ಸೆಪ್ಟೆಂಬರ್‌ನಲ್ಲಿ ಭರ್ಜರಿ ಮಾರಾಟ ಕಂಡ ಟಾಟಾ ಆಲ್‌‌ಟ್ರೊಜ್ ಕಾರು

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಆಲ್‌‌ಟ್ರೊಜ್ ಕಾರನ್ನು ಈ ವರ್ಷದ ಆರಂಭದಲ್ಲಿ ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿತ್ತು. ಹೊಸ ಟಾಟಾ ಆಲ್‌‌ಟ್ರೊಜ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ಉತ್ತಮ ಬೇಡಿಕೆಯನ್ನು ಪಡೆದುಕೊಂಡಿದೆ.

ಸೆಪ್ಟೆಂಬರ್‌ನಲ್ಲಿ ಭರ್ಜರಿ ಮಾರಾಟ ಕಂಡ ಟಾಟಾ ಆಲ್‌‌ಟ್ರೊಜ್ ಕಾರು

ಟಾಟಾ ಕಂಪನಿಯು ದೇಶಿಯ ಮಾರುಕಟ್ಟೆಯಲ್ಲಿ ಕಂಪನಿಯ ಮೊದಲ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಗಿ ಆಲ್‌‌ಟ್ರೊಜ್ ಕಾರನ್ನು ಬಿಡುಗಡೆಗೊಳಿಸಿತು. ಇನ್ನು ಟಾಟಾ ಆಲ್‌‌ಟ್ರೊಜ್ ಮಾರಾಟದಲ್ಲಿ ಉತ್ತಮ ಚೇತರಿಕೆಯನ್ನು ಕಂಡಿದೆ. 2020ರ ಸೆಪ್ಟೆಂಬರ್ ತಿಂಗಳಲ್ಲಿ ಟಾಟಾ ಆಲ್‌‌ಟ್ರೊಜ್ 5,952 ಯುನಿಟ್‌ಗಳು ಮಾರಾಟವಾಗಿವೆ. ಕಳೆದ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ಟಾಟಾ ಆಲ್‌‌ಟ್ರೊಜ್ 4,951 ಯುನಿಟ್‌ಗಳು ಮಾರಾಟವಾಗಿತ್ತು.

ಸೆಪ್ಟೆಂಬರ್‌ನಲ್ಲಿ ಭರ್ಜರಿ ಮಾರಾಟ ಕಂಡ ಟಾಟಾ ಆಲ್‌‌ಟ್ರೊಜ್ ಕಾರು

ಕಳೆದ ವರ್ಷದ ಸೆಪ್ಟೆಂಬರ್ ತಿಂಗಳ ಮಾರಾಟವನ್ನು ಈ ವರ್ಷದ ಅದೇ ತಿಂಗಳಿಗೆ ಹೋಲಿಸಿದರೆ ಶೇ.20 ರಷ್ಟು ಬೆಳವಣಿಗೆಯನ್ನು ಕಂಡಿದೆ. ಭಾರತೀಯ ಮಾರುಕಟ್ಟೆಯಲ್ಲಿ ಅತಿ ಹೆಚ್ಚು ಮಾರಾಟವಾದ ಮೂರನೇ ಟಾಟಾ ಪ್ಯಾಸೆಂಜರ್ ಕಾರು ಇದಾಗಿದೆ.

MOST READ: 2020ರ ಸಿಟಿ ಕಾರಿನ ಉತ್ಪಾದನೆಯನ್ನು ಪ್ರಾರಂಭಿಸಿದ ಹೋಂಡಾ

ಸೆಪ್ಟೆಂಬರ್‌ನಲ್ಲಿ ಭರ್ಜರಿ ಮಾರಾಟ ಕಂಡ ಟಾಟಾ ಆಲ್‌‌ಟ್ರೊಜ್ ಕಾರು

ಟಾಟಾ ಆಲ್‌‌ಟ್ರೊಜ್ ಎರಡು ಎಂಜಿನ್ ಆಯ್ಕೆಯೊಂದಿಗೆ ಲಭ್ಯವಿದೆ. ಇದರಲ್ಲಿ 1.2-ಲೀಟರ್, ಮೂರು-ಸಿಲಿಂಡರ್ ಪೆಟ್ರೋಲ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 85 ಬಿಹೆಚ್‌ಪಿ ಪವರ್ ಮತ್ತು 113 ಎನ್ಎಂ ಟಾರ್ಕ್ ಉತ್ಪಾದಿಸುತ್ತದೆ.

