ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿ ಟಾಟಾ ಗ್ರಾವಿಟಾಸ್ ಎಸ್‌ಯುವಿ

ಟಾಟಾ ಮೋಟಾರ್ಸ್ ಕಂಪನಿಯು ಬಿಡುಗಡೆ ಮಾಡಲಿರುವ ಹೊಸ ಕಾರುಗಳ ಪೈಕಿ ಗ್ರಾವಿಟಾಸ್ ಎಸ್‌ಯುವಿ ಕೂಡಾ ಒಂದಾಗಿದ್ದು, ಬಿಡುಗಡೆಯ ಸನಿಹದಲ್ಲಿರುವ ಹೊಸ ಕಾರು ಅಂತಿಮ ಹಂತದ ರೋಡ್ ಟೆಸ್ಟಿಂಗ್ ಪ್ರಕ್ರಿಯೆಯನ್ನು ಪೂರ್ಣಗೊಳಿಸುತ್ತಿದೆ.

ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿ ಟಾಟಾ ಗ್ರಾವಿಟಾಸ್ ಎಸ್‌ಯುವಿ

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಗ್ರಾವಿಟಾಸ್ ಕಾರು ಟಾಟಾ ಉತ್ಪಾದನೆಯ ವಿಶೇಷ ವಿನ್ಯಾಸದ ಎಸ್‌ಯುವಿ ಆವೃತ್ತಿಯಾಗಿದ್ದು, ಹ್ಯಾರಿಯರ್ ಉತ್ಪಾದನೆಗಾಗಿ ಬಳಕೆ ಮಾಡಲಾಗಿದ್ದ OMEGA ಪ್ಲ್ಯಾಟ್‌ಫಾರ್ಮ್‌ನಡಿಯಲ್ಲೇ ಹೊಸ ಗ್ರಾವಿಟಾಸ್ ಅನ್ನು ಕೂಡಾ ಅಭಿವೃದ್ದಿಗೊಳ್ಳುತ್ತಿದೆ. OMEGA ಕಾರು ಉತ್ಪಾದನಾ ತಂತ್ರಜ್ಞಾನವು ಟಾಟಾ ಹೊಸ ಕಾರುಗಳ ಅಭಿವೃದ್ದಿಯಲ್ಲಿ ಮಹತ್ವದ ಬದಲಾಣೆಗೆ ಕಾರಣವಾಗಿದ್ದು, ಗ್ರಾವಿಟಾಸ್ ಕಾರು ಕೂಡಾ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿ ಟಾಟಾ ಗ್ರಾವಿಟಾಸ್ ಎಸ್‌ಯುವಿ

OMEGA(ಆಪ್ಟಿಮಲ್ ಮಾಡ್ಯುಲರ್ ಎಫಿಶಿಯೆಂಟ್ ಗ್ಲೋಬಲ್ ಅಡ್ವಾನ್ಸ್ಡ್ ಪ್ಲಾಟ್‍ಫಾರ್ಮ್)ತಂತ್ರಜ್ಞಾನವನ್ನು ಲ್ಯಾಂಡ್ ರೋವರ್ ಡಿಸ್ಕವರಿ ಕಾರಿನಲ್ಲಿಯೂ ಕೂಡಾ ಕಾಣಬಹುದಾಗಿದ್ದು, ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ.

MOST READ: ಕರೋನಾ ಕಾರಣಕ್ಕೆ ಕಾರಿನಲ್ಲೇ ತಂಗುತ್ತಿರುವ ವೈದ್ಯ..!

ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿ ಟಾಟಾ ಗ್ರಾವಿಟಾಸ್ ಎಸ್‌ಯುವಿ

7 ಸೀಟರ್ ಆಸನ ಸೌಲಭ್ಯದೊಂದಿಗೆ ಅಭಿವೃದ್ದಿಗೊಂಡಿರುವ ಹೊಸ ಗ್ರಾವಿಟಾಸ್ ಎಸ್‌ಯುವಿ ಆವೃತ್ತಿಯು ಪ್ರತಿಸ್ಪರ್ಧಿ ಮಾದರಿಗಳಾದ ಫೋರ್ಡ್ ಎಂಡೀವರ್, ಮಹೀಂದ್ರಾ ಅಲ್ಟುರಾಸ್ ಜಿ4 ಜೊತೆಗೆ ಟೊಯೊಟಾ ಫಾರ್ಚೂನರ್‌ ಕಾರಿಗೂ ಗ್ರಾವಿಟಾಸ್ ಪ್ರಬಲ ಪೈಪೋಟಿ ನೀಡಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿ ಟಾಟಾ ಗ್ರಾವಿಟಾಸ್ ಎಸ್‌ಯುವಿ

ಗ್ರಾವಿಟಾಸ್ ಕಾರು 4,661-ಎಂಎಂ ಉದ್ದ, 1786-ಎಂಎಂ ಎತ್ತರ ಮತ್ತು 2,741-ಎಂಎಂ ವೀಲ್ಹ್ ಬೆಸ್‌ನೊಂದಿಗೆ ಹ್ಯಾರಿಯರ್‌ಗಿಂತಲೂ 63-ಎಂಎಂ ಹೆಚ್ಚು ಉದ್ದ, 80-ಎಂಎಂ ಕಡಿಮೆ ಎತ್ತರ ಪಡೆದುಕೊಂಡಿದ್ದು, ಫ್ಲೇರ್ಡ್ ಆರ್ಚೆಸ್, ಮುಂಭಾಗದ ಬಂಪರ್‍‍ಗಳಿಗೆ ಟ್ರೈ ಆರೋ ಡಿಸೈನ್, ಡ್ಯುಯಲ್ ಟೋನ್ ಬಂಪರ್, ಎಲ್ಇಡಿ ಹೆಡ್‍ಲೈಟ್, ವ್ರಾಪ್ಡ್ ಅರೌಂಡ್ ಟೈಲ್ ಲೈಟ್ ಮತ್ತು ಸ್ಕಿಡ್ ಪ್ಲೇಟ್‍‍ಗಳಿಂದ ಸಜ್ಜುಗೊಂಡಿದೆ.

MOST READ: ಲಾಕ್ ಡೌನ್ ಎಫೆಕ್ಟ್- ಮಾರ್ಗ ಮಧ್ಯದಲ್ಲೇ ಉಳಿದ ಸಾವಿರಾರು ಕೋಟಿ ಮೌಲ್ಯದ ಹೊಸ ವಾಹನಗಳು

ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿ ಟಾಟಾ ಗ್ರಾವಿಟಾಸ್ ಎಸ್‌ಯುವಿ

ಗ್ರಾವಿಟಾಸ್ ಕಾರು ಹ್ಯಾರಿಯರ್‍‍ನಂತೆಯೇ ಎಕ್ಸ್ಇ, ಎಕ್ಸ್ಎಂ, ಎಕ್ಸ್ ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೆರಿಯೆಂಟ್‍‍ಗಳಲ್ಲಿ ಬಿಡುಗಡೆಯಾಗಲಿದ್ದು, 18-ಇಂಚಿನ ಅಲಾಯ್ ವ್ಹೀಲ್ಸ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ವಿಭಿನ್ನವಾದ ಬೂಟ್ ಲಿಡ್ ಮತ್ತು ಟೈಲ್ ಲ್ಯಾಂಪ್ಸ್ ಅನ್ನು ಹೊಂದಿದೆ.

ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿ ಟಾಟಾ ಗ್ರಾವಿಟಾಸ್ ಎಸ್‌ಯುವಿ

ಜೊತೆಗೆ ಸ್ಪೋರ್ಟಿ ಸ್ಪಾಯ್ಲರ್, ಎಲ್ಇಡಿ ಟೈಲ್‍ಲೈಟ್ಸ್ ಅನ್ನು ಪಡೆದುಕೊಂಡಿದ್ದು, ಹ್ಯಾರಿಯರ್ ಕಾರಿನಲ್ಲಿ ಬಳಕೆ ಮಾಡಲಾಗುತ್ತಿರುವ ಬಿಎಸ್-6 ಡೀಸೆಲ್ ಎಂಜಿನ್ ಅನ್ನೇ ಗ್ರಾವಿಟಾಸ್ ಕೂಡಾ ಪಡೆದುಕೊಳ್ಳಲಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್

ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿ ಟಾಟಾ ಗ್ರಾವಿಟಾಸ್ ಎಸ್‌ಯುವಿ

ಹೊಸ ಗ್ರಾವಿಟಾಸ್ ಕಾರು ಸದ್ಯಕ್ಕೆ ಹ್ಯಾರಿಯರ್ ಮಾದರಿಯಲ್ಲಿ ಬಳಕೆ ಮಾಡಲಾಗಿರುವ 2.0-ಲೀಟರ್ ಕ್ರೆಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಮಾತ್ರ ಬಿಡುಗಡೆಯಾಗಲಿದ್ದು, ತದನಂತರವಷ್ಟೇ ಹ್ಯಾರಿಯರ್ ಮತ್ತು ಗ್ರಾವಿಟಾಸ್ ಕಾರುಗಳಲ್ಲಿ ಪೆಟ್ರೋಲ್ ಮಾದರಿಯು ಸಹ ಬಿಡುಗಡೆಯಾಗಲಿದೆ.

ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿ ಟಾಟಾ ಗ್ರಾವಿಟಾಸ್ ಎಸ್‌ಯುವಿ

ಇದಲ್ಲದೆ ಹೊಸ ಕಾರಿನ ಒಳಭಾಗದಲ್ಲೂ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, 4x4 ಡ್ರೈವ್ ಟೆಕ್ನಾಲಜಿಯು ಆಫ್ ರೋಡ್ ಎಸ್‌ಯುವಿ ಪ್ರಿಯರ ಪ್ರಮುಖ ಆಕರ್ಷಣೆಯಾಗಲಿದೆ.

MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್

ಬಿಡುಗಡೆಗಾಗಿ ಅಂತಿಮ ಹಂತದ ಸಿದ್ದತೆಯಲ್ಲಿ ಟಾಟಾ ಗ್ರಾವಿಟಾಸ್ ಎಸ್‌ಯುವಿ

ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)

ಮಾಹಿತಿಗಳ ಪ್ರಕಾರ, ಹೊಸ ಗ್ರಾವಿಟಾಸ್ ಕಾರು ಇದೇ ವರ್ಷ ಅಗಸ್ಟ್ ಅಥವಾ ಸೆಪ್ಟೆಂಬರ್ ಅಂತ್ಯಕ್ಕೆ ಬಿಡುಗಡೆಯಾಗುವ ಸಾಧ್ಯತೆಗಳಿದ್ದು, ಪ್ರತಿಸ್ಪರ್ಧಿ ಕಾರುಗಳಿಂತಲೂ ಕಡಿಮೆ ಬೆಲೆ ಪಡೆದುಕೊಳ್ಳಲಿರುವ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.22 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.25 ಲಕ್ಷ ಬೆಲೆ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ.

Source: Gaadiwaadi

More from DriveSpark

Article Published On: Sunday, April 19, 2020, 12:34 [IST]
English summary
Tata Gravitas suv Spotted Again. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+