Just In
- 26 min ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 3 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 3 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 4 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- News ಮಳೆ.. ಮಳೆ.. ಅಲ್ಲಲ್ಲ ಮುಂದಿನ 1 ವಾರ ಬೆಂಗಳೂರಲ್ಲಿ ಭಾರಿ ಬಿಸಿಲು!
- Movies ನಿರಂತರ ಪ್ಲಾಫ್ ಸಿನಿಮಾಳನ್ನ ನೀಡಿದ ಈ ವಿಶ್ವಸುಂದರಿ ಯಾರು ಗೊತ್ತಾ...?
- Lifestyle ಹುಟ್ಟುಹಬ್ಬದ ಕೇಕ್ ತಿಂದು ಬಾಲಕಿ ಸಾವು..! ಕೇಕ್ನಲ್ಲಿತ್ತು ಕೃತಕ ಸಿಹಿ ಸಾಕ್ರರಿನ್..!
- Sports CSK vs LSG IPL 2024: ಚೆನ್ನೈ vs ಲಕ್ನೋ ಹೈ-ವೋಲ್ಟೇಜ್ ಪಂದ್ಯದ ಟಾಸ್ ವರದಿ; ಆಡುವ 11ರ ಬಳಗ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿ ಟಾಟಾ ಗ್ರಾವಿಟಾಸ್
ಟಾಟಾ ಮೋಟಾರ್ಸ್ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಾರುಗಳ ಪೈಕಿ ಗ್ರಾವಿಟಾಸ್ ಎಸ್ಯುವಿ ಕಾರು ಭಾರೀ ನೀರಿಕ್ಷೆ ಹುಟ್ಟುಹಾಕಿದ್ದು, ಬಿಡುಗಡೆಯ ಸನಿಹದಲ್ಲಿರುವ ಹೊಸ ಕಾರು ಲಾಕ್ಡೌನ್ ವಿನಾಯ್ತಿಯ ನಡುವೆ ವಿವಿಧ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತಿದೆ.
2020ರ ದೆಹಲಿ ಆಟೋ ಎಕ್ಸ್ಪೋದಲ್ಲಿ ಅನಾವರಣಗೊಂಡಿದ್ದ ಗ್ರಾವಿಟಾಸ್ ಕಾರು ಟಾಟಾ ಉತ್ಪಾದನೆಯ ವಿಶೇಷ ವಿನ್ಯಾಸದ ಎಸ್ಯುವಿ ಆವೃತ್ತಿಯಾಗಿದ್ದು, ಹ್ಯಾರಿಯರ್ ಉತ್ಪಾದನೆಗಾಗಿ ಬಳಕೆ ಮಾಡಲಾಗಿದ್ದ OMEGA ಪ್ಲ್ಯಾಟ್ಫಾರ್ಮ್ನಡಿಯಲ್ಲೇ ಹೊಸ ಗ್ರಾವಿಟಾಸ್ ಅನ್ನು ಕೂಡಾ ಅಭಿವೃದ್ದಿಗೊಳ್ಳುತ್ತಿದೆ. OMEGA ಕಾರು ಉತ್ಪಾದನಾ ತಂತ್ರಜ್ಞಾನವು ಟಾಟಾ ಹೊಸ ಕಾರುಗಳ ಅಭಿವೃದ್ದಿಯಲ್ಲಿ ಮಹತ್ವದ ಬದಲಾಣೆಗೆ ಕಾರಣವಾಗಿದ್ದು, ಗ್ರಾವಿಟಾಸ್ ಕಾರು ಕೂಡಾ ಎಸ್ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.
OMEGA(ಆಪ್ಟಿಮಲ್ ಮಾಡ್ಯುಲರ್ ಎಫಿಶಿಯೆಂಟ್ ಗ್ಲೋಬಲ್ ಅಡ್ವಾನ್ಸ್ಡ್ ಪ್ಲಾಟ್ಫಾರ್ಮ್)ತಂತ್ರಜ್ಞಾನವನ್ನು ಲ್ಯಾಂಡ್ ರೋವರ್ ಡಿಸ್ಕವರಿ ಕಾರಿನಲ್ಲಿಯೂ ಕೂಡಾ ಕಾಣಬಹುದಾಗಿದ್ದು, ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ.
7 ಸೀಟರ್ ಆಸನ ಸೌಲಭ್ಯದೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಗ್ರಾವಿಟಾಸ್ ಎಸ್ಯುವಿ ಆವೃತ್ತಿಯು ಪ್ರತಿಸ್ಪರ್ಧಿ ಮಾದರಿಗಳಾದ ಫೋರ್ಡ್ ಎಂಡೀವರ್, ಮಹೀಂದ್ರಾ ಅಲ್ಟುರಾಸ್ ಜಿ4 ಜೊತೆಗೆ ಟೊಯೊಟಾ ಫಾರ್ಚೂನರ್ ಕಾರಿಗೂ ಗ್ರಾವಿಟಾಸ್ ಪ್ರಬಲ ಪೈಪೋಟಿ ನೀಡಲಿದೆ.
