ಹ್ಯಾರಿಯರ್ ಎಸ್‌ಯುವಿಯಲ್ಲಿ ಮತ್ತೆರಡು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಟಾಟಾ ಮೋಟಾರ್ಸ್ ಕಂಪನಿಯು ತನ್ನ ಜನಪ್ರಿಯ ಎಸ್‌ಯುವಿ ಆವೃತ್ತಿಯಾದ ಹ್ಯಾರಿಯರ್ ಕಾರು ಮಾದರಿಯಲ್ಲಿ ಗ್ರಾಹಕರ ಬೇಡಿಕೆಯೆಂತೆ ಕೆಲವು ಪ್ರಮುಖ ಬದಲಾವಣೆಗಳನ್ನು ಪರಿಚಯಿಸುತ್ತಿದ್ದು, ಬಿಎಸ್‌-6 ಎಂಜಿನ್ ಉನ್ನತೀಕರಣದ ನಂತರ ಮತ್ತೆರಡು ಹೊಸ ವೆರಿಯೆಂಟ್‌ಗಳನ್ನು ಬಿಡುಗಡೆ ಮಾಡಲು ಮುಂದಾಗಿದೆ.

ಹ್ಯಾರಿಯರ್ ಎಸ್‌ಯುವಿಯಲ್ಲಿ ಮತ್ತೆರಡು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಮಾಹಿತಿಗಳ ಪ್ರಕಾರ, ಹ್ಯಾರಿಯರ್ ಕಾರು ಮಾದರಿಯಲ್ಲಿ ಹೊಸದಾಗಿ ಎಕ್ಸ್‌ಟಿಎ ಮತ್ತು ಎಕ್ಸ್‌ಟಿ ಪ್ಲಸ್ ವೆರಿಯೆಂಟ್‌ಗಳನ್ನು ಪರಿಚಯಿಸುವ ಸಾಧ್ಯತೆಗಳಿದ್ದು, ಹೊಸ ವೆರಿಯೆಂಟ್‌ಗಳು ಕಾರಿನ ಮಧ್ಯಮ ಶ್ರೇಣಿಯಲ್ಲಿನ ಬೇಡಿಕೆ ಪೂರೈಕೆಗೆ ಸಹಕಾರಿಯಾಗಲಿವೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಹ್ಯಾರಿಯರ್ ಕಾರು ವಿವಿಧ ತಾಂತ್ರಿಕ ಅಂಶಗಳಿಗೆ ಅನುಗುಣವಾಗಿ 16 ವೆರಿಯೆಂಟ್‌ಗಳೊಂದಿಗೆ ಖರೀದಿಗೆ ಲಭ್ಯವಿದ್ದು, ಹೊಸ ವೆರಿಯೆಂಟ್‌ಗಳು ಎಕ್ಸ್‌ಟಿ ಮತ್ತು ಎಕ್ಸ್‌ಜೆಡ್ ನಡುವಿನ ಬೆಲೆ ಅಂತರವನ್ನು ಸರಿದೂಗಿಸಲಿದ್ದು, ಹೊಸ ವೆರಿಯೆಂಟ್‌ಗಳು ಪನೊರಮಿಕ್ ಸನ್‌ರೂಫ್ ಸೇರಿದಂತೆ ಕೆಲವು ಹೊಸ ತಾಂತ್ರಿಕ ಸೌಲಭ್ಯದೊಂದಿಗೆ ಮುಂದಿನ ಕೆಲವೇ ದಿನಗಳಲ್ಲಿ ಖರೀದಿಗೆ ಲಭ್ಯವಾಗಲಿವೆ.

