ಆಟೋಮೊಬೈಲ್ ಫೆಡರೇಷನ್‌ಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ಲಾಕ್‌ಡೌನ್ ಮುಗಿದ ನಂತರ ಮಾರಾಟವಾದ ವಾಹನಗಳಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ವಾಹನ ಕಂಪನಿಗಳಿಂದ ಮಾಹಿತಿ ಕೋರಿದೆ. ಲಾಕ್‌ಡೌನ್ ಕಾರಣದಿಂದಾಗಿ ಸುಪ್ರೀಂ ಕೋರ್ಟ್ ಬಿಎಸ್ 4 ವಾಹನಗಳ ಮಾರಾಟಕ್ಕೆ ನೀಡಲಾಗಿದ್ದ ಮಾರ್ಚ್ 31ರ ಗಡುವನ್ನು ವಿಸ್ತರಿಸಿತ್ತು.

ಆಟೋಮೊಬೈಲ್ ಫೆಡರೇಷನ್‌ಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ಲಾಕ್‌ಡೌನ್ ಮುಗಿದ 10 ದಿನಗಳೊಳಗೆ 10%ನಷ್ಟು ಬಿಎಸ್ 4 ವಾಹನಗಳನ್ನು ಮಾರಾಟ ಮಾಡಲು ಸುಪ್ರೀಂ ಕೋರ್ಟ್ ಅವಕಾಶ ನೀಡಿತ್ತು. ಆದರೆ ಈ ಅವಧಿಯಲ್ಲಿ ಆಟೋಮೊಬೈಲ್ ಕಂಪನಿಗಳು 10%ಗಿಂತ ಹೆಚ್ಚು ಬಿಎಸ್ 4 ವಾಹನಗಳನ್ನು ಮಾರಾಟ ಮಾಡಿವೆ. ಈ ಕಾರಣಕ್ಕೆ ಸುಪ್ರೀಂ ಕೋರ್ಟ್, ಫೆಡರೇಶನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಶನ್ (ಎಫ್‌ಎಡಿಎ) ಅನ್ನು ಖಂಡಿಸಿದೆ.

ಆಟೋಮೊಬೈಲ್ ಫೆಡರೇಷನ್‌ಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ 1.05 ಲಕ್ಷ ಬಿಎಸ್ 4 ವಾಹನಗಳ ಮಾರಾಟಕ್ಕೆ ಅನುಮತಿ ನೀಡಿತ್ತು. ಆದರೆ ಆಟೋಮೊಬೈಲ್ ಕಂಪನಿಗಳು 2.5 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಿವೆ.ಬಿಎಸ್ 4 ವಾಹನಗಳನ್ನು ರಾಜಧಾನಿ ದೆಹಲಿ ಮತ್ತು ಎನ್‌ಸಿಆರ್‌ನಲ್ಲಿ ಮಾರಾಟ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತಿಳಿಸಿತ್ತು.

MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ

ಆಟೋಮೊಬೈಲ್ ಫೆಡರೇಷನ್‌ಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ದೆಹಲಿಯಲ್ಲಿಯೂ ಬಿಎಸ್ 4 ವಾಹನಗಳನ್ನು ಮಾರಾಟ ಮಾಡಲಾಗಿದೆ. ಈ ಬಗ್ಗೆ ತನಿಖೆ ನಡೆಸುವ ಸಲುವಾಗಿ, 2020ರ ಮಾರ್ಚ್ 27 ರಿಂದ ಮಾರಾಟವಾದ ಎಲ್ಲಾ ಬಿಎಸ್ 4 ವಾಹನಗಳ ಮಾಹಿತಿಯನ್ನು ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಎಫ್‌ಎಡಿಎ ಹಾಗೂ ಸಾರಿಗೆ ಇಲಾಖೆಗೆ ಆದೇಶಿಸಿದೆ.

ಆಟೋಮೊಬೈಲ್ ಫೆಡರೇಷನ್‌ಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ಲಾಕ್‌ಡೌನ್ ಜಾರಿಯಾದ ನಂತರ, ಫೆಡರೇಶನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಶನ್ (ಎಫ್‌ಎಡಿಎ) ಹಾಗೂ ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರ್ (ಸಿಯಾಮ್) ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಬಿಎಸ್ 4 ಮಾರಾಟದ ಗಡುವನ್ನು ವಿಸ್ತರಿಸಬೇಕೆಂದು ಮನವಿ ಸಲ್ಲಿಸಿದ್ದವು.

MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ

ಆಟೋಮೊಬೈಲ್ ಫೆಡರೇಷನ್‌ಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ಕಂಪನಿಗಳ ಅರ್ಜಿಯನ್ನು ಪುರಸ್ಕರಿಸಿದ್ದ ಸುಪ್ರೀಂ ಕೋರ್ಟ್, ಲಾಕ್‌ಡೌನ್ ಮುಗಿದ ನಂತರ ಬಿಎಸ್ 4 ವಾಹನಗಳ 10%ನಷ್ಟು ಷೇರುಗಳನ್ನು 10 ದಿನಗಳವರೆಗೆ ಮಾರಾಟ ಮಾಡಲು ಅನುಮತಿ ನೀಡಿತು. ದೆಹಲಿ ಎನ್‌ಸಿಆರ್‌ನಲ್ಲಿ ಬಿಎಸ್ 4 ವಾಹನಗಳನ್ನು ಮಾರಾಟ ಮಾಡುವಂತಿಲ್ಲವೆಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಆಟೋಮೊಬೈಲ್ ಫೆಡರೇಷನ್‌ಗೆ ಛೀಮಾರಿ ಹಾಕಿದ ಸುಪ್ರೀಂ ಕೋರ್ಟ್

ಆಟೋಮೊಬೈಲ್ ಕಂಪನಿಗಳಲ್ಲಿ 15,000 ಪ್ಯಾಸೆಂಜರ್ ಕಾರುಗಳು, 12,000 ಕಮರ್ಷಿಯಲ್ ವಾಹನಗಳು ಸೇರಿದಂತೆ ಸುಮಾರು 7 ಲಕ್ಷ ಬಿಎಸ್ 4 ದ್ವಿಚಕ್ರ ವಾಹನಗಳು ಮಾರಾಟವಾಗದೇ ಉಳಿದಿದ್ದು, ಇವುಗಳನ್ನು ಮಾರಾಟ ಮಾಡುವ ಗಡುವನ್ನು ವಿಸ್ತರಿಸುವಂತೆ ಎಫ್‌ಎಡಿಎ ಅನುಮತಿ ಕೋರಿತ್ತು.

Most Read Articles

Kannada
English summary
Supreme Court asks FADA to submit report of BS4 vehicle sales. Read in Kannada.
Story first published: Monday, June 15, 2020, 19:09 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X