ಆಟೋ ಎಕ್ಸ್‌ಪೋ 2020: ಟಾಟಾ ಗ್ರಾವಿಟಾಸ್ ಎಸ್‌ಯುವಿ ಅನಾವರಣ
ಟಾಟಾ ಬಹುನೀರಿಕ್ಷಿತ ಎಸ್‌ಯುವಿ ಆವೃತ್ತಿಯಾಗಿರುವ ಗ್ರಾವಿಟಾಸ್ ಮಾದರಿಯು ದೆಹಲಿ ಆಟೋ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದೆ. 2019ರ ಜಿನೆವಾ ಆಟೋ ಮೇಳದಲ್ಲಿ ಬಝರ್ಡ್ ಹೆಸರಿನೊಂದಿಗೆ ಮೊದಲ ಬಾರಿಗೆ ಅನಾವರಣಗೊಂಡಿದ್ದ ಟಾಟಾ ಹೊಸ ಎಸ್ಯುವಿ ಕಾರು ಇದೀಗ ಗ್ರಾವಿಟಾಸ್ ಹೆಸರಿನೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ.

ಹ್ಯಾರಿಯರ್ ವಿನ್ಯಾಸವನ್ನು ಪಡೆದಿರುವ ಗ್ರಾವಿಟಾಸ್ ಕಾರು ಗ್ರಾಹಕರ ಬೇಡಿಕೆಯೆಂತೆ ವಿಶೇಷ ತಾಂತ್ರಿಕ ಸೌಲಭ್ಯವನ್ನು ಪಡೆದುಕೊಂಡಿದ್ದು, 7 ಸೀಟರ್ ಆಸನ ಸೌಲಭ್ಯದೊಂದಿಗೆ ಎಸ್‌ಯುವಿ ಆವೃತ್ತಿಗಳಲ್ಲಿ ಮುಂಚೂಣಿಯಲ್ಲಿರುವ ಫೋರ್ಡ್ ಎಂಡೀವರ್, ಮಹೀಂದ್ರಾ ಅಲ್ಟುರಾಸ್ ಜಿ4 ಮತ್ತು ಟೊಯೊಟಾ ಫಾರ್ಚೂನರ್ ಕಾರಿಗೂ ಗ್ರಾವಿಟಾಸ್ ಪ್ರಬಲ ಪೈಪೋಟಿ ನೀಡುವ ನೀರಿಕ್ಷೆಯಲ್ಲಿದೆ.

ಗ್ರಾವಿಟಾಸ್ ಕಾರು 4,661-ಎಂಎಂ ಉದ್ದ, 1786-ಎಂಎಂ ಎತ್ತರ ಮತ್ತು 2,741-ಎಂಎಂ ವೀಲ್ಹ್ ಬೆಸ್‌ನೊಂದಿಗೆ ಹ್ಯಾರಿಯರ್‌ಗಿಂತಲೂ 63-ಎಂಎಂ ಹೆಚ್ಚು ಉದ್ದ, 80-ಎಂಎಂ ಕಡಿಮೆ ಎತ್ತರ ಪಡೆದುಕೊಂಡಿದೆ.

ಟಾಟಾ ಹೊಸ ಎಸ್ಯುವಿ ಕಾರು ಇಂಪ್ಯಾಕ್ಟ್ 2.0 ಡಿಸೈನ್ ಅಡಿ ನಿರ್ಮಾಣವಾಗಿದ್ದು, ಫ್ಲೇರ್ಡ್ ಆರ್ಚೆಸ್, ಮುಂಭಾಗದ ಬಂಪರ್‍ಗಳಿಗೆ ಟ್ರೈ ಆರೋ ಡಿಸೈನ್, ಡ್ಯುಯಲ್ ಟೋನ್ ಬಂಪರ್, ಎಲ್ಇಡಿ ಹೆಡ್‍ಲೈಟ್, ವ್ರಾಪ್ಡ್ ಅರೌಂಡ್ ಟೈಲ್ ಲೈಟ್ ಮತ್ತು ಸ್ಕಿಡ್ ಪ್ಲೇಟ್‍ಗಳಿಂದ ಸಜ್ಜುಗೊಂಡಿದೆ.

