ಭಾರತದಲ್ಲಿ ಬಹುಬೇಡಿಕೆಯ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿ ಉತ್ಪಾದನೆ ಆರಂಭ

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರಸ್ತುತ ಪೀಳಿಗೆಯ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿಯು 2018 ರಿಂದ ಮಾರಾಟವಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯೊಂದಿಗೆ ಈ ಐಕಾನಿಕ್ ಆಫ್-ರೋಡರ್ ಸುಜುಕಿ ಜಿಮ್ನಿ ದಾಖಲೆಯ ಮಟ್ಟದಲ್ಲಿ ಮಾರಾಟವಾಗುತ್ತಿದೆ.

ಭಾರತದಲ್ಲಿ ಬಹುಬೇಡಿಕೆಯ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿ ಉತ್ಪಾದನೆ ಆರಂಭ

ಸುಜುಕಿ ಜಿಮ್ನಿ ಮಿನಿ ಎಸ್‍ಯುವಿಯು ಭಾರತದಲ್ಲಿಯು ಬಿಡುಗಡೆಯಾಗಲಿದೆ ಎಂದು ವರದಿಗಳಾಗಿದೆ. ಆದರೆ ಸುಜುಕಿ ಕಂಪನಿಯು ಭಾರತದಲ್ಲಿ ಬಿಡುಗಡೆಗೊಳಿಸುವುದರ ಬಗ್ಗೆ ಖಚಿತಪಡಿಸಲಿಲ್ಲ. ಈ ಐಕಾನಿಕ್ ಆಫ್-ರೋಡರ್ ಜಿಮ್ನಿ ಎಸ್‍ಯುವಿಯ ಉತ್ಪಾನೆಯು ಭಾರತದಲ್ಲಿ ಪ್ರಾರಂಭವಾಗಿದೆ ಎಂದು ವರದಿಗಳಾಗಿದೆ. ಭಾರತದಲ್ಲಿ ಜಿಮ್ನಿ ಎಸ್‍ಯುವಿಯನ್ನು ಉತ್ಪಾದಿಸಿ ವಿದೇಶಗಳಿಗೆ ರಫ್ತು ಮಾಡುತ್ತಾರೆ.

ಭಾರತದಲ್ಲಿ ಬಹುಬೇಡಿಕೆಯ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿ ಉತ್ಪಾದನೆ ಆರಂಭ

ಈ ಸುಜುಕಿ ಜಿಮ್ನಿ ಎಸ್‍ಯುವಿಯು ಯುರೋಪಿಯನ್ ದೇಶಗಳಲ್ಲಿ ಬಹುಬೇಡಿಕೆಯನ್ನು ಪಡೆದುಕೊಂಡಿದೆ, ಅಲ್ಲದೇ ಸುಜುಕಿ ಜಿಮ್ನಿ ತವರು ಜಪಾನ್ ನಲ್ಲಿಯು ಬೇಡಿಕೆ ಹೆಚ್ಚಾಗಿದೆ. ಸುಜುಕಿ ಕಂಪನಿಯ ಜಪಾನ್ ನಲ್ಲಿರುವ ಕೊಸೈನ ಘಟಕದಲ್ಲಿ ಉತ್ಪಾದನೆಯನ್ನು ಗರಿಷ್ಠ ಪ್ರಮಾಣಕ್ಕೆ ಏರಿಸಿದೆ.

MOST READ: ನವೆಂಬರ್ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-10 ಕಾರುಗಳಿವು

ಭಾರತದಲ್ಲಿ ಬಹುಬೇಡಿಕೆಯ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿ ಉತ್ಪಾದನೆ ಆರಂಭ

ಆದರೂ ಬೇಡಿಕೆಗೆ ಅನುಗುಣವಾಗಿ ಪೂರೈಸಲು ಸಾಧ್ಯವಾಗುತ್ತಿಲ್ಲ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಐಕಾನಿಕ್ ಆಪ್-ರೋಡರ್ ಜಿಮ್ನಿ ಬೇಡಿಕೆಯು ಅಷ್ಟರ ಪ್ರಮಾಣಕ್ಕೆ ಇದೆ. ಇದರಿಂದ ಭಾರತದಲ್ಲಿ ಮಾರುತಿ ಸುಜುಕಿಯ ಗುರುಗಾಂವ್‌ನಲ್ಲಿರುವ ಘಟಕದಲ್ಲಿ ಉತ್ಪಾದನೆಯನ್ನು ಪ್ರಾರಂಭಿಸಿದ್ದಾರೆ.

