ಭರ್ಜರಿಯಾಗಿ ಮಾರಾಟವಾಯ್ತು ಸುಜುಕಿ ಜಿಮ್ನಿ ಎಸ್‍ಯುವಿ
ಹೊಸ ತಲೆಮಾರಿನ ಸುಜುಕಿ ಜಿಮ್ನಿ ಎಸ್‍ಯುವಿಯು ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಉತ್ತಮವಾಗಿ ಮಾರಾಟವಾಗುತ್ತಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಈ ಸುಜುಕಿ ಜಿಮ್ನಿ ಎಸ್‍ಯುವಿಯ ಬೇಡಿಕೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.

ಇನ್ನು ಈ ಹೊಸ ಸುಜುಕಿ ಜಿಮ್ನಿ ಮಿನಿ ಎಸ್‍ಯುವಿಯನ್ನು 2019ರಲ್ಲಿ ಆಸ್ಟ್ರೇಲಿಯಾ ಮಾರುಕಟ್ಟೆ ಬಿಡುಗಡೆಗೊಳಿಸಿದ್ದರು. ಈ ಮಿನಿ ಎಸ್‍ಯುವಿಯು ಆಸ್ಟ್ರೇಲಿಯಾ ಮಾರುಕಟ್ಟೆ ಭರ್ಜರಿಯಾಗಿ ಮಾರಾಟವಾಗಿದೆ. ಆಸ್ಟ್ರೇಲಿಯಾ ಮಾರುಕಟ್ಟೆಯಲ್ಲಿ 2020ರ ವರೆಗಿನ ಸುಜುಕಿ ಜಿಮ್ನಿ ಎಸ್‍ಯುವಿಯ ಎಲ್ಲಾ ಯುನಿಟ್ ಗಳು ಮಾರಾಟವಾಗಿದೆ. ಇದೀಗ ಆಸ್ಟ್ರೇಲಿಯಾದಲ್ಲಿ ಸುಜುಕಿ ಜಿಮ್ನಿ ಎಸ್‍ಯುವಿಯ ಕಾಯುವಿಕೆಯ ಅವಧಿಯನ್ನು ಸುಮಾರು 6 ರಿಂದ 12 ತಿಂಗಳವರೆಗೆ ವಿಸ್ತರಿಸಿದೆ.

ಈ ವರ್ಷದ ಮೇ ತಿಂಗಳಲ್ಲಿ ಜಪಾನ್‌ನಲ್ಲಿ ಈ ಜಿಮ್ನಿ ಎಸ್‍ಯುವಿಯ ಕಾಯುವಿಕೆಯ ಅವಧಿಯನ್ನು 1.5 ವರ್ಷಗಳವರೆಗೆ ವಿಸ್ತರಿಸಿದೆ. ಜಿಮ್ನಿ ತಾಯಿನಾಡು ಜಪಾನ್‌ನಲ್ಲಿ ಸಿಯೆರಾ ಮತ್ತು ಸ್ಟ್ಯಾಂಡರ್ಡ್ ಎಂಬ ಎರಡು ರೂಪಾಂತರಗಳಲ್ಲಿ ಹೊಸ ಜಿಮ್ನಿ ಲಭ್ಯವಿದೆ. ಜಪಾನ್ ನಲ್ಲಿ ಜಿಮ್ನಿ ಎಸ್‍ಯುವಿಯ ಬೇಡಿಕೆಯು ಹೆಚ್ಚಾಗಿದೆ. ಕರೋನಾ ವೈರಸ್ ಪಾರಿಣಾಮದಿಂದ ಸುಜುಕಿ ಜಿಮ್ನಿ ಕಾಯುವಿಕೆಯ ಅವಧಿಯನ್ನು ಹೆಚ್ಚಿಸಿದೆ.
MOST READ: ಭರ್ಜರಿಯಾಗಿ ಮಾರಾಟವಾಯ್ತು ಫೋಕ್ಸ್‌ವ್ಯಾಗನ್ ಟಿ-ರಾಕ್ ಎಸ್ಯುವಿ

ಇದರಿಂದ ಭಾರತದಲ್ಲಿರುವ ಜಿಮ್ನಿ ಅಭಿಮಾನಿಗಳಿಗೂ ನಿರಾಸೆ ಮೂಡಿಸಿದೆ. ಭಾರತದಲ್ಲಿ ಶೀಘ್ರದಲ್ಲೇ ಈ ಜಿಮ್ನಿ ಎಸ್‍ಯುವಿಯನ್ನು ಬಿಡುಗಡೆಗೊಳಿಸಲಿದೆ. ಭಾರತದಲ್ಲಿ ವಿತರಣೆಯನ್ನು ಮಾಡಲು ಎಷ್ಟು ಸಮಯವಕಾಶವನ್ನು ತೆಗೆದುಕೊಳ್ಳುತ್ತಾರೆ ಎಂಬುದು ಮಾಹಿತಿ ಇಲ್ಲ.

ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಸ್‍ಯುವಿಗಳಲ್ಲಿ ಮಾರುತಿ ಸುಜುಕಿ ಜಿಮ್ನಿ ಒಂದಾಗಿದೆ. ಅಂತರರಾಷ್ಟೀಯ ಮಾರುಕಟ್ಟೆಯಲ್ಲಿ ಮೆಚ್ಚುಗೆಯನ್ನು ಪಡೆದುಕೊಂಡ ಮಾರುತಿ ಸುಜುಕಿ ಸಂಸ್ಥೆಯ ಜಿಮ್ನಿ ಮಿನಿ-ಎಸ್‌ಯುವಿಯನ್ನು ಶೀಘ್ರದಲ್ಲೇ ಭಾರತೀಯ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ.
MOST READ: ಮರ್ಸಿಡಿಸ್ ಬೆಂಝ್ ಜಿಎಲ್ಇ ಎಸ್‍ಯುವಿಯ ಎರಡು ಹೊಸ ರೂಪಾಂತರಗಳು ಬಿಡುಗಡೆ

ಇನ್ನು 3-ಡೋರಿನ ಜಿಮ್ನಿ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸುವುದಿಲ್ಲವೆಂದು ಕಂಪನಿಯು ಸ್ಪಷ್ಟ ಪಡಿಸಿದೆ. ಅದನ್ನು ಸಿಬಿಯು ಮೂಲಕ ಭಾರತಕ್ಕೆ ತರುವುದಿಲ್ಲ ಯಾವುದೇ ಅರ್ಥವಿಲ್ಲ.

ನಾವು ಸ್ಥಳೀಯವಾಗಿ ತಯಾರಿಸುವುದಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡುತ್ತೇವೆ ಎಂದು ಮಾರುತಿ ಸುಜುಕಿ ಕಂಪನಿಯು ಹೇಳಿದೆ. ಭಾರತದಲ್ಲಿ ಸ್ಥಳೀಯವಾಗಿ ಜಿಮ್ನಿ ಎಸ್‍ಯುವಿಯನ್ನು ತಯಾರಿಸಲಾಗುತ್ತದೆ ಎಂದು ಕಂಪನಿಯು ಸುಳಿವು ನೀಡಿದೆ.
MOST READ: ಕರೋನಾ ಭೀತಿಯಿಂದ ಪಾತಾಳಕ್ಕೆ ಕುಸಿತ ಮಾರುತಿ ಸುಜುಕಿ ಕಾರುಗಳ ಮಾರಾಟ

ಈ ಮಿನಿ ಎಸ್‍ಯುವಿಯನ್ನು 2018ರಲ್ಲಿ ಜಾಗತಿಕವಾಗಿ ಅನಾವರಣಗೊಂಡಿತು. ಜಿಮ್ನಿ ಮಿನಿ ಎಸ್‍ಯುವಿಯು ಜಾಗತಿಕವಾಗಿ ಅನಾವರಣಗೊಂಡು 1.5 ವರ್ಷಗಳ ಬಳಿಕ ಭಾರತದ ಮಾರುಕಟ್ಟೆಯಲ್ಲಿ ಅನಾವರಣಗೊಳಿಸಿದೆ. ಮಿನಿ-ಎಸ್‌ಯುವಿ 2019 ರ 'ವರ್ಲ್ಡ್ ಅರ್ಬನ್ ಕಾರ್ ಅಫ್ ದಿ ಇಯರ್' ಎಂಬ ಪ್ರತಿಷ್ಠಿತ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.

ಕೆಲವು ವರದಿಗಳ ಪ್ರಕಾರ ಮಾರುತಿ ಸುಜುಕಿ ಸಂಸ್ಥೆಯು 5-ಡೋರಿನ ಜಿಮ್ನಿ ಎಸ್‍ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲಿದೆ. ಭಾರತದ ಆಫ್-ರೋಡ್ ಪ್ರಿಯರು ಬಹುಕಾತರದಿಂದ ಸುಜುಕಿ ಜಿಮ್ನಿ ಎಸ್‍ಯುವಿಯನ್ನು ಕಾಯುತ್ತಿದ್ದಾರೆ.


Click it and Unblock the Notifications