ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಚಾರ್ಜ್ ಮಾಡಲಿದೆ ಈ ಹೊಸ ತಂತ್ರಜ್ಞಾನ

ವಿಶ್ವಾದ್ಯಂತ ಪೆಟ್ರೋಲ್, ಡೀಸೆಲ್ ವಾಹನಗಳ ಬಳಕೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಪೆಟ್ರೋಲ್, ಡೀಸೆಲ್ ವಾಹನಗಳಂತೆ ಮಾಲಿನ್ಯವನ್ನುಂಟು ಮಾಡದೇ ಇರುವುದೇ ಇದಕ್ಕೆ ಮುಖ್ಯ ಕಾರಣ.

ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಚಾರ್ಜ್ ಮಾಡಲಿದೆ ಈ ಹೊಸ ತಂತ್ರಜ್ಞಾನ

ಜಾಗತಿಕ ತಾಪಮಾನ ಏರಿಕೆಗೆ ವಾಹನಗಳಿಂದ ಹೊರ ಸೂಸುವ ವಾಯುಮಾಲಿನ್ಯವು ಸಹ ಕಾರಣವಾಗಿದೆ. ಈ ಕಾರಣಕ್ಕೆ ವಿಶ್ವದ ಹಲವು ದೇಶಗಳು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿವೆ. ಆದರೆ ಎಲೆಕ್ಟ್ರಿಕ್ ವಾಹನಗಳು ದುಬಾರಿಯಾಗಿದೆ. ಜೊತೆಗೆ ಇವುಗಳನ್ನು ಚಾರ್ಜ್ ಮಾಡಲು ಹೆಚ್ಚು ಸಮಯ ಬೇಕಾಗುತ್ತದೆ. ಹೆಚ್ಚಿನ ಸಂಖ್ಯೆಯ ಚಾರ್ಜಿಂಗ್ ಕೇಂದ್ರಗಳು ಇಲ್ಲದೇ ಇರುವುದು ಸಹ ಸಮಸ್ಯೆಗೆ ಕಾರಣವಾಗಿದೆ.

ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಚಾರ್ಜ್ ಮಾಡಲಿದೆ ಈ ಹೊಸ ತಂತ್ರಜ್ಞಾನ

ಇವುಗಳನ್ನು ಗಮನದಲ್ಲಿಟ್ಟುಕೊಂಡು ಎಲೆಕ್ಟ್ರಿಕ್ ವಾಹನ ತಯಾರಕ ಕಂಪನಿಗಳು ಜನರಲ್ಲಿ ಎಲೆಕ್ಟ್ರಿಕ್ ವಾಹನಗಳ ಕುರಿತು ಇರುವ ತಪ್ಪು ಕಲ್ಪನೆಗಳನ್ನು ಹೋಗಲಾಡಿಸುವ ಪ್ರಯತ್ನಕ್ಕೆ ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಕಂಪನಿಗಳು ಚಾರ್ಜಿಂಗ್ ಸ್ಟೇಷನ್ ಗಳ ನಿರ್ಮಾಣ ಹಾಗೂ ಎಲೆಕ್ಟ್ರಿಕ್ ವಾಹನಗಳ ಬೆಲೆಯನ್ನು ಕಡಿಮೆ ಮಾಡಲು ಮುಂದಾಗಿವೆ.

MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ

ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಚಾರ್ಜ್ ಮಾಡಲಿದೆ ಈ ಹೊಸ ತಂತ್ರಜ್ಞಾನ

ಎಲೆಕ್ಟ್ರಿಕ್ ವಾಹನದ ಬ್ಯಾಟರಿಗಳನ್ನು ವೇಗವಾಗಿ ಚಾರ್ಜ್ ಮಾಡುವ ತಂತ್ರಜ್ಞಾನವನ್ನು ಕಂಡುಹಿಡಿಯಲಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಇಟಿ ಆಟೋ ವರದಿ ಮಾಡಿದೆ. ದಕ್ಷಿಣ ಕೊರಿಯಾ ಮೂಲದ ಸಂಶೋಧನಾ ಸಂಸ್ಥೆಯೊಂದು ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದೆ.

ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಚಾರ್ಜ್ ಮಾಡಲಿದೆ ಈ ಹೊಸ ತಂತ್ರಜ್ಞಾನ

ಸಾಮಾನ್ಯವಾಗಿ ಎಲೆಕ್ಟ್ರಿಕ್ ವಾಹನಗಳು ಸಂಪೂರ್ಣವಾಗಿ ಎಲೆಕ್ಟ್ರಿಕ್ ಬ್ಯಾಟರಿಯನ್ನು ಅವಲಂಬಿಸಿರುತ್ತವೆ. ಈ ಕಾರಣಕ್ಕೆ ಎಲೆಕ್ಟ್ರಿಕ್ ವಾಹನಗಳಲ್ಲಿ ಲಿಥಿಯಂ-ಐಯಾನ್ ಬ್ಯಾಟರಿಗಳನ್ನು ಬಳಸಲಾಗುತ್ತದೆ. ಈ ಬ್ಯಾಟರಿಗಳು ಎಲೆಕ್ಟ್ರಿಕ್ ವಾಹನಗಳ ಒಟ್ಟಾರೆ ಪರ್ಫಾಮೆನ್ಸ್ ಅನ್ನು ವ್ಯಾಖ್ಯಾನಿಸುತ್ತವೆ.

MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು

ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಚಾರ್ಜ್ ಮಾಡಲಿದೆ ಈ ಹೊಸ ತಂತ್ರಜ್ಞಾನ

ಈ ಬ್ಯಾಟರಿಗಳನ್ನು ಚಾರ್ಜ್ ಮಾಡಲು ಹಾಗೂ ಬಳಸಲು ಸದ್ಯಕ್ಕೆ ಹಲವಾರು ಸಮಸ್ಯೆಗಳಿವೆ. ಇವುಗಳನ್ನು ನಿವಾರಿಸಲು ದಕ್ಷಿಣ ಕೊರಿಯಾದ ಸಂಶೋಧಕರು ಯಶಸ್ವಿಯಾಗಿದ್ದಾರೆ. ಬೋಹಾಂಗ್ ಎಂಬ ಖಾಸಗಿ ವಿಶ್ವವಿದ್ಯಾಲಯಕ್ಕೆ ಸೇರಿದ ಪಯೋಂಗ್ಯಾಂಗ್ ಕಾಂಗ್ ಹಾಗೂ ಡಾ.ಮಿಂಗ್ಯುಂಗ್ ಕಿಮ್ ಎಂಬುವವರು ಜನರ ನಿರೀಕ್ಷೆಗೆ ತಕ್ಕಂತೆ ಹೈಸ್ಪೀಡ್ ಚಾರ್ಜಿಂಗ್ ತಂತ್ರಜ್ಞಾನವನ್ನು ಸಂಶೋಧಿಸಿದ್ದಾರೆ.

ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಚಾರ್ಜ್ ಮಾಡಲಿದೆ ಈ ಹೊಸ ತಂತ್ರಜ್ಞಾನ

ಅವರು ಸಂಶೋಧಿಸಿರುವ ಹೊಸ ತಂತ್ರಜ್ಞಾನವು ಕೇವಲ 6 ನಿಮಿಷಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬ್ಯಾಟರಿಯನ್ನು 90%ವರೆಗೆ ಚಾರ್ಜ್ ಮಾಡುತ್ತದೆ. ಜೊತೆಗೆ ತನ್ನ ಚಾರ್ಜಿಂಗ್ ಸಾಮರ್ಥ್ಯದ 54% ಅನ್ನು 18 ಸೆಕೆಂಡುಗಳಲ್ಲಿ ಬಿಡುಗಡೆ ಮಾಡುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಲಾಗಿದೆ.

MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ

ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಚಾರ್ಜ್ ಮಾಡಲಿದೆ ಈ ಹೊಸ ತಂತ್ರಜ್ಞಾನ

ಹೆಚ್ಚಿನ ಸಾಮರ್ಥ್ಯದ ಲಿಥಿಯಂ ಐಯಾನ್ ಬ್ಯಾಟರಿಗಳನ್ನು ಅಭಿವೃದ್ಧಿಪಡಿಸಲು ಇದೊಂದು ಉತ್ತಮ ಸಂಕೇತವಾಗಿದೆ. ಈ ಬ್ಯಾಟರಿಯನ್ನು ಅಭಿವೃದ್ಧಿಪಡಿಸಲು ಸುಂಗ್ಯುಂಗ್ ಕ್ವಾನ್ ವಿಶ್ವವಿದ್ಯಾಲಯದ ಪ್ರೊಫೆಸರ್ ವಾನ್-ಸಾಬ್ ಯೂನ್ ಸಹ ಪಯೋಂಗ್ಯಾಂಗ್ ಕಾಂಗ್ ಹಾಗೂ ಡಾ. ಮಿಂಗ್ಯುಂಗ್ ಕಿಮ್ ಅವರೊಂದಿಗೆ ಕೆಲಸ ಮಾಡಿದ್ದಾರೆ

ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಚಾರ್ಜ್ ಮಾಡಲಿದೆ ಈ ಹೊಸ ತಂತ್ರಜ್ಞಾನ

ಈ ಮೂವರು ಒಟ್ಟಾಗಿ ಹೆಚ್ಚಿನ ಸಾಮರ್ಥ್ಯದ ಲಿಥಿಯಂ-ಐಯಾನ್ ಬ್ಯಾಟರಿಗಳನ್ನು ಅಭಿವೃದ್ಧಿಪಡಿಸಿದ್ದಾರೆ. ಇದಲ್ಲದೆ, ಬ್ಯಾಟರಿಯಲ್ಲಿರುವ ಪಾರ್ಟಿಕಲ್ ಗಾತ್ರವನ್ನು ಬದಲಿಸದೆ ಚಾರ್ಜಿಂಗ್ ಸಾಮರ್ಥ್ಯವನ್ನು ಬದಲಿಸಬಹುದು ಎಂದು ಅವರು ಮೊದಲ ಬಾರಿಗೆ ಸಾಬೀತುಪಡಿಸಿದ್ದಾರೆ.

MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು

ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಚಾರ್ಜ್ ಮಾಡಲಿದೆ ಈ ಹೊಸ ತಂತ್ರಜ್ಞಾನ

ಬ್ಯಾಟರಿಯಲ್ಲಿ ಪಾರ್ಟಿಕಲ್ ಗಳು ಬಹಳ ಮುಖ್ಯವಾಗಿವೆ. ಅವು ಸಾಂದ್ರವಾಗಿದಷ್ಟು ಅದರ ವಿದ್ಯುತ್ ಸಾಮರ್ಥ್ಯವನ್ನು ಉಳಿಸಿಕೊಳ್ಳುತ್ತವೆ. ಸಂಶೋಧಕರ ತಂಡವು ಯಾವುದೇ ಬದಲಾವಣೆಗಳನ್ನು ಮಾಡದೆ ಬ್ಯಾಟರಿಯ ಚಾರ್ಜಿಂಗ್ ಸಾಮರ್ಥ್ಯವನ್ನು ಹೆಚ್ಚಿಸಿದ್ದಾರೆ.

ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಚಾರ್ಜ್ ಮಾಡಲಿದೆ ಈ ಹೊಸ ತಂತ್ರಜ್ಞಾನ

ಲಿಥಿಯಂ-ಐಯಾನ್ ಬ್ಯಾಟರಿಗಳಲ್ಲಿರುವ ಪಾರ್ಟಿಕಲ್ ಗಳ ಗಾತ್ರವನ್ನು ಕಡಿಮೆ ಮಾಡುವ ಮೂಲಕ ವಿದ್ಯುದ್ವಿಭಜನೆಯನ್ನು ವೇಗವಾಗಿ ಚಾರ್ಜ್ ಮಾಡಲು ಹಾಗೂ ಡಿಸ್ ಚಾರ್ಜ್ ಮಾಡಲು ಬಳಸಲಾಗುತ್ತದೆ. ಈ ಕ್ರಿಯೆಯು ಬ್ಯಾಟರಿಯ ವಿದ್ಯುತ್ ಸಂಗ್ರಹ ಸಾಮರ್ಥ್ಯದ ಮೇಲೆ ಪರಿಣಾಮ ಬೀರಬಹುದು.

MOSTREAD: ಲಾಕ್‌ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಚಾರ್ಜ್ ಮಾಡಲಿದೆ ಈ ಹೊಸ ತಂತ್ರಜ್ಞಾನ

ಈ ಮೂವರು ಸಂಶೋಧಕರ ತಂಡವು ಪರ್ಯಾಯ ಚಿಂತನೆಯೊಂದಿಗೆ ಬಂದಿದೆ. ಅವರು ಸಂಶೋಧಿಸಿರುವ ಹೊಸ ತಂತ್ರಜ್ಞಾನವು ಮೇಲೆ ಹೇಳಿದಂತೆ ಯಾವುದೇ ಅಡ್ಡಪರಿಣಾಮಗಳನ್ನು ಬೀರುವುದಿಲ್ಲವೆಂದು ಸಂಶೋಧಕರು ಹೇಳಿದ್ದಾರೆ.

ಎಲೆಕ್ಟ್ರಿಕ್ ವಾಹನಗಳನ್ನು ವೇಗವಾಗಿ ಚಾರ್ಜ್ ಮಾಡಲಿದೆ ಈ ಹೊಸ ತಂತ್ರಜ್ಞಾನ

ಅವರು ತಮ್ಮ ಹೊಸ ತಂತ್ರಜ್ಞಾನದಿಂದ ಹೆಚ್ಚಿನ ಪವರ್ ಹಾಗೂ ಹೆಚ್ಚಿನ ವೇಗ ಚಾರ್ಜಿಂಗ್ ಸಾಮರ್ಥ್ಯವನ್ನು ಸಾಧಿಸಬಹುದು ಎಂದು ಹೇಳಿಕೊಂಡಿದ್ದಾರೆ. ಹೊಸ ತಂತ್ರಜ್ಞಾನವು ಬ್ಯಾಟರಿಯ ಬಾಳಿಕೆಯನ್ನು ಹೆಚ್ಚಿಸುತ್ತದೆ ಎಂದು ಅವರು ಹೇಳಿದ್ದಾರೆ.

Most Read Articles

Kannada
English summary
South Korean researchers develops new charging technology for electric vehicles. Read in Kannada.
Story first published: Monday, October 26, 2020, 20:36 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X