ಭಾರತದಲ್ಲಿ ಬಹುಬೇಡಿಕೆಯ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿ ಉತ್ಪಾದನೆ ಆರಂಭ

ಇನ್ನು ಜಿಮ್ನಿಯನ್ನು ಇತ್ತೀಚೆಗೆ ಮೆಕ್ಸಿಕೊದಲ್ಲಿ ಸುಜುಕಿ ಕಂಪನಿಯು ಬಿಡುಗಡೆಗೊಳಿಸಿತ್ತು. ಇದು ಕೇವಲ 72 ಗಂಟೆಗಳ ಅವಧಿಯಲ್ಲಿ ಸೋಲ್ಡ್ ಔಟ್ ಆಯ್ತು. ಆರಂಭದಲ್ಲಿ ಜಿಮ್ನಿಯ 1,000 ಯೂನಿಟ್‌ಗಳನ್ನು ಮಾತ್ರ ಮೆಕ್ಸಿಕೊಕ್ಕೆ ಆಮದು ಮಾಡಿಕೊಳ್ಳಲು ಸುಜುಕಿ ಯೋಜಿಸಿದ್ದರು ಮತ್ತು ವಿತರಣೆಗಳನ್ನು 2021ರ ಮೊದಲ ತಿಂಗಳಿಗೆ ನಿಗದಿಪಡಿಸಲಾಗಿದೆ.

MOST READ: ಅನಾವರಣವಾಯ್ತು ಟೊಯೊಟಾ ಕೊರೊಲ್ಲಾ ಟೂರಿಂಗ್ ರಿಬ್ಯಾಡ್ಜ್ ಆವೃತ್ತಿ ಸುಜುಕಿ ಸ್ವೇಸ್

ಭಾರತದಲ್ಲಿ ಬಹುಬೇಡಿಕೆಯ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿ ಉತ್ಪಾದನೆ ಆರಂಭ

ಇದೀಗ ಮೊದಲ ಹಂತದಲ್ಲಿ ಬಿಡುಗಡೆಗೊಳಿಸಿದ ಎಲ್ಲಾ ಯುನಿಟ್ ಗಳು ಸೋಲ್ಡ್ ಔಟ್ ಆಗಿದೆ. ಇದರಿಂದ ಗ್ರಾಹಕರ ಆಸಕ್ತಿಯ ಆಧಾರದ ಮೇಲೆ, ಟೋಕನ್ ಮೊತ್ತವನ್ನು ಪಡೆದ ನಂತರ ಹೆಚ್ಚಿನ ಯುನಿಟ್ ಗಳನ್ನು ಮೆಕ್ಸಿಕೊಗೆ ಆಮದು ಮಾಡಿಕೊಳ್ಳಲಿದೆ.

ಭಾರತದಲ್ಲಿ ಬಹುಬೇಡಿಕೆಯ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿ ಉತ್ಪಾದನೆ ಆರಂಭ

ಈ ಮಿನಿ ಎಸ್‍ಯುವಿಯನ್ನು 2018ರಲ್ಲಿ ಜಾಗತಿಕವಾಗಿ ಅನಾವರಣಗೊಂಡಿತು. ಜಿಮ್ನಿ ಮಿನಿ ಎಸ್‍ಯುವಿಯು ಜಾಗತಿಕವಾಗಿ ಅನಾವರಣಗೊಂಡು 1.5 ವರ್ಷಗಳ ಬಳಿಕ ಭಾರತದ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಮಿನಿ-ಎಸ್‌ಯುವಿ 2019 ರ 'ವರ್ಲ್ಡ್ ಅರ್ಬನ್ ಕಾರ್ ಅಫ್ ದಿ ಇಯರ್' ಎಂಬ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಭಾರತದಲ್ಲಿ ಬಹುಬೇಡಿಕೆಯ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿ ಉತ್ಪಾದನೆ ಆರಂಭ

ಈ ಜಿಮ್ನಿ ಎಸ್‍‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸುವ ಬಗ್ಗೆ ಕಂಪನಿ ನಿರ್ಧರಿಸಿಲ್ಲ. ಆದರೆ ಆಟೋ ಎಕ್ಸ್ ಪೋದಲ್ಲಿ ಗ್ರಾಹಕರಿಂದ ಉತ್ತಮ ಪ್ರತಿಕ್ರಿಯೆನ್ನು ಲಭಿಸಿರುವುದರಿಂದ ಭಾರತದಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಹೊಸ ಜಿಮ್ನಿ ಲ್ಯಾಡರ್-ಫ್ರೇಮ್ ಚಾಸಿಸ್ ಅನ್ನು ಆಧರಿಸಿದೆ.

