ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದೆ ಟಾಟಾ ಹ್ಯಾರಿಯರ್ ಪೆಟ್ರೋಲ್ ವರ್ಷನ್

2020ರ ದೆಹಲಿ ಆಟೋ ಎಕ್ಸ್‌ಪೋದಲ್ಲಿ ಹ್ಯಾರಿಯರ್ ಡೀಸೆಲ್ ಮಾದರಿಯ ಬಿಎಸ್-6 ಆವೃತ್ತಿಯನ್ನು ಬಿಡುಗಡೆಗೊಳಿಸಿರುವ ಟಾಟಾ ಸಂಸ್ಥೆಯು ಇದೀಗ ಹ್ಯಾರಿಯರ್ ಪೆಟ್ರೋಲ್ ವರ್ಷನ್ ಬಿಡುಗಡೆಗಾಗಿ ಸಿದ್ದತೆ ನಡೆಸಿದ್ದು, ಮಾಹಿತಿಗಳ ಪ್ರಕಾರ ಹೊಸ ಕಾರು ಮುಂದಿನ ಎರಡು ತಿಂಗಳ ಅವಧಿಯಲ್ಲಿ ಮಾರುಕಟ್ಟೆ ಪ್ರವೇಶಿಸಲಿದೆ ಎನ್ನಲಾಗಿದೆ.

ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದೆ ಟಾಟಾ ಹ್ಯಾರಿಯರ್ ಪೆಟ್ರೋಲ್ ವರ್ಷನ್

ಸದ್ಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಕಾರು ಮಾದರಿಗಳಿಗೆ ಹೆಚ್ಚಿನ ಬೇಡಿಕೆ ಹರಿದುಬರುತ್ತಿದ್ದು, ಹ್ಯಾರಿಯರ್ ಪ್ರತಿಸ್ಪರ್ಧಿ ಕಾರು ಮಾದರಿಗಳಾದ ಕಿಯಾ ಸೆಲ್ಟೊಸ್, ಹ್ಯುಂಡೈ ಕ್ರೆಟಾ ಮತ್ತು ಎಂಜಿ ಹೆಕ್ಟರ್ ಕಾರುಗಳ ಮಾರಾಟದಲ್ಲೂ ಪೆಟ್ರೋಲ್ ಕಾರುಗಳ ಮಾರಾಟವೇ ಅಗ್ರಸ್ಥಾನದಲ್ಲಿದೆ. ಹೀಗಾಗಿ ಗ್ರಾಹಕರ ಬೇಡಿಕೆಯೆಂತೆ ಹ್ಯಾರಿಯರ್ ಕಾರಿನಲ್ಲೂ ಪೆಟ್ರೋಲ್ ಎಂಜಿನ್ ಮಾದರಿಯನ್ನು ಬಿಡುಗಡೆಗೊಳಿಸಲು ಸಿದ್ದತೆ ನಡೆಸಿರುವ ಟಾಟಾ ಸಂಸ್ಥೆಯು ಪ್ರತಿಸ್ಪರ್ಧಿ ಕಾರು ಮಾದರಿಗಳಿಗೆ ಭರ್ಜರಿ ಪೈಪೋಟಿ ನೀಡುವ ತವಕದಲ್ಲಿದೆ.

ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದೆ ಟಾಟಾ ಹ್ಯಾರಿಯರ್ ಪೆಟ್ರೋಲ್ ವರ್ಷನ್

ಮಾಹಿತಿಗಳ ಪ್ರಕಾರ, ಹ್ಯಾರಿಯರ್ ಪೆಟ್ರೋಲ್ ಮಾದರಿಯು 1.5-ಲೀಟರ್ ಡೈರೆಕ್ಟ್-ಇಂಜೆಕ್ಷನ್ ಟರ್ಬೋ ಎಂಜಿನ್ ಪಡೆದುಕೊಳ್ಳುವ ಸಾಧ್ಯತೆಗಳಿದ್ದು, ಪ್ರತಿಸ್ಪರ್ಧಿ ಕಾರು ಮಾದರಿಗಳಿಂತಲೂ ಉತ್ತಮ ಪರ್ಫಾಮೆನ್ಸ್‌(150ಬಿಎಚ್‌ಪಿ) ಜೊತೆಗೆ ಇಂಧನ ದಕ್ಷತೆಯಲ್ಲೂ ಗಮನಸೆಳೆಯಲಿದೆ.

ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದೆ ಟಾಟಾ ಹ್ಯಾರಿಯರ್ ಪೆಟ್ರೋಲ್ ವರ್ಷನ್

ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 12.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.18 ಲಕ್ಷ ಬೆಲೆ ಪಡೆದುಕೊಳ್ಳಬಹುದಾಗಿದ್ದು, ಕಿಯಾ ಸೆಲ್ಟೊಸ್, ಎಂಜಿ ಹೆಕ್ಟರ್, ಹ್ಯುಂಡೈ ಕ್ರೆಟಾ ಮತ್ತು ಎಕ್ಸ್‌ಯುವಿ500 ಕಾರುಗಳಿಗೆ ಇದು ಉತ್ತಮ ಪರ್ಯಾಯ ಆವೃತ್ತಿಯಾಗಿರಲಿದೆ.

ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದೆ ಟಾಟಾ ಹ್ಯಾರಿಯರ್ ಪೆಟ್ರೋಲ್ ವರ್ಷನ್

ಇನ್ನು ಹ್ಯಾರಿಯರ್ ಡೀಸೆಲ್ ಫೇಸ್‌ಲಿಫ್ಟ್ ಆವೃತ್ತಿಯು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಆಟೋಮ್ಯಾಟಿಕ್ ಗೇರ್‌ಬಾಕ್ಸ್, ಆಟೋಮ್ಯಾಟಿಕ್ ಸನ್‌ರೂಫ್, ಹೆಚ್ಚುವರಿ ಬಣ್ಣಗಳ ಆಯ್ಕೆ ಸೇರಿದಂತೆ ಪ್ರಮುಖ ಬದಲಾವಣೆಗಳನ್ನು ಪಡೆದುಕೊಂಡಿದೆ. ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ಹೊಸ ಕಾರು ತುಸು ದುಬಾರಿ ಬೆಲೆ ಹೊಂದಿದ್ದು, ಹೊಸ ಕಾರಿನ ಬೆಲೆಯು ಆರಂಭಿಕವಾಗಿ ದೆಹಲಿ ಎಕ್ಸ್‌ಶೋರೂಂ ಪ್ರಕಾರ ರೂ. 13.69 ಲಕ್ಷದಿಂದ ಟಾಪ್ ಎಂಡ್ ಮಾದರಿಯು 20.25 ಲಕ್ಷ ಬೆಲೆ ಪಡೆದುಕೊಂಡಿದೆ.

ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದೆ ಟಾಟಾ ಹ್ಯಾರಿಯರ್ ಪೆಟ್ರೋಲ್ ವರ್ಷನ್

ಜೊತೆಗೆ ಬಹುಬೇಡಿಕೆಯ ಡೀಸೆಲ್ ಆಟೋಮ್ಯಾಟಿಕ್ ಆವೃತ್ತಿಯನ್ನು ಬಿಡುಗಡೆ ಮಾಡಿರುವುದು ಹೊಸ ಕಾರಿನ ಬೇಡಿಕೆಯನ್ನು ಮತ್ತಷ್ಟು ಹೆಚ್ಚಿಸಿದ್ದು, ಪ್ರತಿ ವೆರಿಯೆಂಟ್‌ನಲ್ಲೂ ಸ್ಟ್ಯಾಂಡರ್ಡ್ ಆಗಿ ಎಲ್‌ಇಡಿ ಹೆಡ್‌ಲ್ಯಾಂಪ್, ಎಲ್ಇಡಿ ಡಿಆರ್‌ಎಸ್, ಎಲ್ಇಡಿ ಟೈಲ್‌ಲೈಟ್ಸ್ ನೀಡಿದೆ.

ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದೆ ಟಾಟಾ ಹ್ಯಾರಿಯರ್ ಪೆಟ್ರೋಲ್ ವರ್ಷನ್

ಇದಲ್ಲದೆ ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಟಚ್‌ ಸ್ಕ್ರೀನ್ ಇನ್ಪೋಟೈನ್‌ಮೆಂಟ್‌ಗಿಂತಲೂ ದೊಡ್ಡದಾದ ಸ್ಕ್ರೀನ್ ನೀಡಿದ್ದು, ಸುಧಾರಿತ ಮಾದರಿಯ ಡ್ಯಾಶ್‌ಬೋರ್ಡ್, ಆಟೋಮ್ಯಾಟಿಕ್ ಸನ್‌ರೂಫ್, ಸಾಫ್ಟ್ ಟಚ್ ಮೆಟಿರಿಯಲ್‌ಗಳು ಮತ್ತು ಹೆಚ್ಚುವರಿ ಬಣ್ಣಗಳ ಆಯ್ಕೆಯು ಎಸ್‌ಯುವಿ ಪ್ರಿಯರ ಗಮನಸೆಳೆಯಲಿವೆ.

ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದೆ ಟಾಟಾ ಹ್ಯಾರಿಯರ್ ಪೆಟ್ರೋಲ್ ವರ್ಷನ್

ಈ ಮೂಲಕ ಹ್ಯುಂಡೈ ಕ್ರೆಟಾ, ಕಿಯಾ ಸೆಲ್ಟೊಸ್ ಮತ್ತು ಎಂಜಿ ಹೆಕ್ಟರ್ ಕಾರುಗಳಿಗೆ ಮತ್ತಷ್ಟು ಪೈಪೋಟಿ ನೀಡಲು ಸಜ್ಜಾಗುತ್ತಿರುವ ಹೊಸ ಹ್ಯಾರಿಯರ್ ಕಾರು ಅಧಿಕೃತ ಮಾರುಕಟ್ಟೆ ಪ್ರವೇಶಿಸಿದ್ದು, ಎಕ್ಸ್ಇ, ಎಕ್ಸ್ಎಂ, ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ಎಂಬ ನಾಲ್ಕು ವೆರಿಯೆಂಟ್‌ಗಳೊಂದಿಗೆ ಮಾರಾಟವಾಗಲಿದೆ. ಇದರಲ್ಲಿ ಇತ್ತೀಚೆಗೆ ಬಿಡುಗಡೆಯಾಗಿದ್ದ ಡಾರ್ಕ್ ಎಡಿಷನ್ ಭಾರೀ ಬೇಡಿಕೆ ಪಡೆದುಕೊಳ್ಳುತ್ತಿದೆ.

ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದೆ ಟಾಟಾ ಹ್ಯಾರಿಯರ್ ಪೆಟ್ರೋಲ್ ವರ್ಷನ್

ಹ್ಯಾರಿಯರ್ ಡೀಸೆಲ್ ಕಾರು 2-ಲೀಟರ್(1,956 ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ನೊಂದಿಗೆ 140-ಬಿಹೆಚ್‍ಪಿ, 350-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

ಶೀಘ್ರದಲ್ಲೇ ಬಿಡುಗಡೆಗೊಳ್ಳಲಿದೆ ಟಾಟಾ ಹ್ಯಾರಿಯರ್ ಪೆಟ್ರೋಲ್ ವರ್ಷನ್

ಹೊಸ ಎಂಜಿನ್ ಪ್ರೇರಿತ ಮ್ಯಾನುವಲ್ ಆವೃತ್ತಿಯಲ್ಲಿ ರೂ.35 ಸಾವಿರದಿಂದ ರೂ.40 ಸಾವಿರ ಹೆಚ್ಚಳವಾದಲ್ಲಿ ಆಟೋಮ್ಯಾಟಿಕ್ ಆವೃತ್ತಿಯ ಬೆಲೆಯು ಆರಂಭಿಕವಾಗಿಯೇ ರೂ.16.25 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.20.25 ಲಕ್ಷ ಬೆಲೆ ಹೊಂದಿದೆ.

Article Published On: Friday, March 6, 2020, 17:23 [IST]
English summary
According to report, Tata Motors is planning to launch Harrier with 1.5 Liter petrol engine in India. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+