Just In
- 8 min ago ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- 24 min ago ಓಲಾ ಎಸ್ 1 ಪ್ರೋ VS ಏಥರ್ 450X: ಮದಗಜಗಳ ಹಣಾಹಣಿಯಲ್ಲಿ ಯಾರು ಬೆಸ್ಟ್?
- 24 min ago Ather: ಬೆಂಗಳೂರಿನ ಎಥರ್ನಿಂದ ಫ್ಯಾಮಿಲಿ ಇ-ಸ್ಕೂಟರ್ 'ರಿಜ್ಟಾ' ಬುಕ್ಕಿಂಗ್ ಆರಂಭ, ರೂ.999 ಪಾವತಿಸಿದರೆ ಸಾಕು!
- 1 hr ago Kia: ಬ್ರೇಕ್ ಇಲ್ಲದ ಟ್ರಕ್ನಂತೆ ಮುನ್ನುಗ್ಗುತ್ತಿದೆ ಕಿಯಾ: ಈಗ ಸಣ್ಣ ಪಟ್ಟಣಗಳಲ್ಲೂ ಸಿಗಲಿದೆ!
Don't Miss!
- Movies ಬಿಸಿಲು, ಮಳೆ, ಧೂಳು ಬರಲಿ.. ಯಶ್ ಇದ್ರೆ ಸಾಕು.. ಏನಂತೀರಾ?
- News ಪೂಜೆ ಮಾಡಿದ ಈ ಲಿಂಬೆಹಣ್ಣು ಲಕ್ಷಕ್ಕೆ ಹರಾಜ್! ಶಾಕ್ ಆಡ್ಬೇಡಿ ಇದು ನಿಜ...
- Sports IPL 2024: ಆರ್ಸಿಬಿ vs ಕೆಕೆಆರ್ ಪಂದ್ಯಕ್ಕೂ ಮುನ್ನ ಗಂಭೀರ್ನತ್ತ ಐಸ್-ಕೋಲ್ಡ್ ಲುಕ್ ನೀಡಿದ ಕೊಹ್ಲಿ
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Lifestyle ಬಾಯಿ ರುಚಿಗೆ ಗರಿ ಗರಿ ನಿಪ್ಪಟ್ಟು..! ಮನೆಯಲ್ಲೇ ಮಾಡಿ ಟೆಸ್ಟಿ ತಿಂಡಿ
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಯಾದ ಮೊದಲ ತಿಂಗಳಿನಲ್ಲೇ ಟಾಟಾ ಆಲ್ಟ್ರೊಜ್ ಖರೀದಿಗೆ ಭರ್ಜರಿ ಬೇಡಿಕೆ
ಕಳೆದ ತಿಂಗಳು 22ರಂದು ಬಿಡುಗಡೆಗೊಂಡಿದ್ದ ಟಾಟಾ ಆಲ್ಟ್ರೊಜ್ ಕಾರು ಜನವರಿ ಅವಧಿಯಲ್ಲಿ ದಾಖಲೆ ಪ್ರಮಾಣದಲ್ಲಿ ಮಾರಾಟಗೊಂಡಿದ್ದು, ಹೊಸ ಕಾರು ವಿತರಣೆ ಆರಂಭವಾದ ಕೇವಲ ಒಂದೇ ವಾರದಲ್ಲಿ 4,505 ಯುನಿಟ್ ಮಾರಾಟಗೊಂಡಿವೆ.
ಹ್ಯಾಚ್ಬ್ಯಾಕ್ ಕಾರುಗಳಲ್ಲೇ ವಿಶೇಷ ಪ್ರೀಮಿಯಂ ಫೀಚರ್ಸ್ಗಳನ್ನು ಹೊಂದಿರುವ ಟಾಟಾ ಆಲ್ಟ್ರೊಜ್ ಕಾರು ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಗಳನ್ನು ಪಡೆದುಕೊಂಡಿರುವುದು ಗ್ರಾಹಕರ ಆಕರ್ಷಣೆಗೆ ಕಾರಣವಾಗಿದ್ದು, ಪ್ರತಿಸ್ಪರ್ಧಿ ಹ್ಯಾಚ್ಬ್ಯಾಕ್ ಕಾರು ಮಾದರಿಗಳಾದ ಮಾರುತಿ ಬಲೆನೊ ಮತ್ತು ಹ್ಯುಂಡೈ ಐ20 ನಂತರ ಮೂರನೇ ಸ್ಥಾನದಲ್ಲಿದೆ. ಜನವರಿ ಅವಧಿಯಲ್ಲಿ ಬಲೆನೊ ಕಾರು 20,485 ಯುನಿಟ್ ಮತ್ತು ಐ20 ಮಾದರಿಯು 8,137 ಯುನಿಟ್ ಮಾರಾಟಗೊಂಡಿದ್ದು, ಮೂರನೇ ಸ್ಥಾನದಲ್ಲಿರುವ ಆಲ್ಟ್ರೊಜ್ ಕಾರು ಅತಿ ಕಡಿಮೆ ಅವಧಿಯಲ್ಲಿ 4,505 ಯುನಿಟ್ ಮಾರಾಟಗೊಂಡಿವೆ.
ಟೊಯೊಟಾ ಗ್ಲಾಂಝಾ(2,191 ಯುನಿಟ್), ಫೋಕ್ಸ್ವ್ಯಾಗನ್ ಪೊಲೊ(632 ಯುನಿಟ್), ಫೋರ್ಡ್ ಫ್ರೀಸ್ಪೈಲ್(331 ಯುನಿಟ್) ಮತ್ತು ಹೋಂಡಾ ಜಾಝ್(46 ಯುನಿಟ್) ತದನಂತರ ಸ್ಥಾನದಲ್ಲಿದ್ದು, ಟಾಟಾ ಆಲ್ಟ್ರೊಜ್ ಅಬ್ಬರದ ಮುಂದೆ ಹಲವು ಕಾರು ಮಾದರಿಗಳು ನೆಲಕಚ್ಚಿವೆ.
ಗ್ರಾಹಕರ ಬೇಡಿಕೆಯೆಂತೆ ಎಕ್ಸ್ಇ, ಎಕ್ಸ್ಎಂ, ಎಕ್ಸ್ಟಿ, ಎಕ್ಸ್ಜೆಡ್ ಮತ್ತು ಎಕ್ಸ್ಜೆಡ್ ಆಪ್ಷನ್ ವೆರಿಯೆಂಟ್ಗಳಲ್ಲಿ ಖರೀದಿಗೆ ಲಭ್ಯವಿರುವ ಆಲ್ಟ್ರೊಜ್ ಕಾರು ಆಕರ್ಷಕ ಬೆಲೆಗಳನ್ನು ಹೊಂದಿದ್ದು, 5 ಡೀಸೆಲ್ ಮಾದರಿಗಳನ್ನು ಮತ್ತು 5 ಪೆಟ್ರೋಲ್ ಮಾದರಿಗಳ ಆಯ್ಕೆಯನ್ನು ಹೊಂದಿದೆ.
ಆಲ್ಟ್ರೊಜ್ ಪೆಟ್ರೋಲ್ ವೆರಿಯೆಂಟ್ ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ 5.29 ಲಕ್ಷ ಮತ್ತು ಹೈ ಎಂಡ್ ಆವೃತ್ತಿಯು ರೂ. 7.69 ಲಕ್ಷ ಬೆಲೆ ಹೊಂದಿದ್ದರೆ ಡೀಸೆಲ್ ಎಂಜಿನ್ ಮಾದರಿಯ ಬೆಲೆಯು ಆರಂಭಿಕವಾಗಿ ರೂ. 6.99 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.9.29 ಲಕ್ಷ ಬೆಲೆ ಪಡೆದುಕೊಂಡಿದೆ. ಹೊಸ ಕಾರಿನಲ್ಲಿ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಫೋರ್ ಸಿಲಿಂಡರ್ ರಿವೋಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಪೆಟ್ರೋಲ್ ಎಂಜಿನ್ ಅನ್ನು ಟಿಯಾಗೋದಿಂದ ಮತ್ತು ಡೀಸೆಲ್ ಎಂಜಿನ್ ಅನ್ನು ನೆಕ್ಸಾನ್ ಕಾರಿನಿಂದ ಎರವಲು ಪಡೆಯಲಾಗಿದೆ.
