ಬಿಡದಿಯ ಕಾರ್ಮಿಕರ ಮುಷ್ಕರದಿಂದಾಗಿ ತಡವಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಬಿಡುಗಡೆ

ರಾಮನಗರ ಜಿಲ್ಲೆಯ ಬಿಡದಿ ಕೈಗಾರಿಕಾ ಪ್ರದೇಶದಲ್ಲಿರುವ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ಸ್‌ ಕಾರ್ಖಾನೆಯ ಕಾರ್ಮಿಕರು ಮುಷ್ಕವನ್ನು ನಡೆಸುತ್ತಿದ್ದಾರೆ. ಕೈಗಾರಿಕಾ ಪ್ರದೇಶದಲ್ಲಿ ಇರುವ ಕಾರ್ಖಾನೆಯ ಮುಂಭಾಗ ನಡೆದಿರುವ ಮುಷ್ಕರದಲ್ಲಿ ನೂರಾರು ಕಾರ್ಮಿಕರು ಭಾಗಿಯಾದ್ದಾರೆ.

ಬಿಡದಿಯ ಕಾರ್ಮಿಕರ ಮುಷ್ಕರದಿಂದಾಗಿ ತಡವಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಬಿಡುಗಡೆ

ಟೊಯೊಟಾ ಕಂಪನಿಯ ಕಾರ್ಮಿಕರು ಅಹೋರಾತ್ರಿ ಧರಣಿ ಕುಳಿತಿದ್ದಾರೆ. 40 ಜನ ಕಾರ್ಮಿಕರನ್ನು ಅಮಾನತು ಆದೇಶ ವಾಪಸ್ ಪಡೆಯುವುದು ಹಾಗೂ ಕಾರ್ಮಿಕರಿಗೆ ಕೆಲಸದ ಅವಧಿಯಲ್ಲಿ ವಿಶ್ರಾಂತಿ ಸೇರಿದಂತೆ ಹಲವು ಬೇಡಿಕೆ ಈಡೇರುವವರೆಗೂ ಪ್ರತಿಭಟನೆ ಕೈಬಿಡುವುದಿಲ್ಲ ಎಂದು ಕಾರ್ಮಿಕರು ಪಟ್ಟು ಹಿಡಿದಿದ್ದಾರೆ. ಪ್ರತಿಭಟನೆ ಹೆಚ್ಚಾಗುತ್ತಿದ್ದಂತೆ ಸದ್ಯ ಲಾಕ್ ಔಟ್ ಮಾಡಲಾಗಿದೆ.

ಬಿಡದಿಯ ಕಾರ್ಮಿಕರ ಮುಷ್ಕರದಿಂದಾಗಿ ತಡವಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಬಿಡುಗಡೆ

ಜಪಾನ್ ಮೂಲದ ಜನಪ್ರಿಯ ವಾಹನ ಉತ್ಪಾದನಾ ಕಂಪನಿಯ ಭಾರತೀಯ ಮಾರುಕಟ್ಟೆಯಲ್ಲಿ ಈ ವರ್ಷದ ಅಕ್ಟೋಬರ್‌ ತಿಂಗಳ ಮಾರಾಟದಲ್ಲಿ 1.87 ರಷ್ಟು ಕುಸಿತವನ್ನು ಕಂಡಿದೆ. ಇದರ ನಡುವೆ ಕಾರ್ಮಿಕರ ಪ್ರತಿಭಟನೆಯು ಕಂಪನಿಗೆ ದೊಡ್ಡ ಶಾಕ್ ನೀಡಿದೆ.

MOST READ: ಸ್ಪಾಟ್ ಟೆಸ್ಟ್​ನಲ್ಲಿ ಕಾಣಿಸಿಕೊಂಡ ಟೊಯೊಟಾ ಫಾರ್ಚೂನರ್ ಫೇಸ್‌ಲಿಫ್ಟ್‌

ಬಿಡದಿಯ ಕಾರ್ಮಿಕರ ಮುಷ್ಕರದಿಂದಾಗಿ ತಡವಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಬಿಡುಗಡೆ

ಅಲ್ಲದೇ ಹಬ್ಬದ ಸೀಸನ್ ನಲ್ಲಿ ಮಾರಾಟವನ್ನು ಹೆಚ್ಚಿಸಲು ಕಂಪನಿಯು ನಿರ್ಧರಿಸಿದ್ದರು. ಆದರೆ ಕಾರ್ಮಿಕರ ಪ್ರತಿಭಟನೆಯು ಮಾರಾಟದ ಮೇಲೆಯು ಪರಿಣಾಮ ಬೀರುವ ಸಾಧ್ಯತೆಗಳಿದೆ. ಇನ್ನು ಬಿಡದಿಯಲ್ಲಿರುವ ಟೊಯೊಟಾ ಕಂಪನಿಯ ಕೈಗಾರಿಕೆಯು 6,500ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ.

ಬಿಡದಿಯ ಕಾರ್ಮಿಕರ ಮುಷ್ಕರದಿಂದಾಗಿ ತಡವಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಬಿಡುಗಡೆ

432 ಎಕರೆ ಪ್ರದೇಶದಲ್ಲಿ ಹರಡಿಕೊಂಡಿರುವ ಬಿಡದಿಯ ಸ್ಥಾವರವು ಮೂರು ಲಕ್ಷಕ್ಕೂ ಹೆಚ್ಚು ಯುನಿಟ್ ಗಳ ಉತ್ಪಾದನಾ ಸಾಮರ್ಥ್ಯವನ್ನು ಹೊಂದಿದೆ. ಭಾರತದಲ್ಲಿ ಹೆಚ್ಚು ಮಾರಾಟವಾಗುವ ಮಾದರಿಗಳಾದ ಇನೋವಾ ಕ್ರಿಸ್ಟಾ ಮತ್ತು ಫಾರ್ಚೂನರ್ ಗಳನ್ನು ಇದೇ ಸ್ಥಾವರದಲ್ಲಿ ಉತ್ಪಾದಿಸಲಾಗುತ್ತದೆ.

MOST READ: ಗ್ಲೋಬಲ್ ಎನ್‌ಸಿಎಪಿಯ ಸುರಕ್ಷತಾ ಟೆಸ್ಟ್​ನಲ್ಲಿ ಅಗ್ರಸ್ಥಾನಗಳಿಸಿದ ಮಹೀಂದ್ರಾ ಕಾರು

ಬಿಡದಿಯ ಕಾರ್ಮಿಕರ ಮುಷ್ಕರದಿಂದಾಗಿ ತಡವಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಬಿಡುಗಡೆ

ಕಾರ್ಮಿಕರ ಮುಷ್ಕರದಿಂದಾಗಿ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯ ಬಿಡುಗಡೆಯನ್ನು ಮುಂದೂಡುವ ಸಾಧ್ಯತೆಗಳಿದೆ. ಟೊಯೊಟಾ ಕಂಪನಿಯು ಕಳೆದ ತಿಂಗಳು ಇಂಡೋನೇಷ್ಯಾ ಮಾರುಕಟ್ಟೆಯಲ್ಲಿ ತನ್ನ ಬಹುನಿರೀಕ್ಷಿತ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯನ್ನು ಬಿಡುಗಡೆಗೊಳಿಸಿತ್ತು.

ಬಿಡದಿಯ ಕಾರ್ಮಿಕರ ಮುಷ್ಕರದಿಂದಾಗಿ ತಡವಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಬಿಡುಗಡೆ

ಇದೀಗ ಟೊಯೊಟಾ ಕಂಪನಿಯು ಈ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ. ಈ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಗಾಗಿ ಕೆಲವು ಡೀಲರುಗಳು ಅನಧಿಕೃತ ಪ್ರಿ-ಬುಕ್ಕಿಂಗ್ ಅನ್ನು ಆರಂಭಿಸಿದ್ದಾರೆ.

MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಬಿಡದಿಯ ಕಾರ್ಮಿಕರ ಮುಷ್ಕರದಿಂದಾಗಿ ತಡವಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಬಿಡುಗಡೆ

ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯಲ್ಲಿ 2.7-ಲೀಟರ್ ನಾಲ್ಕು ಸಿಲಿಂಡರ್ ಎನ್‌ಎ ಪೆಟ್ರೋಲ್ ಮತ್ತು 2.4-ಲೀಟರ್ ಡೀಸೆಲ್ ಎಂಜಿನ್ ಗಳನ್ನು ಹೊಂದಿರಲಿದೆ. ಇನ್ನು ಈ ಎಂಪಿವಿಯಲ್ಲಿ ಪೆಟ್ರೋಲ್ ಎಂಜಿನ್‌ನೊಂದಿಗೆ ಹೊಸ ಸಿಎನ್‌ಜಿ ರೂಪಾಂತರವನ್ನು ನಾವು ನಿರೀಕ್ಷಿಸುತ್ತೇವೆ.

ಬಿಡದಿಯ ಕಾರ್ಮಿಕರ ಮುಷ್ಕರದಿಂದಾಗಿ ತಡವಾಗಲಿದೆ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಬಿಡುಗಡೆ

ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಭಾರತದಲ್ಲಿ ಬಿಡುಗಡೆಯಾಗಲಿರುವ ಬಹುನಿರೀಕ್ಷಿತ ಕಾರುಗಳಲ್ಲಿ ಒಂದಾಗಿದೆ. ಇಂಡೋನೇಷ್ಯಾದಲ್ಲಿ ಬಿಡುಗಡೆಗೊಳಿಸಿದ ಟೊಯೊಟಾ ಇನೋವಾ ಕ್ರಿಸ್ಟಾ ಫೇಸ್‌ಲಿಫ್ಟ್ ಎಂಪಿವಿಯ ಅದೇ ಮಾದರಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಸಾಧ್ಯತೆಗಳಿದೆ

Most Read Articles

Kannada
Read more on ಟೊಯೊಟಾ toyota
English summary
Strike At TKM Plant Could Delay The Launch Of Innova Crysta Facelift. Read In Kannada.
Story first published: Saturday, November 14, 2020, 9:50 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X