ಇನ್ನು ಗ್ರಾವಿಟಾಸ್ ಕಾರು ಹ್ಯಾರಿಯರ್‍ನಂತೆಯೇ ಎಕ್ಸ್ಇ, ಎಕ್ಸ್ಎಂ, ಎಕ್ಸ್ ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೆರಿಯೆಂಟ್‍ಗಳಲ್ಲಿ ಬಿಡುಗಡೆಯಾಗಲಿದ್ದು, 18-ಇಂಚಿನ ಅಲಾಯ್ ವ್ಹೀಲ್ಸ್, ಆಲ್ ವ್ಹೀಲ್ ಡಿಸ್ಕ್ ಬ್ರೇಕ್, ವಿಭಿನ್ನವಾದ ಬೂಟ್ ಲಿಡ್ ಮತ್ತು ಟೈಲ್ ಲ್ಯಾಂಪ್ಸ್ ಅನ್ನು ಹೊಂದಿದಿದೆ. ಜೊತೆಗೆ ಸ್ಪೋರ್ಟಿ ಸ್ಪಾಯ್ಲರ್, ಎಲ್ಇಡಿ ಟೈಲ್‍ಲೈಟ್ಸ್ ಅನ್ನು ಪಡೆದುಕೊಂಡಿದ್ದು, ಬಿಎಸ್ 6 ಎಂಜಿನ್ ಪ್ರೇರಿತ ಹ್ಯಾರಿಯರ್ ಕಾರಿನೊಂದಿಗೆ ಸದ್ಯ ಸ್ಪಾಟ್ ಟೆಸ್ಟಿಂಗ್ ನಡೆಸುತ್ತಿದೆ.

ಹೊಸ ಕಾರು 2.0-ಲೀಟರ್ ಕ್ರೆಯೊಟೆಕ್ ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಮಾತ್ರ ಬಿಡುಗಡೆಯಾಗಲಿದ್ದು, ತದನಂತರವಷ್ಟೇ ಹ್ಯಾರಿಯರ್ ಮತ್ತು ಗ್ರಾವಿಟಾಸ್ ಕಾರುಗಳ ಪೆಟ್ರೋಲ್ ಮಾದರಿಯು ಬಿಡುಗಡೆಯಾಗಲಿದೆ.

2.0-ಲೀಟರ್ ಡೀಸೆಲ್ ಮಾದರಿಯು 173-ಬಿಹೆಚ್‍ಪಿ ಹಾಗೂ 350-ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಶಕ್ಟಿಯನ್ನು ಪಡೆದಿದ್ದು, ಹ್ಯುಂಡೈನಿಂದ ಎರವಲು ಪಡೆಯಲಾಗಿರುವ ಸಿಕ್ಸ್ ಸ್ಪೀಡ್ ಮ್ಯಾನುವಲ್ ಮತ್ತು ಸಿಕ್ಸ್ ಸ್ಪಿಡ್ ಟಾರ್ಕ್ ಕನ್ವರ್ಟರ್ ಆಟೋಮ್ಯಾಟಿಕ್ ಟ್ರಾನ್ಸ್‌ಮಿಷನ್ ಸೌಲಭ್ಯ ಪಡೆದುಕೊಳ್ಳಲಿದೆ.

ಜೊತೆಗೆ ಹೊಸ ಕಾರಿನಲ್ಲಿ ಹಲವಾರು ಪ್ರೀಮಿಯಂ ಫೀಚರ್ಸ್‌ಗಳನ್ನು ನೀಡಲಾಗಿದ್ದು, 4x4 ಡ್ರೈವ್ ಟೆಕ್ನಾಲಜಿ ಜೊತೆಗೆ ಆಫ್ ರೋಡ್ ಎಸ್‌ಯುವಿ ಪ್ರಿಯರ ಆಕರ್ಷಣೆಗೂ ಕಾರಣವಾಗಲಿದೆ.

ಬಿಡುಗಡೆಯ ಅವಧಿ ಮತ್ತು ಬೆಲೆ(ಅಂದಾಜು)
ಗ್ರಾವಿಟಾಸ್ ಕಾರು ಪ್ರತಿಸ್ಪರ್ಧಿ ಎಸ್‌ಯುವಿ ಕಾರುಗಳಿಂತಲೂ ಅತಿ ಕಡಿಮೆ ಬೆಲೆಯಲ್ಲಿ ದೊರೆಯಲಿದ್ದು, 2021ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಅಧಿಕೃತವಾಗಿ ಬಿಡುಗಡೆಯಾಗಲಿರುವ ಹೊಸ ಕಾರು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ.18 ಲಕ್ಷದಿಂದ ಟಾಪ್ ಎಂಡ್ ಆವೃತ್ತಿಯು ರೂ.22 ಲಕ್ಷ ಬೆಲೆ ಹೊಂದಿರಬಹುದು ಎಂದು ನೀರಿಕ್ಷಿಸಲಾಗಿದೆ.


Click it and Unblock the Notifications








