ಆಲ್‌ಟ್ರೊಜ್ ಕಾರಿನಲ್ಲಿ ಮತ್ತೊಂದು ಹೊಸ ವೆರಿಯೆಂಟ್ ಪರಿಚಯಿಸಲಿದೆ ಟಾಟಾ ಮೋಟಾರ್ಸ್
ಪ್ರೀಮಿಯಂ ಹ್ಯಾಚ್‌ಬ್ಯಾಕ್ ಕಾರು ಮಾದರಿಗಳ ಮಾರಾಟದಲ್ಲಿ ಸದ್ಯ ಮುಂಚೂಣಿ ಸಾಧಿಸುತ್ತಿರುವ ಟಾಟಾ ಆಲ್‌ಟ್ರೊಜ್ ಆವೃತ್ತಿಯು ಬಿಡುಗಡೆಗೊಂಡ ಕೆಲವೇ ತಿಂಗಳಿನಲ್ಲಿ ಹೊಸ ದಾಖಲೆಗೆ ಕಾರಣವಾಗಿದ್ದು, ಹೊಸ ಕಾರಿನಲ್ಲಿ ಗ್ರಾಹಕರ ಬೇಡಿಕೆಯೆಂತೆ ಮಧ್ಯಮ ಕ್ರಮಾಂಕದಲ್ಲಿ ಹೊಸ ವೆರಿಯೆಂಟ್ ಪರಿಚಯಿಸಲು ಸಿದ್ದತೆ ನಡೆಸಲಾಗಿದೆ.

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಪ್ರಮುಖ ಕಾರು ಮಾದಿರಗಳಲ್ಲಿ ಗ್ರಾಹಕರ ಬೇಡಿಕೆಯೆಂತೆ ಎರಡು ತಿಂಗಳಿಗೆ ಒಂದು ಬಾರಿಗೆ ವೆರಿಯೆಂಟ್‌ಗಳ ಉನ್ನತೀಕರಣ ಮತ್ತು ಹೊಸ ವೆರಿಯೆಂಟ್ ಅಭಿವೃದ್ದಿಗೊಳಿಸುವ ಪ್ರಕ್ರಿಯೆ ಕೈಗೊಂಡಿದ್ದು, ಇದೀಗ ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ಕಾರು ಮಾದರಿಯ ಮಧ್ಯಮ ಕ್ರಮಾಂಕದ ವೆರಿಯೆಂಟ್‌ನಲ್ಲಿ ಎಕ್ಸ್ಎಂ ಪ್ಲಸ್ ಮಾದರಿಯನ್ನು ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಹೊಸ ಆವೃತ್ತಿಯು ಎಕ್ಸ್ಎಂ ಮತ್ತು ಎಕ್ಸ್‌ಟಿ ನಡುವಿನ ಸ್ಥಾನ ತುಂಬಲಿದೆ.

ಹೊಸ ಎಕ್ಸ್ಎಂ ಪ್ಲಸ್ ಮಾದರಿಯು ಪೆಟ್ರೋಲ್ ಮತ್ತು ಡೀಸೆಲ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಿರಲಿದ್ದು, ಹೊಸ ವೆರಿಯೆಂಟ್‌ನಲ್ಲಿ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್, ಆ್ಯಪಲ್ ಕಾರ್‌ಪ್ಲೇ, ಅಂಡ್ರಾಯಿಡ್ ಆಟೋ ಸೌಲಭ್ಯಗಳನ್ನು ಪಡೆದುಕೊಂಡಿರಲಿದೆ.

ಇನ್ನು ಆಲ್‌ಟ್ರೊಜ್ ಕಾರು ಹ್ಯಾಚ್‌ಬ್ಯಾಕ್ ಕಾರುಗಳಲ್ಲೇ ವಿಶೇಷ ಪ್ರೀಮಿಯಂ ಫೀಚರ್ಸ್‌ಗಳನ್ನು ಹೊಂದಿದ್ದು, ಅತ್ಯುತ್ತಮ ಎಂಜಿನ್ ಆಯ್ಕೆಯೊಂದಿಗೆ ಆಕರ್ಷಕ ಬೆಲೆಗಳನ್ನು ಪಡೆದುಕೊಂಡಿರುವುದು ಗ್ರಾಹಕರ ಆಕರ್ಷಣೆಗೆ ಪ್ರಮುಖ ಕಾರಣವಾಗಿದೆ.

ಹೊಸ ಕಾರು ಸದ್ಯ ಎಕ್ಸ್‌ಇ, ಎಕ್ಸ್ಎಂ, ಎಕ್ಸ್‌ಟಿ, ಎಕ್ಸ್‌ಜೆಡ್, ಎಕ್ಸ್‌ಜೆಡ್ ಆಪ್ಷನ್ ಮತ್ತು ಎಕ್ಸ್‌ಜೆಡ್ ಅರ್ಬನ್ ವೆರಿಯೆಂಟ್‌ಗಳೊಂದಿಗೆ ಮಾರಾಟಗೊಳ್ಳುತ್ತಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಇದೀಗ ಹೊಸದಾಗಿ ಎಕ್ಸ್ಎಂ ಪ್ಲಸ್ ಬಿಡುಗಡೆ ಮಾಡಲಾಗುತ್ತಿದ್ದು, ಶೀಘ್ರದಲ್ಲೇ ಬಿಡುಗಡೆಯಾಗಲಿರುವ ಹ್ಯುಂಡೈ ಐ20 ನ್ಯೂ ಜನರೇಷನ್ ಮಾದರಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಮತ್ತೊಂದು ವಿಶೇಷವೆಂದರೆ, ಬಿಡಿಭಾಗಗಳ ಬೆಲೆ ಏರಿಳಿತಕ್ಕೆ ಅನುಗುಣವಾಗಿ ಹೊಸ ಕಾರಿನ ಬೆಲೆಯನ್ನು ತುಸು ಇಳಿಕೆ ಮಾಡಿರುವ ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ವಿಶ್ವಾಸರ್ಹ ಬ್ರಾಂಡ್ ಆಗಿ ಹೊರಹೊಮ್ಮಿದ್ದು, ಟರ್ಬೋ ಮಾದರಿಯು ಇನ್ನಷ್ಟು ಬೇಡಿಕೆ ತಂದುಕೊಡುವ ನೀರಿಕ್ಷೆಯಿದೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಆಲ್‌ಟ್ರೊಜ್ ಕಾರು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.5.44 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.9.09 ಲಕ್ಷ ಬೆಲೆ ಹೊಂದಿದ್ದು, ಪೆಟ್ರೋಲ್ ಟರ್ಬೋ ಮಾದರಿಯು ಹ್ಯಾಚ್‌ಬ್ಯಾಕ್ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಹೊಸ ಕಾರಿನಲ್ಲಿ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಫೋರ್ ಸಿಲಿಂಡರ್ ರಿವೋಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಪೆಟ್ರೋಲ್ ಎಂಜಿನ್ ಅನ್ನು ಟಿಯಾಗೋದಿಂದ ಮತ್ತು ಡೀಸೆಲ್ ಎಂಜಿನ್ ಅನ್ನು ನೆಕ್ಸಾನ್ ಕಾರಿನಿಂದ ಎರವಲು ಪಡೆಯಲಾಗಿದೆ.
MOST READ: ರೂ.5 ಲಕ್ಷಕ್ಕಿಂತ ಕಡಿಮೆ ಬೆಲೆಯ ಜನಪ್ರಿಯ ಕಾರುಗಳಿವು

ಸದ್ಯಕ್ಕೆ ಆಲ್‌ಟ್ರೊಜ್ ಕಾರಿನಲ್ಲಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 86-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.


Click it and Unblock the Notifications