Just In
Don't Miss!
- News
Video: ದೆಹಲಿಯಲ್ಲಿ ರೈತನ ಸಾವಿನ ಭಯಾನಕ ದೃಶ್ಯ!
- Sports
ಐಎಸ್ಎಲ್: ನಾರ್ತ್ಈಸ್ಟ್ vs ಮೋಹನ್ ಬಾಗನ್, Live ಸ್ಕೋರ್
- Finance
ಗಣರಾಜ್ಯೋತ್ಸವಕ್ಕೆ ಬಿಎಸ್ಎನ್ಎಲ್ನಿಂದ ವಿಶೇಷ ಆಫರ್
- Movies
ರಾಜಮೌಳಿಯ RRR ಚಿತ್ರಕ್ಕೆ ಎದುರಾಗಿ ಅಜಯ್ ದೇವಗನ್ ಸಿನಿಮಾ?
- Lifestyle
ನೀವು ಬಳಸಬಹುದಾದ ಡೈರಿ ಉತ್ಪನ್ನವಲ್ಲದ ಹಾಲುಗಳ ಬಗ್ಗೆ ಇಲ್ಲಿದೆ ಮಾಹಿತಿ
- Education
Republic Day Speech And Essay Ideas: ಗಣರಾಜ್ಯೋತ್ಸವ ಪ್ರಯುಕ್ತ ಭಾಷಣ ಮತ್ತು ಪ್ರಬಂಧ ಬರೆಯಲು ಇಲ್ಲಿದೆ ಮಾಹಿತಿ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
2021ಕ್ಕೆ ಮಾರುಕಟ್ಟೆ ಪ್ರವೇಶಿಸಲಿದೆ ಟಾಟಾ ಗ್ರಾವಿಟಾಸ್ ಎಸ್ಯುವಿ
ಹೊಸ ಕಾರುಗಳ ಮಾರಾಟದಲ್ಲಿ ಭರ್ಜರಿ ಮುನ್ನಡೆ ಸಾಧಿಸುತ್ತಿರುವ ಟಾಟಾ ಮೋಟಾರ್ಸ್ ಕಂಪನಿಯು ತನ್ನ ಬಹುನೀರಿಕ್ಷಿತ ಗ್ರಾವಿಟಾಸ್ ಎಸ್ಯುವಿ ಮಾದರಿಯನ್ನು 2021ರ ಆರಂಭದಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದ್ದು, ಕಾರಣಾಂತರಗಳಿಂದ ಹೊಸ ಕಾರಿನ ಬಿಡುಗಡೆಯನ್ನು ಮುಂದಿನ ವರ್ಷದ ಆರಂಭದಲ್ಲಿ ಬಿಡುಗಡೆಗೆ ನಿರ್ಧರಿಸಿದೆ.

2020ರ ಫೆಬ್ರುವರಿಯಲ್ಲಿ ನಡೆದಿದ್ದ ಆಟೋ ಎಕ್ಸ್ಪೋದಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಳಿಸಲಾದ ಗ್ರಾವಿಟಾಸ್ ಎಸ್ಯುವಿ ಮಾದರಿಯನ್ನು ಇದೇ ವರ್ಷ ಜೂನ್ ಅಥವಾ ಜುಲೈ ಅವಧಿಯಲ್ಲಿ ಬಿಡುಗಡೆ ಮಾಡಬೇಕಿತ್ತು. ಆದರೆ ಕರೋನಾ ವೈರಸ್ ಪರಿಣಾಮ ಕಾರು ಬಿಡುಗಡೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡುತ್ತ ಬಂದಿದ್ದ ಟಾಟಾ ಕಂಪನಿಯು ಇದೀಗ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ಎಸ್ಯುವಿ ಕಾರು ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ್ಗಳನ್ನು ಒಳಗೊಂಡಿರಲಿದೆ.

ಗ್ರಾವಿಟಾಸ್ ಕಾರು ಟಾಟಾ ನಿರ್ಮಾಣದ ಕಾರುಗಳಲ್ಲೇ ವಿಶೇಷ ವಿನ್ಯಾಸದ ಎಸ್ಯುವಿ ಕಾರು ಆವೃತ್ತಿಯಾಗಿದ್ದು, ಹ್ಯಾರಿಯರ್ ಉತ್ಪಾದನೆಗಾಗಿ ಬಳಕೆ ಮಾಡಲಾಗಿದ್ದ OMEGA(ಆಪ್ಟಿಮಲ್ ಮಾಡ್ಯುಲರ್ ಎಫಿಶಿಯೆಂಟ್ ಗ್ಲೋಬಲ್ ಅಡ್ವಾನ್ಸ್ಡ್) ಪ್ಲ್ಯಾಟ್ಫಾರ್ಮ್ನಡಿಯಲ್ಲೇ ಹೊಸ ಗ್ರಾವಿಟಾಸ್ ಮಾದರಿಯನ್ನು ಅಭಿವೃದ್ದಿಗೊಳಿಸಲಾಗಿದೆ.

