲ್ಲೂ ಸಾಕಷ್ಟು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, ಫ್ಲ್ಯಾಟ್ ಬಾಟಮ್ ತ್ರಿ ಸ್ಪೋಕ್ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್, ಫ್ರಂಟ್ ಆರ್ಮ್ ರೆಸ್ಟ್, ಸಿಲ್ವರ್ ಹ್ಯಾಂಡಲ್ ಬಾರ್, ರೆಡ್ ಕಾಟ್ರಾಸ್ಟ್ ಹೊಂದಿರುವ ಲೆದರ್ ಸೀಟುಗಳು, ಹೊಂದಾಣಿಕೆ ಮಾಡಿಕೊಳ್ಳಬಹುದಾದ ಹೆಡ್ ರೆಸ್ಟ್, ಸೀಟ್ ಬ್ಯಾಕ್ ಪ್ಯಾಕೇಟ್ ಸೌಲಭ್ಯಗಳನ್ನು ಹೊಂದಿರುವುದು ರೋಡ್ ಟೆಸ್ಟ್ ವೇಳೆ ಬಹಿರಂಗವಾಗಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಹೊಸ ಲೋಗೋ ಪಡೆದುಕೊಳ್ಳಲಿದೆ ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಇದರೊಂದಿಗೆ ಪ್ರಯಾಣಿಕರ ಸುರಕ್ಷತೆಗೂ ಹೆಚ್ಚಿನ ಆದ್ಯತೆ ನೀಡಿರುವ ಕಿಯಾ ಮೋಟಾರ್ಸ್ ಕಂಪನಿಯು 4 ಏರ್‌ಬ್ಯಾಗ್, ಎಬಿಎಸ್ ಜೊತೆ ಇಬಿಡಿ, ಸ್ಟ್ಯಾಂಡರ್ಡ್ ಆಗಿ ಆಲ್ ವೀಲ್ಹ್ ಡಿಸ್ಕ್ ಬ್ರೇಕ್ ಸೇರಿದಂತೆ ಹಲವು ಸುಧಾರಿತ ತಂತ್ರಜ್ಞಾನ ಪ್ರೇರಿತ ಸುರಕ್ಷಾ ಫೀಚರ್ಸ್‌ಗಳಿರಲಿವೆ.

ಹೊಸ ಲೋಗೋ ಪಡೆದುಕೊಳ್ಳಲಿದೆ ಬಿಡುಗಡೆಯಾಗಲಿರುವ ಕಿಯಾ ಸೊನೆಟ್ ಕಂಪ್ಯಾಕ್ಟ್ ಎಸ್‌ಯುವಿ

ಸೊನೆಟ್ ಕಾರಿನ ಬೆಲೆ ಮತ್ತು ಬಿಡುಗಡೆ ಅವಧಿ(ಅಂದಾಜು)

ಕರೋನಾ ವೈರಸ್‌ನಿಂದಾಗಿ ಹೊಸ ಕಾರು ಬಿಡುಗಡೆಯು ತುಸು ವಿಳಂಬವಾಗುವ ಸಾಧ್ಯತೆಗಳಿದ್ದು, ಮುಂಬರುವ ಸೆಪ್ಟೆಂಬರ್ ಅಥವಾ ಅಕ್ಟೊಬರ್ ವೇಳೆಗೆ ಬಿಡುಗಡೆಯಾಗುವ ನೀರಿಕ್ಷೆಗಳಿವೆ. ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.7 ಲಕ್ಷದಿಂದ ರೂ.10 ಲಕ್ಷ ಬೆಲೆ ಅಂತರದಲ್ಲಿ ಬಿಡುಗಡೆಯಾಗಬಹುದೆಂದು ಅಂದಾಜಿಸಲಾಗಿದೆ.

Most Read Articles

Kannada
English summary
Sonet Compact SUV Could Carry Kia's New Logo Design. Read in Kannada.
Story first published: Monday, April 20, 2020, 13:23 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X