ಹೊಸ ಫೀಚರ್‍‍ಗಳನ್ನು ಹೊಂದಲಿದೆ 2020ರ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಕಾರು

ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಕಾರು ತನ್ನ ಆಕರ್ಷಕ ಲುಕ್ ಮತ್ತು ಪವರ್‌ಫುಲ್ ಟರ್ಬೊ-ಪೆಟ್ರೋಲ್ ಎಂಜಿನ್ ನಿಂದ ಗ್ರಾಹಕರ ಗಮನಸೆಳೆದಿದೆ. ಇದೀಗ ಈ ಸ್ವಿಫ್ಟ್ ಸ್ಪೋರ್ಟ್ ಕಾರನ್ನು ನವೀಕರಿಸಿ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲಿದೆ.

ಹೊಸ ಫೀಚರ್‍‍ಗಳನ್ನು ಹೊಂದಲಿದೆ 2020ರ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಕಾರು

ಇತ್ತಿಚೆಗೆ ಈ ಹೊಸ ಸ್ವಿಫ್ಟ್ ಸ್ಪೋರ್ಟ್ ಕಾರನ್ನು ನ್ಯೂಜಿಲೆಂಡ್ ನಲ್ಲಿ ಅನಾವರಣಗೊಳಿಸಿದ್ದರು.ಈ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಅತ್ಯಂತ ಆಕರ್ಷಕ ಲುಕ್ ಅನ್ನು ಹೊಂದಿದೆ. ಈ ಹೊಸ ಸ್ವಿಫ್ಟ್ ಸ್ಪೋರ್ಟ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಲಭ್ಯವಿರುವ ಸ್ಟ್ಯಾಂಡರ್ಡ್ ಸ್ವಿಫ್ಟ್ ನಂತೆಯೇ ಅದೇ ಹಾರ್ಟೆಕ್ಟ್ ಪ್ಲಾಟ್‌ಫಾರ್ಮ್ ಅನ್ನು ಹೊಂದಿದೆ. ಈ ಹೊಸ ಸ್ವಿಫ್ಟ್ ಸ್ಪೋರ್ಟ್ ಕಾರಿನಲ್ಲಿ ಹೊಸ ಫೀಚರ್ ಗಳನ್ನು ಅಳವಡಿಸಲಾಗಿದೆ.

ಹೊಸ ಫೀಚರ್‍‍ಗಳನ್ನು ಹೊಂದಲಿದೆ 2020ರ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಕಾರು

ಈ ಕಾರಿನಲ್ಲಿ ಹೊಸ ಫೀಚರ್ ಗಳಾದ ಬ್ಲೈಂಡ್-ಸ್ಪಾಟ್ ಮಾನಿಟರಿಂಗ್, ರಿಯರ್ ಕ್ರಾಸ್-ಟ್ರಾಫಿಕ್ ಅಲರ್ಟ್ ಮತ್ತು ರಿಯರ್ ಪಾರ್ಕಿಂಗ್ ಸೆನ್ಸರ್‌ಗಳನ್ನು ಸ್ಟ್ಯಾಂಡರ್ಡ್ ಆಗಿ ಅಳವಡಿಸಲಾಗಿದೆ. ಹೊಸ ಸ್ವಿಫ್ಟ್ ಸ್ಪೋರ್ಟ್ ಸುಜುಕಿಯ 1.4-ಲೀಟರ್ ಬೂಸ್ಟರ್ ಜೆಟ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಅಳವಡಿಸಲಾಗಿದೆ.

MOST READ: ಹೊಸ ಹ್ಯುಂಡೈ ವೆನ್ಯೂ ಪೆಟ್ರೋಲ್ ಆವೃತ್ತಿಯ ಮೈಲೇಜ್ ಮಾಹಿತಿ ಬಹಿರಂಗ

ಹೊಸ ಫೀಚರ್‍‍ಗಳನ್ನು ಹೊಂದಲಿದೆ 2020ರ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಕಾರು

ಈ ಎಂಜಿನ್ 5,500 ಆರ್‌ಪಿಎಂನಲ್ಲಿ 138 ಬಿಹೆಚ್‌ಪಿ ಪವರ್ ಮತ್ತು 2,500 - 3,500 ಆರ್‌ಪಿಎಂ ನಡುವೆ 230 ಎನ್ಎಂ ಪೀಕ್ ಟಾರ್ಕ್ ಅನ್ನು ಉತ್ಪಾದಿಸುತ್ತದೆ, ಈ ಎಂಜಿನ್ ನೊಂದಿಗೆ ಆರು-ಸ್ಪೀಡ್ ಮ್ಯಾನುವಲ್ ಗೇರ್ ಬಾಕ್ಸ್ ಅನ್ನು ಅಳವಡಿಸಲಾಗಿದೆ.

ಹೊಸ ಫೀಚರ್‍‍ಗಳನ್ನು ಹೊಂದಲಿದೆ 2020ರ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಕಾರು

ಹೊಸ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಕಾರು ಕೇವಲ 8 ಸೆಕೆಂಡುಗಳಲ್ಲಿ 0-100 ಕಿಮೀ ಕ್ರಮಿಸುತ್ತದೆ. ಈ ಕಾರು ಹೆಚ್ಚಿನ ಕಾರ್ಯಕ್ಷಮತೆಯನ್ನು ಹೊಂದಿದೆ. ಹೊಸ ಸುಜುಕಿ ಸ್ವಿಫ್ಟ್ 210 ಕಿ.ಮೀ ಟಾಪ್ ಸ್ಪೀಡ್ ಅನ್ನು ಹೊಂದಿದೆ.

