1-0-ಲೀಟರ್ ಟರ್ಬೋ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದೆ ಟಾಟಾ ಹೊಸ ಕಾರು
ಟಾಟಾ ಮೋಟಾರ್ಸ್ ಕಂಪನಿಯು ಶೀಘ್ರದಲ್ಲೇ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಹೊಸ ಮಾದರಿಯ ವಿವಿಧ ಕಾರು ಆವೃತ್ತಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ದೆಹಲಿ ಎಕ್ಸ್‌ಪೋದಲ್ಲಿ ಅನಾವರಣಗೊಂಡಿದ್ದ ಮೈಕ್ರೊ ಎಸ್‌ಯುವಿ ವೈಶಿಷ್ಟ್ಯತೆಯ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರನ್ನು ಇದೇ ವರ್ಷಾಂತ್ಯದೊಳಗೆ ಬಿಡುಗಡೆಗೊಳಿಸುವುದಾಗಿ ಸುಳಿವು ನೀಡಿದೆ.

ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ನಂತರ ಅಲ್ಫಾ ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಮೇಲೆ ಉತ್ಪಾದನೆ ಮಾಡಲಾಗುತ್ತಿರುವ ಎರಡನೇ ಆವೃತ್ತಿಯಾಗಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು ಶೀಘ್ರದಲ್ಲೇ ಉತ್ಪಾದನಾ ಮಾದರಿಯು ಸಹ ಅನಾವರಣಗೊಳ್ಳಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ನೆಕ್ಸಾನ್‌ಗಿಂತ ಕೆಳದರ್ಜೆಯಲ್ಲಿ ಮಾರಾಟಗೊಳ್ಳಲಿದೆ. ಸಣ್ಣ ಗಾತ್ರದ ಎಸ್‌ಯುವಿ ಮಾದರಿಗಳಲ್ಲೇ ವಿಶೇಷ ಹೊರ ವಿನ್ಯಾಸ ಹೊಂದಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರನ್ನ ಸದ್ಯ ವಿವಿಧ ಮಾದರಿಯಲ್ಲಿ ತಾಂತ್ರಿಕ ಸೌಲಭ್ಯಗಳ ಪರೀಕ್ಷೆಗಾಗಿ ರೋಡ್ ಟೆಸ್ಟಿಂಗ್ ನಡೆಸಲಾಗುತ್ತಿದ್ದು, ಅತ್ಯುತ್ತಮ ತಾಂತ್ರಿಕ ಸೌಲಭ್ಯಗಳನ್ನು ಹೊಂದಿದೆ.

ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರವೇ ಮಾರಾಟಗೊಳ್ಳಲಿದ್ದು, ಮಾರುತಿ ಸುಜುಕಿ ಎಸ್-ಪ್ರೆಸ್ಸೊ, ಮಹೀಂದ್ರಾ ಕೆಯುವಿ100 ಮತ್ತು ರೆನಾಲ್ಟ್ ಕ್ವಿಡ್ ಕಾರುಗಳಿಗೆ ಪೈಪೋಟಿ ನೀಡಲಿರುವ ಹೊಸ ಕಾರು ಫಸ್ಟ್ ಇನ್ ಸೆಗ್ಮೆಂಟ್ ಫೀಚರ್ಸ್‌ಗಳೊಂದಿಗೆ ಐದು ವೆರೆಯೆಂಟ್‌ಗಳನ್ನು ಪಡೆದುಕೊಂಡಿರಲಿದೆ.

ಮೈಕ್ರೊ ಎಸ್‌ಯುವಿ ಕಾರುಗಳಲ್ಲಿ ಗಮನಸೆಳೆಯುವಂತಹ ಉದ್ದಳತೆ ಹೊಂದಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು 3,822-ಎಂಎಂ ಉದ್ದ, 1,822-ಎಂಎಂ ಉದ್ದ, 1,635-ಎಂಎಂ ಅಗಲ ಮತ್ತು 2,450-ಎಂಎಂ ವೀಲ್ಹ್‌ಬೆಸ್ ಹೊಂದಿದೆ.

