ಬಿಎಸ್-6 ಟಾಟಾ ಹ್ಯಾರಿಯರ್ ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಶುರು

ಟಾಟಾ ಹ್ಯಾರಿಯರ್ ಎಸ್‌ಯುವಿ ಫೇಸ್‌ಲಿಫ್ಟ್ ಆವೃತ್ತಿಯು ಬಿಡುಗಡೆಗೆ ಸಿದ್ದವಾಗಿದ್ದು, ಹೊಸ ಕಾರು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸುತ್ತಿದೆ. ಆಟೋಮ್ಯಾಟಿಕ್ ಗೇರ್‌ಬಾಕ್ಸ್, ಹೆಚ್ಚುವರಿ ಬಣ್ಣಗಳ ಆಯ್ಕೆ ಸೇರಿದಂತೆ ಪ್ರಮುಖ ಬದಲಾವಣೆಗಳನ್ನು ಪಡೆದುಕೊಂಡಿದ್ದು, ಹೊಸ ಕಾರಿನ ಟೀಸರ್‌ನೊಂದಿಗೆ ಅಧಿಕೃತ ಬುಕ್ಕಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.

 ಬಿಎಸ್-6 ಟಾಟಾ ಹ್ಯಾರಿಯರ್ ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಶುರು

ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ಜೊತೆಗೆ ನೆಕ್ಸಾನ್, ಟಿಗೋರ್, ಟಿಯಾಗೋ ಕಾರುಗಳ ಫೇಸ್‌ಲಿಫ್ಟ್ ಆವೃತ್ತಿಗಳನ್ನು ಬಿಡುಗಡೆ ಮಾಡಿರುವ ಟಾಟಾ ಸಂಸ್ಥೆಯು ಸದ್ಯ ಹ್ಯಾರಿಯರ್ ಮತ್ತು ಹೆಕ್ಸಾ ಫೇಸ್‌ಲಿಫ್ಟ್ ಮಾದರಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಹೊಸ ಕಾರಿನಲ್ಲಿ ಈ ಬಾರಿ ಮಾರುಕಟ್ಟೆಯಲ್ಲಿನ ಬೇಡಿಕೆಗೆ ಅನುಗುಣವಾಗಿ ಹಲವಾರು ಹೊಸ ಬದಲಾವಣೆಗಳನ್ನು ಪರಿಚಯಿಸಿರುವುದು ಎಸ್‌ಯುವಿ ಖರೀದಿದಾರರ ಗಮನಸೆಳೆಯಲಿದೆ.

 ಬಿಎಸ್-6 ಟಾಟಾ ಹ್ಯಾರಿಯರ್ ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಶುರು

ಏಪ್ರಿಲ್ 1ರಿಂದ ಬಿಎಸ್-6 ನಿಯಮವು ಕಡ್ಡಾಯವಾಗಿ ಜಾರಿಗೆ ಬರುತ್ತಿದ್ದು, ಟಾಟಾ ಸೇರಿದಂತೆ ಹಲವು ಕಾರು ಉತ್ಪಾದನಾ ಸಂಸ್ಥೆಗಳು ಬಿಎಸ್-6 ವಾಹನಗಳ ಮಾರಾಟಕ್ಕೆ ಭರ್ಜರಿ ಚಾಲನೆ ನೀಡಿರುವುದು ಮಹತ್ವದ ಬದಲಾವಣೆಗೆ ಕಾರಣವಾಗಿದೆ.

 ಬಿಎಸ್-6 ಟಾಟಾ ಹ್ಯಾರಿಯರ್ ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಶುರು

ಹೊಸ ಎಮಿಷನ್ ನಿಯಮದಿಂದಾಗಿ ಸಣ್ಣ ಗಾತ್ರದ ಡೀಸೆಲ್ ಎಂಜಿನ್ ಮಾರಾಟಕ್ಕೆ ಬ್ರೇಕ್ ಹಾಕಲಾಗುತ್ತಿದ್ದು, ಪೆಟ್ರೋಲ್ ಕಾರುಗಳ ಎಂಜಿನ್ ಪರ್ಫಾಮೆನ್ಸ್‌ನಲ್ಲೂ ಸಾಕಷ್ಟು ಸುಧಾರಣೆ ತಂದಿರುವುದು ಮಾಲಿನ್ಯ ತಡೆಗೆ ಸಾಕಷ್ಟು ಸಹಕಾರಿಯಾಗಲಿದೆ.

