ಹೆಚ್‌ಬಿಎಕ್ಸ್ ನಂತರ ಮಾರುಕಟ್ಟೆ ಪ್ರವೇಶಿಸಲಿದೆ ಟಾಟಾ ಗ್ರಾವಿಟಾಸ್ ಎಸ್‌ಯುವಿ

ಟಾಟಾ ಮೋಟಾರ್ಸ ಕಂಪನಿಯು ಕರೋನಾ ವೈರಸ್ ಪರಿಣಾಮ ತನ್ನ ಪ್ರಮುಖ ಕಾರು ಮಾದರಿಗಳ ಬಿಡುಗಡೆ ಯೋಜನೆಯನ್ನು ಮುಂದೂಡಿಕೆ ಮಾಡಿದ್ದು, ಕಾರು ಬಿಡುಗಡೆಯನ್ನು ಬಿಡುಗಡೆ ಮಾಡಿದ್ದರೂ ಹೊಸ ಕಾರುಗಳ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಮುಂದುವರಿಸಿದೆ.

ಹೆಚ್‌ಬಿಎಕ್ಸ್ ನಂತರ ಮಾರುಕಟ್ಟೆ ಪ್ರವೇಶಿಸಲಿದೆ ಟಾಟಾ ಗ್ರಾವಿಟಾಸ್

2020ರ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಳಿಸಲಾಗಿದ್ದ ಗ್ರಾವಿಟಾಸ್ ಎಸ್‌ಯುವಿ ಮಾದರಿಯನ್ನು ಇದೇ ಜೂನ್ ಅಥವಾ ಜುಲೈ ಅವಧಿಯಲ್ಲಿ ಬಿಡುಗಡೆಯ ಯೋಜನೆ ಹೊಂದಿತ್ತು. ಆದರೆ ಕರೋನಾ ವೈರಸ್ ಅಬ್ಬರ ಹೆಚ್ಚುತ್ತಿದ್ದಂತೆ ತಾತ್ಕಾಲಿಕವಾಗಿ ಕಾರು ಬಿಡುಗಡೆಯನ್ನು ಮುಂದೂಡಿದ್ದ ಟಾಟಾ ಕಂಪನಿಯು ಮುಂಬರುವ ಸೆಪ್ಟೆಂಬರ್ ಹೊತ್ತಿಗೆ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿತ್ತು. ಆದರೆ ಇದೀಗ ಹೊಸ ಕಾರಿನ ಬಿಡುಗಡೆ ಸದ್ಯಕ್ಕಿಲ್ಲ ಎಂದಿರುವ ಟಾಟಾ ಕಂಪನಿಯು 2021ಕ್ಕೆ ಮುಂದೂಡಿಕೆ ಮಾಡಿದೆ.

ಹೆಚ್‌ಬಿಎಕ್ಸ್ ನಂತರ ಮಾರುಕಟ್ಟೆ ಪ್ರವೇಶಿಸಲಿದೆ ಟಾಟಾ ಗ್ರಾವಿಟಾಸ್

ಸದ್ಯದ ಪರಿಸ್ಥಿತಿಯಲ್ಲಿ ಹೊಸ ಕಾರುಗಳ ಬಿಡುಗಡೆಯು ಆರ್ಥಿಕವಾಗಿ ಹಿನ್ನಡೆಯುಂಟು ಮಾಡುವ ಸಾಧ್ಯತೆ ಹೆಚ್ಚು ಎಂದು ಪರಿಗಣಿಸಿರುವ ಟಾಟಾ ಕಂಪನಿಯು ಹೊಸ ಕಾರುಗಳ ಬಿಡುಗಡೆಯಿಂದ ಹಿಂದೆ ಸರಿದು ಪ್ರಸ್ತುತ ಮಾರುಕಟ್ಟೆಯಲ್ಲಿರುವ ವಾಹನ ಮಾರಾಟ ಸುಧಾರಣೆಯತ್ತ ಗಮನಹರಿಸಲು ನಿರ್ಧರಿಸಿದೆ.

ಹೆಚ್‌ಬಿಎಕ್ಸ್ ನಂತರ ಮಾರುಕಟ್ಟೆ ಪ್ರವೇಶಿಸಲಿದೆ ಟಾಟಾ ಗ್ರಾವಿಟಾಸ್

ಇನ್ನು ಗ್ರಾವಿಟಾಸ್ ಕಾರು ಟಾಟಾ ನಿರ್ಮಾಣದ ಕಾರುಗಳಲ್ಲೇ ವಿಶೇಷ ವಿನ್ಯಾಸದ ಎಸ್‌ಯುವಿ ಆವೃತ್ತಿಯಾಗಿದ್ದು, ಹ್ಯಾರಿಯರ್ ಉತ್ಪಾದನೆಗಾಗಿ ಬಳಕೆ ಮಾಡಲಾಗಿದ್ದ OMEGA ಪ್ಲ್ಯಾಟ್‌ಫಾರ್ಮ್‌ನಡಿಯಲ್ಲೇ ಹೊಸ ಗ್ರಾವಿಟಾಸ್ ಅನ್ನು ಕೂಡಾ ಅಭಿವೃದ್ದಿಗೊಳಿಸಲಾಗಿದೆ.

