ಹ್ಯುಂಡೈ ಐ20 ಟರ್ಬೋ ಮಾದರಿಗಿಂತಲೂ ಬೆಲೆಯಲ್ಲಿ ಗಮನಸೆಳೆಯಲಿದೆ ಟಾಟಾ ಆಲ್‌ಟ್ರೊಜ್ ಟರ್ಬೋ

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಕಾರು ಮಾದರಿಯಾದ ಆಲ್‌ಟ್ರೊಜ್ ಕಾರು ಮಾದರಿಯ ಟರ್ಬೋ ಆವೃತ್ತಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಯಾದ ಹ್ಯುಂಡೈ ಐ20 ಟರ್ಬೋ ಮತ್ತು ಮಾರುತಿ ಸುಜುಕಿ ಬಲೆನೊ ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡಲಿದೆ.

ಹುಂಡೈ ಐ20 ಟರ್ಬೋ ಮಾದರಿಗಿಂತಲೂ ಬೆಲೆಯಲ್ಲಿ ಗಮನಸೆಳೆಯಲಿದೆ ಟಾಟಾ ಆಲ್‌ಟ್ರೊಜ್ ಟರ್ಬೋ

ಟಾಟಾ ಆಲ್‌‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯು ಶೀಘ್ರದಲ್ಲೇ ಬಿಡುಗಡೆಯಾಗಲಿದ್ದು, ಟಾಟಾ ಕಂಪನಿಯು ಹೊಸ ಆಲ್‌‌ಟ್ರೊಜ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ನ್ಯೂ ಜನರೇಷನ್ ಹ್ಯುಂಡೈ ಐ20 ಕಾರಿಗೆ ಪೈಪೋಟಿಯಾಗಿ ರಸ್ತೆಗಿಳಿಸುತ್ತಿದೆ. ಹೊಸ ಕಾರು ಮಾದರಿಯು ಆಕರ್ಷಕ ಬೆಲೆಯೊಂದಿಗೆ ಬಿಡುಗಡೆಗೊಳ್ಳುವುದಲ್ಲದೆ ಪ್ರತಿಸ್ಪರ್ಧಿ ಕಾರು ಮಾದರಿಯಲ್ಲಿ ಪರ್ಫಾಮೆನ್ಸ್ ಮತ್ತು ವಿವಿಧ ತಾಂತ್ರಿಕ ಅಂಶಗಳನ್ನು ಹೊಂದಿರಲಿದ್ದು, ಹೊಸ ಕಾರಿನ ಮೇಲೆ ಟಾಟಾ ಕಂಪನಿಯು ಭಾರೀ ನೀರಿಕ್ಷೆಯಿಟ್ಟುಕೊಂಡಿದೆ.

ಹುಂಡೈ ಐ20 ಟರ್ಬೋ ಮಾದರಿಗಿಂತಲೂ ಬೆಲೆಯಲ್ಲಿ ಗಮನಸೆಳೆಯಲಿದೆ ಟಾಟಾ ಆಲ್‌ಟ್ರೊಜ್ ಟರ್ಬೋ

ಸದ್ಯ ಆಲ್‌ಟ್ರೊಜ್ ಕಾರಿನಲ್ಲಿ ಬಿಎಸ್-6 ವೈಶಿಷ್ಟ್ಯತೆಯ 1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮತ್ತು 1.5-ಲೀಟರ್ ಫೋರ್ ಸಿಲಿಂಡರ್ ರಿವೋಟಾರ್ಕ್ ಡೀಸೆಲ್ ಎಂಜಿನ್ ಆಯ್ಕೆಯನ್ನು ನೀಡಲಾಗಿದ್ದು, ಪೆಟ್ರೋಲ್ ಎಂಜಿನ್ ಅನ್ನು ಟಿಯಾಗೋದಿಂದ ಮತ್ತು ಡೀಸೆಲ್ ಎಂಜಿನ್ ಅನ್ನು ನೆಕ್ಸಾನ್ ಕಾರಿನಿಂದ ಎರವಲು ಪಡೆಯಲಾಗಿದೆ.

ಹುಂಡೈ ಐ20 ಟರ್ಬೋ ಮಾದರಿಗಿಂತಲೂ ಬೆಲೆಯಲ್ಲಿ ಗಮನಸೆಳೆಯಲಿದೆ ಟಾಟಾ ಆಲ್‌ಟ್ರೊಜ್ ಟರ್ಬೋ

ಸ್ಟ್ಯಾಂಡರ್ಡ್ ಆಗಿ 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಮಾತ್ರವೇ ನೀಡಲಾಗಿದ್ದು, 1.2-ಲೀಟರ್ ಪೆಟ್ರೋಲ್ ಎಂಜಿನ್ ಮಾದರಿಯು 86-ಬಿಎಚ್‌ಪಿ, 113-ಎನ್ಎಂ ಟಾರ್ಕ್ ಮತ್ತು 1.5-ಲೀಟರ್ ಡೀಸೆಲ್ ಆವೃತ್ತಿಯು 90-ಬಿಎಚ್‌ಪಿ, 200-ಎನ್ಎಂ ಟಾರ್ಕ್ ಉತ್ಪಾದನೆ ಮಾಡಬಲ್ಲದು.

ಹುಂಡೈ ಐ20 ಟರ್ಬೋ ಮಾದರಿಗಿಂತಲೂ ಬೆಲೆಯಲ್ಲಿ ಗಮನಸೆಳೆಯಲಿದೆ ಟಾಟಾ ಆಲ್‌ಟ್ರೊಜ್ ಟರ್ಬೋ

ಹೊಸ ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯಲ್ಲಿ 1.2-ಲೀಟರ್ ಟರ್ಬೊ-ಪೆಟ್ರೋಲ್ ಎಂಜಿನ್ ಅನ್ನು ಬಿಡುಗಡೆ ಮಾಡಲಾಗುತ್ತಿದ್ದು, ಹೊಸ ಎಂಜಿನ್ ಮಾದರಿಯು ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ 110-ಬಿಹೆಚ್‍ಪಿ ಮತ್ತು 140-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸಲಾಗುತ್ತದೆ. ಟರ್ಬೋ ಆವೃತ್ತಿಯು ಟಾಪ್ ಎಂಡ್‌ನಲ್ಲಿ ಪ್ರಮುಖ ಎರಡು ಮಾದರಿಗಳಲ್ಲಿ ಮಾತ್ರ ಖರೀದಿಗೆ ಲಭ್ಯವಿರಲಿದ್ದು, ಐ20 ಟರ್ಬೋ ಮಾದರಿಗೆ ಭರ್ಜರಿ ಪೈಪೋಟಿ ನೀಡಿಲಿದೆ.

ಹುಂಡೈ ಐ20 ಟರ್ಬೋ ಮಾದರಿಗಿಂತಲೂ ಬೆಲೆಯಲ್ಲಿ ಗಮನಸೆಳೆಯಲಿದೆ ಟಾಟಾ ಆಲ್‌ಟ್ರೊಜ್ ಟರ್ಬೋ

ಪ್ರೀಮಿಯಂ ಹ್ಯಾಚ್‌ಬ್ಯಾಕ್‌ನ ಟಾಪ್ ಎಂಡ್ ಪೆಟ್ರೋಲ್ ಕಾರು ಮಾದರಿಗಳು ಎಕ್ಸ್‌ಶೋರೂಂ ದರದಂತೆ ರೂ.7.38 ಲಕ್ಷ ದಿಂದ ರೂ. 7.89 ಲಕ್ಷ ಅಂತರದಲ್ಲಿ ಬೆಲೆ ಹೊಂದಿದ್ದು, ಟರ್ಬೋ ಪೆಟ್ರೋಲ್ ಮಾದರಿಯ ಸಾಮಾನ್ಯ ಮಾದರಿಗಳಿಂತ ತುಸು ದುಬಾರಿಯಾಗಿರಲಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಹುಂಡೈ ಐ20 ಟರ್ಬೋ ಮಾದರಿಗಿಂತಲೂ ಬೆಲೆಯಲ್ಲಿ ಗಮನಸೆಳೆಯಲಿದೆ ಟಾಟಾ ಆಲ್‌ಟ್ರೊಜ್ ಟರ್ಬೋ

ಆದರೆ ಹ್ಯುಂಡೈ ಐ20 ಟರ್ಬೋ ಪೆಟ್ರೋಲ್ ಆವೃತ್ತಿಯು ದೆಹಲಿ ಎಕ್ಸ್‌ಶೋರೂಂ ದರದಂತೆ ಆರಂಭಿಕವಾಗಿ ರೂ. 8.79 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.11.17 ಲಕ್ಷ ಬೆಲೆ ಹೊಂದಿದ್ದು, ಒಂದೇ ಮಾದರಿಯ ಎಂಜಿನ್ ಪಡೆದುಕೊಳ್ಳುತ್ತಿರುವ ಆಲ್‌ಟ್ರೊಜ್ ಟರ್ಬೋ ಮಾದರಿಯು ಈ ವಿಚಾರದಲ್ಲಿ ಗ್ರಾಹಕರನ್ನು ಸೆಳೆಯಲಿದೆ.

ಹುಂಡೈ ಐ20 ಟರ್ಬೋ ಮಾದರಿಗಿಂತಲೂ ಬೆಲೆಯಲ್ಲಿ ಗಮನಸೆಳೆಯಲಿದೆ ಟಾಟಾ ಆಲ್‌ಟ್ರೊಜ್ ಟರ್ಬೋ

ಇನ್ನು ಟಾಟಾ ಆಲ್‌‌ಟ್ರೊಜ್ ಟರ್ಬೊ ಪೆಟ್ರೋಲ್ ಆವೃತ್ತಿಯು ಪ್ರಮುಖ ನಾಲ್ಕು ವೆರಿಯೆಂಟ್ ಗಳಲ್ಲಿ ಲಭ್ಯವಿರಲಿದ್ದು, ಟರ್ಬೋ ಮಾದರಿಯಲ್ಲಿ ಸಾಮಾನ್ಯ ಆವೃತ್ತಿಗಿಂತಲೂ ಹೆಚ್ಚಿನ ಮಟ್ಟದ ಪ್ರೀಮಿಯಂ ಸೌಲಭ್ಯಗಳಿರಲಿವೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಹುಂಡೈ ಐ20 ಟರ್ಬೋ ಮಾದರಿಗಿಂತಲೂ ಬೆಲೆಯಲ್ಲಿ ಗಮನಸೆಳೆಯಲಿದೆ ಟಾಟಾ ಆಲ್‌ಟ್ರೊಜ್ ಟರ್ಬೋ

ಆಲ್‌ಟ್ರೊಜ್ ಕಾರು ಸದ್ಯ ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ಎಕ್ಸ್‌ಶೋರೂಂ ಪ್ರಕಾರ ರೂ.5.44 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.9.09 ಲಕ್ಷ ಬೆಲೆ ಹೊಂದಿದ್ದು, ಟರ್ಬೋ ಪೆಟ್ರೋಲ್ ಮಾದರಿಯ ನಂತರ ಮತ್ತಷ್ಟು ಬೇಡಿಕೆ ಪಡೆದುಕೊಳ್ಳುವ ನೀರಿಕ್ಷೆಯಲ್ಲಿದೆ.

Most Read Articles

Kannada
English summary
Altroz Turbo Could Be Priced Competitively Against Hyundai i20 Turbo. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X