Just In
- 5 hrs ago
ಭಾರೀ ಬದಲಾವಣೆಯೊಂದಿಗೆ ಮಾರುಕಟ್ಟೆ ಪ್ರವೇಶಿಸಲಿದೆ ನ್ಯೂ ಜನರೇಷನ್ ಸ್ಕಾರ್ಪಿಯೋ
- 7 hrs ago
ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಯಮಹಾ ವೈಝಡ್ಎಫ್-ಆರ್25 ಬೈಕ್
- 8 hrs ago
ಮಾಲಿನ್ಯ ಉಂಟುಮಾಡುವ ವಾಹನಗಳಿಗೆ ಬ್ರೇಕ್ ಹಾಕಲು 'ಹಸಿರು ತೆರಿಗೆ' ಅಸ್ತ್ರ
- 9 hrs ago
ಒಂದೂವರೆ ವರ್ಷದಲ್ಲಿ ದಾಖಲೆ ಸಂಖ್ಯೆಯ ಕಾರುಗಳನ್ನು ಮಾರಾಟ ಮಾಡಿದ ಕಿಯಾ ಮೋಟಾರ್ಸ್
Don't Miss!
- News
ಹಿರಿಯೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಹೊಸ ರೂಪ
- Sports
ಐಎಸ್ಎಲ್: ನಾರ್ತ್ಈಸ್ಟ್ vs ಮೋಹನ್ ಬಾಗನ್, Live ಸ್ಕೋರ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Movies
ರಾಜಮೌಳಿಯ RRR ಚಿತ್ರಕ್ಕೆ ಎದುರಾಗಿ ಅಜಯ್ ದೇವಗನ್ ಸಿನಿಮಾ?
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Education
Republic Day Speech And Essay Ideas: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಮತ್ತು ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಪೈಪೋಟಿಯಾಗಿ ಆಲ್‌ಟ್ರೊಜ್ ಹೊಸ ಟಿವಿಸಿ ಬಿಡುಗಡೆ ಮಾಡಿದ ಟಾಟಾ
ಟಾಟಾ ಮೋಟಾರ್ಸ್ ಕಂಪನಿಯು ಸುರಕ್ಷಿತ ಕಾರುಗಳ ಉತ್ಪಾದನೆ ಮೂಲಕ ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಕ್ರ್ಯಾಶ್ ಟೆಸ್ಟಿಂಗ್ ಮಾನದಂಡಗಳನ್ನು ಪೂರೈಸುವತ್ತ ಮಹತ್ವದ ಹೆಜ್ಜೆಯಿರಿಸುತ್ತಿದೆ. ಈ ಮೂಲಕ ಬಜೆಟ್ ಬೆಲೆ ಕಾರು ಖರೀದಿದಾರರಿಗೂ ಗರಿಷ್ಠ ಸುರಕ್ಷತೆಯ ಖಾತ್ರಿ ನೀಡುತ್ತಿರುವ ಟಾಟಾ ಕಂಪನಿಯ ಪ್ರತಿಸ್ಪರ್ಧಿ ಕಾರುಗಳಿಗೆ ಪೈಪೋಟಿಯಾಗಿ ಆಲ್‌ಟ್ರೊಜ್ ಹೊಸ ಟಿವಿ ಜಾಹೀರಾತು ಬಿತ್ತರಿಸುತ್ತಿದೆ.

ಇತ್ತೀಚೆಗೆ ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಕಳಪೆ ಪ್ರದರ್ಶನ ತೋರಿದ್ದ ಗ್ರ್ಯಾಂಡ್ ಐ10 ನಿಯೋಸ್ ವಿಚಾರವಾಗಿ ಹ್ಯುಂಡೈ ಕಂಪನಿಯ ಕಾಲೆಳೆದಿದ್ದ ಟಾಟಾ ಮೋಟಾರ್ಸ್ ಕಂಪನಿಯು ಐ20 ನ್ಯೂ ಜನರೇಷನ್ ಮಾದರಿಯ ವಿರುದ್ಧವು ಸಹ ವಿಭಿನ್ನ ಜಾಹೀರಾತಿನ ಮೂಲಕ ಟೀಕೆ ವ್ಯಕ್ತಪಡಿಸಿತ್ತು. ಇದೀಗ ನ್ಯೂ ಜನರೇಷನ್ ಐ20 ಕಾರಿಗೆ ಪೈಪೋಟಿಯಾಗಿ ಆಲ್‌ಟ್ರೊಜ್ ಕಾರಿನ ಸುರಕ್ಷತೆ ಕುರಿತಾಗಿ ಹೊಸ ಜಾಹೀರಾತು ಬಿತ್ತರಿಸುತ್ತಿದ್ದು, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆಯನ್ನು ನೀಡುವ ಭರವಸೆ ನೀಡಿದೆ.

ಕ್ರ್ಯಾಶ್ ಟೆಸ್ಟಿಂಗ್‌ನಲ್ಲಿ ಟಾಟಾ ನಿರ್ಮಾಣದ ಬಹುತೇಕ ಕಾರು ಮಾದರಿಗಳು 4 ರಿಂದ 5 ಸೇಫ್ಟಿ ಸ್ಟಾರ್ ರೇಟಿಂಗ್ ಪಡೆದುಕೊಂಡಿದ್ದು, ಆರಂಭಿಕ ಕಾರು ಮಾದರಿಯಾದ ಟಿಯಾಗೋ ಮತ್ತು ಟಿಗೋರ್ ಕಾರುಗಳು 4 ಸ್ಟಾರ್ ಇನ್ನುಳಿದ ಕಾರು ಮಾದರಿಗಳಾದ ಆಲ್‌ಟ್ರೊಜ್, ನೆಕ್ಸಾನ್ ಮತ್ತು ಹ್ಯಾರಿಯರ್ ಕಾರು ಮಾದರಿಗಳು 5 ಸ್ಟಾರ್ ಸೇಫ್ಟಿ ರೇಟಿಂಗ್ಸ್‌ನೊಂದಿಗೆ ಗರಿಷ್ಠ ಸುರಕ್ಷತೆಯನ್ನು ಖಾತ್ರಿಪಡಿಸುತ್ತವೆ.

ಕಾರುಗಳ ಸುರಕ್ಷತೆ ಕುರಿತಂತೆ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ಹೊಸ ವಾಹನಗಳ ಖರೀದಿದಾರರು ಕೈಗೆಟುಕುವ ಬೆಲೆಗಳಲ್ಲಿ ಸುರಕ್ಷತೆಗೂ ಆದ್ಯತೆ ನೀಡುತ್ತಿರುವುದು ಟಾಟಾ ಕಾರುಗಳ ಮಾರಾಟದಲ್ಲಿ ಮೊದಲ ಬಾರಿಗೆ ದಾಖಲೆ ಮಟ್ಟದಲ್ಲಿ ಏರಿಕೆಯಾಗಿದೆ.

ಇದೇ ಕಾರಣಕ್ಕೆ ತನ್ನ ಉತ್ಪನ್ನಗಳ ಕುರಿತು ವಿಶೇಷ ಜಾಹೀರಾತು ಪ್ರಕಟಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ಆಲ್‌ಟ್ರೊಜ್ ಸುರಕ್ಷತೆ ಅಭಿಯಾನ ಕೈಗೊಂಡಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಐ20 ಮತ್ತು ಮಾರುತಿ ಸುಜುಕಿ ಬಲೆನೊ ಕಾರುಗಳಿಗೆ ಪೈಪೋಟಿಯಾಗಿ ಭಾರೀ ಪ್ರಮಾಣದ ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ. ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳ ಮಾರಾಟದಲ್ಲಿ ಸದ್ಯ ಮುಂಚೂಣಿ ಸಾಧಿಸುತ್ತಿರುವ ಟಾಟಾ ಆಲ್‌ಟ್ರೊಜ್ ಆವೃತ್ತಿಯು ಬಿಡುಗಡೆಗೊಂಡ ಕೆಲವೇ ತಿಂಗಳಿನಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಬೆಲೆಯಲ್ಲೂ ಗಮನಸೆಳೆಯುತ್ತಿದೆ.

ಆಲ್‌ಟ್ರೊಜ್ ಕಾರು ಮಾದರಿಯು ಹೊಸದಾಗಿ ಬಿಡುಗಡೆ ಮಾಡಲಾದ ಎಕ್ಸ್‌ಎಂ ಪ್ಲಸ್ ಜೊತೆಗೆ ಎಕ್ಸ್‌ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಜೆಡ್, ಎಕ್ಸ್‌ಜೆಡ್ ಆಪ್ಷನ್ ಮತ್ತು ಎಕ್ಸ್‌ಜೆಡ್ ಅರ್ಬನ್ ವೆರಿಯೆಂಟ್‌ಗಳೊಂದಿಗೆ ಮಾರಾಟಗೊಳ್ಳುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.44 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.9.09 ಲಕ್ಷ ಬೆಲೆ ಹೊಂದಿದೆ.
ಮತ್ತೊಂದು ವಿಶೇಷವೆಂದರೆ, ಬಿಡಿಭಾಗಗಳ ಬೆಲೆ ಏರಿಳಿತಕ್ಕೆ ಅನುಗುಣವಾಗಿ ಹೊಸ ಕಾರಿನ ಬೆಲೆಯನ್ನು ಕಳೆದ ತಿಂಗಳು ತುಸು ಇಳಿಕೆ ಮಾಡಿದ್ದ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ವಿಶ್ವಾಸರ್ಹ ಬ್ರಾಂಡ್ ಆಗಿ ಹೊರಹೊಮ್ಮಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಟರ್ಬೋ ಪೆಟ್ರೋಲ್ ಮಾದರಿಯು ಇನ್ನಷ್ಟು ಬೇಡಿಕೆ ತಂದುಕೊಡುವ ನೀರಿಕ್ಷೆಯಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಹೊಸ ಕಾರಿನಲ್ಲಿ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಫೋರ್ ಸಿಲಿಂಡರ್ ರಿವೋಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಪೆಟ್ರೋಲ್ ಎಂಜಿನ್ ಅನ್ನು ಟಿಯಾಗೋದಿಂದ ಮತ್ತು ಡೀಸೆಲ್ ಎಂಜಿನ್ ಅನ್ನು ನೆಕ್ಸಾನ್ ಕಾರಿನಿಂದ ಎರವಲು ಪಡೆಯಲಾಗಿದೆ.

ಸದ್ಯಕ್ಕೆ ಆಲ್‌ಟ್ರೊಜ್ ಕಾರಿನಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 86-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗಿ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ಮಾದರಿಯು ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಪಡೆದುಕೊಂಡಿದ್ದು, ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲಿದೆ.