Just In
Don't Miss!
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Movies
ಡಬ್ಬಿಂಗ್ ಸಿನಿಮಾಗಳ ಬಗ್ಗೆ ಹಿರಿಯ ನಟ ದೊಡ್ಡಣ್ಣ ಅಸಮಾಧಾನ
- News
ಕೊರೊನಾ ನಿಯಂತ್ರಣದಲ್ಲಿ ವಿಫಲ: ಇಟಲಿ ಪ್ರಧಾನಿ ಗಿಸೆಪ್ಪೆ ಕಾಂಟೆ ರಾಜೀನಾಮೆ
- Sports
ಐಎಸ್ಎಲ್: ಜೆಮ್ಷೆಡ್ಪುರ ವಿರುದ್ಧ ಕ್ಲೀನ್ ಶೀಟ್ ಗುರಿಯಲ್ಲಿ ಕೇರಳ ಬ್ಲಾಸ್ಟರ್ಸ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಹ್ಯುಂಡೈ ಐ20 ಟರ್ಬೋ ಮಾದರಿಗಿಂತಲೂ ಬೆಲೆಯಲ್ಲಿ ಗಮನಸೆಳೆಯಲಿದೆ ಟಾಟಾ ಆಲ್ಟ್ರೊಜ್ ಟರ್ಬೋ
ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಯಾದ ಆಲ್ಟ್ರೊಜ್ ಕಾರು ಮಾದರಿಯ ಟರ್ಬೋ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಯಾದ ಹ್ಯುಂಡೈ ಐ20 ಟರ್ಬೋ ಮತ್ತು ಮಾರುತಿ ಸುಜುಕಿ ಬಲೆನೊ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಟಾಟಾ ಆಲ್ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಟಾಟಾ ಕಂಪನಿಯು ಹೊಸ ಆಲ್ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ನ್ಯೂ ಜನರೇಷನ್ ಹ್ಯುಂಡೈ ಐ20 ಕಾರಿಗೆ ಪೈಪೋಟಿಯಾಗಿ ರಸ್ತೆಗಿಳಿಸುತ್ತಿದೆ. ಹೊಸ ಕಾರು ಮಾದರಿಯು ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಳ್ಳುವುದಲ್ಲದೆ ಪ್ರತಿಸ್ಪರ್ಧಿ ಕಾರು ಮಾದರಿಯಲ್ಲಿ ಪರ್ಫಾಮೆನ್ಸ್ ಮತ್ತು ವಿವಿಧ ತಾಂತ್ರಿಕ ಅಂಶಗಳನ್ನು ಹೊಂದಿರಲಿದ್ದು, ಹೊಸ ಕಾರಿನ ಮೇಲೆ ಟಾಟಾ ಕಂಪನಿಯು ಭಾರೀ ನೀರಿಕ್ಷೆಯಿಟ್ಟುಕೊಂಡಿದೆ.

ಸದ್ಯ ಆಲ್ಟ್ರೊಜ್ ಕಾರಿನಲ್ಲಿ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಫೋರ್ ಸಿಲಿಂಡರ್ ರಿವೋಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಪೆಟ್ರೋಲ್ ಎಂಜಿನ್ ಅನ್ನು ಟಿಯಾಗೋದಿಂದ ಮತ್ತು ಡೀಸೆಲ್ ಎಂಜಿನ್ ಅನ್ನು ನೆಕ್ಸಾನ್ ಕಾರಿನಿಂದ ಎರವಲು ಪಡೆಯಲಾಗಿದೆ.

ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 86-ಬಿಎಚ್ಪಿ, 113-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಹೊಸ ಟಾಟಾ ಆಲ್ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯಲ್ಲಿ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಬಿಡುಗಡೆ ಮಾಡಲಾಗುತ್ತಿದ್ದು, ಹೊಸ ಎಂಜಿನ್ ಮಾದರಿಯು ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಗೇರ್ಬಾಕ್ಸ್ ಆಯ್ಕೆಯೊಂದಿಗೆ 110-ಬಿಹೆಚ್ಪಿ ಮತ್ತು 140-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ. ಟರ್ಬೋ ಆವೃತ್ತಿಯು ಟಾಪ್ ಎಂಡ್ನಲ್ಲಿ ಪ್ರಮುಖ ಎರಡು ಮಾದರಿಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದ್ದು, ಐ20 ಟರ್ಬೋ ಮಾದರಿಗೆ ಭರ್ಜರಿ ಪೈಪೋಟಿ ನೀಡಿಲಿದೆ.

ಪ್ರೀಮಿಯಂ ಹ್ಯಾಚ್ಬ್ಯಾಕ್ನ ಟಾಪ್ ಎಂಡ್ ಪೆಟ್ರೋಲ್ ಕಾರು ಮಾದರಿಗಳು ಎಕ್ಸ್ಶೋರೂಂ ದರದಂತೆ ರೂ.7.38 ಲಕ್ಷ ದಿಂದ ರೂ. 7.89 ಲಕ್ಷ ಅಂತರದಲ್ಲಿ ಬೆಲೆ ಹೊಂದಿದ್ದು, ಟರ್ಬೋ ಪೆಟ್ರೋಲ್ ಮಾದರಿಯ ಸಾಮಾನ್ಯ ಮಾದರಿಗಳಿಂತ ತುಸು ದುಬಾರಿಯಾಗಿರಲಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಆದರೆ ಹ್ಯುಂಡೈ ಐ20 ಟರ್ಬೋ ಪೆಟ್ರೋಲ್ ಆವೃತ್ತಿಯು ದೆಹಲಿ ಎಕ್ಸ್ಶೋರೂಂ ದರದಂತೆ ಆರಂಭಿಕವಾಗಿ ರೂ. 8.79 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.11.17 ಲಕ್ಷ ಬೆಲೆ ಹೊಂದಿದ್ದು, ಒಂದೇ ಮಾದರಿಯ ಎಂಜಿನ್ ಪಡೆದುಕೊಳ್ಳುತ್ತಿರುವ ಆಲ್ಟ್ರೊಜ್ ಟರ್ಬೋ ಮಾದರಿಯು ಈ ವಿಚಾರದಲ್ಲಿ ಗ್ರಾಹಕರನ್ನು ಸೆಳೆಯಲಿದೆ.

ಇನ್ನು ಟಾಟಾ ಆಲ್ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯು ಪ್ರಮುಖ ನಾಲ್ಕು ವೆರಿಯೆಂಟ್ ಗಳಲ್ಲಿ ಲಭ್ಯವಿರಲಿದ್ದು, ಟರ್ಬೋ ಮಾದರಿಯಲ್ಲಿ ಸಾಮಾನ್ಯ ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಸೌಲಭ್ಯಗಳಿರಲಿವೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಆಲ್ಟ್ರೊಜ್ ಕಾರು ಸದ್ಯ ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ಎಕ್ಸ್ಶೋರೂಂ ಪ್ರಕಾರ ರೂ.5.44 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.9.09 ಲಕ್ಷ ಬೆಲೆ ಹೊಂದಿದ್ದು, ಟರ್ಬೋ ಪೆಟ್ರೋಲ್ ಮಾದರಿಯ ನಂತರ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.