ಆಲ್‌ಟ್ರೊಜ್ ಕಾರು ಮಾದರಿಯಲ್ಲಿ ಎಕ್ಸ್ಎಂ ಪ್ಲಸ್ ವೆರಿಯೆಂಟ್ ಬಿಡುಗಡೆ ಮಾಡಿದ ಟಾಟಾ ಮೋಟಾರ್ಸ್
ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳ ಮಾರಾಟದಲ್ಲಿ ಸದ್ಯ ಮುಂಚೂಣಿ ಸಾಧಿಸುತ್ತಿರುವ ಟಾಟಾ ಆಲ್‌ಟ್ರೊಜ್ ಆವೃತ್ತಿಯು ಬಿಡುಗಡೆಗೊಂಡ ಕೆಲವೇ ತಿಂಗಳಿನಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಮಧ್ಯಮ ಕ್ರಮಾಂಕದಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಾಗಿದೆ.

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಕಾರು ಮಾದಿರಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಎರಡು ತಿಂಗಳಿಗೆ ಒಂದು ಬಾರಿಗೆ ವೆರಿಯೆಂಟ್‌ಗಳ ಉನ್ನತೀಕರಣ ಮತ್ತು ಹೊಸ ವೆರಿಯೆಂಟ್ ಅಭಿವೃದ್ದಿಗೊಳಿಸುವ ಪ್ರಕ್ರಿಯೆ ಕೈಗೊಂಡಿದ್ದು, ಇದೀಗ ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ಕಾರು ಮಾದರಿಯ ಮಧ್ಯಮ ಕ್ರಮಾಂಕದ ವೆರಿಯೆಂಟ್‌ನಲ್ಲಿ ಎಕ್ಸ್ಎಂ ಪ್ಲಸ್ ಮಾದರಿಯನ್ನು ಬಿಡುಗಡೆ ಮಾಡಿದ್ದು, ಹೊಸ ಆವೃತ್ತಿಯು ಎಕ್ಸ್ಎಂ ಮತ್ತು ಎಕ್ಸ್‌ಟಿ ನಡುವಿನ ಸ್ಥಾನ ತುಂಬಲಿದೆ.

ಹೊಸ ಎಕ್ಸ್ಎಂ ಪ್ಲಸ್ ಮಾದರಿಯು ಪೆಟ್ರೋಲ್ ಮಾದರಿಯಲ್ಲಿ ಮಾತ್ರ ಖರೀದಿಗೆ ಲಭ್ಯವಿದ್ದು, ಹೊಸ ವೆರಿಯೆಂಟ್‌ನಲ್ಲಿ 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಆ್ಯಪಲ್ ಕಾರ್‌ಪ್ಲೇ, ಅಂಡ್ರಾಯಿಡ್ ಆಟೋ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಟಾಟಾ ಮೋಟಾರ್ಸ್ ಕಂಪನಿಯು ಆಲ್‌ಟ್ರೊಜ್ ಹೊಸ ಮಾದರಿಯನ್ನು ಇತ್ತೀಚೆಗೆ ಬಿಡುಗಡೆಯಾದ ನ್ಯೂ ಜನರೇಷನ್ ಹ್ಯುಂಡೈ ಐ20 ಕಾರಿಗೆ ಪೈಪೋಟಿಯಾಗಿ ಬಿಡುಗಡೆ ಮಾಡಿದ್ದು, ಹೊಸ ವೆರಿಯೆಂಟ್ ಬೆಲೆಯನ್ನು ಎಕ್ಸ್‌ಶೋರೂಂ ಪ್ರಕಾರ ರೂ. 6.60 ಲಕ್ಷಕ್ಕೆ ನಿಗದಿಪಡಿಸಿದೆ.

ಆಲ್‌ಟ್ರೊಜ್ ಕಾರು ಮಾದರಿಯು ಹೊಸದಾಗಿ ಬಿಡುಗಡೆ ಮಾಡಲಾ ಎಕ್ಸ್‌ಎಂ ಪ್ಲಸ್ ಜೊತೆಗೆ ಎಕ್ಸ್‌ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಜೆಡ್, ಎಕ್ಸ್‌ಜೆಡ್ ಆಪ್ಷನ್ ಮತ್ತು ಎಕ್ಸ್‌ಜೆಡ್ ಅರ್ಬನ್ ವೆರಿಯೆಂಟ್‌ಗಳೊಂದಿಗೆ ಮಾರಾಟಗೊಳ್ಳುತ್ತಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.44 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.9.09 ಲಕ್ಷ ಬೆಲೆ ಹೊಂದಿದೆ.

ಮತ್ತೊಂದು ವಿಶೇಷವೆಂದರೆ, ಬಿಡಿಭಾಗಗಳ ಬೆಲೆ ಏರಿಳಿತಕ್ಕೆ ಅನುಗುಣವಾಗಿ ಹೊಸ ಕಾರಿನ ಬೆಲೆಯನ್ನು ಕಳೆದ ತಿಂಗಳು ತುಸು ಇಳಿಕೆ ಮಾಡಿದ್ದ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ವಿಶ್ವಾಸರ್ಹ ಬ್ರಾಂಡ್ ಆಗಿ ಹೊರಹೊಮ್ಮಿದ್ದು, ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗಿರುವ ಟರ್ಬೋ ಪೆಟ್ರೋಲ್ ಮಾದರಿಯು ಇನ್ನಷ್ಟು ಬೇಡಿಕೆ ತಂದುಕೊಡುವ ನೀರಿಕ್ಷೆಯಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಹೊಸ ಕಾರಿನಲ್ಲಿ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಫೋರ್ ಸಿಲಿಂಡರ್ ರಿವೋಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಪೆಟ್ರೋಲ್ ಎಂಜಿನ್ ಅನ್ನು ಟಿಯಾಗೋದಿಂದ ಮತ್ತು ಡೀಸೆಲ್ ಎಂಜಿನ್ ಅನ್ನು ನೆಕ್ಸಾನ್ ಕಾರಿನಿಂದ ಎರವಲು ಪಡೆಯಲಾಗಿದೆ.

ಸದ್ಯಕ್ಕೆ ಆಲ್‌ಟ್ರೊಜ್ ಕಾರಿನಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 86-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಮುಂಬರುವ ದಿನಗಳಲ್ಲಿ ಬಿಡುಗಡೆಗೆ ಸಿದ್ದವಾಗಿ ಆಲ್‌ಟ್ರೊಜ್ ಟರ್ಬೋ ಪೆಟ್ರೋಲ್ ಮಾದರಿಯು ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ ಅತ್ಯುತ್ತಮ ಪರ್ಫಾಮೆನ್ಸ್ ಪಡೆದುಕೊಂಡಿದ್ದು, ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ಹೊಸ ಸಂಚಲನ ಸೃಷ್ಠಿಸಲಿದೆ.


Click it and Unblock the Notifications