Just In
Don't Miss!
- News
ಕೊರೊನಾ ಬಂದಿದ್ದು ಚೀನಾದಿಂದ ಅಲ್ಲ... ಶಿವನಿಂದ, ನಾನೇ ಶಿವ!
- Sports
ಯುಎಇ ಆಟಗಾರರಿಂದ ಮ್ಯಾಚ್ ಫಿಕ್ಸಿಂಗ್; ಅಮಾನತು ಮಾಡಿದ ಐಸಿಸಿ
- Movies
'ಬೆಲ್ ಬಾಟಂ-2' ಟೈಟಲ್ ಪೋಸ್ಟರ್ ಅನಾವರಣ: ಡಿಟೆಕ್ಟಿವ್ ದಿವಾಕರ್ ಈಸ್ ಬ್ಯಾಕ್
- Lifestyle
ಗರ್ಭಾವಸ್ಥೆಯಲ್ಲಿ ಥೈರಾಯ್ಡ್ ಸಮಸ್ಯೆ: ಇದರ ಅಪಾಯಗಳೇನು, ತಡೆಗಟ್ಟುವುದು ಹೇಗೆ?
- Finance
ಹೊಸ ಸಾರ್ವಕಾಲಿಕ ದಾಖಲೆ ಬರೆದ ಪೆಟ್ರೋಲ್- ಡೀಸೆಲ್ ದರ; ಯಾವ ನಗರದಲ್ಲಿ ಎಷ್ಟು?
- Education
ECIL Recruitment 2021: 3 ಟೆಕ್ನಿಕಲ್ ಅಧಿಕಾರಿ ಹುದ್ದೆಗಳಿಗೆ ನೇರ ಸಂದರ್ಶನ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಗ್ರಾಹಕರ ಬೇಡಿಕೆಯೆಂತೆ ಹಲವು ಹೊಸ ತಾಂತ್ರಿಕ ಅಂಶಗಳೊಂದಿಗೆ ಬಿಡುಗಡೆಯಾಗಲಿದೆ ಟಾಟಾ ಗ್ರಾವಿಟಾಸ್
ಟಾಟಾ ಮೋಟಾರ್ಸ್ ತನ್ನ ಬಹುನೀರಿಕ್ಷಿತ ಗ್ರಾವಿಟಾಸ್ ಎಸ್‌ಯುವಿ ಮಾದರಿಯನ್ನು 2021ರ ಆರಂಭದಲ್ಲಿ ಬಿಡುಗಡೆ ಮಾಡಲು ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರು ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಪ್ರಮುಖ ಎರಡು ಆಸನ ಮಾದರಿಗಳನ್ನು ಪಡೆದುಕೊಳ್ಳಲಿದೆ.

2020ರ ಫೆಬ್ರುವರಿಯಲ್ಲಿ ನಡೆದಿದ್ದ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಳಿಸಲಾದ ಗ್ರಾವಿಟಾಸ್ ಎಸ್‌ಯುವಿ ಮಾದರಿಯನ್ನು ಇದೇ ವರ್ಷ ಜೂನ್ ಅಥವಾ ಜುಲೈ ಅವಧಿಯಲ್ಲಿ ಬಿಡುಗಡೆ ಮಾಡಬೇಕಿತ್ತು. ಆದರೆ ಕರೋನಾ ವೈರಸ್ ಪರಿಣಾಮ ಕಾರು ಬಿಡುಗಡೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡುತ್ತ ಬಂದಿದ್ದ ಟಾಟಾ ಕಂಪನಿಯು ಇದೀಗ ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ್‌ಗಳನ್ನು ಒಳಗೊಂಡಿರಲಿದೆ.

ಗ್ರಾವಿಟಾಸ್ ಕಾರು ಟಾಟಾ ನಿರ್ಮಾಣದ ಕಾರುಗಳಲ್ಲೇ ವಿಶೇಷ ವಿನ್ಯಾಸದ ಎಸ್‌ಯುವಿ ಕಾರು ಆವೃತ್ತಿಯಾಗಿದ್ದು, ಹ್ಯಾರಿಯರ್ ಉತ್ಪಾದನೆಗಾಗಿ ಬಳಕೆ ಮಾಡಲಾಗಿದ್ದ OMEGA(ಆಪ್ಟಿಮಲ್ ಮಾಡ್ಯುಲರ್ ಎಫಿಶಿಯೆಂಟ್ ಗ್ಲೋಬಲ್ ಅಡ್ವಾನ್ಸ್ಡ್) ಪ್ಲ್ಯಾಟ್‌ಫಾರ್ಮ್‌ನಡಿಯಲ್ಲೇ ಹೊಸ ಗ್ರಾವಿಟಾಸ್ ಮಾದರಿಯನ್ನು ಅಭಿವೃದ್ದಿಗೊಳಿಸಲಾಗಿದೆ.

OMEGA ಕಾರು ಉತ್ಪಾದನಾ ತಂತ್ರಜ್ಞಾನವು ಟಾಟಾ ಹೊಸ ಕಾರುಗಳ ಅಭಿವೃದ್ದಿಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಹೊಸ ಕಾರುಗಳಲ್ಲಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ.

ಗ್ರಾವಿಟಾಸ್ ಎಸ್‌ಯುವಿ ಹೊಸ ಕಾರು ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಖರೀದಿಗೆ ಲಭ್ಯವಿರಲಿದ್ದು, 6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯದೊಂದಿಗೆ ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯಲ್ಲಿ ಆಸನ ಸೌಲಭ್ಯಗಳನ್ನು ಹೊಂದಿರಲಿದೆ. 6 ಆಸನಗಳ ಮಾದರಿಯಲ್ಲಿ ಮಧ್ಯದ ಸಾಲಿನಲ್ಲಿರುವ ಆಸನಗಳು ಕ್ಯಾಪ್ಟನ್ ಆಸನಗಳಾಗಿದ್ದು, 7 ಸೀಟರ್ ಮಾದರಿಯಲ್ಲಿ ಮಧ್ಯದ ಸಾಲಿನ ಆಸನವು 60:40 ಮಾದರಿಯಲ್ಲಿ ಮಡಿಕೆ ಮಾಡಬಹುದಾಗಿದೆ.

ಹಾಗೆಯೇ ಹೊಸ ಕಾರಿನಲ್ಲಿ ಸ್ಪೋರ್ಟಿ ಮಾದರಿಯ ಆಸನಗಳೊಂದಿಗೆ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್ ಮೌಂಟೆಡ್, ತ್ರೀ ಜೋನ್ ಕ್ಲೈಮೆಟ್ ಕಂಟ್ರೋಲ್, ವಿವಿಧ ಡ್ರೈವ್ ಮೋಡ್, ಕನ್ವರ್ಷನಲ್ ಸನ್‌ರೂಫ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್‌ಗಳಿವೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಈ ಮೂಲಕ ಹೊಸ ಕಾರು ಆವೃತ್ತಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಟ್ಯೂಸಾನ್, ಮಹೀಂದ್ರಾ ಅಲ್ಟುರಾಸ್ ಜಿ4, ಫೋರ್ಡ್ ಎಂಡೀವರ್ ಜೊತೆಗೆ ಟೊಯೊಟಾ ಫಾರ್ಚೂನರ್ ಕಾರಿಗೂ ಪೈಪೋಟಿ ನೀಡಲಿದ್ದು, ಉತ್ತಮ ಸ್ಥಳಾವಕಾಶದೊಂದಿಗೆ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಹೊಸ ಕಾರಿನಲ್ಲಿ ಹ್ಯಾರಿಯರ್ ಮಾದರಿಯಲ್ಲೇ 2.0-ಲೀಟರ್(1,956 ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 170-ಬಿಹೆಚ್‍ಪಿ, 350-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.
MOST READ: ಭಾರತದಲ್ಲಿ ಎರಡು ಹೊಸ ಎಸ್‌ಯುವಿ ಕಾರು ಮಾದರಿಗಳನ್ನು ಬಿಡುಗಡೆ ಮಾಡಲಿದೆ ಹ್ಯುಂಡೈ

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಗಮನಸೆಳೆಯಲಿರುವ ಹೊಸ ಗ್ರಾವಿಟಾಸ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 19 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.23 ಲಕ್ಷ ಬೆಲೆ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ.