Just In
- just now ನಿಮ್ಮ ಬಳಿ 7 ಲಕ್ಷ ರೂಪಾಯಿ ಇದ್ದರೆ ಸಾಕು.. ಕನಸಿನ ಕಾರನ್ನು ಮನೆ ತರಬಹುದು!
- 15 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 16 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 16 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
Don't Miss!
- Sports ಟಿ20 ವಿಶ್ವಕಪ್ 2024: ಟೀಮ್ ಇಂಡಿಯಾಗೆ ದೊಡ್ಡ ಚಿಂತೆಯಾದ ಈ ಆರಂಭಿಕನ ಫಾರ್ಮ್
- Technology iPhone: ಐಫೋನ್ 16 ಸರಣಿಯ ಕ್ಯಾಮೆರಾ ಫೀಚರ್ಸ್ ಲೀಕ್! ಏನೆಲ್ಲಾ ವಿಶೇಷತೆ ಇವೆ?..
- News Tamarind Fruit Juice: ಬಾಯಾರಿಕೆ ನೀಗಿಸಲು ಹುಣಸೆ ಹಣ್ಣಿನ ಪಾನಕ ಪರಿಚಯಿಸಿದ ಆಯುಷ್ ಇಲಾಖೆ, ಮಾಡುವುದು ಹೇಗೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಹುನೀರಿಕ್ಷಿತ ಟಾಟಾ ಗ್ರಾವಿಟಾಸ್ ಬಿಡುಗಡೆ ಮಾಹಿತಿ ಬಹಿರಂಗ
ಟಾಟಾ ಮೋಟಾರ್ಸ್ ಸಂಸ್ಥೆಯು ತನ್ನ ಬಹುನೀರಿಕ್ಷಿತ 7 ಸೀಟರ್ ಎಸ್ಯುವಿ ಆವೃತ್ತಿಯಾದ ಗ್ರಾವಿಟಾಸ್ ಕಾರು ಮಾದರಿಯನ್ನು ದೆಹಲಿ ಆಟೋ ಎಕ್ಸ್ಪೋದಲ್ಲಿ ಅನಾವರಣಗೊಳಿಸಿದ ನಂತರ ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆ ನಡೆಸುತ್ತಿದ್ದು, ಶೀಘ್ರದಲ್ಲೇ ಹೊಸ ಕಾರನ್ನು ಪರಿಚಯಿಸುವುದಾಗಿ ಹೇಳಿಕೊಂಡಿದೆ.
2019ರ ಜಿನೆವಾ ಆಟೋ ಮೇಳದಲ್ಲಿ ಮೊದಲ ಬಾರಿಗೆ ಬಝರ್ಡ್ ಹೆಸರಿನೊಂದಿಗ ಅನಾವರಣಗೊಂಡಿದ್ದ ಟಾಟಾ ಹೊಸ ಎಸ್ಯುವಿ ಕಾರು ಇದೀಗ ಗ್ರಾವಿಟಾಸ್ ಹೆಸರಿನೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದ್ದು, ಈಗಾಗಲೇ ಮಾರುಕಟ್ಟೆಯಲ್ಲಿ ಜನಪ್ರಿಯವಾಗಿರುವ ಹ್ಯಾರಿಯರ್ ವಿನ್ಯಾಸವನ್ನೇ ಪಡೆದಿರುವ ಹೊಸ ಗ್ರಾವಿಟಾಸ್ ಕಾರು ಗ್ರಾಹಕರ ಬೇಡಿಕೆಯೆಂತೆ ವಿಶೇಷ ತಾಂತ್ರಿಕ ಸೌಲಭ್ಯಗಳೊಂದಿಗೆ ಖರೀದಿಗೆ ಲಭ್ಯವಾಗುತ್ತಿದೆ.
7 ಸೀಟರ್ ಆಸನ ಸೌಲಭ್ಯದೊಂದಿಗೆ ಎಸ್ಯುವಿ ಆವೃತ್ತಿಗಳಲ್ಲಿ ಮುಂಚೂಣಿಯಲ್ಲಿರುವ ಫೋರ್ಡ್ ಎಂಡೀವರ್, ಮಹೀಂದ್ರಾ ಅಲ್ಟುರಾಸ್ ಜಿ4 ಮತ್ತು ಟೊಯೊಟಾ ಫಾರ್ಚೂನರ್ ಕಾರಿಗೂ ಗ್ರಾವಿಟಾಸ್ ಪ್ರಬಲ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.
ಗ್ರಾವಿಟಾಸ್ ಕಾರು 4,661-ಎಂಎಂ ಉದ್ದ, 1786-ಎಂಎಂ ಎತ್ತರ ಮತ್ತು 2,741-ಎಂಎಂ ವೀಲ್ಹ್ ಬೆಸ್ನೊಂದಿಗೆ ಹ್ಯಾರಿಯರ್ಗಿಂತಲೂ 63-ಎಂಎಂ ಹೆಚ್ಚು ಉದ್ದ, 80-ಎಂಎಂ ಕಡಿಮೆ ಎತ್ತರ ಪಡೆದುಕೊಂಡಿದೆ.
ಟಾಟಾ ಹೊಸ ಎಸ್ಯುವಿ ಕಾರು ಇಂಪ್ಯಾಕ್ಟ್ 2.0 ಡಿಸೈನ್ ಅಡಿ ನಿರ್ಮಾಣವಾಗಿದ್ದು, ಫ್ಲೇರ್ಡ್ ಆರ್ಚೆಸ್, ಮುಂಭಾಗದ ಬಂಪರ್ಗಳಿಗೆ ಟ್ರೈ ಆರೋ ಡಿಸೈನ್, ಡ್ಯುಯಲ್ ಟೋನ್ ಬಂಪರ್, ಎಲ್ಇಡಿ ಹೆಡ್ಲೈಟ್, ವ್ರಾಪ್ಡ್ ಅರೌಂಡ್ ಟೈಲ್ ಲೈಟ್ ಮತ್ತು ಸ್ಕಿಡ್ ಪ್ಲೇಟ್ಗಳಿಂದ ಸಜ್ಜುಗೊಂಡಿದೆ.
ಇನ್ನು ಗ್ರಾವಿಟಾಸ್ ಕಾರು ಹ್ಯಾರಿಯರ್ನಂತೆಯೇ ಎಕ್ಸ್ಇ, ಎಕ್ಸ್ಎಂ, ಎಕ್ಸ್ ಟಿ ಮತ್ತು ಎಕ್ಸ್ಜೆಡ್ ಎಂಬ ನಾಲ್ಕು ವೆರಿಯೆಂಟ್ಗಳಲ್ಲಿ ಬಿಡುಗಡೆಯಾಗಲಿದ್ದು, 18-ಇಂಚಿನ ಅಲಾಯ್ ವ್ಹೀಲ್ಸ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ವಿಭಿನ್ನವಾದ ಬೂಟ್ ಲಿಡ್ ಮತ್ತು ಟೈಲ್ ಲ್ಯಾಂಪ್ಸ್ ಅನ್ನು ಹೊಂದಿದಿದೆ.
ಜೊತೆಗೆ ಸ್ಪೋರ್ಟಿ ಸ್ಪಾಯ್ಲರ್, ಎಲ್ಇಡಿ ಟೈಲ್ಲೈಟ್ಸ್ ಅನ್ನು ಪಡೆದುಕೊಂಡಿದ್ದು, ಹ್ಯಾರಿಯರ್ ಕಾರಿನಲ್ಲಿ ಬಳಕೆ ಮಾಡಲಾಗುತ್ತಿರುವ ಬಿಎಸ್-6 ಡೀಸೆಲ್ ಎಂಜಿನ್ ಅನ್ನೇ ಗ್ರಾವಿಟಾಸ್ ಕೂಡಾ ಪಡೆದುಕೊಳ್ಳಲಿದೆ.
ಹೊಸ ಕಾರು ಹ್ಯಾರಿಯರ್ ಮಾದರಿಯಲ್ಲಿ 2.0-ಲೀಟರ್ ಕ್ರೆಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಮಾತ್ರ ಬಿಡುಗಡೆಯಾಗಲಿದ್ದು, ತದನಂತರವಷ್ಟೇ ಹ್ಯಾರಿಯರ್ ಮತ್ತು ಗ್ರಾವಿಟಾಸ್ ಕಾರುಗಳಲ್ಲಿ ಪೆಟ್ರೋಲ್ ಮಾದರಿಯು ಬಿಡುಗಡೆಯಾಗಲಿದೆ.
2.0-ಲೀಟರ್ ಡೀಸೆಲ್ ಮಾದರಿಯು 173-ಬಿಹೆಚ್ಪಿ ಹಾಗೂ 350-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ಟಿಯನ್ನು ಪಡೆದಿದ್ದು, ಹ್ಯುಂಡೈನಿಂದ ಎರವಲು ಪಡೆಯಲಾಗಿರುವ 6- ಸ್ಪೀಡ್ ಮ್ಯಾನುವಲ್ ಮತ್ತು 6-ಸ್ಪಿಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಟ್ರಾನ್ಸ್ಮಿಷನ್ ಸೌಲಭ್ಯ ಪಡೆದುಕೊಳ್ಳಲಿದೆ.
ಜೊತೆಗೆ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್ಗಳನ್ನು ನೀಡಲಾಗಿದ್ದು, 4x4 ಡ್ರೈವ್ ಟೆಕ್ನಾಲಜಿ ಜೊತೆಗೆ ಆಫ್ ರೋಡ್ ಎಸ್ಯುವಿ ಪ್ರಿಯರ ಆಕರ್ಷಣೆಗೂ ಕಾರಣವಾಗಲಿದೆ.
ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)
ಮಾಹಿತಿಗಳ ಪ್ರಕಾರ, ಹೊಸ ಗ್ರಾವಿಟಾಸ್ ಕಾರು ಇದೇ ವರ್ಷ ಜುಲೈ ಅಥವಾ ಅಗಸ್ಟ್ನಲ್ಲಿ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಪ್ರತಿಸ್ಪರ್ಧಿ ಕಾರುಗಳಿಂತಲೂ ಕಡಿಮೆ ಬೆಲೆ ಪಡೆದುಕೊಳ್ಳಲಿರುವ ಹೊಸ ಕಾರು ಎಕ್ಸ್ಶೋರೂಂ ಪ್ರಕಾರ ಆರಂಭಿಕವಾಗಿ ರೂ.19 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.22 ಲಕ್ಷ ಬೆಲೆ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ.