ಬಿಡುಗಡೆಗೆ ಸಜ್ಜಾಗುತ್ತಿದೆ ಟಾಟಾ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ವರ್ಷನ್

ಕಳೆದ ತಿಂಗಳು ಬಿಡುಗಡೆಗೊಂಡಿದ್ದ ಟಾಟಾ ಆಲ್‌‌ಟ್ರೊಜ್ ಕಾರು ಸದ್ಯ ದಾಖಲೆ ಪ್ರಮಾಣದಲ್ಲಿ ಮಾರಾಟಗೊಳ್ಳುತ್ತಿದ್ದು, ಹೊಸ ಕಾರಿನಲ್ಲಿ ಶೀಘ್ರದಲ್ಲೇ ಟರ್ಬೋ ಪೆಟ್ರೋಲ್ ಆವೃತ್ತಿ ಕೂಡಾ ಬಿಡುಗಡೆಯಾಗುವ ಸುಳಿವು ಸಿಕ್ಕಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಟಾಟಾ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ವರ್ಷನ್

ಸದ್ಯ ಆಲ್‌ಟ್ರೊಜ್ ಕಾರು ಸಾಮಾನ್ಯ ಮಾದರಿಯ 1.2-ಲೀಟರ್ ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಆಯ್ಕೆಯನ್ನು ಹೊಂದಿದ್ದು, ಪರ್ಫಾಮೆನ್ಸ್ ಪ್ರಿಯರಿಗಾಗಿ ಶೀಘ್ರದಲ್ಲೇ 1.2-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಆಯ್ಕೆಯನ್ನು ಪಡೆದುಕೊಳ್ಳುತ್ತಿದೆ. ಹೊಸ ಟರ್ಬೋ ಪೆಟ್ರೋಲ್ ಆವೃತ್ತಿಯಲ್ಲಿ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ನೀಡಲಿದ್ದು, ಇದು ಸಾಮಾನ್ಯ ಪೆಟ್ರೋಲ್ ಮಾದರಿಗಿಂತಲೂ ತುಸು ದುಬಾರಿಯಾಗಿರಲಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಟಾಟಾ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ವರ್ಷನ್

ಇನ್ನು ಹ್ಯಾಚ್‌ಬ್ಯಾಕ್ ಕಾರುಗಳಲ್ಲೇ ವಿಶೇಷ ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿರುವ ಟಾಟಾ ಆಲ್‌ಟ್ರೊಜ್ ಕಾರು ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಗಳನ್ನು ಪಡೆದುಕೊಂಡಿರುವುದು ಗ್ರಾಹಕರ ಆಕರ್ಷಣೆಗೆ ಪ್ರಮುಖ ಕಾರಣವಾಗಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಟಾಟಾ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ವರ್ಷನ್

ಗ್ರಾಹಕರ ಬೇಡಿಕೆಯೆಂತೆ ಎಕ್ಸ್‌ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಜೆಡ್ ಮತ್ತು ಎಕ್ಸ್‌ಜೆಡ್ ಆಪ್ಷನ್ ವೆರಿಯೆಂಟ್‌ಗಳಲ್ಲಿ ಖರೀದಿಗೆ ಲಭ್ಯವಿರುವ ಆಲ್‌ಟ್ರೊಜ್ ಕಾರು ಆಕರ್ಷಕ ಬೆಲೆಗಳನ್ನು ಹೊಂದಿದ್ದು, 5 ಡೀಸೆಲ್ ಮಾದರಿಗಳನ್ನು ಮತ್ತು 5 ಪೆಟ್ರೋಲ್ ಮಾದರಿಗಳ ಆಯ್ಕೆಯನ್ನು ಹೊಂದಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಟಾಟಾ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ವರ್ಷನ್

ಆಲ್‌ಟ್ರೊಜ್ ಪೆಟ್ರೋಲ್ ವೆರಿಯೆಂಟ್ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ 5.29 ಲಕ್ಷ ಮತ್ತು ಹೈ ಎಂಡ್ ಆವೃತ್ತಿಯು ರೂ. 7.69 ಲಕ್ಷ ಬೆಲೆ ಹೊಂದಿದ್ದರೆ ಡೀಸೆಲ್ ಎಂಜಿನ್ ಮಾದರಿಯ ಬೆಲೆಯು ಆರಂಭಿಕವಾಗಿ ರೂ. 6.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.9.29 ಲಕ್ಷ ಬೆಲೆ ಪಡೆದುಕೊಂಡಿದೆ. ಹೊಸ ಕಾರಿನಲ್ಲಿ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಫೋರ್ ಸಿಲಿಂಡರ್ ರಿವೋಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಪೆಟ್ರೋಲ್ ಎಂಜಿನ್ ಅನ್ನು ಟಿಯಾಗೋದಿಂದ ಮತ್ತು ಡೀಸೆಲ್ ಎಂಜಿನ್ ಅನ್ನು ನೆಕ್ಸಾನ್ ಕಾರಿನಿಂದ ಎರವಲು ಪಡೆಯಲಾಗಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಟಾಟಾ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ವರ್ಷನ್

ಸದ್ಯಕ್ಕೆ ಹೊಸ ಕಾರಿನಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 86-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಬಿಡುಗಡೆಗೆ ಸಜ್ಜಾಗುತ್ತಿದೆ ಟಾಟಾ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ವರ್ಷನ್

ಡಿಸೈನ್ ಮತ್ತು ಸ್ಟೈಲ್

ಶಾರ್ಕ್ ನೊಸ್ ಡಿಸೈನ್ ಹೊಂದಿರುವ ಆಲ್‌ಟ್ರೊಜ್ ಕಾರು ಸ್ವೆಪ್ಟ್ ಬ್ಯಾಕ್ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಸ್ಟ್ರೀಪ್ ಕ್ರೋಮ್, ಸ್ಪೋರ್ಟಿ ಲುಕ್ ನೀಡುವುದಕ್ಕಾಗಿ ಹೈ ಮೌಂಟೆಡ್ ಫಾಗ್ ಲ್ಯಾಂಪ್, ಇಂಟ್ರಾಗ್ರೆಟೆಡ್ ಎಲ್ಇಡಿ ಡಿಆರ್‌ಎಲ್ಎಸ್ ಜೋಡಿಸಲಾಗಿದ್ದು, 16-ಇಂಚಿನ ಸ್ಟ್ಯಾಂಡರ್ಡ್ ಡ್ಯುಯಲ್ ಟೋನ್ ಲೇಸರ್ ಕಟ್ ಅಲಾಯ್ ವೀಲ್ಹ್, ಸಿ ಪಿಲ್ಲರ್ ಹೊಂದಿಕೊಂಡಿರುವ ಹಿಂಭಾಗದ ಡೋರ್ ಲಾಕ್, ಸ್ಮೊಕ್ಡ್ ಟೈಲ್‌ಲೈಟ್ಸ್, ಬೂಟ್ ಲೀಡ್ ಸೌಲಭ್ಯವು ಕಾರಿನ ಅಂದವನ್ನು ಹೆಚ್ಚಿಸಿವೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಟಾಟಾ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ವರ್ಷನ್

ಹೊಸ ಕಾರಿನಲ್ಲಿ ಪ್ರೀಮಿಯಂ ಲುಕ್ ಹೆಚ್ಚಿಸುವುದಕ್ಕಾಗಿ ರೂಫ್ ಮೌಂಟೆಡ್ ಸ್ಪಾಯ್ಲರ್, ರಿಯರ್ ವಿಂಡ್‌ಸ್ಕ್ರೀನ್‌ನಲ್ಲಿ ಇಂಟ್ರಾಗ್ರೆಟೆಡ್ ಬ್ರೇಕಿಂಗ್ ಲೈಟ್ಸ್ ಜೋಡಿಸಲಾಗಿದ್ದು, ಟಾಟಾ ಲೊಗೋ ಕೆಳಭಾಗದಲ್ಲಿ 'ALTROZ' ಬ್ರಾಂಡ್ ನೆಮ್ ನೀಡಲಾಗಿದೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಟಾಟಾ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ವರ್ಷನ್

ಒಳಭಾಗದ ವಿನ್ಯಾಸ ಮತ್ತು ಸೌಲಭ್ಯಗಳು

ಹ್ಯಾಚ್‌ಬ್ಯಾಕ್ ಕಾರುಗಳಲ್ಲೇ ವಿಶೇಷ ಸೌಲಭ್ಯಗಳನ್ನು ಹೊತ್ತುಬಂದಿರುವ ಆಲ್‌ಟ್ರೊಜ್ ಕಾರಿನಲ್ಲಿ 90 ಡಿಗ್ರಿ ಆ್ಯಂಗಲ್‌ನಲ್ಲಿ ತೆರೆಯಬಹುದಾದ ಬಾಗಿಲುಗಳು ಪ್ರಮುಖ ಆಕರ್ಷಣೆಯಾಗಿದ್ದು, ಸಾಫ್ಟ್-ಟಚ್ ಡ್ಯಾಶ್‌ಬೋರ್ಡ್‌, ಸೆಂಟರ್ ಕನ್ಸೋಲ್‌, 7-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ, ಆಂಡ್ರಾಯಿಡ್ ಆಟೋ, ಎತ್ತರವನ್ನು ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕನ ಆಸನ, ಎರಡು ಬದಿಯಲ್ಲೂ ಸೆಂಟರ್ ಆರ್ಮ್ ರೆಸ್ಟ್, 12 ವೊಲ್ಟ್ ಚಾರ್ಜಿಂಗ್ ಪೋರ್ಟ್ಸ್, ನಾಲ್ಕು ಬಾಗಿಲುಗಳಲ್ಲೂ ಬಾಟಲ್ ಹೋಲ್ಡರ್ಸ್, ಕೀ ಲೆಸ್ ಎಂಟ್ರಿ, ಹಿಂಬದಿಯ ಸವಾರರಿಗೂ ಎಸಿ ವೆಂಟ್ಸ್ ಸೇರಿದಂತೆ ಹಲವಾರು ಹೊಸ ಫೀಚರ್ಸ್‌ಗಳು ಆಲ್‌ಟ್ರೊಜ್ ಕಾರಿನಲ್ಲಿವೆ.

ಬಿಡುಗಡೆಗೆ ಸಜ್ಜಾಗುತ್ತಿದೆ ಟಾಟಾ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ವರ್ಷನ್

ಸುರಕ್ಷಾ ಸೌಲಭ್ಯಗಳು

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ 5 ಸ್ಟಾರ್ ರೇಟಿಂಗ್ ಗಿಟ್ಟಿಸಿಕೊಂಡಿರುವ ಆಲ್‌ಟ್ರೊಜ್ ಕಾರಿನಲ್ಲಿ ಡ್ಯಯಲ್ ಫ್ರಂಟ್ ಏರ್‌ಬ್ಯಾಗ್, ಎಬಿಎಸ್ ಮತ್ತು ಇಬಿಡಿ, ಕಾರ್ನರ್ ಸ್ಟ್ಯಾಬಿಲಿಟಿ ಕಂಟ್ರೊಲ್, ಆಟೋ ಹೆಡ್‌ಲ್ಯಾಂಪ್, ಹೈ ಸ್ಪೀಡ್ ಅಲರ್ಟ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಐಸೊಫಿಕ್ಸ್ ಚೈಲ್ಡ್ ಮೌಂಟ್ ಸೀಟ್, ಫ್ರಂಟ್ ಫಾಗ್ ಲೈಟ್ ಜೊತೆ ಕಾರ್ನಿಂಗ್ ಫಂಕ್ಷನ್ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

Source: Carwale

Most Read Articles

Kannada
English summary
Tata Altroz 1.2 turbo-petrol variant spy pics. Read in Kannada.
Story first published: Tuesday, February 25, 2020, 20:05 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X