ವಿವಿಧ ಕಾರು ಮಾದರಿಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಕರೋನಾ ವೈರಸ್‌ನಿಂದಾಗಿ ಕಾರು ಮಾರಾಟದಲ್ಲಿ ಭಾರೀ ಹಿನ್ನಡೆ ಅನುಭವಿಸಿದ್ದ ಪ್ರಮುಖ ಆಟೋ ಕಂಪನಿಗಳು ಇದೀಗ ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದು, ವಾಹನ ಮಾರಾಟ ಹೆಚ್ಚಿಸುವ ನಿಟ್ಟಿನಲ್ಲಿ ವಿವಿಧ ಆಫರ್‌ಗಳು ಮತ್ತು ಸರಳ ಸಾಲ ಸೌಲಭ್ಯಗಳ ಮೂಲಕ ಗ್ರಾಹಕರನ್ನು ಸೆಳೆಯುತ್ತಿವೆ.

ಆಕರ್ಷಕ ಡಿಸ್ಕೌಂಟ್ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಲಾಕ್‌ಡೌನ್‌ನಿಂದಾಗಿ ಏಪ್ರಿಲ್, ಮೇ ಮತ್ತು ಜೂನ್ ಅವಧಿಯಲ್ಲಿ ಭಾರೀ ಪ್ರಮಾಣದ ಮಾರಾಟ ಕುಸಿತ ಕಂಡಿದ್ದ ಆಟೋ ಕಂಪನಿಗಳು ಜುಲೈ ಮತ್ತು ಅಗಸ್ಟ್ ಅವಧಿಯಲ್ಲಿನ ವಾಹನ ಮಾರಾಟದಲ್ಲಿ ಸಾಕಷ್ಟು ಸುಧಾರಣೆ ಕಂಡಿದ್ದು, ಸೆಪ್ಟೆಂಬರ್ ಅವಧಿಯಲ್ಲಿ ಮಾರಾಟದಲ್ಲಿ ಇನ್ನಷ್ಟು ಹೆಚ್ಚಳವಾಗುವ ನೀರಿಕ್ಷೆಯಿಟ್ಟುಕೊಂಡಿವೆ. ಈ ನಿಟ್ಟಿನಲ್ಲಿ ಗ್ರಾಹಕರನ್ನು ಸೆಳೆಯುತ್ತಿರುವ ಆಟೋ ಕಂಪನಿಗಳು ಹಲವಾರು ಆಫರ್‌ಗಳನ್ನು ನೀಡುತ್ತಿದ್ದು, ಟಾಟಾ ಮೋಟಾರ್ಸ್ ಕೂಡಾ ಗರಿಷ್ಠ ಆಫರ್ ಘೋಷಣೆ ಮಾಡಿದೆ.

ಆಕರ್ಷಕ ಡಿಸ್ಕೌಂಟ್ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಟಾಟಾ ಕಂಪನಿಯು ವಿವಿಧ ಕಾರುಗಳ ಖರೀದಿ ಮೇಲೆ ಗರಿಷ್ಠ ರೂ. 40 ಸಾವಿರದಷ್ಟು ಆಫರ್ ಲಭ್ಯವಿರಲಿದ್ದು, ಹೊಸ ಆಫರ್‌ಗಳಲ್ಲಿ ಕ್ಯಾಶ್‌ಬ್ಯಾಕ್, ಎಕ್ಸ್‌ಚೆಂಜ್, ಲೊಯಾಲಿಟಿ ಆಫರ್, ಕಾರ್ಪೊರೇಟ್ ಡಿಸ್ಕೌಂಟ್ ಮತ್ತು ಆಕ್ಸೆಸರಿಸ್‌ಗಳ ಮೇಲೆ ಆಫರ್‌ಗಳನ್ನು ಪಡೆದುಕೊಳ್ಳಬಹುದಾಗಿದೆ.

ಆಕರ್ಷಕ ಡಿಸ್ಕೌಂಟ್ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಹ್ಯಾರಿಯರ್ ಡಾರ್ಕ್ ಎಡಿಷನ್ ಕಾರು ಖರೀದಿ ಮೇಲೆ ರೂ. 40 ಸಾವಿರದಷ್ಟು ಆಫರ್ ಲಭ್ಯವಿದ್ದು, ಕ್ಯಾಶ್ ಬ್ಯಾಕ್ ಮತ್ತು ಎಕ್ಸ್‌ಚೆಂಜ್ ಬೋನಸ್ ನೀಡಲಾಗುತ್ತಿದೆ. ಡಾರ್ಕ್ ಎಡಿಷನ್ ಹೊರತುಪಡಿಸಿ ಇನ್ನುಳಿದ ವೆರಿಯೆಂಟ್‌ಗಳ ಮೇಲೆ ರೂ. 25 ಸಾವಿರದಷ್ಟು ಹೆಚ್ಚುವರಿ ರಿಯಾಯ್ತಿ ಲಭ್ಯವಿದೆ.

ಆಕರ್ಷಕ ಡಿಸ್ಕೌಂಟ್ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ನೆಕ್ಸಾನ್ ಕಂಪ್ಯಾಕ್ಟ್ ಎಸ್‌ಯುವಿಯ ಎಲ್ಲಾ ವೆರಿಯೆಂಟ್‌ಗಳ ಮೇಲೂ ರೂ.15 ಸಾವಿರ ಕ್ಯಾಶ್ ಬ್ಯಾಕ್, ರೂ.10 ಸಾವಿರ ಎಕ್ಸ್‌ಚೆಂಜ್ ಬೋನಸ್ ಮತ್ತು ರೂ. 7 ಸಾವಿರ ಕಾರ್ಪೋರೆಟ್ ರಿಯಾಯ್ತಿ ನೀಡಲಿದೆ. ಹಾಗೆಯೇ ಟಿಗೋರ್ ಕಾರಿನ ಮೇಲೆ ರೂ.15 ಸಾವಿರ ಕ್ಯಾಶ್‌ಬ್ಯಾಕ್ ಮತ್ತು ರೂ.7 ಸಾವಿರ ಕಾರ್ಪೋರೆಟ್ ರಿಯಾಯ್ತಿ ನೀಡುತ್ತಿದೆ.

ಆಕರ್ಷಕ ಡಿಸ್ಕೌಂಟ್ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ಗ್ರಾಹಕರ ಬೇಡಿಕೆ ಆಧಾರದ ಮೇಲೆ ಹ್ಯಾರಿಯರ್ ಕಾರಿನಲ್ಲಿ ಹೊಸ ವೆರಿಯೆಂಟ್ ಬಿಡುಗಡೆ ಮಾಡಿದ್ದು, ಎಕ್ಸ್‌ಟಿ ಪ್ಲಸ್ ಎನ್ನುವ ವೆರಿಯೆಂಟ್‌ವೊಂದನ್ನು ಬಿಡುಗಡೆ ಮಾಡಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಆಕರ್ಷಕ ಡಿಸ್ಕೌಂಟ್ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಮಾದರಿಗಳ ನಡುವಿನ ಸ್ಥಾನ ಪಡೆದುಕೊಂಡಿರುವ ಎಕ್ಸ್‌ಟಿ ಪ್ಲಸ್ ಹ್ಯಾರಿಯರ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 16.99 ಲಕ್ಷ ಬೆಲೆ ನಿಗದಿ ಮಾಡಿದ್ದು, ಹೊಸ ಆವೃತ್ತಿಯಲ್ಲಿ ಪನೊರಮಿಕ್ ಸನ್‌ರೂಫ್, 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಮತ್ತು ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್ ಸೌಲಭ್ಯಗಳನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗಿದೆ.

ಆಕರ್ಷಕ ಡಿಸ್ಕೌಂಟ್ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಮಧ್ಯಮ ಕ್ರಮಾಂಕದಲ್ಲಿ ಖರೀದಿ ಲಭ್ಯವಿದ್ದ ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಮಾದರಿಗಳ ನಡುವಿನ ಬೆಲೆ ಅಂತರ ತಗ್ಗಿಸುವುದಕ್ಕಾಗಿ ಎಕ್ಸ್‌ಟಿ ಪ್ಲಸ್ ಮಾದರಿಯನ್ನು ಪರಿಚಯಿಸಲಾಗಿದ್ದು, ಎಕ್ಸ್‌ಟಿ ಪ್ಲಸ್ ನಂತರ ಹ್ಯಾರಿಯರ್ ಕಾರು ಒಟ್ಟು 17 ವೆರಿಯೆಂಟ್ ಪಡೆದುಕೊಂಡಂತಾಗಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಆಕರ್ಷಕ ಡಿಸ್ಕೌಂಟ್ ಘೋಷಣೆ ಮಾಡಿದ ಟಾಟಾ ಮೋಟಾರ್ಸ್

ಹೊಸ ಎಕ್ಸ್‌ಟಿ ಪ್ಲಸ್ ಮಾದರಿಯಲ್ಲಿ ಪನೊರಮಿಕ್ ಸನ್‌ರೂಫ್, 7-ಇಂಚಿನ ಟಚ್‌ಸ್ಕ್ರೀನ್ ಇನ್ಪೋಟೈನ್‌ಮೆಂಟ್ ಸಿಸ್ಟಂ ಮತ್ತು ಆಟೋಮ್ಯಾಟಿಕ್ ಕ್ಲೈಮೆಟ್ ಕಂಟ್ರೋಲ್ ಸೌಲಭ್ಯಗಳನ್ನು ಹೊರತುಪಡಿಸಿ ಇನ್ನುಳಿದ ತಾಂತ್ರಿಕ ಅಂಶಗಳು ಸಾಮಾನ್ಯ ಮಾದರಿಯಲ್ಲಿವೆ.

Article Published On: Tuesday, September 8, 2020, 8:45 [IST]
English summary
Tata Motors Discounts For Harrier, Tiago, and Nexon in September 2020.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+