ಭಾರತದಲ್ಲಿ ಬಹುಬೇಡಿಕೆಯ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿ ಉತ್ಪಾದನೆ ಆರಂಭ

ಈ ಮಿನಿ ಎಸ್‍ಯುವಿಯಲ್ಲಿ 3 ಲಿಂಕ್ ಆಕ್ಸಲ್ ಸಸ್ಪೆಂಷನ್ ಅನ್ನು ಹೊಂದಿದೆ. ಇದು ಕಠಿಣ ಭೂಪ್ರದೇಶಗಳಲ್ಲಿ ಸುಗಮವಾಗಿ ಸಾಗಲು ನೆರವಾಗುತ್ತದೆ. ಈ ಮಿನಿ ಎಸ್‍ಯುವಿಯಲ್ಲಿ 1.5 ಲೀಟರ್ ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಭಾರತದಲ್ಲಿ ಬಹುಬೇಡಿಕೆಯ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿ ಉತ್ಪಾದನೆ ಆರಂಭ

ಈ ಎಂಜಿನ್‍ನೊಂದಿಗೆ 5 ಸ್ಪೀಡ್ ಅಥವಾ 4 ಸ್ಪೀಡ್ ಗೇರ್‍‍ಬಾಕ್ಸ್ ಅನ್ನು ಅಳವಡಿಸಲಾಗಿದೆ. ಈ ಮಿನಿ ಎಸ್‍‍ಯುವಿಯನ್ನು ಡೀಸೆಲ್ ಅಥವಾ ಹೈಬ್ರಿಡ್ ಆಯ್ಕೆಗಳಲ್ಲಿ ಬಿಡುಗಡೆಗೊಳಿಸುವುದಿಲ್ಲ. ಭಾರತದಲ್ಲಿ ಬಿಡುಗಡೆಯಾದರೆ ಈ ಜಿಮ್ನಿ ಎಸ್‍‍ಯುವಿ 33 ವರ್ಷಗಳ ಕಾಲ ದೇಶದಲ್ಲಿ ಮಾರಾಟವಾಗಿದ್ದ ಜನಪ್ರಿಯ ಜಿಪ್ಸಿ ಎಸ್‍‍ಯುವಿಯ ಉತ್ತರಾಧಿಕಾರಿಯಾಗಲಿದೆ.

ಭಾರತದಲ್ಲಿ ಬಹುಬೇಡಿಕೆಯ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿ ಉತ್ಪಾದನೆ ಆರಂಭ

ಸುಜುಕಿ ಕಂಪನಿಯು 3-ಡೋರಿನ ಜಿಮ್ನಿ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಬಹುದು ಎಂದು ನಿರೀಕ್ಷಿಸುತ್ತೇವೆ. ಈ ಜನಪ್ರಿಯ ಸುಜುಕಿ ಜಿಮ್ನಿ ಭಾರತದಲ್ಲಿ ಬಿಡುಗಡೆಯಾದ ಬಳಿಕ ಭರ್ಜರಿಯಾಗಿ ಮಾರಾಟವಾಗುತ್ತಿರುವ ಹೊಸ ಮಹೀಂದ್ರಾ ಥಾರ್ ಎಸ್‍ಯುವಿಗೆ ನೇರವಾಗಿ ಪೈಪೋಟಿ ನೀಡುತ್ತದೆ.

ಭಾರತದಲ್ಲಿ ಬಹುಬೇಡಿಕೆಯ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿ ಉತ್ಪಾದನೆ ಆರಂಭ

ಮಹೀಂದ್ರಾ ಥಾರ್ ಬೇಡಿಕೆಯು ಹೆಚ್ಚಾಗಿ ಇದರ ವೈಟಿಂಗ್ ಪಿರೇಡ್ ಹೆಚ್ಚಿಸಿದೆ. ಅಷ್ಟರ ಮಟ್ಟಿಇಗೆ ಮಹೀಂದ್ರಾ ಥಾರ್ ಭಾರತದಲ್ಲಿ ಬೇಡಿಕೆಯನ್ನು ಪಡೆದುಕೊಂಡಿದೆ. ಆದರೆ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿ ಒಂದು ವೇಳ್ ಭಾರತದಲ್ಲಿ ಬಿಡುಗಡೆಯಾದರೆ ಮಹೀಂದ್ರಾ ಥಾರ್ ಎಸ್‍ಯುವಿಗೆ ಪ್ರಬಲ ಎದುರಾಳಿಯಾಗಲಿದೆ.

Article Published On: Saturday, December 19, 2020, 12:23 [IST]
English summary
Suzuki Jimny Production Begins In India For Export Markets. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+