Just In
Don't Miss!
- News
ಪೊಲೀಸ್ ಠಾಣೆಯಲ್ಲಿ ಬಗೆಹರಿದ ಒಂದು ಕೋಣದ ವಿವಾದ!
- Movies
'ದೀಪ್ ಸಿಧು ಜೊತೆ ನನಗೆ ಯಾವುದೇ ಸಂಬಂಧವಿಲ್ಲ': ಸಂಸದ, ನಟ ಸನ್ನಿ ಡಿಯೋಲ್ ಸ್ಪಷ್ಟನೆ
- Finance
ಬಜೆಟ್ 2021: ಸ್ಟ್ಯಾಂಡರ್ಡ್ ಡಿಡಕ್ಷನ್ ರು. 1 ಲಕ್ಷಕ್ಕೆ ಹೆಚ್ಚಳ ನಿರೀಕ್ಷೆ
- Sports
ಬೈರ್ಸ್ಟೋವ್ಗೆ 2 ಪಂದ್ಯಗಳ ವಿಶ್ರಾಂತಿ ನೀಡಿರುವುದನ್ನು ಸಮರ್ಥಿಸಿದ ಇಂಗ್ಲೆಂಡ್ ಕೋಚ್
- Education
WCD Chitradurga Recruitment 2021: ಅಂಗನವಾಡಿಯಲ್ಲಿ 129 ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಟಾಟಾ ವಿವಿಧ ಕಾರು ಮಾದರಿಗಳ ಖರೀದಿ ಮೇಲೆ ಆಕರ್ಷಕ ಇಯರ್ ಎಂಡ್ ಆಫರ್
ಟಾಟಾ ಮೋಟಾರ್ಸ್ ಕಂಪನಿಯು ವರ್ಷಾಂತ್ಯದಲ್ಲಿ ಕಾರು ಖರೀದಿಯ ಯೋಜನೆಯಲ್ಲಿರುವ ಗ್ರಾಹಕರಿಗೆ ಹಲವಾರು ಆಫರ್‌ಗಳನ್ನು ಘೋಷಣೆ ಮಾಡಿದ್ದು, ಇಯರ್ ಎಂಡ್ ಆಫರ್‌ನಲ್ಲಿ ಗ್ರಾಹಕರಿಗೆ ಗರಿಷ್ಠ ಪ್ರಮಾಣದ ಡಿಸ್ಕೌಂಟ್ ನೀಡಲಾಗುತ್ತಿದೆ.

ದಸರಾ ಮತ್ತು ದೀಪಾವಳಿ ಆಫರ್‌ಗಳ ನಂತರ ಇದೀಗ ಇಯರ್ ಎಂಡ್ ಆಫರ್‌ಗಳನ್ನು ಘೋಷಣೆ ಮಾಡುತ್ತಿರುವ ವಿವಿಧ ಆಟೋ ಉತ್ಪಾದನಾ ಕಂಪನಿಗಳು ಗ್ರಾಹಕರನ್ನು ಸೆಳೆಯುತ್ತಿದ್ದು, ಟಾಟಾ ಮೋಟಾರ್ಸ್ ಕೂಡಾ ತನ್ನ ಪ್ರಮುಖ ಕಾರು ಮಾದರಿಗಳ ಮೇಲೆ ಇಯರ್ ಎಂಡ್ ಆಫರ್ ನೀಡುತ್ತಿದೆ. ಹೊಸ ಆಫರ್‌ಗಳು ಟಾಟಾ ನಿರ್ಮಾಣದ ಟಿಯಾಗೊ, ಟಿಗೋರ್, ನೆಕ್ಸಾನ್ ಮತ್ತು ಹ್ಯಾರಿಯರ್ ಕಾರು ಖರೀದಿಯ ಅನ್ವಯವಾಗಲಿದ್ದು, ಹೊಸ ಆಫರ್ ಈ ತಿಂಗಳ 31ರ ವರೆಗೆ ಲಭ್ಯವಿರಲಿವೆ.

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಆಫರ್‌ಗಳಲ್ಲಿ ಕ್ಯಾಶ್ ಡಿಸ್ಕೌಂಟ್, ಎಕ್ಸ್‌ಚೆಂಜ್ ಆಫರ್ ಜೊತೆಗೆ ವಿಶೇಷ ಪ್ಯಾಕೇಜ್ ನೀಡುತ್ತಿದ್ದು, ಕನಿಷ್ಠ ರೂ. 15 ಸಾವಿರದಿಂದ ಗರಿಷ್ಠ ರೂ. 65 ಸಾವಿರ ತನಕ ಉಳಿತಾಯ ಮಾಡಬಹುದಾಗಿದೆ.

ಆರಂಭಿಕ ಕಾರು ಮಾದರಿಯಾದ ಟಿಯಾಗೋ ಹ್ಯಾಚ್‌ಬ್ಯಾಕ್ ಕಾರು ಮಾದರಿಯ ಮೇಲೆ ರೂ. 25 ಸಾವಿರ ಆಫರ್ ಘೋಷಿಸಲಾಗಿದ್ದು, ರೂ.25 ಸಾವಿರದಲ್ಲಿ ರೂ. 15 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 10 ಸಾವಿರ ಎಕ್ಸ್‌ಚೆಂಜ್ ಮಾದರಿಗಳ ಮೇಲೆ ಅನ್ವಯವಾಗುತ್ತದೆ.

ಟಿಯಾಗೋ ನಂತರ ಟಿಗೋರ್ ಕಂಪ್ಯಾಕ್ಟ್ ಸೆಡಾನ್ ಮಾದರಿಯ ಮೇಲೆ ಟಾಟಾ ಮೋಟಾರ್ಸ್ ಕಂಪನಿಯು ಆಕರ್ಷಕ ಡಿಸ್ಕೌಂಟ್ ನೀಡುತ್ತಿದ್ದು, ಟಿಗೋರ್ ಕಾರು ಖರೀದಿಯ ಮೇಲೆ ಗ್ರಾಹಕರು ರೂ.30 ಸಾವಿರ ತನಕ ಉಳಿತಾಳ ಮಾಡಬಹುದಾಗಿದೆ. ರೂ.30 ಸಾವಿರದಲ್ಲಿ ರೂ. 15 ಸಾವಿರ ಕ್ಯಾಶ್‌ಬ್ಯಾಕ್ ಮತ್ತು ರೂ.15 ಸಾವಿರ ಡಿಸ್ಕೌಂಟ್ ಸೇರ್ಪಡೆಯಾಗಿದ್ದು, ಟಿಗೋರ್ ಮತ್ತು ಟಿಯಾಗೋ ಎರಡು ಮಾದರಿಗಳಲ್ಲೂ ಒಂದೇ ಮಾದರಿಯ 1.2-ಲೀಟರ್ ಪೆಟ್ರೋಲ್ ಎಂಜಿನ್ ಆಯ್ಕೆ ಹೊಂದಿವೆ.

ಟಿಗೋರ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.70 ಲಕ್ಷ ಮತ್ತು ಟಾಪ್ ಎಂಡ್ ಮಾದರಿಯು ರೂ.6.74 ಲಕ್ಷ ಬೆಲೆ ಹೊಂದಿದ್ದರೆ ಟಿಯಾಗೋ ಕಾರು ಮಾದರಿಯು ಆರಂಭಿಕವಾಗಿ ರೂ. 5.39 ಲಕ್ಷದಿಂದ ರೂ. 7.49 ಲಕ್ಷ ಬೆಲೆ ಹೊಂದಿದೆ.

ಟಾಟಾ ಹೊಸ ಆಫರ್‌ಗಳಲ್ಲಿ ಜನಪ್ರಿಯ ಕಾರು ಮಾದರಿಯಾದ ನೆಕ್ಸಾನ್ ಆವೃತ್ತಿಯ ಮೇಲೆ ಕಂಪನಿಯು ರೂ. 15 ಸಾವಿರ ಎಕ್ಸ್‌ಚೆಂಜ್ ಆಫರ್ ಮಾತ್ರ ನೀಡುತ್ತಿದೆ. ಸದ್ಯ ಕಂಪ್ಯಾಕ್ಟ್ ಎಸ್‌ಯುವಿ ಮಾದರಿಯಲ್ಲಿ ಅತಿ ಹೆಚ್ಚು ಬೇಡಿಕೆ ಪಡೆದುಕೊಳ್ಳುತ್ತಿರುವ ನೆಕ್ಸಾನ್ ಕಾರು ಮಾದರಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 6.99 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 12.70 ಲಕ್ಷ ಬೆಲೆ ಹೊಂದಿರುವ ನೆಕ್ಸಾನ್ ಕಾರು ಮಾದರಿಯು 1.2-ಲೀಟರ್ ಪೆಟ್ರೋಲ್ ಮತ್ತು 1.5-ಲೀಟರ್ ಡೀಸೆಲ್ ಎಂಜಿನ್ ಪಡೆದುಕೊಂಡಿದೆ.

ಇನ್ನು ಇಯರ್ ಎಂಡ್ ಆಫರ್‌ಗಳಲ್ಲಿ ಹ್ಯಾರಿಯರ್ ಎಸ್‌ಯುವಿ ಕಾರು ಮಾದರಿಯ ಮೇಲೆ ಟಾಟಾ ಕಂಪನಿಯು ರೂ. 65 ಸಾವಿರ ಆಫರ್ ನೀಡುತ್ತಿದ್ದು, ರೂ.65 ಸಾವಿರದಲ್ಲಿ ರೂ. 25 ಸಾವಿರ ಕ್ಯಾಶ್ ಡಿಸ್ಕೌಂಟ್ ಮತ್ತು ರೂ. 40 ಸಾವಿರ ಎಕ್ಸ್‌ಚೆಂಜ್ ಆಫರ್ ಒಳಗೊಂಡಿದೆ.
MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಹೊಸ ಆಫರ್‌ಗಳು ಹ್ಯಾರಿಯರ್ ಸ್ಟ್ಯಾಂಡರ್ಡ್ ಮಾದರಿಗಳ ಮೇಲೆ ಮಾತ್ರ ಅನ್ವಯವಾಗಲಿದ್ದು, ಬ್ಲ್ಯಾಕ್ ಎಡಿಷನ್ ಮತ್ತು ಕ್ಯಾಮೋ ಎಡಿಷನ್ ಮೇಲೆ ಕೇವಲ ಎಕ್ಸ್‌ಚೆಂಜ್ ಬೋನಸ್ ಮಾತ್ರ ಅನ್ವಯವಾಗಲಿದೆ.