ಎಎಂಟಿ ವರ್ಷನ್ ನಂತರ ಟಾಟಾ ಹ್ಯಾರಿಯರ್ ಕಾರು ಮಾರಾಟದಲ್ಲಿ ಹೆಚ್ಚಳ
ಎಸ್‌ಯುವಿ ವಿಭಾಗದಲ್ಲಿ ಹಲವು ವಿಶೇಷತೆಗಳೊಂದಿಗೆ ಖರೀದಿಗೆ ಲಭ್ಯವಿರುವ ಟಾಟಾ ಹ್ಯಾರಿಯರ್ ಕಾರು ಮಾದರಿಯು ಆಟೋಮ್ಯಾಟಿಕ್ ಆವೃತ್ತಿಯನ್ನು ಪಡೆದುಕೊಂಡ ನಂತರ ಬೇಡಿಕೆಯಲ್ಲಿ ಮುಂಚೂಣಿ ಸಾಧಿಸುತ್ತಿದ್ದು, ಮಾರಾಟ ಪ್ರಮಾಣದಲ್ಲಿ ಶೇ.33 ರಷ್ಟು ಬೆಳವಣಿಗೆ ಸಾಧಿಸಿದೆ.

ಲಾಕ್‌ಡೌನ್ ತೆರವುಗೊಂಡ ನಂತರ ಜೂನ್ ಅವಧಿಯಲ್ಲಿ 653 ಯುನಿಟ್ ಹ್ಯಾರಿಯರ್ ಕಾರು ಮಾರಾಟ ಮಾಡಿದ್ದ ಟಾಟಾ ಮೋಟಾರ್ಸ್ ಕಂಪನಿಯು ಜುಲೈ ಅವಧಿಯಲ್ಲಿ ಒಟ್ಟು 984 ಯುನಿಟ್ ಮಾರಾಟ ಮಾಡಿದ್ದು, ಜೂನ್ ಅವಧಿಗಿಂತ ಜುಲೈ ಅವಧಿಯಲ್ಲಿ ಶೇ.33 ರಷ್ಟು ಬೇಡಿಕೆಯು ಹೆಚ್ಚಳವಾಗಿದೆ. ಕಳೆದ ವರ್ಷಕ್ಕಿಂತಲೂ ಹ್ಯಾರಿಯರ್ ಮಾರಾಟದಲ್ಲಿ ಶೇ.25ರಷ್ಟು ಬೆಳವಣಿಗೆ ಸಾಧಿಸಿರುವ ಟಾಟಾ ಕಂಪನಿಯು ಡೀಸೆಲ್ ಆಟೋಮ್ಯಾಟಿಕ್ ಮಾದರಿಯನ್ನು ಬಿಡುಗಡೆ ಮಾಡಿರುವುದು ಗ್ರಾಹಕರ ಆಯ್ಕೆಯಲ್ಲಿ ಮುಂಚೂಣಿ ಸಾಧಿಸಿದೆ.

ಪ್ರತಿ ಸ್ಪರ್ಧಿ ಕಾರು ಮಾದರಿಗಳಾದ ಮಹೀಂದ್ರಾ ಎಕ್ಸ್‌ಯುವಿ 500, ಎಂಜಿ ಹೆಕ್ಟರ್ ಮತ್ತು ಜೀಪ್ ಕಂಪಾಸ್ ಕಾರುಗಳಿಗೆ ಭರ್ಜರಿ ಪೈಪೋಟಿ ನೀಡುತ್ತಿರುವ ಹ್ಯಾರಿಯರ್ ಕಾರು ವಿಶೇಷ ಫೀಚರ್ಸ್‌ಗಳೊಂದಿಗೆ ಮಾರಾಟಕ್ಕೆ ಲಭ್ಯವಿದ್ದು, ಹೊಸ ಕಾರು ಡೀಸೆಲ್ ಎಂಜಿನ್ ಆಯ್ಕೆಯೊಂದಿಗೆ ಆಟೋಮ್ಯಾಟಿಕ್ ಮತ್ತು ಮ್ಯಾನುವಲ್ ಮಾದರಿಯನ್ನು ಪಡೆದುಕೊಂಡಿದೆ.

ಇನ್ನು ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಎಸ್‌ಯುವಿ ಆವೃತ್ತಿಯಾದ ಹ್ಯಾರಿಯರ್ ಕಾರು ಮಾದರಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಕೆಲವು ಪ್ರಮುಖ ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಬಿಎಸ್-6 ಎಂಜಿನ್ ಉನ್ನತೀಕರಣದ ನಂತರ ಮತ್ತೆರಡು ಹೊಸ ವೆರಿಯೆಂಟ್‌ಗಳನ್ನು ಬಿಡುಗಡೆ ಮಾಡಲು ಮುಂದಾಗಿದೆ.

ಮಾಹಿತಿಗಳ ಪ್ರಕಾರ, ಹ್ಯಾರಿಯರ್ ಕಾರು ಮಾದರಿಯಲ್ಲಿ ಹೊಸದಾಗಿ ಎಕ್ಸ್‌ಟಿಎ ಮತ್ತು ಎಕ್ಸ್‌ಟಿ ಪ್ಲಸ್ ವೆರಿಯೆಂಟ್‌ಗಳನ್ನು ಪರಿಚಯಿಸುವ ಸಾಧ್ಯತೆಗಳಿದ್ದು, ಹೊಸ ವೆರಿಯೆಂಟ್‌ಗಳು ಕಾರಿನ ಮಧ್ಯಮ ಶ್ರೇಣಿಯಲ್ಲಿನ ಬೇಡಿಕೆ ಪೂರೈಕೆಗೆ ಸಹಕಾರಿಯಾಗಲಿವೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ಹ್ಯಾರಿಯರ್ ಕಾರು ವಿವಿಧ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ 16 ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ವೆರಿಯೆಂಟ್‌ಗಳು ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ನಡುವಿನ ಬೆಲೆ ಅಂತರವನ್ನು ಸರಿದೂಗಿಸಲಿದ್ದು, ಹೊಸ ವೆರಿಯೆಂಟ್‌ಗಳು ಪನೊರಮಿಕ್ ಸನ್‌ರೂಫ್ ಸೇರಿದಂತೆ ಕೆಲವು ಹೊಸ ತಾಂತ್ರಿಕ ಸೌಲಭ್ಯದೊಂದಿಗೆ ಮುಂದಿನ ಕೆಲವೇ ದಿನಗಳಲ್ಲಿ ಖರೀದಿಗೆ ಲಭ್ಯವಾಗಲಿವೆ.
MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಸದ್ಯ ಆರಂಭಿಕವಾಗಿ ರೂ. 13.69 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 20.25 ಲಕ್ಷ ಬೆಲೆ ಪಡೆದುಕೊಂಡಿದ್ದು, ಇದರಲ್ಲಿ ಆಟೋಮ್ಯಾಟಿಕ್ ಆವೃತ್ತಿಯ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.25 ಲಕ್ಷದಿಂದ ಆರಂಭಗೊಳ್ಳಲಿದೆ.

ಬ್ಲ್ಯಾಕ್ ಎಡಿಷನ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಿದ್ದು, ಆರಂಭಿಕ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ.17.07 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 20.25 ಲಕ್ಷ ಬೆಲೆ ಹೊಂದಿದೆ.
MOST READ: ವಾಹನ ಖರೀದಿಯನ್ನು ಸುಲಭವಾಗಿಸಲಿದೆ ಅಗಸ್ಟ್ 1ರಿಂದ ಜಾರಿಗೆ ಬಂದಿರುವ ಹೊಸ ವಿಮಾ ನೀತಿ..

ಸದ್ಯ ಮಾರುಕಟ್ಟೆಯಲ್ಲಿ ಹ್ಯಾರಿಯರ್ ಕಾರು ಡೀಸೆಲ್ ಎಂಜಿನ್‌ನೊಂದಿಗೆ ಮ್ಯಾನುವಲ್ ಹಾಗೂ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಮುಂಬರುವ ದಿನಗಳಲ್ಲಿ ಪೆಟ್ರೋಲ್ ಆವೃತ್ತಿಯು ಕೂಡಾ ಬಿಡುಗಡೆಯ ಪಟ್ಟಿಯಲ್ಲಿದೆ.


Click it and Unblock the Notifications