 ಬಿಎಸ್-6 ಟಾಟಾ ಹ್ಯಾರಿಯರ್ ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಶುರು

ಸದ್ಯ ಹ್ಯಾರಿಯರ್‌ನಲ್ಲೂ ಡಿಸೇಲ್ ಮ್ಯಾನುವಲ್ ಆವೃತ್ತಿಯನ್ನು ಮಾತ್ರವೇ ಮಾರಾಟ ಮಾಡಲಾಗುತ್ತಿದ್ದು, ಬಹುಬೇಡಿಕೆಯ ಡೀಸೆಲ್ ಆಟೋಮ್ಯಾಟಿಕ್ ಮತ್ತು ಪೆಟ್ರೋಲ್ ಆವೃತ್ತಿಯು ಬಿಡುಗಡೆಗೆ ಸಜ್ಜಾಗುತ್ತಿರುವುದು ಹೊಸ ಕಾರಿನ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸಲಿದೆ. ಇದರಲ್ಲಿ ಉನ್ನತೀಕರಿಸಲಾಗುತ್ತಿರುವ 2020ರ ಡೀಸೆಲ್ ಮಾದರಿಯಲ್ಲಿ ಕೆಲವು ಮಹತ್ವದ ಬದಲಾವಣೆಗಳನ್ನು ಪರಿಚಯಿಸುತ್ತಿರುವ ಟಾಟಾ ಸಂಸ್ಥೆಯು ಪ್ರತಿ ವೆರಿಯೆಂಟ್‌ನಲ್ಲೂ ಸ್ಟ್ಯಾಂಡರ್ಡ್ ಆಗಿ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಸ್, ಎಲ್ಇಡಿ ಟೈಲ್‌ಲೈಟ್ಸ್ ನೀಡಿದೆ.

 ಬಿಎಸ್-6 ಟಾಟಾ ಹ್ಯಾರಿಯರ್ ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಶುರು

ಜೊತೆಗೆ ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಟಚ್‌ ಸ್ಕ್ರೀನ್ ಇನ್ಪೋಟೈನ್‌ಮೆಂಟ್‌ಗಿಂತಲೂ ದೊಡ್ಡದಾದ ಸ್ಕ್ರೀನ್ ನೀಡಲು ನಿರ್ಧರಿಸಿದ್ದು, ಸುಧಾರಿತ ಮಾದರಿಯ ಡ್ಯಾಶ್‌ಬೋರ್ಡ್, ಸಾಫ್ಟ್ ಟಚ್ ಮೆಟಿರಿಯಲ್‌ಗಳು ಮತ್ತು ಹೆಚ್ಚುವರಿ ಬಣ್ಣಗಳ ಆಯ್ಕೆಯು ಎಸ್‌ಯುವಿ ಪ್ರಿಯರ ಗಮನಸೆಳೆಯಲಿವೆ.

 ಬಿಎಸ್-6 ಟಾಟಾ ಹ್ಯಾರಿಯರ್ ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಶುರು

ಈ ಮೂಲಕ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಮತ್ತು ಎಂಜಿ ಹೆಕ್ಟರ್ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲು ಸಜ್ಜಾಗುತ್ತಿರುವ ಹ್ಯಾರಿಯರ್ ಕಾರು ಶೀಘ್ರದಲ್ಲೇ ರಸ್ತೆಗಿಳಿಯಲಿದ್ದು, ಬಿಎಸ್-6 ಎಂಜಿನ್‌ನಿಂದಾಗಿ ಹೊಸ ಕಾರಿನ ಬೆಲೆಯು ಮತ್ತಷ್ಟು ದುಬಾರಿಯಾಗಲಿದೆ.

