ಆಕರ್ಷಕ ಫೀಚರ್ಸ್‌‌ಗಳೊಂದಿಗೆ ಅಭಿವೃದ್ದಿಗೊಂಡ ಟಾಟಾ ಗ್ರಾವಿಟಾಸ್ ಕಾರಿನ ಇಂಟಿರಿಯರ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಬಹುನೀರಿಕ್ಷಿತ ಗ್ರಾವಿಟಾಸ್ ಎಸ್‌ಯುವಿ ಕಾರು ಮಾದರಿಯ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಗಳನ್ನು ನಡೆಸುತ್ತಿದ್ದು, 2021ರ ಆರಂಭದಲ್ಲಿ ಬಿಡಗಡೆಯಾಗಲಿರುವ ಹೊಸ ಕಾರು ಆಕರ್ಷಕ ಫೀಚರ್ಸ್‌ಗಳನ್ನು ಪಡೆದುಕೊಂಡಿರಲಿದೆ.

ಆಕರ್ಷಕ ಫೀಚರ್ಸ್‌‌ಗಳೊಂದಿಗೆ ಅಭಿವೃದ್ದಿಗೊಂಡ ಟಾಟಾ ಗ್ರಾವಿಟಾಸ್ ಕಾರಿನ ಇಂಟಿರಿಯರ್

2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಲಾಗಿದ್ದ ಗ್ರಾವಿಟಾಸ್ ಎಸ್‌ಯುವಿ ಮಾದರಿಯನ್ನು ಇದೇ ಜೂನ್ ಅಥವಾ ಜುಲೈ ಅವಧಿಯಲ್ಲಿ ಬಿಡುಗಡೆಯ ಯೋಜನೆಯಲ್ಲಿದ್ದ ಟಾಟಾ ಮೋಟಾರ್ಸ್ ಕಂಪನಿಯು ಕರೋನಾ ವೈರಸ್‌ನಿಂದಾಗಿ ಕಾರು ಬಿಡುಗಡೆಯನ್ನು 2021ಕ್ಕೆ ಮುಂದೂಡಿದ್ದು, ಸದ್ಯಕ್ಕೆ ಹೊಸ ಕಾರಿನ ಉತ್ಪಾದನಾ ಆವೃತ್ತಿಯೊಂದಿಗೆ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುತ್ತಿದೆ.

ಆಕರ್ಷಕ ಫೀಚರ್ಸ್‌‌ಗಳೊಂದಿಗೆ ಅಭಿವೃದ್ದಿಗೊಂಡ ಟಾಟಾ ಗ್ರಾವಿಟಾಸ್ ಕಾರಿನ ಇಂಟಿರಿಯರ್

ಗ್ರಾವಿಟಾಸ್ ಕಾರು ಟಾಟಾ ನಿರ್ಮಾಣದ ಕಾರುಗಳಲ್ಲೇ ವಿಶೇಷ ವಿನ್ಯಾಸದ ಎಸ್‌ಯುವಿ ಕಾರು ಆವೃತ್ತಿಯಾಗಿದ್ದು, ಹ್ಯಾರಿಯರ್ ಉತ್ಪಾದನೆಗಾಗಿ ಬಳಕೆ ಮಾಡಲಾಗಿದ್ದ OMEGA ಪ್ಲ್ಯಾಟ್‌ಫಾರ್ಮ್‌ನಡಿಯಲ್ಲೇ ಹೊಸ ಗ್ರಾವಿಟಾಸ್ ಅನ್ನು ಕೂಡಾ ಅಭಿವೃದ್ದಿಗೊಳಿಸಲಾಗಿದೆ.

ಆಕರ್ಷಕ ಫೀಚರ್ಸ್‌‌ಗಳೊಂದಿಗೆ ಅಭಿವೃದ್ದಿಗೊಂಡ ಟಾಟಾ ಗ್ರಾವಿಟಾಸ್ ಕಾರಿನ ಇಂಟಿರಿಯರ್

OMEGA ಕಾರು ಉತ್ಪಾದನಾ ತಂತ್ರಜ್ಞಾನವು ಟಾಟಾ ಹೊಸ ಕಾರುಗಳ ಅಭಿವೃದ್ದಿಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಗ್ರಾವಿಟಾಸ್ ಕಾರು ಎಸ್‌ಯುವಿ ಮಾದರಿಗಳಲ್ಲೇ ವಿಶೇಷ ತಾಂತ್ರಿಕ ಸೌಲಭ್ಯಗಳನ್ನು ಪಡೆದುಕೊಂಡಿದೆ.