ಗ್ರಾವಿಟಾಸ್ ಕಾರು 4,661-ಎಂಎಂ ಉದ್ದ, 1786-ಎಂಎಂ ಎತ್ತರ ಮತ್ತು 2,741-ಎಂಎಂ ವೀಲ್ಹ್ ಬೆಸ್ನೊಂದಿಗೆ ಹ್ಯಾರಿಯರ್ಗಿಂತಲೂ 63-ಎಂಎಂ ಹೆಚ್ಚು ಉದ್ದ, 80-ಎಂಎಂ ಕಡಿಮೆ ಎತ್ತರ ಪಡೆದುಕೊಂಡಿದ್ದು, ಫ್ಲೇರ್ಡ್ ಆರ್ಚೆಸ್, ಮುಂಭಾಗದ ಬಂಪರ್ಗಳಿಗೆ ಟ್ರೈ ಆರೋ ಡಿಸೈನ್, ಡ್ಯುಯಲ್ ಟೋನ್ ಬಂಪರ್, ಎಲ್ಇಡಿ ಹೆಡ್ಲೈಟ್, ವ್ರಾಪ್ಡ್ ಅರೌಂಡ್ ಟೈಲ್ ಲೈಟ್ ಮತ್ತು ಸ್ಕಿಡ್ ಪ್ಲೇಟ್ಗಳಿಂದ ಸಜ್ಜುಗೊಂಡಿದೆ.
MOST READ: ಲಾಕ್ಡೌನ್ನಿಂದ ತತ್ತರಿಸಿರುವ ಆಟೋ ಕಂಪನಿಗಳಿಗೆ ಇದೀಗ ಮತ್ತೊಂದು ಸಂಕಷ್ಟ
ಗ್ರಾವಿಟಾಸ್ ಕಾರು ಹ್ಯಾರಿಯರ್ನಂತೆಯೇ ಎಕ್ಸ್ಇ, ಎಕ್ಸ್ಎಂ, ಎಕ್ಸ್ ಟಿ ಮತ್ತು ಎಕ್ಸ್ಜೆಡ್ ಎಂಬ ನಾಲ್ಕು ವೆರಿಯೆಂಟ್ಗಳಲ್ಲಿ ಬಿಡುಗಡೆಯಾಗಲಿದ್ದು, 16-ಇಂಚಿನ ಅಲಾಯ್ ವ್ಹೀಲ್ಸ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ವಿಭಿನ್ನವಾದ ಬೂಟ್ ಲಿಡ್ ಮತ್ತು ಟೈಲ್ ಲ್ಯಾಂಪ್ಸ್ ಅನ್ನು ಹೊಂದಿದೆ.
ಜೊತೆಗೆ ಸ್ಪೋರ್ಟಿ ಸ್ಪಾಯ್ಲರ್, ಎಲ್ಇಡಿ ಟೈಲ್ಲೈಟ್ಸ್ ಅನ್ನು ಪಡೆದುಕೊಂಡಿದ್ದು, ಹ್ಯಾರಿಯರ್ ಕಾರಿನಲ್ಲಿ ಬಳಕೆ ಮಾಡಲಾಗುತ್ತಿರುವ ಬಿಎಸ್-6 ಡೀಸೆಲ್ ಎಂಜಿನ್ ಅನ್ನೇ ಗ್ರಾವಿಟಾಸ್ ಕೂಡಾ ಪಡೆದುಕೊಳ್ಳಲಿದೆ.
MOST READ: ಕರೋನಾ ವೈರಸ್: ಹೊಸ ವಿಧಾನದ ಮೂಲಕ ಜನರ ಬಳಿ ಬರಲಿರುವ ಪೊಲೀಸರು..
ಹೊಸ ಗ್ರಾವಿಟಾಸ್ ಕಾರು ಸದ್ಯಕ್ಕೆ ಹ್ಯಾರಿಯರ್ ಮಾದರಿಯಲ್ಲಿ ಬಳಕೆ ಮಾಡಲಾಗಿರುವ 2.0-ಲೀಟರ್ ಕ್ರೆಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಮಾತ್ರ ಬಿಡುಗಡೆಯಾಗಲಿದ್ದು, ತದನಂತರವಷ್ಟೇ ಹ್ಯಾರಿಯರ್ ಮತ್ತು ಗ್ರಾವಿಟಾಸ್ ಕಾರುಗಳಲ್ಲಿ ಪೆಟ್ರೋಲ್ ಮಾದರಿಯು ಸಹ ಬಿಡುಗಡೆಯಾಗಲಿದೆ.
ಇದಲ್ಲದೆ ಹೊಸ ಕಾರಿನ ಒಳಭಾಗದಲ್ಲೂ ಹಲವಾರು ಪ್ರೀಮಿಯಂ ಫೀಚರ್ಸ್ಗಳನ್ನು ನೀಡಲಾಗಿದ್ದು, 4x4 ಡ್ರೈವ್ ಟೆಕ್ನಾಲಜಿಯು ಆಫ್ ರೋಡ್ ಎಸ್ಯುವಿ ಪ್ರಿಯರ ಪ್ರಮುಖ ಆಕರ್ಷಣೆಯಾಗಲಿದೆ.
MOST READ: ಎರಡು ಚಕ್ರಗಳಲ್ಲಿ ಚಲಿಸಿದ ಟ್ರಾಕ್ಟರ್, ಆನಂದ್ ಮಹೀಂದ್ರಾ ಹೇಳಿದ್ದೇನು?
ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)
ಈ ಮೊದಲಿನ ಯೋಜನೆಯೆಂತೆ ಹೊಸ ಗ್ರಾವಿಟಾಸ್ ಕಾರು ಇದೇ ಜೂನ್ ಅಥವಾ ಜುಲೈ ಅಂತ್ಯಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ ಕರೋನಾ ವೈರಸ್ ಪರಿಣಾಮ ಹೊಸ ಕಾರಿನ ಬಿಡುಗಡೆಯು ಅಕ್ಟೋಬರ್ ಅಥವಾ ನವೆಂಬರ್ಗೆ ಮುಂದೂಡಿಕೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರು ದೆಹಲಿ ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ.22 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.25 ಲಕ್ಷ ಬೆಲೆ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ.
Source: Rushlane