Just In
Don't Miss!
- News
ಹುಣಸೋಡು ಜಿಲೆಟಿನ್ ಸ್ಪೋಟ: ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ
- Sports
ಯುವರಾಜ್ ಸಿಂಗ್ ಕೋಚಿಂಗ್ ಬಹಳ ಉಪಯೋಗಕ್ಕೆ ಬಂತು: ಗಿಲ್
- Lifestyle
ಕೊಲೆಸ್ಟ್ರಾಲ್ ಹೆಚ್ಚಾಗಿದೆಯೇ? ಈ ಆಹಾರ ಸೇವಿಸಿ
- Education
RITES Limited Recruitment 2021: ವಿವಿಧ 9 ಹುದ್ದೆಗಳಿಗೆ ಅರ್ಜಿ ಆಹ್ವಾನ
- Movies
ದುಬಾರಿ ವಿವಾಹ; ವರುಣ್ ಧವನ್ ಮದುವೆ ನಡೆಯುತ್ತಿರುವ ಐಷಾರಾಮಿ ಹೋಟೆಲ್ ಗೆ ಇಷ್ಟೊಂದು ಖರ್ಚು ಮಾಡುತ್ತಿದ್ದಾರಾ?
- Finance
ಬಜೆಟ್ 2021: ಜ. 23ರಂದು ಹಲ್ವಾ ಕಾರ್ಯಕ್ರಮ- ಇದೇನು, ಎತ್ತ?
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಜನವರಿ 26ರಂದು ಅನಾವರಣಗೊಳ್ಳಲಿದೆ ಟಾಟಾ ಗ್ರಾವಿಟಾಸ್ ಎಸ್‌ಯುವಿ
ಕರೋನಾ ವೈರಸ್ ಪರಿಣಾಮ ಹೊಸ ಗ್ರಾವಿಟಾಸ್ ಎಸ್‌ಯುವಿ ಕಾರಿನ ಬಿಡುಗಡೆಯನ್ನು ಮುಂದೂಡಿಕೆ ಮಾಡುತ್ತಲೇ ಬಂದಿದ್ದ ಟಾಟಾ ಮೋಟಾರ್ಸ್ ಕಂಪನಿಯು ಇದೀಗ ಹೊಸ ಕಾರಿನ ಬಿಡುಗಡೆಗೆ ಅಂತಿಮ ಹಂತದ ಸಿದ್ದತೆ ನಡೆಸಿದ್ದು, ಹೊಸ ಕಾರಿನ ಉತ್ಪಾದನಾ ಆವೃತ್ತಿಯನ್ನು ಮುಂದಿನ ತಿಂಗಳು 26ರಂದು ಅನಾವರಣಗೊಳಿಸಲಿದೆ ಎನ್ನಲಾಗಿದೆ.

2020ರ ಫೆಬ್ರುವರಿಯಲ್ಲಿ ನಡೆದಿದ್ದ ಆಟೋ ಎಕ್ಸ್‌ಪೋದಲ್ಲಿ ಮೊದಲ ಬಾರಿಗೆ ಪ್ರದರ್ಶನಗೊಳಿಸಲಾದ ಗ್ರಾವಿಟಾಸ್ ಎಸ್‌ಯುವಿ ಮಾದರಿಯನ್ನು ಇದೇ ವರ್ಷ ಜೂನ್ ಅಥವಾ ಜುಲೈ ಅವಧಿಯಲ್ಲಿ ಬಿಡುಗಡೆ ಮಾಡಬೇಕಿತ್ತು. ಆದರೆ ಕರೋನಾ ವೈರಸ್ ಪರಿಣಾಮ ಕಾರು ಬಿಡುಗಡೆಯನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡುತ್ತ ಬಂದಿದ್ದ ಟಾಟಾ ಕಂಪನಿಯು ಮುಂದಿನ ತಿಂಗಳು ಅನಾವರಣಗೊಳಿಸಿ ಫೆಬ್ರುವರಿ ಮಧ್ಯಂತರದಲ್ಲಿ ಬಿಡುಗಡೆ ಮಾಡುವ ಸುಳಿವು ನೀಡಿದೆ.

ಮಾಹಿತಿಗಳ ಪ್ರಕಾರ, ಜನವರಿ 26ರಂದು ಅನಾವರಣಗೊಂಡ ನಂತರ ಬುಕ್ಕಿಂಗ್ ಪ್ರಕ್ರಿಯೆ ಜೊತೆಗೆ ಟೆಸ್ಟ್ ಡ್ರೈವ್ ಪ್ರಕ್ರಿಯೆಗಳನ್ನು ಆರಂಭಿಸಲಿರುವ ಟಾಟಾ ಕಂಪನಿಯು ಫೆಬ್ರುವರಿ ಮಧ್ಯಂತರದಲ್ಲಿ ಬಿಡುಗಡೆ ಮಾಡಲಿದೆ.

ಹೊಸ ಕಾರು ಮಧ್ಯಮ ಕ್ರಮಾಂಕದ ಎಸ್‌ಯುವಿ ಕಾರು ಮಾದರಿಯಲ್ಲೇ ಅತ್ಯುತ್ತಮ ಫೀಚರ್ಸ್‌ಗಳನ್ನು ಒಳಗೊಂಡಿರಲಿದ್ದು, ಹ್ಯಾರಿಯರ್ ಮುಂದುವರಿದ ಭಾಗವಾಗಿರುವ ಗ್ರಾವಿಟಾಸ್ ಕಾರು ಮೂರನೇ ಸಾಲಿನ ಆಸದೊಂದಿಗೆ ಫುಲ್ ಸೈಜ್ ಎಸ್‌ಯುವಿ ಪ್ರಿಯರನ್ನು ಸೆಳೆಯಲಿದೆ.

ಟಾಟಾ ಹೊ OMEGA ಕಾರು ಉತ್ಪಾದನಾ ತಂತ್ರಜ್ಞಾನವು ಹೊಸ ಕಾರುಗಳ ಅಭಿವೃದ್ದಿಯಲ್ಲಿ ಮಹತ್ವದ ಬದಲಾವಣೆಗೆ ಕಾರಣವಾಗಿದ್ದು, ಹೊಸ ಕಾರುಗಳಲ್ಲಿ ಐಷಾರಾಮಿ ವಿನ್ಯಾಸ, ಪ್ರಯಾಣಿಕರಿಗೆ ಗರಿಷ್ಠ ಸುರಕ್ಷತೆ ನೀಡುವುದರ ಜೊತೆಗೆ ಎಂಜಿನ್ ಕಾರ್ಯಕ್ಷಮತೆಯಲ್ಲೂ ಗಮನಸೆಳೆಯಲಿದೆ. ಗ್ರಾವಿಟಾಸ್ ಎಸ್‌ಯುವಿ ಹೊಸ ಕಾರು ಕೂಡಾ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ 6 ಸೀಟರ್ ಮತ್ತು 7 ಸೀಟರ್ ಸೌಲಭ್ಯದೊಂದಿಗೆ ಖರೀದಿಗೆ ಲಭ್ಯವಿರಲಿದ್ದು, ಪ್ರೀಮಿಯಂ ಫೀಚರ್ಸ್‌ನಲ್ಲೂ ಗಮನಸೆಳೆಯಲಿದೆ.