ಸೆಪ್ಟೆಂಬರ್‌ನಲ್ಲಿ ಭರ್ಜರಿ ಮಾರಾಟ ಕಂಡ ಟಾಟಾ ಆಲ್‌‌ಟ್ರೊಜ್ ಕಾರು

ಟಾಟಾ ಆಲ್‌‌ಟ್ರೊಜ್ ಕಾರು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಪ್ರತಿಸ್ಪರ್ಧಿಗಳಾದ ಮಾರುತಿ ಬಲೆನೊ ಮತ್ತು ಹ್ಯುಂಡೈ ಐ20 ಕಾರುಗಳಿಗೆ ಉತ್ತಮ ಪೈಪೋಟಿಯನ್ನು ನೀಡುತ್ತಿದೆ.

MOST READ: ಮಾರಾಟದಲ್ಲಿ ಹೊಸ ಮೈಲಿಗಲ್ಲು ಸಾಧಿಸಿದ ಹೋಂಡಾ ಆಮೇಜ್ ಕಾರು

ಸೆಪ್ಟೆಂಬರ್‌ನಲ್ಲಿ ಭರ್ಜರಿ ಮಾರಾಟ ಕಂಡ ಟಾಟಾ ಆಲ್‌‌ಟ್ರೊಜ್ ಕಾರು

ಟಾಟಾ ಆಲ್‌‌ಟ್ರೊಜ್ ಕಾರಿನ ಮತ್ತೊಂದು ವಿಶೇಷವೆಂದರೆ ಅದರ ಡೋರುಗಳು 90 ಡಿಗ್ರಿಗಳಷ್ಟು ತೆರೆದುಕೊಳ್ಳುತ್ತವೆ. ಇದರಿಂದಾಗಿ ಈ ಕಾರಿನ ಒಳಗೆ ಸುಲಭವಾಗಿ ಪ್ರವೇಶಿಸಬಹುದಾಗಿದೆ. ಆಲ್‌‌ಟ್ರೊಜ್ ಮಾದರಿಯ ಕ್ಯಾಬಿನ್ ಕೂಡ ಆಕರ್ಷಕವಾಗಿದೆ.

ಸೆಪ್ಟೆಂಬರ್‌ನಲ್ಲಿ ಭರ್ಜರಿ ಮಾರಾಟ ಕಂಡ ಟಾಟಾ ಆಲ್‌‌ಟ್ರೊಜ್ ಕಾರು

ಟಾಟಾ ಆಲ್‌‌ಟ್ರೊಜ್ ಕಾರು ಇಂಪ್ಯಾಕ್ಟ್ 2.0 ವಿನ್ಯಾಸ ಶೈಲಿಯನ್ನು ಹೊಂದಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್ ಆಕರ್ಷಕ ವಿನ್ಯಾಸದೊಂದಿಗೆ ಸಖತ್ ಬೋಲ್ಡ್ ಲುಕ್ ಅನ್ನು ಹೊಂದಿದೆ. ಇನ್ನು ಈ ಹ್ಯಾಚ್‌ಬ್ಯಾಕ್‌ನಲ್ಲಿ ಎಲ್‌ಇಡಿ ಡಿಆರ್‌ಎಲ್‌, ಎಲ್‌ಇಡಿ ಟೈಲ್‌ಲೈಟ್ ಮತ್ತು 16 ಇಂಚಿನ ಡೈಮಂಡ್-ಕಟ್ ಅಲಾಯ್ ವ್ಹೀಲ್‌ಗಳನ್ನು ಹೊಂದಿವೆ.

MOST READ: ಬಿಡುಗಡೆಯ ಸನಿಹದಲ್ಲಿ ಹೊಸ ಮಾರುತಿ ಸುಜುಕಿ ಸೆಲೆರಿಯೊ

ಸೆಪ್ಟೆಂಬರ್‌ನಲ್ಲಿ ಭರ್ಜರಿ ಮಾರಾಟ ಕಂಡ ಟಾಟಾ ಆಲ್‌‌ಟ್ರೊಜ್ ಕಾರು

ಈ ಕಾರಿನಲ್ಲಿ ಡಿಜಿಟಲ್ ಇನ್ಸ್ಟ್ರುಮೆಂಟ್ ಕ್ಲಸ್ಟರ್ ಮತ್ತು ಆಪಲ್ ಕಾರ್ಪ್ಲೇ ಮತ್ತು ಆಂಡ್ರಾಯ್ಡ್ ಆಟೋದೊಂದಿಗೆ ಏಳು ಇಂಚಿನ ಟಚ್‌ಸ್ಕ್ರೀನ್ ಇನ್ಫೋಟೈನ್‌ಮೆಂಟ್ ಸಿಸ್ಟಂ ಅನ್ನು ಒಳಗೊಂಡಿದೆ. ಈ ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನಲ್ಲಿ ಮೌಂಟಡ್ ಕಂಟ್ರೋಲ್ ಗಳೊಂದಿಗೆ ಫ್ಲಾಟ್-ಬಾಟಮ್ ಸ್ಟೀಯರಿಂಗ್ ವ್ಹೀಲ್ ಅನ್ನು ಹೊಂದಿದೆ.

ಸೆಪ್ಟೆಂಬರ್‌ನಲ್ಲಿ ಭರ್ಜರಿ ಮಾರಾಟ ಕಂಡ ಟಾಟಾ ಆಲ್‌‌ಟ್ರೊಜ್ ಕಾರು

ಟಾಟಾ ಆಲ್‌‌ಟ್ರೊಜ್ ದೇಶಿಯ ಮಾರುಕಟ್ಟೆಯ ಪ್ರೀಮಿಯಂ ಹ್ಯಾಚ್‌ಬ್ಯಾಕ್ ವಿಭಾಗದ ಜನಪ್ರಿಯ ಕಾರುಗಳಲ್ಲಿ ಒಂದಾಗಿದೆ. ಟಾಟಾ ಮೋಟಾರ್ಸ್ ಕಂಪನಿಯು ಭಾರತೀಯ ಮಾರುಕಟ್ಟೆಯಲ್ಲಿ ತನ್ನ ಹೊಸ ಆಲ್‌‌ಟ್ರೊಜ್ ಟರ್ಬೊ-ಪೆಟ್ರೋಲ್ ಆವೃತ್ತಿಯನ್ನು ಶೀಘ್ರದಲ್ಲೇ ಬಿಡುಗಡೆಗೊಳಿಸಲಿದೆ.

ಸೆಪ್ಟೆಂಬರ್‌ನಲ್ಲಿ ಭರ್ಜರಿ ಮಾರಾಟ ಕಂಡ ಟಾಟಾ ಆಲ್‌‌ಟ್ರೊಜ್ ಕಾರು

ಟಾಟಾ ಆಲ್‌‌ಟ್ರೊಜ್ ಕಾರನ್ನು ಟರ್ಬೋ ಪೆಟ್ರೋಲ್ ಆವೃತ್ತಿಯಾಗಿ ಬಿಡುಗಡೆಗೊಳಿಸಿರುವುದರಿಂದ ಹೆಚ್ಚಿನ ಗ್ರಾಹಕರನ್ನು ಸೆಳೆಯಬಹುದು ಎಂದು ನಿರೀಕ್ಷಿಸುತ್ತೇವೆ. ಅಲ್ಲದೇ ಹಬ್ಬದ ಸೀಸನ್ ನಲ್ಲಿ ಮಾರಾಟವನ್ನು ಹೆಚ್ಚಿಸಲು ಸಹಕಾರಿಯಾಗಬಹುದು.

Article Published On: Monday, October 5, 2020, 9:43 [IST]
English summary
Tata Altroz Records Nearly 6,000 Units In September; Highest Monthly Sales. Read In Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+