ಬೆಂಗಾವಲು ವಾಹನಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಟಾಟಾ ಹ್ಯಾರಿಯರ್ ಎಸ್‌ಯುವಿ

ಟಾಟಾ ನಿರ್ಮಾಣದ ಹಲವು ಎಸ್‌ಯುವಿ ಕಾರು ಮಾದರಿಗಳು ಈಗಾಗಲೇ ಸೇನಾಪಡೆ ಮಾತ್ರವಲ್ಲದೆ ವಿವಿಧ ರಾಜ್ಯಗಳ ಸಿಎಂ ಬೆಂಗಾವಲು ಪಡೆಗಳಲ್ಲಿ ಸ್ಥಾನ ಪಡೆದುಕೊಂಡಿದ್ದು, ಇದೀಗ ಹೊಸದಾಗಿ ಬಿಡುಗಡೆಯಾಗಿರುವ ಹ್ಯಾರಿಯರ್ ಎಸ್‌ಯುವಿ ಕೂಡಾ ಬೇಡಿಕೆಯ ಕಾರು ಮಾದರಿಯಾಗಿ ಗುರುತಿಸಿಕೊಂಡಿದೆ.

ಬೆಂಗಾವಲು ವಾಹನಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಟಾಟಾ ಹ್ಯಾರಿಯರ್

ಬಲಿಷ್ಠ ಬಾಡಿ ವಿನ್ಯಾಸ ಮತ್ತು ಸುರಕ್ಷಿತ ವಿಚಾರವಾಗಿ ಗ್ರಾಹಕರ ಗಮನಸೆಳೆಯುತ್ತಿರುವ ಟಾಟಾ ಹ್ಯಾರಿಯರ್ ಕಾರು ವ್ಯಯಕ್ತಿಕ ಬಳಕೆಗೆ ಮಾತ್ರವಲ್ಲದೆ ರಕ್ಷಣಾ ಪಡೆಯ ವಾಹನ ಮಾದರಿಯಾಗಿ ಹೊರಹೊಮ್ಮಿದ್ದು, ಮಹಾರಾಷ್ಟ್ರ ಸಿಎಂ ಬೆಂಗಾವಲು ಪಡೆಯಲ್ಲಿ ವಿಶೇಷ ಸ್ಥಾನ ಪಡೆದುಕೊಂಡಿದೆ. ಫಾರ್ಚೂನರ್ ಕಾರಿಗೆ ಸರಿಸಮನಾದ ವಿನ್ಯಾಸ ಪಡೆದುಕೊಂಡಿರುವ ಹ್ಯಾರಿಯರ್ ಕಾರು ಬೆಂಗಾವಲು ಪಡೆಯಲ್ಲಿ ಅಗ್ರಸ್ಥಾನ ಪಡೆದುಕೊಳ್ಳುತ್ತಿದ್ದು, ಸುರಕ್ಷತೆಯ ವಿಚಾರವಾಗಿ ಗಮನಸೆಳೆಯುತ್ತಿದೆ.

ಬೆಂಗಾವಲು ವಾಹನಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಟಾಟಾ ಹ್ಯಾರಿಯರ್

ಬೆಂಗಾವಲು ಪಡೆಯ ಹ್ಯಾರಿಯರ್ ಆವೃತ್ತಿಯು ಬೇಡಿಕೆಯ ಅನುಸಾರವಾಗಿ ಕೆಲವು ಮಾರ್ಪಾಡುಗಳನ್ನು ಪಡೆದುಕೊಂಡಿದ್ದು, ಬ್ಲ್ಯಾಕ್ ಎಡಿಷನ್ ಮಾದರಿಯನ್ನು ಹೆಚ್ಚು ಬಳಕೆ ಮಾಡಲಾಗುತ್ತಿದೆ.

ಬೆಂಗಾವಲು ವಾಹನಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಟಾಟಾ ಹ್ಯಾರಿಯರ್

ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಬೆಂಗಾವಲು ಪಡೆಯಲ್ಲಿ ಈಗಾಗಲೇ ಹಲವು ಐಷಾರಾಮಿ ಕಾರುಗಳನ್ನು ಬಳಕೆ ಮಾಡಲಾಗುತ್ತಿದ್ದು, ಇದೇ ಮೊದಲ ಬಾರಿಗೆ ಟಾಟಾ ಹ್ಯಾರಿಯರ್ ಕಾರು ಮಾದರಿಯನ್ನು ಸಹ ಆಯ್ಕೆ ಮಾಡಿಕೊಳ್ಳಲಾಗಿದೆ.

ಬೆಂಗಾವಲು ವಾಹನಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಟಾಟಾ ಹ್ಯಾರಿಯರ್

ಮಹಾರಾಷ್ಟ್ರ ಸಿಎಂ ಬೆಂಗಾವಲು ಪಡೆಯಲ್ಲಿ ಟೊಯೊಟಾ ಫಾರ್ಚೂನರ್ ಸೇರಿದಂತೆ ಟಾಟಾ ಸಫಾರಿ, ಮಹೀಂದ್ರಾ ಎಕ್ಸ್‌ಯುವಿ500, ಟಿಯುವಿ 300 ಕಾರುಗಳನ್ನು ಬಳಕೆ ಮಾಡಲಾಗುತ್ತಿದ್ದು, ಉದ್ದವ್ ಠಾಕ್ರೆ ಪ್ರಯಾಣಕ್ಕಾಗಿ ಮಾಡಿಫೈಗೊಳಿಸಲಾದ ರೇಂಜ್ ರೋವರ್ ವೊಗ್, ಮರ್ಸಿಡಿಸ್ ಬೆಂಝ್ ಜಿಎಲ್ಎಸ್ ಎಸ್‌ಯುವಿ ಮತ್ತು ಎಸ್ ಕ್ಲಾಸ್ ಸೆಡಾನ್ ಕಾರುಗಳನ್ನು ಬಳಕೆ ಮಾಡಲಾಗುತ್ತಿದೆ.

ಬೆಂಗಾವಲು ವಾಹನಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಟಾಟಾ ಹ್ಯಾರಿಯರ್

ಇದೀಗ ಬೆಂಗಾವಲು ಪಡೆಯಲ್ಲಿ ಟಾಟಾ ಹ್ಯಾರಿಯರ್ ಕಾರು ಹೊಸದಾಗಿ ಸೇರ್ಪಡೆಗೊಂಡಿರುವುದು ಟಾಟಾ ಕಂಪನಿಯ ಹೊಸ ಕಾರುಗಳ ಜನಪ್ರಿಯತೆಯನ್ನು ಮತ್ತಷ್ಟು ಹೆಚ್ಚಿಸುತ್ತಿದ್ದು, ಶೀಘ್ರದಲ್ಲೇ ಹ್ಯಾರಿಯರ್ ಕಾರಿಗಿಂತಲೂ ಬಲಿಷ್ಠ ಕಾರು ಮಾದರಿಯಾದ ಗ್ರಾವಿಟಾಸ್ ಮಾದರಿಯು ರಸ್ತೆಗಿಳಿಯಲು ಸಜ್ಜಾಗುತ್ತಿದೆ.

MOST READ: ಬಡ ಕೃಷಿಕನ ಮಗ ಈಗ ಕೋಟಿ ಕೋಟಿ ಬೆಲೆಯ ಕಾರುಗಳ ಮಾಲೀಕ

ಇನ್ನು ಹ್ಯಾರಿಯರ್ ಕಾರು 2020ರ ಆವೃತ್ತಿಯಲ್ಲಿ ಮತ್ತಷ್ಟು ಹೊಸ ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಸೇರಿದಂತೆ ಹಲವಾರು ಬದಲಾವಣೆಗಳನ್ನು ಪಡೆದುಕೊಂಡಿದೆ.

ಬೆಂಗಾವಲು ವಾಹನಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಟಾಟಾ ಹ್ಯಾರಿಯರ್ ಎಸ್‌ಯುವಿ

ಜೊತೆಗೆ ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ಹೊಸ ಕಾರಿನ ಬೆಲೆಯು ತುಸು ದುಬಾರಿಯಾಗಿದ್ದರೂ ಸಹ ಹೊಸ ಮಾದರಿಯ ಫೀಚರ್ಸ್‌ಗಳು ಫೇಸ್‌ಲಿಫ್ಟ್ ಕಾರಿಗೆ ಮತ್ತಷ್ಟು ಬಲಿಷ್ಠತೆ ನೀಡಲಿದ್ದು, ಎಂಜಿನ್ ಪರ್ಫಾಮೆನ್ಸ್‌ನಲ್ಲೂ ಸಾಕಷ್ಟು ಸುಧಾರಣೆ ತಂದಿರುವುದು ಮಾಲಿನ್ಯ ತಡೆಗೆ ಸಾಕಷ್ಟು ಸಹಕಾರಿಯಾಗಲಿದೆ.

MOST READ: ಲ್ಯಾಂಬೊರ್ಗಿನಿ ಸ್ಪೋರ್ಟ್ಸ್ ಕಾರಿನಂತೆ ಮಾಡಿಫೈಗೊಂಡ ಮಾರುತಿ ಇಕೊ ಕಾರು

ಬೆಂಗಾವಲು ವಾಹನಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಟಾಟಾ ಹ್ಯಾರಿಯರ್ ಎಸ್‌ಯುವಿ

ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.69 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 20.25 ಲಕ್ಷ ಬೆಲೆ ಪಡೆದುಕೊಂಡಿದ್ದು, ಇದರಲ್ಲಿ ಆಟೋಮ್ಯಾಟಿಕ್ ಆವೃತ್ತಿಯ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.25 ಲಕ್ಷದಿಂದ ಆರಂಭಗೊಳ್ಳಲಿದೆ.

ಬೆಂಗಾವಲು ವಾಹನಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಟಾಟಾ ಹ್ಯಾರಿಯರ್ ಎಸ್‌ಯುವಿ

ಬ್ಲ್ಯಾಕ್ ಎಡಿಷನ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಿದ್ದು, ಆರಂಭಿಕ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ.17.07 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 20.25 ಲಕ್ಷ ಬೆಲೆ ಹೊಂದಿದೆ.

MOST READ: ವೇಗವಾಗಿ ಬಂದ ಕಾರಿನ ಮೇಲೆ ಬ್ಯಾಕ್ ಫ್ಲಿಪ್ ಮಾಡಿದ ಟೈಗರ್ ಶ್ರಾಫ್

ಬೆಂಗಾವಲು ವಾಹನಗಳ ಪಟ್ಟಿಯಲ್ಲಿ ಸ್ಥಾನ ಪಡೆದ ಟಾಟಾ ಹ್ಯಾರಿಯರ್ ಎಸ್‌ಯುವಿ

ಸದ್ಯ ಮಾರುಕಟ್ಟೆಯಲ್ಲಿ ಹ್ಯಾರಿಯರ್ ಕಾರು ಡೀಸೆಲ್ ಎಂಜಿನ್‌ನೊಂದಿಗೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಮುಂಬರುವ ದಿನಗಳಲ್ಲಿ ಪೆಟ್ರೋಲ್ ಆವೃತ್ತಿಯು ಕೂಡಾ ಬಿಡುಗಡೆಯ ಪಟ್ಟಿಯಲ್ಲಿದೆ. ಈ ಮೂಲಕ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಮತ್ತು ಎಂಜಿ ಹೆಕ್ಟರ್ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲು ಸಜ್ಜಾಗುತ್ತಿರುವ ಹೊಸ ಹ್ಯಾರಿಯರ್ ಕಾರು ಅಧಿಕೃತ ಮಾರುಕಟ್ಟೆ ಪ್ರವೇಶಿಸಿದ್ದು, ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಒಟ್ಟು 16 ವೆರಿಯೆಂಟ್‌ಗಳನ್ನು ಹೊಂದಿದೆ.

Most Read Articles

Kannada
English summary
Maharashtra CM Uddhav Thackeray Uses Tata Harrier As Pilot Car For Convoy Seen In Video, Read in Kannada.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X