 ಬಿಎಸ್-6 ಟಾಟಾ ಹ್ಯಾರಿಯರ್ ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಶುರು

ಕಳೆದ ತಿಂಗಳು ಸಹ ಹ್ಯಾರಿಯರ್ ಕಾರಿನ ಬೆಲೆ ಹೆಚ್ಚಳ ಮಾಡಲಾಗಿದ್ದು, ಹೊಸ ದರ ಪಟ್ಟಿ ಪ್ರಕಾರ ಹ್ಯಾರಿಯರ್ ಬೆಲೆಯಲ್ಲಿ ಆರಂಭಿಕವಾಗಿ ರೂ.43 ಸಾವಿರದಿಂದ ಟಾಪ್ ಎಂಡ್ ಮಾದರಿಯ ಬೆಲೆಯಲ್ಲಿ ರೂ.45 ಸಾವಿರ ಬೆಲೆ ಏರಿಕೆ ಮಾಡಲಾಗಿದೆ.

 ಬಿಎಸ್-6 ಟಾಟಾ ಹ್ಯಾರಿಯರ್ ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಶುರು

ಹೊಸ ದರ ಪಟ್ಟಿ ನಂತರ ಹ್ಯಾರಿಯರ್ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆಂಭಿಕವಾಗಿ ರೂ.12.99 ಲಕ್ಷದಿಂದ ರೂ.13.43 ಲಕ್ಷಕ್ಕೆ ಏರಿಕೆಯಾಗಿದ್ದಲ್ಲಿ ಟಾಪ್ ಎಂಡ್ ಮಾದರಿಯು ರೂ.16.85 ಲಕ್ಷದಿಂದ ರೂ.17.30 ಲಕ್ಷಕ್ಕೆ ಏರಿಕೆಯಾಗಿದೆ.

 ಬಿಎಸ್-6 ಟಾಟಾ ಹ್ಯಾರಿಯರ್ ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಶುರು

ಇದೀಗ ಬಿಎಸ್-6 ಎಂಜಿನ್ ನಂತರ ಹೊಸ ಕಾರಿನ ಬೆಲೆ ಮತ್ತೆ ಹೆಚ್ಚಳವಾಗಲಿದ್ದು, ಮಾಹಿತಿಗಳ ಪ್ರಕಾರ ಬಿಎಸ್-6 ಮಾದರಿಯು ರೂ.40 ಸಾವಿರದಿಂದ ರೂ.60 ಸಾವಿರ ತನಕ ಹೆಚ್ಚುವರಿ ಬೆಲೆ ಪಡೆದುಕೊಳ್ಳಲಿದೆ ಎನ್ನಲಾಗಿದೆ.

 ಬಿಎಸ್-6 ಟಾಟಾ ಹ್ಯಾರಿಯರ್ ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಶುರು

ಇನ್ನು ಹ್ಯಾರಿಯರ್ ಕಾರು ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೆರಿಯೆಂಟ್‌ಗಳೊಂದಿಗೆ ಮಾರಾಟವಾಗುತ್ತಿದ್ದು, ಇತ್ತೀಚೆಗೆ ಬಿಡುಗಡೆಯಾಗಿದ್ದ ಡಾರ್ಕ್ ಎಡಿಷನ್ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದೆ.

 ಬಿಎಸ್-6 ಟಾಟಾ ಹ್ಯಾರಿಯರ್ ಎಸ್‌ಯುವಿ ಖರೀದಿಗಾಗಿ ಬುಕ್ಕಿಂಗ್ ಶುರು

ಹ್ಯಾರಿಯರ್ ಎಸ್‌ಯುವಿ ಕಾರು 2-ಲೀಟರ್(1,956 ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ 140-ಬಿಹೆಚ್‍ಪಿ, 350-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ. ಬಿಎಸ್-6 ಎಂಜಿನ್ ದುಬಾರಿ ಬೆಲೆಯೊಂದಿಗೆ ಮತ್ತಷ್ಟು ಹೊಸ ಪ್ರೀಮಿಯಂ ಫೀಚರ್ಸ್ ಪಡೆದುಕೊಳ್ಳಲಿದೆ.

Most Read Articles

Kannada
English summary
2020 Tata Harrier Bookings Starts. Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X