ಆಕರ್ಷಕ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ

ಕಾರು ಮಾರಾಟದಲ್ಲಿ ಹೊಸ ಬದಲಾವಣೆಗೆ ಕಾರಣವಾಗಿರುವ ಟಾಟಾ ಮೋಟಾರ್ಸ್ ಸಂಸ್ಥೆಯು ಶೀಘ್ರದಲ್ಲೇ ಹಲವು ಹೊಸ ಕಾರು ಮಾದರಿಗಳನ್ನು ಬಿಡುಗಡೆಗೊಳಿಸಲು ಸಜ್ಜಾಗುತ್ತಿದ್ದು, ಮೈಕ್ರೊ ಎಸ್‌ಯುವಿ ವೈಶಿಷ್ಟ್ಯತೆಯ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು ಪ್ರಮುಖ ಆಕರ್ಷಣೆಯಾಗಿದೆ.

ಆಕರ್ಷಕ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ

ಆಲ್‌ಟ್ರೊಜ್ ಹ್ಯಾಚ್‌ಬ್ಯಾಕ್ ನಂತರ ಅಲ್ಫಾ ಕಾರು ಉತ್ಪಾದನಾ ಪ್ಲ್ಯಾಟ್‌ಫಾರ್ಮ್ ಮೇಲೆ ಉತ್ಪಾದನೆ ಮಾಡಲಾಗುತ್ತಿರುವ ಎರಡನೇ ಆವೃತ್ತಿಯಾಗಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು ಶೀಘ್ರದಲ್ಲೇ ಉತ್ಪಾದನಾ ಮಾದರಿಯು ಅನಾವರಣಗೊಳ್ಳಲಿದ್ದು, ಪ್ರಸ್ತುತ ಮಾರುಕಟ್ಟೆಯಲ್ಲಿರುವ ನೆಕ್ಸಾನ್‌ಗಿಂತ ಕೆಳದರ್ಜೆಯಲ್ಲಿ ಮಾರಾಟಗೊಳ್ಳಲಿದೆ. ಸಣ್ಣ ಗಾತ್ರದ ಎಸ್‌ಯುವಿ ಮಾದರಿಗಳಲ್ಲೇ ವಿಶೇಷ ಹೊರ ವಿನ್ಯಾಸ ಹೊಂದಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು ಆಕರ್ಷಕ ಬೆಲೆಯೊಂದಿಗೆ ಮಾರಾಟಗೊಳ್ಳಲಿದೆ.

ಆಕರ್ಷಕ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ

ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರವೇ ಮಾರಾಟಗೊಳ್ಳಲಿದ್ದು, ಮಾರುತಿ ಸುಜುಕಿ ಎಸ್-ಪ್ರೆಸ್ಸೊ, ಮಹೀಂದ್ರಾ ಕೆಯುವಿ100 ಮತ್ತು ರೆನಾಲ್ಟ್ ಕ್ವಿಡ್ ಕಾರುಗಳಿಗೆ ಇದು ಉತ್ತಮ ಪೈಪೋಟಿಯಾಗಲಿದೆ.

ಆಕರ್ಷಕ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ

ಮೊದಲ ಬಾರಿಗೆ ಜಿನೆವಾ ಆಟೋ ಎಕ್ಸ್‌ಪೋದಲ್ಲಿ ಪ್ರದರ್ಶನಗೊಂಡಿದ್ದ ಆವೃತ್ತಿಗಿಂತಲೂ ಇದೀಗ ಮತ್ತಷ್ಟು ಬದಲಾವಣೆ ಹೊಂದಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು ಉತ್ಪಾದನಾ ಮಾದರಿಯ ಸಿದ್ದತೆಯ ಹೊತ್ತಿಗೆ ಮತ್ತಷ್ಟು ಬದಲಾವಣೆಗಳನ್ನು ಪಡೆದುಕೊಳ್ಳಲಿದೆ.

ಆಕರ್ಷಕ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ

ಮೈಕ್ರೊ ಎಸ್‌ಯುವಿ ಕಾರುಗಳಲ್ಲಿ ಗಮನಸೆಳೆಯುವಂತಹ ಉದ್ದಳತೆ ಹೊಂದಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು 3,822-ಎಂಎಂ ಉದ್ದ, 1,822-ಎಂಎಂ ಉದ್ದ, 1,635-ಎಂಎಂ ಅಗಲ ಮತ್ತು 2,450-ಎಂಎಂ ವೀಲ್ಹ್‌ಬೆಸ್ ಹೊಂದಿದ್ದು, ಇದು ಮಾರುಕಟ್ಟೆಯಲ್ಲಿರುವ ಮಾರುತಿ ಸುಜುಕಿ ಸ್ವಿಫ್ಟ್ ಕಾರಿನ ಉದ್ದಳತೆಗೆ ಸಮನಾವಾಗಿದೆ. ಇದರೊಂದಿಗೆ ಹ್ಯಾಚ್‌ಬ್ಯಾಕ್ ಕಾರುಗಳ ಮಾರಾಟದಲ್ಲೂ ಸದ್ದು ಮಾಡಲಿರುವ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು 1.2-ಲೀಟರ್ ಪೆಟ್ರೋಲ್ ಎಂಜಿನ್ ಪಡೆದುಕೊಳ್ಳಲಿದೆ.

ಆಕರ್ಷಕ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ

1.2-ಲೀಟರ್ ತ್ರಿ ಸಿಲಿಂಡರ್ ಪೆಟ್ರೋಲ್ ಎಂಜಿನ್ ಮಾದರಿಯು ಈಗಾಗಲೇ ಆಲ್‌ಟ್ರೊಜ್ ಮಾದರಿಯಲ್ಲಿ ಮಾರಾಟಗೊಳ್ಳುತ್ತಿದ್ದು, ಅದೇ ಎಂಜಿನ್ ಇದೀಗ ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರಿನಲ್ಲೂ ಬಳಕೆ ಮಾಡಲು ಉದ್ದೇಶಿಸಲಾಗಿದೆ.

ಆಕರ್ಷಕ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ

86-ಬಿಎಚ್‌ಪಿ ಉತ್ಪಾದನಾ ಸಾಮರ್ಥ್ಯ ಹೊಂದಿರುವ 1.2-ಲೀಟರ್ ಪೆಟ್ರೋಲ್ ಮಾದರಿಯು ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರಿಗೆ ಉತ್ತಮ ಆಯ್ಕೆಯಾಗಲಿದ್ದು, 5-ಸ್ಪೀಡ್ ಮ್ಯಾನುವಲ್ ಗೇರ್‌ಬಾಕ್ಸ್ ಆಯ್ಕೆಯನ್ನು ಸ್ಟ್ಯಾಂಡರ್ಡ್ ಆಗಿ ನೀಡಲಾಗುತ್ತಿದೆ.

ಆಕರ್ಷಕ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ

ಇದರೊಂದಿಗೆ ಹೊಸ ಕಾರಿನ ಸ್ಪೋರ್ಟಿ ಖದರ್ ಹೆಚ್ಚಿಸಲು ವಿಶೇಷ ಡಿಸೈನ್‌ಗಳನ್ನು ನೀಡಲಾಗಿದ್ದು, ಸ್ಪ್ಲಿಟ್ ಹೆಡ್‌ಲ್ಯಾಂಪ್ ಸೆಟ್‌ಅಪ್, ಆಕರ್ಷಕವಾದ ಬಂಪರ್, ಸ್ಕ್ವಾರ್ಡ್ ಔಟ್ ವೀಲ್ಹ್ ಆರ್ಚ್, ರೂಫ್ ಮೌಂಟೆಡ್ ಕ್ಯಾರಿಯರ್ ಸೌಲಭ್ಯಗಳು ಕಾರಿನ ಬಲಿಷ್ಠತೆ ಮತ್ತಷ್ಟು ಮೆರಗು ನೀಡಿವೆ.

ಆಕರ್ಷಕ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ

ಎಲೆಕ್ಟ್ರಿಕ್ ಆವೃತ್ತಿಯ ಬಿಡುಗಡೆಗೂ ಸಿದ್ದತೆ

ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಕಾರು ಕೇವಲ ಪೆಟ್ರೋಲ್ ಆವೃತ್ತಿಯಲ್ಲಿ ಮಾತ್ರವಲ್ಲ ಎಲೆಕ್ಟ್ರಿಕ್ ಆವೃತ್ತಿಯಲ್ಲೂ ಬಿಡುಗಡೆಗೆ ಸಿದ್ದತೆ ನಡೆಸಲಾಗುತ್ತಿದ್ದು, ಮೊದಲು ಪೆಟ್ರೋಲ್ ಆವೃತ್ತಿಯ ಬಿಡುಗಡೆಯ ನಂತರವಷ್ಟೇ ಎಲೆಕ್ಟ್ರಿಕ್ ವರ್ಷನ್ ಮಾರುಕಟ್ಟೆ ಪ್ರವೇಶಿಸಲಿದೆ.

ಆಕರ್ಷಕ ಬೆಲೆಯಲ್ಲಿ ಬಿಡುಗಡೆಯಾಗಲಿದೆ ಟಾಟಾ ಹೊಸ ಮೈಕ್ರೊ ಎಸ್‌ಯುವಿ

ಬಿಡುಗಡೆಯ ಅವಧಿಯ ಮತ್ತು ಬೆಲೆ(ಅಂದಾಜು)

ಹೆಚ್‌ಬಿಎಕ್ಸ್ ಕಾನ್ಸೆಪ್ಟ್ ಪೆಟ್ರೋಲ್ ಆವೃತ್ತಿಯು ಇದೇ ವರ್ಷ ಜೂನ್ ಅಥವಾ ಜುಲೈ ಹೊತ್ತಿಗೆ ಅಧಿಕೃತವಾಗಿ ಬಿಡುಗಡೆಗೊಳ್ಳಲಿದ್ದು, ಹೊಸ ಕಾರು ದೆಹಲಿ ಎಕ್ಸ್‌ಶೋರೂಂ ಪ್ರಕಾರ ಆರಂಭಿಕವಾಗಿ ರೂ. 4.50 ಲಕ್ಷದಿಂದ ಟಾಪ್ ಎಂಡ್ ಮಾದರಿಯು ರೂ. 5.80 ಲಕ್ಷ ಬೆಲೆ ಪಡೆದುಕೊಳ್ಳುವ ನೀರಿಕ್ಷೆಯಿದೆ.

Most Read Articles

Kannada
English summary
Tata HBX Small SUV to launch this year. Read in Kannada.
Story first published: Wednesday, February 12, 2020, 20:01 [IST]
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X