ಆಕರ್ಷಕ ಫೀಚರ್ಸ್‌‌ಗಳೊಂದಿಗೆ ಅಭಿವೃದ್ದಿಗೊಂಡ ಟಾಟಾ ಗ್ರಾವಿಟಾಸ್ ಕಾರಿನ ಇಂಟಿರಿಯರ್

ಆಪ್ಟಿಮಲ್ ಮಾಡ್ಯುಲರ್ ಎಫಿಶಿಯೆಂಟ್ ಗ್ಲೋಬಲ್ ಅಡ್ವಾನ್ಸ್ಡ್ ಪ್ಲಾಟ್‍ಫಾರ್ಮ್ ತಂತ್ರಜ್ಞಾನವನ್ನು ಲ್ಯಾಂಡ್ ರೋವರ್ ಡಿಸ್ಕವರಿ ಕಾರಿನಲ್ಲಿಯೂ ಕೂಡಾ ಕಾಣಬಹುದಾಗಿದ್ದು, ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ.

ಆಕರ್ಷಕ ಫೀಚರ್ಸ್‌‌ಗಳೊಂದಿಗೆ ಅಭಿವೃದ್ದಿಗೊಂಡ ಟಾಟಾ ಗ್ರಾವಿಟಾಸ್ ಕಾರಿನ ಇಂಟಿರಿಯರ್

ಹೊಸ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಅಭಿವೃದ್ದಿಗೊಳ್ಳುತ್ತಿದ್ದು, 6 ಸೀಟರ್ ಮಾದರಿಯು 2+2+2 ಮಾದರಿ ಆಸನ ಸೌಲಭ್ಯದೊಂದಿಗೆ ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯಲ್ಲಿ ಆಸನ ಸೌಲಭ್ಯ ಹೊಂದಿರಲಿದೆ.

ಆಕರ್ಷಕ ಫೀಚರ್ಸ್‌‌ಗಳೊಂದಿಗೆ ಅಭಿವೃದ್ದಿಗೊಂಡ ಟಾಟಾ ಗ್ರಾವಿಟಾಸ್ ಕಾರಿನ ಇಂಟಿರಿಯರ್

ಟಾಟಾ ಮೋಟಾರ್ಸ್ ಕಂಪನಿಯು ಹೊಸ ಕಾರಿನಲ್ಲಿ ಕನೆಕ್ಟೆಡ್ ಫೀಚರ್ಸ್‌ಗಳನ್ನು ಅಳವಡಿಸಿದ್ದು, ಸ್ಪೋರ್ಟಿ ಮಾದರಿಯ ಆಸನಗಳೊಂದಿಗೆ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್ ಮೌಂಟೆಡ್, ತ್ರೀ ಜೋನ್ ಕ್ಲೈಮೆಟ್ ಕಂಟ್ರೋಲ್, ವಿವಿಧ ಡ್ರೈವ್ ಮೋಡ್, ಕನ್ವರ್ಷನಲ್ ಸನ್‌ರೂಫ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್‌ಗಳಿವೆ.

ಆಕರ್ಷಕ ಫೀಚರ್ಸ್‌‌ಗಳೊಂದಿಗೆ ಅಭಿವೃದ್ದಿಗೊಂಡ ಟಾಟಾ ಗ್ರಾವಿಟಾಸ್ ಕಾರಿನ ಇಂಟಿರಿಯರ್

ಈ ಮೂಲಕ ಹೊಸ ಕಾರು ಆವೃತ್ತಿಯು ಪ್ರತಿಸ್ಪರ್ಧಿ ಮಾದರಿಗಳಾದ ಫೋರ್ಡ್ ಎಂಡೀವರ್, ಮಹೀಂದ್ರಾ ಅಲ್ಟುರಾಸ್ ಜಿ4 ಜೊತೆಗೆ ಟೊಯೊಟಾ ಫಾರ್ಚೂನರ್‌ ಕಾರಿಗೂ ಪೈಪೋಟಿ ನೀಡಲಿದ್ದು, ಉತ್ತಮ ಸ್ಥಳಾವಕಾಶದೊಂದಿಗೆ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

MOST READ: ಬಿಡುಗಡೆಗೆ ಸಿದ್ದವಾದ ಹೋಂಡಾದ ಮೊದಲ ಎಲೆಕ್ಟ್ರಿಕ್ ಕಾರು

ಆಕರ್ಷಕ ಫೀಚರ್ಸ್‌‌ಗಳೊಂದಿಗೆ ಅಭಿವೃದ್ದಿಗೊಂಡ ಟಾಟಾ ಗ್ರಾವಿಟಾಸ್ ಕಾರಿನ ಇಂಟಿರಿಯರ್

ಗ್ರಾವಿಟಾಸ್ ಕಾರು 4,661-ಎಂಎಂ ಉದ್ದ, 1786-ಎಂಎಂ ಎತ್ತರ ಮತ್ತು 2,741-ಎಂಎಂ ವೀಲ್ಹ್ ಬೆಸ್‌ನೊಂದಿಗೆ ಹ್ಯಾರಿಯರ್‌ಗಿಂತಲೂ 63-ಎಂಎಂ ಹೆಚ್ಚು ಉದ್ದ, 80-ಎಂಎಂ ಕಡಿಮೆ ಎತ್ತರ ಪಡೆದುಕೊಂಡಿದ್ದು, ಫ್ಲೇರ್ಡ್ ಆರ್ಚೆಸ್, ಮುಂಭಾಗದ ಬಂಪರ್‍‍ಗಳಿಗೆ ಟ್ರೈ ಆರೋ ಡಿಸೈನ್, ಡ್ಯುಯಲ್ ಟೋನ್ ಬಂಪರ್, 18-ಇಂಚಿನ ನೈನ್ ಸ್ಪೋಕ್ ಅಲಾಯ್ ವೀಲ್ಹ್, ಎಲ್ಇಡಿ ಹೆಡ್‍ಲೈಟ್, ವ್ರಾಪ್ಡ್ ಅರೌಂಡ್ ಟೈಲ್ ಲೈಟ್ ಮತ್ತು ಸ್ಕಿಡ್ ಪ್ಲೇಟ್‍‍ಗಳಿಂದ ಸಜ್ಜುಗೊಂಡಿದೆ.

ಆಕರ್ಷಕ ಫೀಚರ್ಸ್‌‌ಗಳೊಂದಿಗೆ ಅಭಿವೃದ್ದಿಗೊಂಡ ಟಾಟಾ ಗ್ರಾವಿಟಾಸ್ ಕಾರಿನ ಇಂಟಿರಿಯರ್

ಹೊಸ ಕಾರಿನಲ್ಲಿ ಹ್ಯಾರಿಯರ್ ಮಾದರಿಯಲ್ಲೇ 2.0-ಲೀಟರ್(1,956 ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 170-ಬಿಹೆಚ್‍ಪಿ, 350-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಆಕರ್ಷಕ ಫೀಚರ್ಸ್‌‌ಗಳೊಂದಿಗೆ ಅಭಿವೃದ್ದಿಗೊಂಡ ಟಾಟಾ ಗ್ರಾವಿಟಾಸ್ ಕಾರಿನ ಇಂಟಿರಿಯರ್

ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)

ಈ ಮೊದಲು ನಿಗದಿಪಡಿಸಿದ ಯೋಜನೆಯೆಂತೆ ಹೊಸ ಗ್ರಾವಿಟಾಸ್ ಕಾರು ಇದೇ ವರ್ಷ ಜೂನ್ ಅಥವಾ ಜುಲೈ ಅಂತ್ಯಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ ಕರೋನಾ ವೈರಸ್ ಪರಿಣಾಮ ಹೊಸ ಕಾರಿನ ಬಿಡುಗಡೆಯು 2021ರ ಆರಂಭದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.20 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.24 ಲಕ್ಷ ಬೆಲೆ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ.

Source: Carwale

Most Read Articles

Kannada
English summary
Tata Gravitas Interiors Revealed While Testing Again Ahead Of Launch. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X