ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಟಾಟಾ ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್
ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳ ಮಾರಾಟದಲ್ಲಿ ಸದ್ಯ ಮುಂಚೂಣಿ ಸಾಧಿಸುತ್ತಿರುವ ಟಾಟಾ ಆಲ್‌ಟ್ರೊಜ್ ಆವೃತ್ತಿಯು ಬಿಡುಗಡೆಗೊಂಡ ಕೆಲವೇ ತಿಂಗಳಿನಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, 25 ಸಾವಿರ ಯುನಿಟ್ ಉತ್ಪಾದನಾ ಗುರಿ ತಲುಪಿದೆ.

ಆಲ್‌ಟ್ರೊಜ್ ಕಾರು ಹ್ಯಾಚ್‌ಬ್ಯಾಕ್ ಕಾರುಗಳಲ್ಲೇ ವಿಶೇಷ ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಗಳನ್ನು ಪಡೆದುಕೊಂಡಿರುವುದು ಗ್ರಾಹಕರ ಆಕರ್ಷಣೆಗೆ ಪ್ರಮುಖ ಕಾರಣವಾಗಿದೆ. ಹೊಸ ಕಾರು ಎಕ್ಸ್‌ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಜೆಡ್, ಎಕ್ಸ್‌ಜೆಡ್ ಆಪ್ಷನ್ ಜೊತೆ ಹೊಸದಾಗಿ ಎಕ್ಸ್‌ಜೆಡ್ ಅರ್ಬನ್ ವೆರಿಯೆಂಟ್ ಅನ್ನು ಹೊಸದಾಗಿ ಪಡೆದುಕೊಂಡಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.

ಮತ್ತೊಂದು ವಿಶೇಷವೆಂದರೆ, ಬಿಡಿಭಾಗಗಳ ಬೆಲೆ ಏರಿಳಿತಕ್ಕೆ ಅನುಗುಣವಾಗಿ ಹೊಸ ಕಾರಿನ ಬೆಲೆಯನ್ನು ತುಸು ಇಳಿಕೆ ಮಾಡಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ವಿಶ್ವಾಸರ್ಹ ಬ್ರಾಂಡ್ ಆಗಿ ಹೊರಹೊಮ್ಮಿದ್ದು, ಟರ್ಬೋ ಮಾದರಿಯು ಇನ್ನಷ್ಟು ಬೇಡಿಕೆ ತಂದುಕೊಡುವ ನೀರಿಕ್ಷೆಯಿದೆ.

ಆಲ್‌ಟ್ರೊಜ್ ಕಾರು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.44 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.9.09 ಲಕ್ಷ ಬೆಲೆ ಹೊಂದಿದ್ದು, ಪೆಟ್ರೋಲ್ ಟರ್ಬೋ ಮಾದರಿಯು ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಹೊಸ ಕಾರಿನಲ್ಲಿ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಫೋರ್ ಸಿಲಿಂಡರ್ ರಿವೋಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಪೆಟ್ರೋಲ್ ಎಂಜಿನ್ ಅನ್ನು ಟಿಯಾಗೋದಿಂದ ಮತ್ತು ಡೀಸೆಲ್ ಎಂಜಿನ್ ಅನ್ನು ನೆಕ್ಸಾನ್ ಕಾರಿನಿಂದ ಎರವಲು ಪಡೆಯಲಾಗಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಸದ್ಯಕ್ಕೆ ಆಲ್‌ಟ್ರೊಜ್ ಕಾರಿನಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 86-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಇನ್ನು ಶಾರ್ಕ್ ನೊಸ್ ಡಿಸೈನ್ ಹೊಂದಿರುವ ಆಲ್‌ಟ್ರೊಜ್ ಕಾರು ಸ್ವೆಪ್ಟ್ ಬ್ಯಾಕ್ ಪ್ರೋಜೆಕ್ಟರ್ ಹೆಡ್‌ಲ್ಯಾಂಪ್, ಸ್ಟ್ರೀಪ್ ಕ್ರೋಮ್, ಸ್ಪೋರ್ಟಿ ಲುಕ್ ನೀಡುವುದಕ್ಕಾಗಿ ಹೈ ಮೌಂಟೆಡ್ ಫಾಗ್ ಲ್ಯಾಂಪ್, ಇಂಟ್ರಾಗ್ರೆಟೆಡ್ ಎಲ್ಇಡಿ ಡಿಆರ್‌ಎಲ್ಎಸ್ ಜೋಡಿಸಲಾಗಿದ್ದು, 16-ಇಂಚಿನ ಸ್ಟ್ಯಾಂಡರ್ಡ್ ಡ್ಯುಯಲ್ ಟೋನ್ ಲೇಸರ್ ಕಟ್ ಅಲಾಯ್ ವೀಲ್ಹ್, ಸಿ ಪಿಲ್ಲರ್ ಹೊಂದಿಕೊಂಡಿರುವ ಹಿಂಭಾಗದ ಡೋರ್ ಲಾಕ್, ಸ್ಮೊಕ್ಡ್ ಟೈಲ್‌ಲೈಟ್ಸ್, ಬೂಟ್ ಲೀಡ್ ಸೌಲಭ್ಯವು ಕಾರಿನ ಅಂದವನ್ನು ಹೆಚ್ಚಿಸಿವೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹ್ಯಾಚ್‌ಬ್ಯಾಕ್ ಕಾರುಗಳಲ್ಲೇ ವಿಶೇಷ ಸೌಲಭ್ಯಗಳನ್ನು ಹೊತ್ತುಬಂದಿರುವ ಆಲ್‌ಟ್ರೊಜ್ ಕಾರಿನಲ್ಲಿ 90 ಡಿಗ್ರಿ ಆ್ಯಂಗಲ್‌ನಲ್ಲಿ ತೆರೆಯಬಹುದಾದ ಬಾಗಿಲುಗಳು ಪ್ರಮುಖ ಆಕರ್ಷಣೆಯಾಗಿದ್ದು, ಸಾಫ್ಟ್-ಟಚ್ ಡ್ಯಾಶ್‌ಬೋರ್ಡ್, ಸೆಂಟರ್ ಕನ್ಸೋಲ್, 7-ಇಂಚಿನ ಟಚ್ ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಹೊಂದಿದೆ.


Click it and Unblock the Notifications