ಹೆಚ್‌ಬಿಎಕ್ಸ್ ನಂತರ ಮಾರುಕಟ್ಟೆ ಪ್ರವೇಶಿಸಲಿದೆ ಟಾಟಾ ಗ್ರಾವಿಟಾಸ್

OMEGA ಕಾರು ಉತ್ಪಾದನಾ ತಂತ್ರಜ್ಞಾನವು ಟಾಟಾ ಹೊಸ ಕಾರುಗಳ ಅಭಿವೃದ್ದಿಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಗ್ರಾವಿಟಾಸ್ ಕಾರು ಕೂಡಾ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಹೆಚ್‌ಬಿಎಕ್ಸ್ ನಂತರ ಮಾರುಕಟ್ಟೆ ಪ್ರವೇಶಿಸಲಿದೆ ಟಾಟಾ ಗ್ರಾವಿಟಾಸ್

OMEGA(ಆಪ್ಟಿಮಲ್ ಮಾಡ್ಯುಲರ್ ಎಫಿಶಿಯೆಂಟ್ ಗ್ಲೋಬಲ್ ಅಡ್ವಾನ್ಸ್ಡ್ ಪ್ಲಾಟ್‍ಫಾರ್ಮ್)ತಂತ್ರಜ್ಞಾನವನ್ನು ಲ್ಯಾಂಡ್ ರೋವರ್ ಡಿಸ್ಕವರಿ ಕಾರಿನಲ್ಲಿಯೂ ಕೂಡಾ ಕಾಣಬಹುದಾಗಿದ್ದು, ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ.

ಹೆಚ್‌ಬಿಎಕ್ಸ್ ನಂತರ ಮಾರುಕಟ್ಟೆ ಪ್ರವೇಶಿಸಲಿದೆ ಟಾಟಾ ಗ್ರಾವಿಟಾಸ್

ಹೊಸ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಅಭಿವೃದ್ದಿಗೊಳ್ಳುತ್ತಿದ್ದು, 6 ಸೀಟರ್ ಮಾದರಿಯು 2+2+2 ಮಾದರಿ ಆಸನ ಸೌಲಭ್ಯದೊಂದಿಗೆ ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯಲ್ಲಿ ಆಸನ ಸೌಲಭ್ಯ ಹೊಂದಿರಲಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಹೆಚ್‌ಬಿಎಕ್ಸ್ ನಂತರ ಮಾರುಕಟ್ಟೆ ಪ್ರವೇಶಿಸಲಿದೆ ಟಾಟಾ ಗ್ರಾವಿಟಾಸ್

ಈ ಮೂಲಕ ಹೊಸ ಕಾರು ಆವೃತ್ತಿಯು ಪ್ರತಿಸ್ಪರ್ಧಿ ಮಾದರಿಗಳಾದ ಫೋರ್ಡ್ ಎಂಡೀವರ್, ಮಹೀಂದ್ರಾ ಅಲ್ಟುರಾಸ್ ಜಿ4 ಜೊತೆಗೆ ಟೊಯೊಟಾ ಫಾರ್ಚೂನರ್‌ ಕಾರಿಗೂ ಪೈಪೋಟಿ ನೀಡಲಿದ್ದು, ಉತ್ತಮ ಸ್ಥಳಾವಕಾಶದೊಂದಿಗೆ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಹೆಚ್‌ಬಿಎಕ್ಸ್ ನಂತರ ಮಾರುಕಟ್ಟೆ ಪ್ರವೇಶಿಸಲಿದೆ ಟಾಟಾ ಗ್ರಾವಿಟಾಸ್

ಗ್ರಾವಿಟಾಸ್ ಕಾರು 4,661-ಎಂಎಂ ಉದ್ದ, 1786-ಎಂಎಂ ಎತ್ತರ ಮತ್ತು 2,741-ಎಂಎಂ ವೀಲ್ಹ್ ಬೆಸ್‌ನೊಂದಿಗೆ ಹ್ಯಾರಿಯರ್‌ಗಿಂತಲೂ 63-ಎಂಎಂ ಹೆಚ್ಚು ಉದ್ದ, 80-ಎಂಎಂ ಕಡಿಮೆ ಎತ್ತರ ಪಡೆದುಕೊಂಡಿದ್ದು, ಫ್ಲೇರ್ಡ್ ಆರ್ಚೆಸ್, ಮುಂಭಾಗದ ಬಂಪರ್‍‍ಗಳಿಗೆ ಟ್ರೈ ಆರೋ ಡಿಸೈನ್, ಡ್ಯುಯಲ್ ಟೋನ್ ಬಂಪರ್, ಎಲ್ಇಡಿ ಹೆಡ್‍ಲೈಟ್, ವ್ರಾಪ್ಡ್ ಅರೌಂಡ್ ಟೈಲ್ ಲೈಟ್ ಮತ್ತು ಸ್ಕಿಡ್ ಪ್ಲೇಟ್‍‍ಗಳಿಂದ ಸಜ್ಜುಗೊಂಡಿದೆ.

MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಹೆಚ್‌ಬಿಎಕ್ಸ್ ನಂತರ ಮಾರುಕಟ್ಟೆ ಪ್ರವೇಶಿಸಲಿದೆ ಟಾಟಾ ಗ್ರಾವಿಟಾಸ್

ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)

ಈ ಮೊದಲು ನಿಗದಿಪಡಿಸಿದ ಯೋಜನೆಯೆಂತೆ ಹೊಸ ಗ್ರಾವಿಟಾಸ್ ಕಾರು ಇದೇ ವರ್ಷ ಜೂನ್ ಅಥವಾ ಜುಲೈ ಅಂತ್ಯಕ್ಕೆ ಬಿಡುಗಡೆಯಾಗಬೇಕಿತ್ತು. ಆದರೆ ಕರೋನಾ ವೈರಸ್ ಪರಿಣಾಮ ಹೊಸ ಕಾರಿನ ಬಿಡುಗಡೆಯು 2021ರ ಆರಂಭದಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.19 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.23 ಲಕ್ಷ ಬೆಲೆ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ.

Article Published On: Thursday, August 6, 2020, 8:45 [IST]
English summary
Tata Gravitas Spotted Testing Again Ahead Of Its India Launch. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+