OMEGA ಕಾರು ಉತ್ಪಾದನಾ ತಂತ್ರಜ್ಞಾನವು ಟಾಟಾ ಹೊಸ ಕಾರುಗಳ ಅಭಿವೃದ್ದಿಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಹೊಸ ಕಾರುಗಳಲ್ಲಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ.

ಗ್ರಾವಿಟಾಸ್ ಎಸ್ಯುವಿ ಹೊಸ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಅಭಿವೃದ್ದಿಗೊಳ್ಳುತ್ತಿದ್ದು, 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯದೊಂದಿಗೆ ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯಲ್ಲಿ ಆಸನ ಸೌಲಭ್ಯಗಳನ್ನು ಹೊಂದಿರಲಿದೆ.

ಹಾಗೆಯೇ ಹೊಸ ಕಾರಿನಲ್ಲಿ ಸ್ಪೋರ್ಟಿ ಮಾದರಿಯ ಆಸನಗಳೊಂದಿಗೆ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್ ಮೌಂಟೆಡ್, ತ್ರೀ ಜೋನ್ ಕ್ಲೈಮೆಟ್ ಕಂಟ್ರೋಲ್, ವಿವಿಧ ಡ್ರೈವ್ ಮೋಡ್, ಕನ್ವರ್ಷನಲ್ ಸನ್ರೂಫ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್ಗಳಿವೆ.

ಈ ಮೂಲಕ ಹೊಸ ಕಾರು ಆವೃತ್ತಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಟ್ಯೂಸಾನ್, ಮಹೀಂದ್ರಾ ಅಲ್ಟುರಾಸ್ ಜಿ4, ಫೋರ್ಡ್ ಎಂಡೀವರ್ ಜೊತೆಗೆ ಟೊಯೊಟಾ ಫಾರ್ಚೂನರ್ ಕಾರಿಗೂ ಪೈಪೋಟಿ ನೀಡಲಿದ್ದು, ಉತ್ತಮ ಸ್ಥಳಾವಕಾಶದೊಂದಿಗೆ ಎಸ್ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.
MOST READ: ಪ್ರತಿ ಚಾರ್ಜ್ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್ಯುವಿ..!

ಗ್ರಾವಿಟಾಸ್ ಕಾರು 4,661-ಎಂಎಂ ಉದ್ದ, 1786-ಎಂಎಂ ಎತ್ತರ ಮತ್ತು 2,741-ಎಂಎಂ ವೀಲ್ಹ್ ಬೆಸ್ನೊಂದಿಗೆ ಹ್ಯಾರಿಯರ್ಗಿಂತಲೂ 63-ಎಂಎಂ ಹೆಚ್ಚು ಉದ್ದ, 80-ಎಂಎಂ ಕಡಿಮೆ ಎತ್ತರ ಪಡೆದುಕೊಂಡಿದ್ದು, ಫ್ಲೇರ್ಡ್ ಆರ್ಚೆಸ್, ಮುಂಭಾಗದ ಬಂಪರ್ಗಳಿಗೆ ಟ್ರೈ ಆರೋ ಡಿಸೈನ್, ಡ್ಯುಯಲ್ ಟೋನ್ ಬಂಪರ್, 18-ಇಂಚಿನ ನೈನ್ ಸ್ಪೋಕ್ ಅಲಾಯ್ ವೀಲ್ಹ್, ಎಲ್ಇಡಿ ಹೆಡ್ಲೈಟ್, ವ್ರಾಪ್ಡ್ ಅರೌಂಡ್ ಟೈಲ್ ಲೈಟ್ ಮತ್ತು ಸ್ಕಿಡ್ ಪ್ಲೇಟ್ಗಳಿಂದ ಸಜ್ಜುಗೊಂಡಿದೆ.

ಹೊಸ ಕಾರಿನಲ್ಲಿ ಹ್ಯಾರಿಯರ್ ಮಾದರಿಯಲ್ಲೇ 2.0-ಲೀಟರ್(1,956 ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್ಬಾಕ್ಸ್ನೊಂದಿಗೆ 170-ಬಿಹೆಚ್ಪಿ, 350-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಎಸ್ಯುವಿ ಕಾರುಗಳ ಮಾರಾಟದಲ್ಲಿ ಗಮನಸೆಳೆಯಲಿರುವ ಹೊಸ ಗ್ರಾವಿಟಾಸ್ ಕಾರು ಮಾದರಿಯು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ. 19 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.23 ಲಕ್ಷ ಬೆಲೆ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ.