ನಿಯಮ ಮೀರಿ ವಾಹನ ಮಾರಾಟ ಪ್ರಕರಣ, ವಿಚಾರಣೆ ಮುಂದೂಡಿದ ಸುಪ್ರೀಂ ಕೋರ್ಟ್
ದೇಶದಲ್ಲಿ ವಾಹನ ವಿತರಕರು ನಿಯಮ ಮೀರಿ ಬಿಎಸ್ 4 ವಾಹನಗಳನ್ನು ಮಾರಾಟ ಮಾಡಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ಫಾಡಾ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆಯನ್ನು ಜುಲೈ 31ಕ್ಕೆ ಮುಂದೂಡಿದೆ.

ಸುಪ್ರೀಂ ಕೋರ್ಟ್ ನೀಡಿದ್ದ ಗಡುವಿಗೆ ವಿರುದ್ಧವಾಗಿ ಆಟೋಮೊಬೈಲ್ ಕಂಪನಿಗಳು ಬಿಎಸ್ 4 ವಾಹನಗಳನ್ನು ಮಾರಾಟ ಮಾಡಿವೆ. ಈ ವಿಷಯದ ಬಗ್ಗೆ ಸುಪ್ರೀಂ ಕೋರ್ಟ್ ಈ ಹಿಂದೆಯೇ ತನ್ನ ಅಸಮಾಧಾನವನ್ನು ವ್ಯಕ್ತಪಡಿಸಿತ್ತು. ಜುಲೈ 31ರಂದು ಬಿಎಸ್ 4 ವಾಹನಗಳ ನೋಂದಣಿಗೆ ಸಂಬಂಧಿಸಿದ ಪ್ರಕರಣಗಳನ್ನು ನ್ಯಾಯಾಲಯದಲ್ಲಿ ಮಂಡಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಿದೆ.

ಇದರ ಜೊತೆಗೆ 2020ರ ಮಾರ್ಚ್ 31ರ ನಂತರ ಮಾರಾಟ ಮಾಡಲಾದ ಬಿಎಸ್ 4 ವಾಹನಗಳ ನೋಂದಣಿ ಮಾಹಿತಿಯನ್ನು ಒದಗಿಸುವಂತೆ ಸುಪ್ರೀಂ ಕೋರ್ಟ್ ಫೆಡರೇಶನ್ ಆಫ್ ಆಟೋಮೊಬೈಲ್ ಡೀಲರ್ಸ್ ಅಸೋಸಿಯೇಶನ್ (ಎಫ್‌ಎಡಿಎ-ಫಾಡಾ) ಗೆ ಆದೇಶ ನೀಡಿದೆ.
MOST READ:ಒಂದು ಸಾವಿರ ರೂಪಾಯಿ ಪಾವತಿಸಿ ಈ ಸ್ಕೂಟರ್ ಬುಕ್ ಮಾಡಿ

ಲಾಕ್‌ಡೌನ್ ಕಾರಣದಿಂದಾಗಿ ಸುಪ್ರೀಂ ಕೋರ್ಟ್ ಬಿಎಸ್ 4 ವಾಹನಗಳ ಮಾರಾಟಕ್ಕೆ ನಿಗಡಿಯಾಗಿದ್ದ ಮಾರ್ಚ್ 31ರ ಗಡುವನ್ನು ವಿಸ್ತರಿಸಿತ್ತು. ಇದರಂತೆ ಲಾಕ್‌ಡೌನ್ ಮುಗಿದ 10 ದಿನಗಳಲ್ಲಿ 10%ನಷ್ಟು ಬಿಎಸ್ 4 ವಾಹನಗಳನ್ನು ಮಾರಾಟ ಮಾಡಲು ಅನುಮತಿ ನೀಡಲಾಗಿತ್ತು.

ಆದರೆ ಈ ಅವಧಿಯಲ್ಲಿ ಆಟೋಮೊಬೈಲ್ ಕಂಪನಿಗಳು 10%ಗಿಂತ ಹೆಚ್ಚು ಬಿಎಸ್ 4 ವಾಹನಗಳನ್ನು ಮಾರಾಟ ಮಾಡಿವೆ. ಈ ಕಾರಣಕ್ಕೆ ಸುಪ್ರೀಂ ಕೋರ್ಟ್ ಫಾಡಾವನ್ನು ಖಂಡಿಸಿತ್ತು.
MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್

ಸುಪ್ರೀಂ ಕೋರ್ಟ್ 1.05 ಲಕ್ಷ ಬಿಎಸ್ 4 ವಾಹನಗಳನ್ನು ಮಾರಾಟ ಮಾಡಲು ಅನುಮತಿ ನೀಡಿತ್ತು. ಆದರೆ ಆಟೋಮೊಬೈಲ್ ಕಂಪನಿಗಳು 2.5 ಲಕ್ಷಕ್ಕೂ ಹೆಚ್ಚು ವಾಹನಗಳನ್ನು ಮಾರಾಟ ಮಾಡಿವೆ.

ಬಿಎಸ್ 4 ವಾಹನಗಳನ್ನು ರಾಜಧಾನಿ ದೆಹಲಿ ಎನ್‌ಸಿಆರ್‌ನಲ್ಲಿ ಮಾರಾಟ ಮಾಡುವಂತಿಲ್ಲವೆಂದು ಆದೇಶದಲ್ಲಿ ಹೇಳಲಾಗಿತ್ತು. ಆದರೆ ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ದೆಹಲಿಯಲ್ಲಿಯೂ ಬಿಎಸ್ 4 ವಾಹನಗಳನ್ನು ಮಾರಾಟ ಮಾಡಲಾಗಿದೆ ಎಂದು ಸುಪ್ರೀಂ ಕೋರ್ಟ್ ಫಾಡಾಗೆ ಛೀಮಾರಿ ಹಾಕಿತ್ತು.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ

2020ರ ಮಾರ್ಚ್‌ನಲ್ಲಿ ಲಾಕ್‌ಡೌನ್ ಘೋಷಿಸಿದ ನಂತರ, ಫಾಡಾ ಹಾಗೂ ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ (ಸಿಯಾಮ್) ಬಿಎಸ್ 6 ಗಡುವನ್ನು ವಿಸ್ತರಿಸುವಂತೆ ಕೋರಿ ಸುಪ್ರೀಂ ಕೋರ್ಟ್ ನಲ್ಲಿ ಮೇಲ್ಮನವಿ ಅರ್ಜಿ ಸಲ್ಲಿಸಿದ್ದವು.

ಕಂಪನಿಗಳ ಮನವಿಯನ್ನು ಆಲಿಸಿದ್ದ ಸುಪ್ರೀಂ ಕೋರ್ಟ್, ಲಾಕ್‌ಡೌನ್ ಮುಗಿದ ನಂತರದ 10 ದಿನಗಳವರೆಗೆ ಬಿಎಸ್ 4 ವಾಹನಗಳ 10%ನಷ್ಟು ಮಾರಾಟ ಮಾಡಲು ಅನುಮತಿ ನೀಡಿತ್ತು. ದೆಹಲಿ ಎನ್‌ಸಿಆರ್‌ನಲ್ಲಿ ಬಿಎಸ್ 4 ವಾಹನಗಳನ್ನು ಮಾರಾಟ ಮಾಡುವಂತಿಲ್ಲವೆಂಬ ಷರತ್ತನ್ನು ಸಹ ವಿಧಿಸಿತ್ತು.


Click it and Unblock the Notifications