ಹ್ಯಾರಿಯರ್ ಎಸ್‌ಯುವಿಯಲ್ಲಿ ಮತ್ತೆರಡು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಹ್ಯಾರಿಯರ್ ಫೇಸ್‌ಲಿಫ್ಟ್ ಆವೃತ್ತಿಯು ಈ ಬಾರಿ ಹಲವಾರು ಬದಲಾವಣೆಗಳೊಂದಿಗೆ ಮಾರುಕಟ್ಟೆ ಪ್ರವೇಶಿಸಿದ್ದು, ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆ ಸೇರಿದಂತೆ ಹಲವಾರು ಹೊಸ ಬದಲಾವಣೆಗಳನ್ನು ಪಡೆದುಕೊಂಡಿದೆ.

ಹ್ಯಾರಿಯರ್ ಎಸ್‌ಯುವಿಯಲ್ಲಿ ಮತ್ತೆರಡು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಜೊತೆಗೆ ಪ್ರೀಮಿಯಂ ಫೀಚರ್ಸ್‌ಗಳಿಂದಾಗಿ ಹೊಸ ಕಾರಿನ ಬೆಲೆಯು ತುಸು ದುಬಾರಿಯಾಗಿದ್ದರೂ ಸಹ ಹೊಸ ಮಾದರಿಯ ಫೀಚರ್ಸ್‌ಗಳು ಫೇಸ್‌ಲಿಫ್ಟ್ ಕಾರಿಗೆ ಮತ್ತಷ್ಟು ಬಲಿಷ್ಠತೆ ನೀಡಲಿದ್ದು, ಎಂಜಿನ್ ಪರ್ಫಾಮೆನ್ಸ್‌ನಲ್ಲೂ ಸಾಕಷ್ಟು ಸುಧಾರಣೆ ತಂದಿರುವುದು ಮಾಲಿನ್ಯ ತಡೆಗೆ ಸಾಕಷ್ಟು ಸಹಕಾರಿಯಾಗಲಿದೆ.

ಹ್ಯಾರಿಯರ್ ಎಸ್‌ಯುವಿಯಲ್ಲಿ ಮತ್ತೆರಡು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಹೊಸ ಕಾರಿನ ಬೆಲೆಯು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 13.69 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 20.25 ಲಕ್ಷ ಬೆಲೆ ಪಡೆದುಕೊಂಡಿದ್ದು, ಇದರಲ್ಲಿ ಆಟೋಮ್ಯಾಟಿಕ್ ಆವೃತ್ತಿಯ ಬೆಲೆಯು ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 16.25 ಲಕ್ಷದಿಂದ ಆರಂಭಗೊಳ್ಳಲಿದೆ.

ಹ್ಯಾರಿಯರ್ ಎಸ್‌ಯುವಿಯಲ್ಲಿ ಮತ್ತೆರಡು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಬ್ಲ್ಯಾಕ್ ಎಡಿಷನ್ ಮಾದರಿಯು ಗ್ರಾಹಕರ ಬೇಡಿಕೆಯೆಂತೆ ಮ್ಯಾನುವಲ್ ಮತ್ತು ಆಟೋಮ್ಯಾಟಿಕ್ ಎರಡು ಮಾದರಿಯಲ್ಲೂ ಖರೀದಿಗೆ ಲಭ್ಯವಿದ್ದು, ಆರಂಭಿಕ ಮಾದರಿಯು ಎಕ್ಸ್‌ಶೋರೂಂ ಪ್ರಕಾರ ರೂ.17.07 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 20.25 ಲಕ್ಷ ಬೆಲೆ ಹೊಂದಿದೆ.

MOST READ: ಪ್ರತಿ ಚಾರ್ಜ್‌ಗೆ 480 ಕಿ.ಮೀ ಮೈಲೇಜ್ ನೀಡುವ ಎಲೆಕ್ಟ್ರಿಕ್ ಎಸ್‌ಯುವಿ ಬಿಡುಗಡೆ ಮಾಡಲಿದೆ ನಿಸ್ಸಾನ್

ಹ್ಯಾರಿಯರ್ ಎಸ್‌ಯುವಿಯಲ್ಲಿ ಮತ್ತೆರಡು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಸದ್ಯ ಮಾರುಕಟ್ಟೆಯಲ್ಲಿ ಹ್ಯಾರಿಯರ್ ಕಾರು ಡೀಸೆಲ್ ಎಂಜಿನ್‌ನೊಂದಿಗೆ ಮ್ಯಾನುವಲ್ ಹಾಗೂ ಆಟೋಮ್ಯಾಟಿಕ್ ಗೇರ್‌ಬಾಕ್ಸ್ ಆಯ್ಕೆಯೊಂದಿಗೆ ಮಾರಾಟಗೊಳ್ಳುತ್ತಿದ್ದು, ಮುಂಬರುವ ದಿನಗಳಲ್ಲಿ ಪೆಟ್ರೋಲ್ ಆವೃತ್ತಿಯು ಕೂಡಾ ಬಿಡುಗಡೆಯ ಪಟ್ಟಿಯಲ್ಲಿದೆ.

ಹ್ಯಾರಿಯರ್ ಎಸ್‌ಯುವಿಯಲ್ಲಿ ಮತ್ತೆರಡು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಇದರಲ್ಲಿ ಎಕ್ಸ್ಎಂಎ, ಎಕ್ಸ್‌ಜೆಡ್ಎ ಮತ್ತು ಎಕ್ಸ್‌ಜೆಡ್ಎ ಪ್ಲಸ್ ಮಾದರಿಗಳಲ್ಲಿ ಮಾತ್ರವೇ ಆಟೋಮ್ಯಾಟಿಕ್ ವರ್ಷನ್ ಖರೀದಿಗೆ ಲಭ್ಯವಿದ್ದು, ಎಕ್ಸ್‌ಜೆಡ್ಎ ಮತ್ತು ಎಕ್ಸ್‌ಜೆಡ್ಎ ಪ್ಲಸ್ ವೆರಿಯೆಂಟ್‌ಗಳಲ್ಲಿ ಡ್ಯುಯಲ್ ಟೋನ್ ಬಣ್ಣದ ಆಯ್ಕೆ ಹೊಂದಿವೆ.

MOST READ: ಹೊಸ ಪೊಲೊ ಕಾರು ವಿತರಣೆ ಮಾಡಿದ ಎರಡೇ ನಿಮಿಷದಲ್ಲಿ ನಡೆಯಿತು ಅಪಘಾತ..!

ಹ್ಯಾರಿಯರ್ ಎಸ್‌ಯುವಿಯಲ್ಲಿ ಮತ್ತೆರಡು ಹೊಸ ವೆರಿಯೆಂಟ್ ಬಿಡುಗಡೆ ಮಾಡಲಿದೆ ಟಾಟಾ ಮೋಟಾರ್ಸ್

ಎಂಜಿನ್ ಸಾಮರ್ಥ್ಯ ಮತ್ತು ಪರ್ಫಾಮೆನ್ಸ್

ಹ್ಯಾರಿಯರ್ ಎಸ್‌ಯುವಿ ಕಾರು 2.0-ಲೀಟರ್(1,956 ಸಿಸಿ) 4 ಸಿಲಿಂಡರ್, ಕ್ರೆಯೊಟೆಕ್ ಡೀಸೆಲ್ ಎಂಜಿನ್ ಹೊಂದಿದ್ದು, 6 ಸ್ಪೀಡ್ ಮ್ಯಾನುವಲ್ ಗೇರ್‍‍ಬಾಕ್ಸ್ ಮತ್ತು 6-ಸ್ಪೀಡ್ ಆಟೋಮ್ಯಾಟಿಕ್ ಗೇರ್‌ಬಾಕ್ಸ್‌ನೊಂದಿಗೆ 170-ಬಿಹೆಚ್‍ಪಿ, 350-ಎನ್ಎಂ ಟಾರ್ಕ್ ಉತ್ಪಾದನಾ ಗುಣಹೊಂದಿದೆ.

Article Published On: Thursday, July 16, 2020, 19:17 [IST]
English summary
Tata Harrier To Get Two New Variants. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+