MOST READ: ಲಾಕ್‌ಡೌನ್‌ ನಡುವೆ ಸ್ಪಾಟ್ ಟೆಸ್ಟ್‌ನಲ್ಲಿ ಕಾಣಿಸಿಕೊಂಡ 2020ರ ಮಹೀಂದ್ರಾ ಥಾರ್

ಹೊಸ ಫೀಚರ್‍‍ಗಳನ್ನು ಹೊಂದಲಿದೆ 2020ರ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಕಾರು

ಒಂದು ವೇಳೆ ಭಾರತದಲ್ಲಿ ಬಿಡುಗಡೆಗೊಳಿದರೆ ಸೀಮಿತ ಸಂಖ್ಯೆಯಲ್ಲಿ ಸ್ವಿಫ್ಟ್ ಸ್ಪೋರ್ಟ್ ಕಾರನ್ನು ಬಿಡುಗಡೆಗೊಳಿಸಬಹುದು. ಭಾರತೀಯ ಮಾರುಕಟ್ಟೆಯಲ್ಲಿ ಸ್ವಿಫ್ಟ್ ಸ್ಪೋರ್ಟ್ ಕಾರು ಹೆಚ್ಚಾಗಿ ಸಿಬಿಯು ಮಾರ್ಗದ ಮೂಲಕ ಆಮದು ಮಾಡಕೊಳ್ಳಬಹುದು. ಭಾರತೀಯ ಮಾರುಕಟ್ಟೆಯಲ್ಲಿ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಕಾರು ಬಿಡುಗಡೆಯಾದರೆ ಫೋಕ್ಸ್ ವ್ಯಾಗನ್ ಪೊಲೊ ಜಿಟಿಐ ಕಾರಿಗೆ ಪೈಪೋಟಿಯನ್ನು ನೀಡುತ್ತದೆ.

ಹೊಸ ಫೀಚರ್‍‍ಗಳನ್ನು ಹೊಂದಲಿದೆ 2020ರ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಕಾರು

ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಯಾಗಲಿರುವ ಬಹುನೀರಿಕ್ಷಿತ ಎಸ್‍‍ಯುವಿಗಳಲ್ಲಿ ಮಾರುತಿ ಸುಜುಕಿ ಜಿಮ್ನಿ ಒಂದಾಗಿದೆ. ಅಂತರರಾಷ್ಟೀಯ ಮಾರುಕಟ್ಟೆಯಲ್ಲಿ ಮೆಚ್ಚುಗೆಯನ್ನು ಪಡೆದುಕೊಂಡ ಜಿಮ್ನಿ ಮಿನಿ-ಎಸ್‌ಯುವಿಯನ್ನು ಭಾರತದಲ್ಲಿ ಬಿಡುಗಡೆಗೊಳಿಸಲು ಸಜ್ಜಾಗುತ್ತಿದೆ.

MOST READ: ಬಿಡುಗಡೆಯಾಗಲಿದೆ ಹೊಸ ಸ್ಕೋಡಾ ಕರೋಕ್ ಎಸ್‍‍‍ಯುವಿ

ಹೊಸ ಫೀಚರ್‍‍ಗಳನ್ನು ಹೊಂದಲಿದೆ 2020ರ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಕಾರು

ಭಾರತೀಯ ರಸ್ತೆಗಳಿಗೆ ಅನುಗುಣವಾಗಿ ಮತ್ತು ಭಾರತೀಯ ಗ್ರಾಹಕರನ್ನು ಸೆಳೆಯುವ ರೀತಿಯಲ್ಲಿ ಈ ಜಿಮ್ನಿ ಎಸ್‍ಯುವಿಯನ್ನು ಅಭಿವೃದ್ದಿಪಡಿಸಲಾಗುತ್ತದೆ.

ಹೊಸ ಫೀಚರ್‍‍ಗಳನ್ನು ಹೊಂದಲಿದೆ 2020ರ ಸುಜುಕಿ ಸ್ವಿಫ್ಟ್ ಸ್ಪೋರ್ಟ್ ಕಾರು

ಮಾರುತಿ ಸುಜುಕಿ ಕಂಪನಿಯು ಬಿಡುಗಡೆಗೊಳಿಸಿದ ಕಾರ್ಯಕ್ಷಮತೆಯ ಕಾರುಗಳು ಭಾರತದಲ್ಲಿ ಹೆಚ್ಚಿನ ಯಶಸ್ಸನ್ನು ಗಳಿಸುವಲ್ಲಿ ವಿಫಲವಾಗಿದೆ. ಮಾರುತಿ ಸುಜುಕಿಯ ಕಿಝಾಶಿ ಮತ್ತು ಬಾಲೆನೊ ಆರ್‍ಎಸ್ ನಂತಹ ಕಾರ್ಯಕ್ಷಮತೆಯ ಕಾರುಗಳು ಭಾರತದಲ್ಲಿ ವಿಫಲವಾಗಿ ಸಂಫೂರ್ಣವಾಗಿ ಸ್ಥಗಿತಗೊಂಡಿವೆ. ಇದರಿಂದ ಸ್ವಿಫ್ಟ್ ಸ್ಪೋರ್ಟ್ ಕಾರನ್ನು ಭಾರತದಲ್ಲಿ ಬಿಡುಗಡೆಗೊಳಿಸುವುದು ಅನುಮಾನವಾಗಿದೆ.

Most Read Articles

Kannada
English summary
2020 Suzuki Swift Sport With Premium Features. Read in Kannada.
Story first published: Friday, May 8, 2020, 17:56 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X