6 ಸೀಟರ್ ಮಾದರಿಯು 2+2+2 ಮಾದರಿಯ ಆಸನ ಸೌಲಭ್ಯದೊಂದಿಗೆ ಮತ್ತು 7 ಸೀಟರ್ ಮಾದರಿಯು 2+3+2 ಮಾದರಿಯಲ್ಲಿ ಆಸನ ಸೌಲಭ್ಯಗಳನ್ನು ಹೊಂದಿರಲಿದೆ. 6 ಆಸನಗಳ ಮಾದರಿಯಲ್ಲಿ ಮಧ್ಯದ ಸಾಲಿನಲ್ಲಿರುವ ಆಸನಗಳು ಕ್ಯಾಪ್ಟನ್ ಆಸನಗಳಾಗಿದ್ದು, 7 ಸೀಟರ್ ಮಾದರಿಯಲ್ಲಿ ಮಧ್ಯದ ಸಾಲಿನ ಆಸನವು 60:40 ಮಾದರಿಯಲ್ಲಿ ಮಡಿಕೆ ಮಾಡಬಹುದಾಗಿದೆ.

ಹಾಗೆಯೇ ಹೊಸ ಕಾರಿನಲ್ಲಿ ಸ್ಪೋರ್ಟಿ ಮಾದರಿಯ ಆಸನಗಳೊಂದಿಗೆ ಮಲ್ಟಿ ಫಂಕ್ಷನ್ ಸ್ಟೀರಿಂಗ್ ವೀಲ್ಹ್ ಮೌಂಟೆಡ್, ತ್ರೀ ಜೋನ್ ಕ್ಲೈಮೆಟ್ ಕಂಟ್ರೋಲ್, ವಿವಿಧ ಡ್ರೈವ್ ಮೋಡ್, ಕನ್ವರ್ಷನಲ್ ಸನ್‌ರೂಫ್ ಸೇರಿದಂತೆ ಹಲವು ಪ್ರೀಮಿಯಂ ಫೀಚರ್ಸ್‌ಗಳಿವೆ.
MOST READ: ಪ್ರತಿ ಚಾರ್ಜ್‌ಗೆ ಗರಿಷ್ಠ 509ಕಿ.ಮೀ ಮೈಲೇಜ್ ನೀಡಲಿದೆ ಸ್ಕೋಡಾ ಎನ್ಯಾಕ್ ಎಲೆಕ್ಟ್ರಿಕ್ ಎಸ್‌ಯುವಿ..!

ಈ ಮೂಲಕ ಹೊಸ ಕಾರು ಆವೃತ್ತಿಯು ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಹ್ಯುಂಡೈ ಟ್ಯೂಸಾನ್, ಮಹೀಂದ್ರಾ ಅಲ್ಟುರಾಸ್ ಜಿ4, ಫೋರ್ಡ್ ಎಂಡೀವರ್ ಜೊತೆಗೆ ಟೊಯೊಟಾ ಫಾರ್ಚೂನರ್ ಕಾರಿಗೂ ಪೈಪೋಟಿ ನೀಡಲಿದ್ದು, ಉತ್ತಮ ಸ್ಥಳಾವಕಾಶದೊಂದಿಗೆ ಎಸ್‌ಯುವಿ ಕಾರು ಮಾರಾಟದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಲಿದೆ.

ಹೊಸ ಕಾರಿನಲ್ಲಿ ಹ್ಯಾರಿಯರ್ ಮಾದರಿಯಲ್ಲೇ 2.0-ಲೀಟರ್(1,956 ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 170-ಬಿಹೆಚ್‍ಪಿ, 350-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.
MOST READ: 2020ರ ಅವಧಿಯಲ್ಲಿ ಬಿಡುಗಡೆಯಾದ ಪ್ರಮುಖ ಹತ್ತು ಕಾರುಗಳಿವು..!

ಎಸ್‌ಯುವಿ ಕಾರುಗಳ ಮಾರಾಟದಲ್ಲಿ ಗಮನಸೆಳೆಯಲಿರುವ ಹೊಸ ಗ್ರಾವಿಟಾಸ್ ಕಾರು ಮಾದರಿಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 19 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.23 ಲಕ್ಷ ಬೆಲೆ ಹೊಂದಿರಬಹುದೆಂದು ನೀರಿಕ್ಷಿಸಲಾಗಿದೆ.