ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಟಾಟಾ ಆಲ್‌ಟ್ರೊಜ್ ಗಿಟ್ಟಿಸಿಕೊಂಡ ಅಂಕ ಎಷ್ಟು ಗೊತ್ತಾ?

ಹೊಸ ಕಾರುಗಳ ಉತ್ಪಾದನೆಯಲ್ಲಿ ಮಹತ್ವದ ಬದಲಾವಣೆ ತರುವುದಷ್ಟೇ ಅಲ್ಲದೇ ಪ್ರಯಾಣಿಕ ಸುರಕ್ಷತೆಯಲ್ಲೂ ಭಾರೀ ಬದಲಾವಣೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ಬಹುನೀರಿಕ್ಷಿತ ಆಲ್‌ಟ್ರೊಜ್ ಕಾರಿನ ಕ್ರ್ಯಾಶ್ ಟೆಸ್ಟಿಂಗ್‌ನನಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಟಾಟಾ ಆಲ್‌ಟ್ರೊಜ್ ಗಿಟ್ಟಿಸಿಕೊಂಡ ಅಂಕ ಎಷ್ಟು ಗೊತ್ತಾ?

ಹೌದು, ಇದೇ ತಿಂಗಳ ಕೊನೆಯಲ್ಲಿ ಬಿಡುಗಡೆಗೆ ಸಿದ್ದವಾಗುತ್ತಿರುವ ಆಲ್‌ಟ್ರೊಜ್ ಹ್ಯಾಚ್‍‌ಬ್ಯಾಕ್ ಕಾರು ಮಾದರಿಯು ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ತೋರುವ ಮೂಲಕ ಐಷಾರಾಮಿ ಕಾರುಗಳ ಮಾದರಿಯಲ್ಲೇ ಗರಿಷ್ಠ ಮಟ್ಟದ ರೇಟಿಂಗ್ ಗಿಟ್ಟಿಸಿಕೊಂಡಿದ್ದು, ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿ ನಂತರ 5 ಸ್ಟಾರ್ ಕ್ರ್ಯಾಶ್ ಟೆಸ್ಟ್ ರೇಟಿಂಗ್ ಪಡೆದುಕೊಂಡ ಎರಡನೇ ಕಾರು ಮಾದರಿಯಾಗಿ ಆಲ್‌ಟ್ರೊಜ್ ಹೊರಹೊಮ್ಮಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಟಾಟಾ ಆಲ್‌ಟ್ರೊಜ್ ಗಿಟ್ಟಿಸಿಕೊಂಡ ಅಂಕ ಎಷ್ಟು ಗೊತ್ತಾ?

ಹೊಸ ಕಾರುಗಳಲ್ಲಿನ ಸುರಕ್ಷತೆ ಕುರಿತಂತೆ #SAFERCARSFORINDIA ಅಭಿಯಾನ ಆಂರಭಿಸಿರುವ ಗ್ಲೋಬಲ್ ಎನ್‌ಸಿಎಪಿ ಸಂಸ್ಥೆಯು ಪ್ರಯಾಣಿಕರ ಸುರಕ್ಷತೆ ಕುರಿತಂತೆ ಜನಪ್ರಿಯ ಸಂಸ್ಥೆಯ ಕಾರುಗಳ ಅಸಲಿಯತ್ತು ಬಯಲು ಮಾಡುತ್ತಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಟಾಟಾ ಆಲ್‌ಟ್ರೊಜ್ ಗಿಟ್ಟಿಸಿಕೊಂಡ ಅಂಕ ಎಷ್ಟು ಗೊತ್ತಾ?

ಇದೀಗ ಆಲ್‌ಟ್ರೊಜ್ ಕಾರು ತನ್ನ ಪ್ರತಿಸ್ಪರ್ಧಿ ಮಾದರಿಗಳು ಕನಿಷ್ಠ 3 ಸ್ಟಾರ್ ರೇಟಿಂಗ್ ಪಡೆದುಕೊಳ್ಳುವಲ್ಲಿ ಪರದಾಡುತ್ತಿರುವಾಗ ಕೈಗೆಟುಕುವ ಬೆಲೆಯೊಂದಿಗೆ 5 ಸ್ಟಾರ್(ಅಡಲ್ಟ್) ಮೂಲಕ ಹೊಸ ಭರವಸೆ ಮೂಡಿಸಿದ್ದು, ಮಕ್ಕಳ ಸುರಕ್ಷತೆಯಲ್ಲಿ 3 ಸ್ಟಾರ್ ರೇಟಿಂಗ್ ಪಡೆದುಕೊಂಡಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಟಾಟಾ ಆಲ್‌ಟ್ರೊಜ್ ಗಿಟ್ಟಿಸಿಕೊಂಡ ಅಂಕ ಎಷ್ಟು ಗೊತ್ತಾ?

ಪ್ರತಿ ಹೊಸ ಕಾರು ಮಾದರಿಗಳಿಗೂ ಪ್ರಯಾಣಿಕರ ಸುರಕ್ಷಾ ವಿಚಾರವಾಗಿ ಜಾಗತಿಕ ಪ್ರಮಾಣ ಪತ್ರದ ಅವಶ್ಯಕತೆಯಿದ್ದು, ಟಾಟಾ ನೆಕ್ಸಾನ್ ಕಾರುಗಳು ಪಡೆದುಕೊಳ್ಳುತ್ತಿರುವ ಉತ್ತಮ ರೇಟಿಂಗ್‌ನಿಂದಾಗಿ ಸುರಕ್ಷತೆಯಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ ಎಂಬುವುದು ಖಾತ್ರಿಯಾಗಿದೆ. ಇದಲ್ಲದೇ ಮೊದಲ ಬಾರಿಗೆ 'ಮೆಡ್ ಇನ್ ಇಂಡಿಯಾ' ಯೋಜನೆಯಡಿ ನಿರ್ಮಾಣವಾದ ಪ್ರಮುಖ ಕಾರುಗಳಲ್ಲಿ ನೆಕ್ಸಾನ್, ಹ್ಯಾರಿಯರ್ ಮತ್ತು ಆಲ್‌ಟ್ರೊಜ್ ಪ್ರಮುಖವಾಗಿದ್ದು, ಹ್ಯಾಚ್‌ಬ್ಯಾಕ್ ಮಾದರಿಗಳಲ್ಲಿ ಗರಿಷ್ಠ ಸ್ಟಾರ್ ರೇಟಿಂಗ್ ಪಡೆದಿರುವುದು ಇದೇ ಮೊದಲು ಎನ್ನಬಹುದು.

ಇನ್ನು 2020ರಲ್ಲಿ ಹಲವು ಕಾರು ಉತ್ಪಾದನಾ ಸಂಸ್ಥೆಗಳು ತಮ್ಮ ಬಹನೀರಿಕ್ಷಿತ ಕಾರು ಮಾದರಿಗಳನ್ನು ಬಿಡುಗಡೆಗೊಳಿಸುತ್ತಿದ್ದು, ಟಾಟಾ ಕೂಡಾ ಇದೇ ತಿಂಗಳು 22ಕ್ಕೆ ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ಕಾರನ್ನು ಬಿಡುಗಡೆ ಮಾಡುತ್ತಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಟಾಟಾ ಆಲ್‌ಟ್ರೊಜ್ ಗಿಟ್ಟಿಸಿಕೊಂಡ ಅಂಕ ಎಷ್ಟು ಗೊತ್ತಾ?

ಆಲ್‌ಟ್ರೊಜ್ ಕಾರು ಗ್ರಾಹಕರ ನೀರಿಕ್ಷೆಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಫೀಚರ್ಸ್‌ಗಳನ್ನು ಹೊತ್ತುಬರುವ ಸುಳಿವು ನೀಡಿದ್ದು, ಆಲ್ಬಾಟ್ರೊಸ್ ಸಮುದ್ರ ಹಕ್ಕಿಯ ಬಲಿಷ್ಠತೆ ಮತ್ತು ಚತುರತೆಯ ಪ್ರೇರಣೆಯೊಂದಿಗೆ ಸಿದ್ದವಾಗಿರುವ ಹೊಸ ಕಾರು ಮಾರುತಿ ಸುಜುಕಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಪ್ರಬಲ ಪೈಪೋಟಿಯಾಗಲಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಟಾಟಾ ಆಲ್‌ಟ್ರೊಜ್ ಗಿಟ್ಟಿಸಿಕೊಂಡ ಅಂಕ ಎಷ್ಟು ಗೊತ್ತಾ?