ಸದ್ಯಕ್ಕೆ ಹೊಸ ಕಾರಿನಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗಿದ್ದು, ಪೆಟ್ರೋಲ್ ಎಂಜಿನ್ ಮಾದರಿಯು 86-ಬಿಎಚ್ಪಿ, 113-ಎನ್ಎಂ ಟಾರ್ಕ್ ಮತ್ತು ಡೀಸೆಲ್ ಆವೃತ್ತಿಯು 90-ಬಿಎಚ್ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
ಡಿಸೈನ್ ಮತ್ತು ಸ್ಟೈಲ್
ಶಾರ್ಕ್ ನೊಸ್ ಡಿಸೈನ್ ಹೊಂದಿರುವ ಆಲ್ಟ್ರೊಜ್ ಕಾರು ಸ್ವೆಪ್ಟ್ ಬ್ಯಾಕ್ ಪ್ರೋಜೆಕ್ಟರ್ ಹೆಡ್ಲ್ಯಾಂಪ್, ಸ್ಟ್ರೀಪ್ ಕ್ರೋಮ್, ಸ್ಪೋರ್ಟಿ ಲುಕ್ ನೀಡುವುದಕ್ಕಾಗಿ ಹೈ ಮೌಂಟೆಡ್ ಫಾಗ್ ಲ್ಯಾಂಪ್, ಇಂಟ್ರಾಗ್ರೆಟೆಡ್ ಎಲ್ಇಡಿ ಡಿಆರ್ಎಲ್ಎಸ್ ಜೋಡಿಸಲಾಗಿದ್ದು, 16-ಇಂಚಿನ ಸ್ಟ್ಯಾಂಡರ್ಡ್ ಡ್ಯುಯಲ್ ಟೋನ್ ಲೇಸರ್ ಕಟ್ ಅಲಾಯ್ ವೀಲ್ಹ್, ಸಿ ಪಿಲ್ಲರ್ ಹೊಂದಿಕೊಂಡಿರುವ ಹಿಂಭಾಗದ ಡೋರ್ ಲಾಕ್, ಸ್ಮೊಕ್ಡ್ ಟೈಲ್ಲೈಟ್ಸ್, ಬೂಟ್ ಲೀಡ್ ಸೌಲಭ್ಯವು ಕಾರಿನ ಅಂದವನ್ನು ಹೆಚ್ಚಿಸಿವೆ.
ಹೊಸ ಕಾರಿನಲ್ಲಿ ಪ್ರೀಮಿಯಂ ಲುಕ್ ಹೆಚ್ಚಿಸುವುದಕ್ಕಾಗಿ ರೂಫ್ ಮೌಂಟೆಡ್ ಸ್ಪಾಯ್ಲರ್, ರಿಯರ್ ವಿಂಡ್ಸ್ಕ್ರೀನ್ನಲ್ಲಿ ಇಂಟ್ರಾಗ್ರೆಟೆಡ್ ಬ್ರೇಕಿಂಗ್ ಲೈಟ್ಸ್ ಜೋಡಿಸಲಾಗಿದ್ದು, ಟಾಟಾ ಲೊಗೋ ಕೆಳಭಾಗದಲ್ಲಿ 'ALTROZ' ಬ್ರಾಂಡ್ ನೆಮ್ ನೀಡಲಾಗಿದೆ.
ಒಳಭಾಗದ ವಿನ್ಯಾಸ ಮತ್ತು ಸೌಲಭ್ಯಗಳು
ಹ್ಯಾಚ್ಬ್ಯಾಕ್ ಕಾರುಗಳಲ್ಲೇ ವಿಶೇಷ ಸೌಲಭ್ಯಗಳನ್ನು ಹೊತ್ತುಬಂದಿರುವ ಆಲ್ಟ್ರೊಜ್ ಕಾರಿನಲ್ಲಿ 90 ಡಿಗ್ರಿ ಆ್ಯಂಗಲ್ನಲ್ಲಿ ತೆರೆಯಬಹುದಾದ ಬಾಗಿಲುಗಳು ಪ್ರಮುಖ ಆಕರ್ಷಣೆಯಾಗಿದ್ದು, ಸಾಫ್ಟ್-ಟಚ್ ಡ್ಯಾಶ್ಬೋರ್ಡ್, ಸೆಂಟರ್ ಕನ್ಸೋಲ್, 7-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ, ಆಂಡ್ರಾಯಿಡ್ ಆಟೋ, ಎತ್ತರವನ್ನು ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕನ ಆಸನ, ಎರಡು ಬದಿಯಲ್ಲೂ ಸೆಂಟರ್ ಆರ್ಮ್ ರೆಸ್ಟ್, 12 ವೊಲ್ಟ್ ಚಾರ್ಜಿಂಗ್ ಪೋರ್ಟ್ಸ್, ನಾಲ್ಕು ಬಾಗಿಲುಗಳಲ್ಲೂ ಬಾಟಲ್ ಹೋಲ್ಡರ್ಸ್, ಕೀ ಲೆಸ್ ಎಂಟ್ರಿ, ಹಿಂಬದಿಯ ಸವಾರರಿಗೂ ಎಸಿ ವೆಂಟ್ಸ್ ಸೇರಿದಂತೆ ಹಲವಾರು ಹೊಸ ಫೀಚರ್ಸ್ಗಳು ಆಲ್ಟ್ರೊಜ್ ಕಾರಿನಲ್ಲಿವೆ.
ಸುರಕ್ಷಾ ಸೌಲಭ್ಯಗಳು
ಕ್ರ್ಯಾಶ್ ಟೆಸ್ಟಿಂಗ್ನಲ್ಲಿ 5 ಸ್ಟಾರ್ ರೇಟಿಂಗ್ ಗಿಟ್ಟಿಸಿಕೊಂಡಿರುವ ಆಲ್ಟ್ರೊಜ್ ಕಾರಿನಲ್ಲಿ ಡ್ಯಯಲ್ ಫ್ರಂಟ್ ಏರ್ಬ್ಯಾಗ್, ಎಬಿಎಸ್ ಮತ್ತು ಇಬಿಡಿ, ಕಾರ್ನರ್ ಸ್ಟ್ಯಾಬಿಲಿಟಿ ಕಂಟ್ರೊಲ್, ಆಟೋ ಹೆಡ್ಲ್ಯಾಂಪ್, ಹೈ ಸ್ಪೀಡ್ ಅಲರ್ಟ್, ರಿಯರ್ ಪಾರ್ಕಿಂಗ್ ಸೆನ್ಸಾರ್, ಐಸೊಫಿಕ್ಸ್ ಚೈಲ್ಡ್ ಮೌಂಟ್ ಸೀಟ್, ಫ್ರಂಟ್ ಫಾಗ್ ಲೈಟ್ ಜೊತೆ ಕಾರ್ನಿಂಗ್ ಫಂಕ್ಷನ್ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.
ಖರೀದಿಗೆ ಲಭ್ಯವಿರುವ ಬಣ್ಣಗಳು
ಆಲ್ಟ್ರೊಜ್ನಲ್ಲಿ ಹೈ-ಸ್ಟ್ರೀಟ್ ಗೋಲ್ಡ್, ಸ್ಕೈಲೈನ್ ಸಿಲ್ವರ್, ಡೌನ್ಟೌನ್ ರೆಡ್, ಮಿಡ್ಟೌನ್ ಗ್ರೇ ಮತ್ತು ಅವೆನ್ಯೂ ವೈಟ್ ಎನ್ನುವ ಐದು ಬಣ್ಣಗಳ ಆಯ್ಕೆ ಹೊಂದಿದ್ದು, ಮುಂಬರುವ ದಿನಗಳಲ್ಲಿ ಡ್ಯುಯಲ್ ಟೋನ್ ಕೂಡಾ ಬಿಡುಗಡೆ ಸಾಧ್ಯತೆಗಳಿವೆ.
ಈ ಮೂಲಕ ಹ್ಯಾಚ್ಬ್ಯಾಕ್ ಆವೃತ್ತಿಗಳಲ್ಲೇ ಅತ್ಯುತ್ತಮ ಕಾರು ಮಾದರಿಯನ್ನಾಗಿ ಅಭಿವೃದ್ದಿಗೊಳಿಸಲು ಪ್ರಯತ್ನಿಸಿರುವ ಟಾಟಾ ಸಂಸ್ಥೆಯು ಆಲ್ಟ್ರೊಜ್ ಮೂಲಕ ಮಾರುಕಟ್ಟೆ ಹೊಸ ಸಂಚಲನ ಮೂಡಿಸುವ ತವಕದಲ್ಲಿದ್ದು, ಮಾರುತಿ ಸುಜುಕಿ ಬಲೆನೊ, ಹ್ಯುಂಡೈ ಎಲೈಟ್ ಐ20 ಕಾರುಗಳಿಗೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಪೈಪೋಟಿ ನೀಡುವುದರಲ್ಲಿ ಯಾವುದೇ ಅನುಮಾನವಿಲ್ಲ.