ಇದು ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಉದ್ದಳತೆಗೆ ಸಮನಾವಾಗಿದೆ. ಇದರೊಂದಿಗೆ ಹ್ಯಾಚ್‌ಬ್ಯಾಕ್ ಕಾರುಗಳ ಮಾರಾಟದಲ್ಲೂ ಸದ್ದು ಮಾಡಲಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು 1.2-ಲೀಟರ್ ಸಾಮಾನ್ಯ ಪೆಟ್ರೋಲ್ ಎಂಜಿನ್ ಜೊತೆಗೆ ಪರ್ಫಾಮೆನ್ಸ್ ಪ್ರಿಯರಿಗಾಗಿ 1.0-ಲೀಟರ್ ಟರ್ಬೋ ಪೆಟ್ರೋಲ್ ಆವೃತ್ತಿಯನ್ನು ಪಡೆದುಕೊಳ್ಳುವ ಸಾಧ್ಯತೆಗಳಿವೆ.
MOST READ: ಸ್ಕ್ರ್ಯಾಪಿಂಗ್ ನೀತಿ ಜಾರಿಗೆ ಅಂತಿಮ ಸಿದ್ದತೆ- ಆಟೋ ಉದ್ಯಮದಲ್ಲಿ ಹೊಸ ಸಂಚಲನ..

ಆದರೆ ಹೊಸ ಕಾರಿನ ಎಂಜಿನ್ ಆಯ್ಕೆ ಕುರಿತಾಗಿ ಯಾವುದೇ ನಿಖರ ಮಾಹಿತಿ ಇಲ್ಲವಾದರೂ ಆಲ್‌ಟ್ರೊಜ್ ಕಾರಿನಲ್ಲಿರುವ 1.2-ಲೀಟರ್ ಪೆಟ್ರೋಲ್ ಮಾದರಿಯು ಸದ್ಯ ಲಭ್ಯವಾಗಬಹುದಾದ ಎಂಜಿನ್ ಮಾದರಿಯಾಗಿದ್ದು, ಟರ್ಬೋ ಆವೃತ್ತಿಯು ಬಿಡುಗಡೆ ನಂತರ ಅಪ್‌ಡೆಟ್ ಪಡೆದುಕೊಳ್ಳಬಹುದಾಗಿದೆ.

ಇನ್ನು ಹೊಸ ಕಾರಿನಲ್ಲಿ ಸ್ಪೋರ್ಟಿ ಖದರ್ ಹೆಚ್ಚಿಸಲು ವಿಶೇಷ ಡಿಸೈನ್‌ಗಳನ್ನು ನೀಡಲಾಗಿದ್ದು, ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟ್‌ಅಪ್, ಆಕರ್ಷಕವಾದ ಬಂಪರ್, ಸ್ಕ್ವಾರ್ಡ್ ಔಟ್ ವೀಲ್ಹ್ ಆರ್ಚ್, ರೂಫ್ ಮೌಂಟೆಡ್ ಕ್ಯಾರಿಯರ್ ಸೌಲಭ್ಯಗಳು ಕಾರಿನ ಬಲಿಷ್ಠತೆ ಮತ್ತಷ್ಟು ಮೆರಗು ನೀಡಿವೆ.
MOST READ: ಕಾರು ಖರೀದಿ ಮಾಡುವ ಕರೋನಾ ವಾರಿಯರ್ಸ್‌ಗೆ ಭರ್ಜರಿ ಆಫರ್ ನೀಡಿದ ಟಾಟಾ

ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಪೆಟ್ರೋಲ್ ಆವೃತ್ತಿಯನ್ನು ಇದೇ ವರ್ಷದ ಜೂನ್ ಜುಲೈ ಹೊತ್ತಿಗೆ ಬಿಡುಗೆಡೆಗೊಳ್ಳಬಹುದೆಂದು ನೀರಿಕ್ಷೆ ಮಾಡಲಾಗಿತ್ತು. ಆದರೆ ಲಾಕ್‌ಡೌನ್ ಸಂಕಷ್ಟದಿಂದಾಗಿ ಮಾರುಕಟ್ಟೆಯ ಸನ್ನಿವೇಶದ ಆಧಾರದ ಮೇಲೆ ಹೊಸ ಕಾರು ಬಿಡುಗಡೆಯನ್ನು ಮುಂದಿನ ನವೆಂಬರ್ ಅಂತ್ಯಕ್ಕೆ ಮುಂದೂಡಲಾಗಿದ್ದು, ದೆಹಲಿ ಎಕ್ಸ್‌ಶೋರೂಂ ಪ್ರಕಾರ ಹೊಸ ಕಾರು ಆರಂಭಿಕವಾಗಿ ರೂ.5.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ.7.50 ಲಕ್ಷ ಬೆಲೆ ಪಡೆದುಕೊಳ್ಳಬಹುದೆಂದು ಅಂದಾಜಿಸಲಾಗಿದೆ.


Click it and Unblock the Notifications