ಇಂಪ್ಯಾಕ್ಟ್ 2.0 ಡಿಸೈನ್‌ನಿಂದಾಗಿ ಹ್ಯಾಚ್‌ಬ್ಯಾಕ್ ಕಾರುಗಳಲ್ಲೇ ವಿಶೇಷ ಎನ್ನಿಸುವ ಆಲ್‌ಟ್ರೊಜ್ ಕಾರು ಗ್ರೆ ಮತ್ತು ಬ್ಲ್ಯಾಕ್ ಬಣ್ಣದ ಕ್ಯಾಬಿನ್, ಡ್ಯಾಶ್‌ಬೋರ್ಡ್ ಸುತ್ತಲು ಸಿಲ್ವರ್ ಆಕ್ಸೆಂಟ್, ಫಾಲೋ ಮೀ ಹೆಡ್‌ಲ್ಯಾಂಪ್, ಹೈ ಎಂಡ್ ಆವೃತ್ತಿಯಲ್ಲಿ ಸೆಮಿ ಡಿಜಿಟಲ್ ಇನ್‌ಸ್ಟ್ರುಮೆಂಟ್ ಕ್ಲಸ್ಟರ್ ಜೋಡಣೆ ಹೊಂದಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಟಾಟಾ ಆಲ್‌ಟ್ರೊಜ್ ಗಿಟ್ಟಿಸಿಕೊಂಡ ಅಂಕ ಎಷ್ಟು ಗೊತ್ತಾ?

ಹಾಗೆಯೇ ಸ್ಟ್ಯಾಂಡರ್ಡ್ ಆಗಿ ಹೊಸ ಕಾರಿನಲ್ಲಿ 7-ಇಂಚಿನ್ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ, ಆ್ಯಪಲ್ ಕಾರ್ ಪ್ಲೇ, ಆಂಡ್ರಾಯಿಡ್ ಆಟೋ, ಮಡಿಕೆ ಮಾಡಬಹುದಾದ ಮಲ್ಟಿ ಇನ್‌ಫಾರ್ಮ್‌ಮೆಷನ್ ಡಿಸ್‌‌ಪ್ಲೇ, ಎತ್ತರವನ್ನು ಹೊಂದಾಣಿಕೆ ಮಾಡಿಕೊಳ್ಳಬಹುದಾದ ಚಾಲಕನ ಆಸನ, ಎರಡು ಬದಿಯಲ್ಲೂ ಸೆಂಟರ್ ಆರ್ಮ್ ರೆಸ್ಟ್, 12 ವೊಲ್ಟ್ ಚಾರ್ಜಿಂಗ್ ಪೋರ್ಟ್ಸ್, ನಾಲ್ಕು ಬಾಗಿಲುಗಳಲ್ಲೂ ಬಾಟಲ್ ಹೋಲ್ಡರ್ಸ್, ಕೀ ಲೆಸ್ ಎಂಟ್ರಿ, ಹಿಂಬದಿಯ ಸವಾರರಿಗೂ ಎಸಿ ವೆಂಟ್ಸ್ ಸೇರಿದಂತೆ ಹಲವಾರು ಹೊಸ ಫೀಚರ್ಸ್‌ಗಳು ಆಲ್‌ಟ್ರೊಜ್ ಕಾರಿನಲ್ಲಿವೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಟಾಟಾ ಆಲ್‌ಟ್ರೊಜ್ ಗಿಟ್ಟಿಸಿಕೊಂಡ ಅಂಕ ಎಷ್ಟು ಗೊತ್ತಾ?

ಬಿಡುಗಡೆಯಾಗಲಿರುವ ಸಾಮಾನ್ಯ 1.2-ಲೀಟರ್ ಪೆಟ್ರೋಲ್ ಆವೃತ್ತಿಯು 86-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲವು.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಟಾಟಾ ಆಲ್‌ಟ್ರೊಜ್ ಗಿಟ್ಟಿಸಿಕೊಂಡ ಅಂಕ ಎಷ್ಟು ಗೊತ್ತಾ?

ಆಲ್‌ಟ್ರೊಜ್ ಬೆಲೆ(ಅಂದಾಜು)

ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.50 ಲಕ್ಷದಿಂದ ಟಾಪ್ ಎಂಡ್ ಕಾರಿನ ಬೆಲೆಯು ರೂ.8 ಲಕ್ಷ ಬೆಲೆ ಅಂದಾಜಿಸಲಾಗಿದ್ದು, ಹ್ಯಾಚ್‌ಬ್ಯಾಕ್ ಪ್ರಿಯರ ಆಯ್ಕೆಯಲ್ಲಿ ಮುಂಚೂಣಿಯಲ್ಲಿರುವ ಹ್ಯುಂಡೈ ಐ20, ಮಾರುತಿ ಬಲೆನೊ, ಟೊಯೊಟಾ ಗ್ಲಾಂಝಾ ಮತ್ತು ಹೋಂಡಾ ಜಾಝ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುವ ವಿಶ್ವಾಸದಲ್ಲಿದೆ.

Most Read Articles

Kannada
English summary
Tata Altroz premium hatchback car has received 5 star rating in Global NCAP crash test result. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X